ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಸ್‌ಪಿಎಲ್ ಸೀಸನ್-5 ಕ್ರಿಕೆಟ್ ಟೂರ್ನಿ ಭರ್ಜರಿ ಪ್ರಾರಂಭ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಆಯೋಜಿಸಿರುವ ‘ಸಂತ ಫಿಲೋಮಿನಾ ಪ್ರೀಮಿಯರ್ ಲೀಗ್ (ಎಸ್‌ಪಿಎಲ್) 2025 – ಸೀಸನ್ 5’ ಕ್ರಿಕೆಟ್ ಟೂರ್ನಿ ಮೇ 5ರಂದು ಕಾಲೇಜು ಕ್ರೀಡಾಂಗಣದಲ್ಲಿ ಭರ್ಜರಿಯಾಗಿ ಚಾಲನೆ ಪಡೆದು ಕೊಂಡಿತು.
ಪುತ್ತೂರು, ಮೇ 5 – ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಆಯೋಜಿಸಿರುವ ‘ಸಂತ ಫಿಲೋಮಿನಾ ಪ್ರೀಮಿಯರ್ ಲೀಗ್ (ಎಸ್‌ಪಿಎಲ್) 2025 – ಸೀಸನ್ 5’ ಕ್ರಿಕೆಟ್ ಟೂರ್ನಿ ಮೇ 5ರಂದು ಕಾಲೇಜು ಕ್ರೀಡಾಂಗಣದಲ್ಲಿ ಭರ್ಜರಿಯಾಗಿ ಚಾಲನೆ ಪಡೆದು ಕೊಂಡಿತು.
ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಾಮಚ್ಚನ್ ಎಂ. ದೀಪ ಬೆಳಗಿಸಿ ಉದ್ಘಾಟಿಸಿದರು. “ಕ್ರೀಡೆಯ ಪ್ರೋತ್ಸಾಹದಿಂದ ಅкаಡೆಮಿಕ್ ಪ್ರಗತಿಯೂ ಸಾಧ್ಯ. ಫಿಲೋಮಿನಾ ಕ್ರೀಡಾಂಗಣ ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸಿದ್ದು, ನಾಳೆಯ ಕನಸುಗಳು ಇಲ್ಲಿ ಸಾಕಾರವಾಗಲಿ,” ಎಂದು ಅವರು ಆಶಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಎಲ್ಯಾಸ್ ಪಿಂಟೋ ಅವರ ಪುತ್ರ ಕ್ರಿಸ್ ಏಂಜೆಲೋ ಅವರು ಮಂಗಳೂರು ವಲಯದ ಅಂಡರ್-16 ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ್ದನ್ನು ಅವರು ಶ್ಲಾಘಿಸಿದರು.

ಅಕಾಡೆಮಿಕ್ ರಿಜಿಸ್ಟ್ರಾರ್ ಡಾ| ನೋರ್ಬರ್ಟ್ ಮಸ್ಕರೇನ್ಹಸ್ ಮಾತನಾಡಿ, “ಈ ಕ್ರೀಡಾಂಗಣ ಪುಣ್ಯಭೂಮಿ. ಇಲ್ಲಿ ಬೆಳೆದ ಹಲವಾರು ಕ್ರೀಡಾಪಟುಗಳು ಸಮಾಜದಲ್ಲಿ ಗುರುತು ಗಳಿಸಿದ್ದಾರೆ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಎಲ್ಲರಲ್ಲಿರಲಿ,” ಎಂದು ಹೇಳಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲ ಡಾ| ವಿಜಯಕುಮಾರ್ ಮೊಳೆಯಾರ್ ಮಾತನಾಡಿ, “ಪರಸ್ಪರ ವೈಮನಸ್ಸಿಲ್ಲದೇ ಕ್ರೀಡಾಸ್ಫೂರ್ತಿಯಿಂದ ಆಡಬೇಕು. ಸಚಿನ್ ತೆಂಡೂಲ್ಕರ್ ಅವರ ಶಿಸ್ತು ಮತ್ತು ಸಮರ್ಪಣೆಯಿಂದ ಕಲಿಯಬೇಕಿದೆ,” ಎಂದು ಸಲಹೆ ನೀಡಿದರು.

ಎಸ್‌ಪಿಎಲ್ 2025ರಲ್ಲಿ ಸ್ಪರ್ಧೆಗಿಳಿದ ಹತ್ತು ತಂಡಗಳು:
ಟೀಮ್ ಹೀಟ್ ವೇವ್ಸ್, ದಿ ಗೋಟ್ಸ್, ಟೀಮ್ ಅಗಸ್ತ್ಯ, ಅಗ್ನಿ ಬ್ರದರ್ಸ್, ಸ್ಕ್ವಾಡ್ರನ್ ಎಕ್ಸ್ ಡಿಕ್ರೋಜ್, ಫಿಲೋ ಹಾಕ್ಸ್, ಆಸ್ಟ್ರೋ ಮೋಂಕ್ಸ್, ಕಾಲ್ ಡ್ರಾಕ್ಸ್, ಟಿಎಂ ಟಿಎಕ್ಸ್ಎಂ ಮತ್ತು ಕಾಲೇಜು ಉಪನ್ಯಾಸಕರ ಬಳಗ.
ಐಪಿಎಲ್ ಮಾದರಿಯಲ್ಲಿ ಆಯೋಜಿಸಲಾಗಿರುವ ಈ ಲೀಗ್‌ನಲ್ಲಿ ವಿದ್ಯಾರ್ಥಿಗಳು ಮಾಲಕರಾಗಿರುವ ತಂಡಗಳಿಗೆ ಐಕಾನ್ ಆಟಗಾರರೊಂದಿಗೆ ಬಿಡ್ಡಿಂಗ್ ಮೂಲಕ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆ ಪ್ರಾಂಶುಪಾಲ ವಂ. ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರ ಮಾರ್ಗದರ್ಶನದಲ್ಲಿ ಮತ್ತು ಡಾ| ಎಲ್ಯಾಸ್ ಪಿಂಟೋ ಅವರ ನೇತೃತ್ವದಲ್ಲಿ ಜರಗಿತು.
ಕಬಡ್ಡಿ ತರಬೇತುದಾರ ಹಬೀಬ್ ಮಾಣಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಹೆಕ್ಸನ್ ಫೆರ್ನಾಂಡಿಸ್ ಮತ್ತು ಕ್ರೀಡಾ ಕಾರ್ಯದರ್ಶಿ ಅನ್ವೇಶ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ| ಎಲ್ಯಾಸ್ ಪಿಂಟೋ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಮಂಗಳೂರು8 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ11 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ13 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್13 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ13 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ8 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸಿನೆಮಾ12 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್12 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















