ಮಂಗಳೂರು
Mangaluru-ಮಂಗಳೂರಿನಲ್ಲಿ ಹೈ ಅಲರ್ಟ್; ರಾತ್ರಿ 9.30ರೊಳಗೆ ಹೋಟೆಲ್, ಪಬ್, ಬಾರ್, ಫುಟ್ಪಾತ್ ವ್ಯಾಪಾರ ಬಂದ್
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಪ್ರಕಟಿಸಿರುವ ಕಾರಣ ಕರಾವಳಿಯಲ್ಲಿ, ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ‘ರಾತ್ರಿ 9.30ಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ’ ಎಂದು ಸಂದೇಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ.
ಮಂಗಳೂರು, ಮೇ 6: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಪ್ರಕಟಿಸಿರುವ ಕಾರಣ ಕರಾವಳಿಯಲ್ಲಿ, ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ‘ರಾತ್ರಿ 9.30ಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ’ ಎಂದು ಸಂದೇಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ.
ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಹೋಟೆಲ್, ಪಬ್, ಬಾರ್ಗಳು, ಫುಟ್ಪಾತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಿಸುವ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವು ದಿನಗಳ ಕಾಲ ಇದನ್ನೇ ಮುಂದುವರಿಸುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.
ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಇನ್ನೋವಾ ಕಾರಿನಲ್ಲಿ ಬಂದು ದಾಳಿ ಮಾಡಿತ್ತು. ಇದೀಗ ಕಾವೂರು ಪೊಲೀಸರು ಲೋಕೇಶ್ನನ್ನು ಬಂಧಿಸಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ನಂತರ ಮಂಗಳೂರಿನ ಮೂರು ಕಡೆ ಚಾಕು ಇರಿತ ಪ್ರಕರಣಗಳು ವರದಿಯಾಗಿದ್ದವು. ಒಟ್ಟಾರೆಯಾಗಿ 7 ಮಂದಿಯನ್ನು ಬಂಧಿಸಲಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಮಂಗಳೂರಿನಲ್ಲಿ ಮತ್ತಿಬ್ಬರು ಹಿಂದೂ ಮುಖಂಡರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಬೆದರಿಕೆ ಹಾಕಲಾಗಿತ್ತು. ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವೈರಲ್ ಆಗಿತ್ತು.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.


















