ಮಂಗಳೂರಿನಲ್ಲಿ ಸೋಮವಾರದಂದು ನಡೆದ ಸುದ್ದಿಗೋಷ್ಠಿಯಲ್ಲಿ […]" /> ಮಂಗಳೂರಿನಲ್ಲಿ ಸೋಮವಾರದಂದು ನಡೆದ ಸುದ್ದಿಗೋಷ್ಠಿಯಲ್ಲಿ […]"> Navodaya-ಮೇ.10: ನವೋದಯ ಸ್ವಸಹಾಯ ಗುಂಪುಗಳ 'ರಜತ ಸಂಭ್ರಮ'; ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಮಾವೇಶ - Nikhara News | Kannada News Website
Connect with us

ಮಂಗಳೂರು

Navodaya-ಮೇ.10: ನವೋದಯ ಸ್ವಸಹಾಯ ಗುಂಪುಗಳ ‘ರಜತ ಸಂಭ್ರಮ’; ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಮಾವೇಶ

Published

on

Ad Widget

Ad Widget

Ad Widget

Ad Widget

ನವೋದಯ ಸ್ವಸಹಾಯ ಗುಂಪುಗಳ ‘ರಜತ ಸಂಭ್ರಮ’ ಮೇ.10ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಇದು ದೇಶಕ್ಕೇ ಮಾದರಿಯ ಕಾರ್ಯಕ್ರಮವಾಗಲಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಎಂ.ಎನ್‌. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನವೋದಯ ಸ್ವಸಹಾಯ ಗುಂಪುಗಳ ‘ರಜತ ಸಂಭ್ರಮ’ ಮೇ.10ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಇದು ದೇಶಕ್ಕೇ ಮಾದರಿಯ ಕಾರ್ಯಕ್ರಮವಾಗಲಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಎಂ.ಎನ್‌. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೋಮವಾರದಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮಿಂದ ನಮಗಾಗಿ, ನಮಗೋಸ್ಕರ ಸ್ವಸಹಾಯ ಸಂಘಗಳು’ ಎಂಬ ಧೋರಣೆ ಹೊಂದಿರುವ ನವೋದಯ ಸ್ವಸಹಾಯ ಗುಂಪುಗಳು ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ದಾಪುಗಾಲು ಹಾಕುತ್ತಿವೆ. ಈ ಒಂದು ಉದಾತ್ತವಾದ ಉದ್ದೇಶವನ್ನಿಟ್ಟುಕೊಂಡು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

Ad Widget

Ad Widget <> Ad Widget

ಮಂಗಳೂರಿನ ಬಂಗ್ರ ಕೂಳೂರುನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಮೇ.10ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಸಮಾವೇಶದಲ್ಲಿ 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನವೋದಯ ರಜತ ಸಂಭ್ರಮದ ನೆನಪಿಗಾಗಿ ವಿಶಿಷ್ಟ ರೀತಿಯ ಲಾಂಛನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹೋಟ್‌ ಬಿಡುಗಡೆಗೊಳಿಸಲಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನವೋದಯ ಸ್ವ-ಸಹಾಯ ಗುಂಪುಗಳ ಸದಸ್ಯರುಗಳಿಗೆ ಸವಲತ್ತು ವಿತರಣೆಯನ್ನು ಮಾಡಲಿದ್ದು, ‘ಸಂತೃಪ್ತಿ’ ಸ್ಮರಣ ಸಂಚಿಕೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಡುಗಡೆಗೊಳಿಸುವರು. ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಸಹಕಾರ ಧ್ವಜಾರೋಹಣ ನೆರವೇರಿಸುವರು. ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನವನ್ನು ಕೇಂದ್ರ ಸಚಿವ ಪ್ರಹ್ಲಾದ ವಿ. ಜೋಶಿ ಇವರು ನೆರವೇರಿಸಲಿರುವರು

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾ‌ರ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಉಡುಪಿ ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು ಎಂದು ತಿಳಿಸಿದ್ದಾರೆ.

Ad Widget
Up Next

Mahalingeshwara Temple-ಮೇ13: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ; ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರ ಸೇವೆಗೆ ಅವಕಾಶ

Don't Miss

Alankar-ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ರಾಜಗೋಪುರ ಮತ್ತು ಮಹಾದ್ವಾರ ಶಿಲಾನ್ಯಾಸ ಕಾರ್ಯಕ್ರಮ; ಶ್ರೀ ದೇವಿಯ ಅಪ್ಪಣೆಯಂತೆ ಮುಂದೊಂದು ದಿನ ದೊಡ್ಡ ಕ್ಷೇತ್ರವಾಗಿ ಬೆಳಗಲಿದೆ – ಮಾಣಿಲ ಶ್ರೀ; ಅತೀ ಪುರಾತನ ದೇವಸ್ಥಾನಗಳನ್ನು ಅಭಿವೃದ್ಧಿ ಮಾಡಬೇಕು ಬೇರೆ ಧರ್ಮದವರನ್ನು ನಾವು ವಿರೋಧ ಮಾಡುತ್ತಿಲ್ಲ, ನಮ್ಮ ಮಕ್ಕಳಿಗೆ ಹಿಂದೂ ಧರ್ಮದ ಧಾರ್ಮಿಕ ಶಿಕ್ಷಣ ಸಿಗಬೇಕು – ಕನ್ಯಾನ ಕೂಳೂರು ಡಾ.ಸದಾಶಿವ ಶೆಟ್ಟಿ; ಶರವೂರು ದುರ್ಗಾಪರಮೇಶ್ವರಿ ದೇವಿಯ ಅನುಗ್ರಹದಿಂದ ಎರಡು ಬಾರಿ ಪುತ್ತೂರಿನ ಶಾಸಕಿಯಾಗಿದ್ದೇನೆ – ಶಕುಂತಳ ಶೆಟ್ಟಿ

Click to comment

Leave a Reply

ಮಂಗಳೂರು

Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿಕ ಸಂಸ್ಥೆಗಳು ಪ್ರತಿದಿನ ರಾತ್ರಿ 11:45ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget

Ad Widget <> Ad Widget

ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ನಿರ್ಬಂಧಕ್ಕೆ ಕಾರಣವೇನು?
ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ನಗರದ ಹಲವು ಭಾಗಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ad Widget

Ad Widget

ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್‌ಗಳು ಹಾಗೂ ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಅನಗತ್ಯವಾಗಿ ಓಡಾಡುವುದು, ಕಾಲಹರಣ ಮಾಡುವುದು ಕಂಡುಬರುತ್ತಿದ್ದು, ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ, ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Ad Widget
Continue Reading

ಅಪರಾಧ

Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್‌ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.

Ad Widget

Ad Widget <> Ad Widget

ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.

ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಕದ್ರಿ ಪೊಲೀಸ್ ಠಾಣೆಯ ಎದುರಿನಲ್ಲೇ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ, ವಿಡಿಯೋದಲ್ಲಿರುವ ಯುವಕರನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಿಂದ ಆಗ್ರಹ ವ್ಯಕ್ತವಾಗಿದೆ.

Ad Widget
Continue Reading

ಶಿಕ್ಷಣ

Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

Ad Widget

Ad Widget alt="Ad Widget"/>

Ad Widget

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.

Ad Widget

Ad Widget <> Ad Widget

ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.

ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.

Ad Widget

Ad Widget

ಎಸ್‌ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್‌ಐಟಿಕೆ (NITK) ಸುರತ್ಕಲ್‌ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್‌ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್‌ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.

ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.

ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!