Connect with us

ಮಂಗಳೂರು

Dinesh Gundu Rao-ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ತೆರೆಯಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಡಿಸಿದ್ದ ಆದೇಶ ಪ್ರತಿ ಬಿಡುಗಡೆ ಮಾಡಿದ ಸಚಿವ ದಿನೇಶ್ ಗುಂಡೂರಾವ್..!

Published

on



Ad Widget

Ad Widget

Ad Widget

Ad Widget

ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಕ್ಸಮರ ಮುಂದುವರಿದಿದೆ. ಸರ್ಕಾರ ಫಾಜಿಲ್ ಕುಟುಂಬಕ್ಕೆ ನೀಡಿದ್ದ ಪರಿಹಾರ ಹಣವನ್ನು ಸುಪಾರಿ ಕೊಲೆಗೆ ಬಳಸಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಹತ್ಯೆಗೂ ಮುನ್ನ ಕಳಸದಲ್ಲಿ ಫೈರ್‌ ಕ್ಯಾಂಪ್‌ ಪಾರ್ಟಿಯನ್ನು ಆರೋಪಿಗಳು ಮಾಡಿದ್ದರು.

Ad Widget

Ad Widget

Ad Widget

Ad Widget

ಬೆಂಗಳೂರು/ಮಂಗಳೂರು : ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಕ್ಸಮರ ಮುಂದುವರಿದಿದೆ. ಸರ್ಕಾರ ಫಾಜಿಲ್ ಕುಟುಂಬಕ್ಕೆ ನೀಡಿದ್ದ ಪರಿಹಾರ ಹಣವನ್ನು ಸುಪಾರಿ ಕೊಲೆಗೆ ಬಳಸಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಹತ್ಯೆಗೂ ಮುನ್ನ ಕಳಸದಲ್ಲಿ ಫೈರ್‌ ಕ್ಯಾಂಪ್‌ ಪಾರ್ಟಿಯನ್ನು ಆರೋಪಿಗಳು ಮಾಡಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಈ ನಡುವೆ, ರಾಜ್ಯ ಆರೋಗ್ಯ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯೂ ಆಗಿರುವ ದಿನೇಶ್ ಗುಂಡೂರಾವ್, 2020ರಲ್ಲಿ ಸುಹಾಸ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಆದೇಶ ನೀಡಿದ ಪ್ರತಿಯನ್ನು ಬಿಡುಗಡೆ ಮಾಡಿದ್ದಾರೆ. ಈಗ ಏನು ಹೇಳುತ್ತೀರಿ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿ, ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

Ad Widget

Ad Widget <> Ad Widget

“ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ”.



Ad Widget

“#SuhasShetty ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು @BJP4India ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ @BSBommai. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.?”

Ad Widget

Ad Widget

ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ @BJP4Karnataka ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ.?

ಕರಾವಳಿಯಲ್ಲಿ ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.

“ದ.ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ” ಎಂದು ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನತೆಗೆ ಮನವಿ ಮಾಡಿದ್ದಾರೆ.

ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮುಸ್ಲಿಂ ಬಾಂಧವರ ಕೊಡುಗೆಯನ್ನು ಅರಿತು ಹಿಂದಿನ ಪೇಜಾವರ ಮಠದ ಶ್ರೀಗಳಾದ ವಿಶ್ವೇಶತೀರ್ಥ ಶ್ರೀಗಳು, ವಿರೋಧದ ನಡುವೆಯೂ ಇಫ್ತಾರ್‌ ಕೂಟವನ್ನು ಆಯೋಜಿಸಿ ಸೌಹಾರ್ದತೆಯ ಸಂದೇಶ ನೀಡಿದ್ದರು. ಆದರೆ, ಈಗಿನ ಅವರ ಶಿಷ್ಯರಾಗಿರುವ ವಿಶ್ವಪ್ರಸನ್ನ ತೀರ್ಥರು ಹಿಂದೂಸ್ಥಾನದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹೇಳಿದ್ದಾರೆ. ಹಾಗಿದ್ದರೆ ಕೇಂದ್ರ ಸರಕಾರದ ರಾಜೀನಾಮೆ ಕೇಳಿ. ಉಡುಪಿ ಮಠದ ಬಗ್ಗೆ ಗೌರವವಿದೆ. ಹಾಗಾಗಿ, ಶ್ರೀಗಳು ಇಂತಹ ಕ್ಷುಲ್ಲಕ ಹೇಳಿಕೆ ನೀಡಬಾರದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading