ಕಾರ್ಯಕ್ರಮಗಳು
Alankar-ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ರಾಜಗೋಪುರ ಮತ್ತು ಮಹಾದ್ವಾರ ಶಿಲಾನ್ಯಾಸ ಕಾರ್ಯಕ್ರಮ; ಶ್ರೀ ದೇವಿಯ ಅಪ್ಪಣೆಯಂತೆ ಮುಂದೊಂದು ದಿನ ದೊಡ್ಡ ಕ್ಷೇತ್ರವಾಗಿ ಬೆಳಗಲಿದೆ – ಮಾಣಿಲ ಶ್ರೀ; ಅತೀ ಪುರಾತನ ದೇವಸ್ಥಾನಗಳನ್ನು ಅಭಿವೃದ್ಧಿ ಮಾಡಬೇಕು ಬೇರೆ ಧರ್ಮದವರನ್ನು ನಾವು ವಿರೋಧ ಮಾಡುತ್ತಿಲ್ಲ, ನಮ್ಮ ಮಕ್ಕಳಿಗೆ ಹಿಂದೂ ಧರ್ಮದ ಧಾರ್ಮಿಕ ಶಿಕ್ಷಣ ಸಿಗಬೇಕು – ಕನ್ಯಾನ ಕೂಳೂರು ಡಾ.ಸದಾಶಿವ ಶೆಟ್ಟಿ; ಶರವೂರು ದುರ್ಗಾಪರಮೇಶ್ವರಿ ದೇವಿಯ ಅನುಗ್ರಹದಿಂದ ಎರಡು ಬಾರಿ ಪುತ್ತೂರಿನ ಶಾಸಕಿಯಾಗಿದ್ದೇನೆ – ಶಕುಂತಳ ಶೆಟ್ಟಿ
ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯ ನಡೆಯುತ್ತಿದ್ದು, ರಾಜಗೋಪುರ ಮತ್ತು ರಥಬೀದಿಯಲ್ಲಿ ಮಹಾದ್ವಾರ ಶಿಲಾನ್ಯಾಸ ಕಾರ್ಯಕ್ರಮ ಮೇ.5 ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇ. ಮೂ. ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯ ನಡೆಯುತ್ತಿದ್ದು, ರಾಜಗೋಪುರ ಮತ್ತು ರಥಬೀದಿಯಲ್ಲಿ ಮಹಾದ್ವಾರ ಶಿಲಾನ್ಯಾಸ ಕಾರ್ಯಕ್ರಮ ಮೇ.5 ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇ. ಮೂ. ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿಗಳು ಆಶೀರ್ವಚನ ನೀಡಿ ಮಾತನಾಡಿ, ಭೌಮ್ಯ ಮಹರ್ಷಿಗಳಿಂದ ಪ್ರತಿಷ್ಠಾಪನೆಗೊಂಡ ಶ್ರೀ ಕ್ಷೇತ್ರ ಶರವೂರು ಆ ಕಾಲದಲ್ಲಿ ನಿರ್ಜನ ಪ್ರದೇಶವಾಗಿ, ತಪೋಭೂಮಿಯಾಗಿ ಗುಡ್ಡಗಾಡು ಪ್ರದೇಶವಾಗಿ ಸರೋವರವಾಗಿದ್ದ ಪ್ರದೇಶವೇ ಶರವೂರು ಆಗಿದ್ದು, ಇಲ್ಲಿ ಸಿಂಹವಾಹಿನಿಯಾದ ದುರ್ಗಾಪರಮೇಶ್ವರಿ ದೇವಿಯ ನಾಗಮಾಣಿಕ್ಯದ ಪ್ರಭೆಯಂತೆ ಭೌಮ್ಯ ಮಹರ್ಷಿಗಳಿಗೆ ಒಲಿದು ಮುಂದಕ್ಕೆ ಈ ಸ್ಥಳದಲ್ಲಿ ತಪಸ್ಸು ಮಾಡಿ ಮುಂದೊಂದು ದಿನ ದೊಡ್ಡ ಕ್ಷೇತ್ರವಾಗಿ ಬೆಳಗಬೇಕೆಂದು ಶ್ರೀ ದೇವಿಯ ಅಪ್ಪಣೆಯಂತೆ ಶ್ರೀ ಕ್ಷೇತ್ರ ಬೆಳಗುತ್ತಿದೆ.
ಸಮಗ್ರ ಜೀರ್ಣೋದ್ಧಾರ ಕೆಲಸ ಕಾರ್ಯದಲ್ಲಿ ನಾವೆಲ್ಲರೂ ಒಂದೇ ಎನ್ನುವ ನೆಲೆಗಟ್ಟಿನ ಮೇಲೆ ಕೆಲಸ ಕಾರ್ಯಗಳನ್ನು ಮಾಡಿ ದೇವಸ್ಥಾನ ಜೀರ್ಣೋದ್ಧಾರಗೊಳಿಸಬೇಕು. ಜೀರ್ಣೋದ್ಧಾರಗೊಂಡು ಬ್ರಹ್ಮಕಲಶ ಆದ ಶ್ರೀ ದೇವಿಯ ಅನುಗ್ರಹದಿಂದ ನಮ್ಮಲ್ಲಿರುವ ದಾಡ್ಯ, ಮೌಡ್ಯ, ಅವಿಶ್ವಾಸ, ಆಕ್ರೋಶ, ಉದ್ವೇಗ ಕಡಿಮೆಯಾಗಿ ಊರು ಅಭಿವೃದ್ಧಿ ಗೊಳ್ಳುತ್ತದೆ ಎಂದು ತಿಳಿಸಿದರು.
ಕನ್ಯಾನ ಕೂಳೂರು ಡಾ.ಸದಾಶಿವ ಶೆಟ್ಟಿಯವರು ಸಂಪತ್ತಿನ ವ್ಯಾಮೋಹ ಇಲ್ಲದೇ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು, ಧಾರ್ಮಿಕ,ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ್ದಾರೆ ಎಂದು ತಿಳಿಸಿ ಗ್ರಾಮದೇವಸ್ಥಾನ ಮತ್ತು ಸೀಮೆ ದೇವಸ್ಥಾನ ಮನುಷ್ಯನಿಗೆ ಬೆನ್ನೆಲುಬು ಇದ್ದಂತೆ ಅದ್ದರಿಂದ ಸೀಮೆಯ ಹಾಗು ಊರ ಪರವೂರ ಭಕ್ತಾದಿಗಳು ಸಮಗ್ರ ಜೀರ್ಣೋದ್ಧಾರ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಂಡು ಶ್ರೀ ದೇವಿಯ ಅನುಗ್ರಹಕ್ಕೆ ಪಾತ್ರರಾಗುವಂತೆ ತಿಳಿಸಿ, ಬ್ರಹ್ಮಕಲಶ ಆಗುವವರೆಗೆ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ತಿಳಿಸಿ ಶುಭಾಹಾರೈಸಿದರು.
ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬೈನ ಆಡಳಿತ ನಿರ್ದೇಶಕ ಡಾ.ಸದಾಶಿವ ಶೆಟ್ಟಿ ಕುಳೂರು ಕನ್ಯಾನ ರಾಜಗೋಪುರ ಶಿಲಾನ್ಯಾಸ ನೇರವೆರಿಸಿ ಮಾತನಾಡಿ, ದೇವಸ್ಥಾನದ ಇತಿಹಾಸ ಹಾಗು ಶಕ್ತಿಯನ್ನು ಶ್ರೀ ಮೋಹನದಾಸ ಸ್ವಾಮೀಜಿಗಳು ಸವಿಸ್ತರವಾಗಿ ತಿಳಿಸಿದ್ದಾರೆ. ಮಧೂರು ಮಹಾಗಣಪತಿ ದೇವಸ್ಥಾನದಿಂದ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನ ತನಕ ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮಧೂರು ದೇವಸ್ಥಾನದಲ್ಲಿ ಸ್ವಾಮೀಜಿಗಳು ಹಗಲು ರಾತ್ರಿ ಎನ್ನದೇ ಸೇವೆ ಮಾಡಿದವರ ಸೇವೆಯನ್ನು ಇಲ್ಲಿ ಕೂಡ ಬಳಸಿಕೊಳ್ಳಿ ಎಂದು ತಿಳಿಸಿ ನಾವೆಲ್ಲರೂ ಒಟ್ಟಾಗಿ, ಒಗ್ಗಟ್ಟಾಗಿ ಅತೀ ಪುರಾತನ ದೇವಸ್ಥಾನಗಳನ್ನು ಅಭಿವೃದ್ಧಿ ಮಾಡಬೇಕು ಬೇರೆ ಧರ್ಮದವರನ್ನು ನಾವು ವಿರೋಧ ಮಾಡುತ್ತಿಲ್ಲ, ನಮ್ಮ ಮಕ್ಕಳಿಗೆ ಹಿಂದೂ ಧರ್ಮದ ಧಾರ್ಮಿಕ ಶಿಕ್ಷಣ ನೀಡಬೇಕೆಂದು ತಿಳಿಸಿ ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ನರಮೇಧದ ಬಗ್ಗೆ ವಿಷಾಧ ವ್ಯಕ್ತಪಡಿಸಿ, ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರವನ್ನು ನಾವೆಲ್ಲರೂ ಒಟ್ಟು ಸೇರಿ ಮಾಡೋಣ, ಅದಷ್ಟು ಬೇಗ ಸಮಗ್ರ ಜೀರ್ಣೋದ್ದಾರ ಗೊಂಡು ಬ್ರಹ್ಮಕಲಶ ನೇರವೆರಲಿ ಎಂದು ಹಾರೈಸಿದರು.
ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರು ಮಾತನಾಡಿ, ಶರವೂರು ದುರ್ಗಾಪರಮೇಶ್ವರಿ ದೇವಿಯ ಅನುಗ್ರಹದಿಂದ ಎರಡು ಬಾರಿ ಪುತ್ತೂರಿನ ಶಾಸಕಿಯಾಗಿದ್ದೇನೆ ಎಂದು ತಿಳಿಸಿ ಕನ್ಯಾನ ಕೂಳೂರು ಡಾ. ಸದಾಶಿವ ಶೆಟ್ಟಿ ಯವರು ಮಧೂರು ಮಹಾಗಣಪತಿ ದೇವಸ್ಥಾನಕ್ಕೆ ನೀಡಿದ್ದಷ್ಟು ದೇಣಿಗೆ ಶರವೂರಿಗೆ ನೀಡದಿದ್ದರೂ ಅದಕ್ಕೆ ಸಮಾನವಾದ ದೇಣಿಗೆಯನ್ನು ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೀಡುವಂತೆ ವಿನಂತಿಸಿದರು.
ಡಾಕ್ಟರೇಟ್ ಪದವಿ ಸಿಕ್ಕಿರುವ ಹಿನ್ನೆಲೆಯಲ್ಲಿ ಡಾ. ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ನವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಉಪಸ್ಥಿತರಿದ್ದರು.
ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹೇಮಂತ್ ರೈ ಮನವಳಿಕೆಗುತ್ತು ಕ್ಷೇತ್ರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ವಿ.ಜೆ.ವಿಖ್ಯಾತ್ ಕಾರ್ಯಕ್ರಮ ನಿರೂಪಿಸಿ,ಶ್ರೇಯಾ ಆಚಾರ್ಯ ಪ್ರಾರ್ಥಿಸಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಧಾಕೃಷ್ಣ ರೈ ಪರಾರಿಗುತ್ತು, ಅಭಿವೃದ್ಧಿ ಸಮಿತಿ ಗೌರವ ಉಪಾಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು, ಸದಸ್ಯರಾದ ವಿಠಲ ರೈ ಕೊಣಾಲುಗುತ್ತು,ವಿಜಯ ಕೆದಿಲ,ಉತ್ಸವ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಪ್ರಭು ಅತಿಥಿಗಳನ್ನು ಸ್ವಾಗತಿಸಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ.ಸುಬ್ರಹ್ಮಣ್ಯ ರಾವ್ ನಗ್ರಿ ವಂದಿಸಿದರು.
ಬೆಳಿಗ್ಗೆ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಜಯಂತ್ ವೈ ನೇತೃತ್ವದ ಸಾಕ್ಷಾತ್ ಶಿವ ಭಜನಾ ಮಂಡಳಿ ಚಾರ್ವಾಕ ಇವರಿಂದ ಕುಣಿತ ಭಜನೆಯ ಪದ್ಯಭಾಗ ನಿರ್ವಹಣೆ, ಕುಣಿತ ಭಜನಾ ತಂಡಗಳಾದ ಶರವೂರು ಸಂಸ್ಕಾರ ಶಿಬಿರದ ಮಕ್ಕಳ ಭಜನಾ ತಂಡ, ಶ್ರೀ ದುರ್ಗಾ ಶಕ್ತಿ ಮಹಿಳಾ ಮತ್ತು ಮಕ್ಕಳ ಕುಣಿತ ಭಜನಾ ಮಂಡಳಿ ಆಲಂಕಾರು, ಶ್ರೀರಾಮ ಮಹಿಳಾ ಮತ್ತು ಮಕ್ಕಳ ಕುಣಿತ ಭಜನಾ ಮಂಡಳಿ ಸಬಳೂರು, ಶ್ರೀ ಆದಿಶಕ್ತಿ ಭಜನಾ ಮಂಡಳಿ ಶರವೂರು, ಶ್ರೀ ಪಂಚಲಿಂಗೇಶ್ವರ ಮಕ್ಕಳ ಕುಣಿತ ಭಜನಾ ಮಂಡಳಿ ಕುದ್ಮಾರು, ಬಹಳ ಅಚ್ಚುಕಟ್ಟಾಗಿ ಭಜನಾ ಕಾರ್ಯಕ್ರಮ ನಡೆಸಿಕೊಟ್ಟಿತು. ಸ್ವಾಮೀಜಿಗಳನ್ನು ಮತ್ತು ಅತಿಥಿಗಳನ್ನು ಹಾಗೂ ಪೂರ್ಣಕುಂಭ ಮತ್ತು ಚಂಡೆವಾದನದೊಂದಿಗೆ ಸ್ವಾಗತಿಸಲಾಯಿತು.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್22 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized23 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ22 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized22 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು11 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ9 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ9 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ10 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















