ಬಿಗ್ ನ್ಯೂಸ್
VIP seat battle-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ವಿಐಪಿ ಸೀಟು ಸಮರ’ : ಐಪಿಎಸ್ vs ಐಟಿ ಅಧಿಕಾರಿಗಳ ಕುಟುಂಬಗಳ ಜಗಳ – ಲೈಂಗಿಕ ದೌರ್ಜನ್ಯ ಆರೋಪ ಕೇಸ್ ದಾಖಲು
ಚಿನ್ನಸ್ವಾಮಿ ಕ್ರೀಡಾಂಗಣದ VIP ಬಾಕ್ಸ್‌ನಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳ ಕುಟುಂಬಸ್ಥರ ನಡುವೆ ಜಗಳ ನಡೆದಿದೆ. ಐಪಿಎಸ್ ಅಧಿಕಾರಿ ಮತ್ತು ಆದಾಯ ತೆರಿಗೆ ಆಯುಕ್ತರ ಕುಟುಂಬ ಸದಸ್ಯರು ಸೀಟಿಗಾಗಿ ಜಗಳವಾಡಿದ್ದಾರೆ. ಕೊನೆಗೆ ಈ ಜಗಳ ವಿಕೋಪಕ್ಕೆ ತಿರುಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಐಪಿಎಸ್ ಅಧಿಕಾರಿಯ ಕುಟುಂಬವು, ಆದಾಯ ತೆರಿಗೆ ಆಯುಕ್ತರ ಕುಟುಂಬದ ಮೇಲೆ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದೆ.
ಬೆಂಗಳೂರಿನ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣ ಕೇವಲ ಕ್ರಿಕೆಟ್ ಪಂದ್ಯಗಳಿಗಷ್ಟೇ ಅಲ್ಲ, ಕೆಲವೊಮ್ಮೆ ಅನಿರೀಕ್ಷಿತ ‘ಹೈಡ್ರಾಮಾ’ಗಳಿಗೂ ಸಾಕ್ಷಿಯಾಗುತ್ತದೆ. ಮೇ 3 ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಜಿದ್ದಾಜಿದ್ದಿನ ಪಂದ್ಯದ ವೇಳೆ, ವಿಐಪಿ ಬಾಕ್ಸ್‌ನಲ್ಲಿ ನಡೆದ ಘಟನೆಯೊಂದು ಇದಕ್ಕೆ ತಾಜಾ ಉದಾಹರಣೆ. ಇಲ್ಲಿ ಕ್ರಿಕೆಟ್ ಚೆಂಡುಗಳ ಬದಲು, ಪ್ರತಿಷ್ಠೆಯ ಮಾತುಗಳು ತೂರಿಬಂದವು, ಒಂದು ಸೀಟಿಗಾಗಿ ನಡೆದ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿ, ಲೈಂಗಿಕ ದೌರ್ಜನ್ಯದಂತಹ ಗಂಭೀರ ಆರೋಪಗಳಿಗೂ ಕಾರಣವಾಯಿತು!
ಚಿನ್ನಸ್ವಾಮಿ ಕ್ರೀಡಾಂಗಣದ VIP ಬಾಕ್ಸ್‌ನಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳ ಕುಟುಂಬಸ್ಥರ ನಡುವೆ ಜಗಳ ನಡೆದಿದೆ. ಐಪಿಎಸ್ ಅಧಿಕಾರಿ ಮತ್ತು ಆದಾಯ ತೆರಿಗೆ ಆಯುಕ್ತರ ಕುಟುಂಬ ಸದಸ್ಯರು ಸೀಟಿಗಾಗಿ ಜಗಳವಾಡಿದ್ದಾರೆ. ಕೊನೆಗೆ ಈ ಜಗಳ ವಿಕೋಪಕ್ಕೆ ತಿರುಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಐಪಿಎಸ್ ಅಧಿಕಾರಿಯ ಕುಟುಂಬವು, ಆದಾಯ ತೆರಿಗೆ ಆಯುಕ್ತರ ಕುಟುಂಬದ ಮೇಲೆ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದೆ. ಈ ಘಟನೆಯು ಹಲವು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆದಿದೆ.
ಸರ್ಕಾರಿ ಅಧಿಕಾರಿಗಳಿಬ್ಬರ ಕುಟುಂಬಸ್ಥರ ನಡುವೆ ನಡೆದ ಜಗಳ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಐಪಿಎಸ್ ಅಧಿಕಾರಿಯ ಕುಟುಂಬಸ್ಥರ ಆರೋಪಗಳನ್ನು ತೆರಿಗೆ ಆಯುಕ್ತರ ಕುಟುಂಬ ನಿರಾಕರಿಸಿದೆ. ‘ಸೀಟಿಗಾಗಿ ಕುಟುಂಬಸ್ಥರ ನಡುವಿನ ಜಟಾಪಟಿ ಮೈದಾನದ ಡೈಮಂಡ್ ಬಾಕ್ಸ್‌ನಲ್ಲಿ ನಡೆದಿದೆ. ಹಲವು ಹಿರಿಯ ಸರ್ಕಾರಿ ಅಧಿಕಾರಿಗಳು ಘಟನೆಯನ್ನೂ ನೋಡುತ್ತಿದ್ದರೂ, ಜಗಳ ಬಿಡಿಸಲು ಯಾರೂ ಮಧ್ಯಪ್ರವೇಶಿಸಲಿಲ್ಲʼ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏನಿದು ಘಟನೆ?
ಐಪಿಎಸ್ ಅಧಿಕಾರಿಯ ಮಗಳು ಮತ್ತು ಮಗ ಪಂದ್ಯ ವೀಕ್ಷಿಸಲು ವಿಐಪಿ ಬಾಕ್ಸ್‌ನಲ್ಲಿ ಕುಳಿತಿದ್ದರು. ಮಗಳು ವಾಶ್‌ರೂಮ್‌ಗೆ ಹೋಗುವಾಗ ತನ್ನ ಪರ್ಸ್ ಅನ್ನು ಸೀಟಿನ ಮೇಲೆ ಇಟ್ಟು ಹೋಗಿದ್ದಾಳೆ. ಆಗ ವ್ಯಕ್ತಿಯೊಬ್ಬರು ಬಂದು ಆ ಸೀಟಿನಲ್ಲಿ ಕುಳಿತಿದ್ದಾರೆ. ಆಗ ಆಕೆಯ ಸಹೋದರ ಸೀಟಿನಿಂದ ಎದ್ದೇಳಿ ಎಂದು ಹೇಳಿದಾಗ, ಅವರು ನಿರಾಕರಿಸಿದ್ದಾರೆ. ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ. ನಂತರ, ಆ ವ್ಯಕ್ತಿಯ ಹೆಂಡತಿ, ಆದಾಯ ತೆರಿಗೆ ಅಧಿಕಾರಿ ಮತ್ತು ಅವರ ಮಗ ಕೂಡ ಅಲ್ಲಿಗೆ ಬಂದಾಗ ವಾಗ್ವಾದ ತಾರಕಕ್ಕೇರಿದೆ. ಐಪಿಎಸ್ ಅಧಿಕಾರಿಯ ಮಗಳು ಮತ್ತು ಆ ವ್ಯಕ್ತಿಯ ನಡುವಿನ ಜಗಳ ಇನ್ನಷ್ಟು ಹೆಚ್ಚಾಗಿದೆ.
ಕೂಡಲೇ ಐಪಿಎಸ್ ಅಧಿಕಾರಿಗಳ ಮಕ್ಕಳಿಬ್ಬರು ಹೆತ್ತವರಿಗೆ ಕರೆ ಮಾಡಿದ್ದಾರೆ. ಮನೆಯ ಟಿವಿಯಲ್ಲಿ ಪಂದ್ಯ ನೋಡುತ್ತಿದ್ದ, ಐಪಿಎಸ್ ಅಧಿಕಾರಿ ಮತ್ತು ಅವರ ಪತ್ನಿ ತಕ್ಷಣ ಕ್ರೀಡಾಂಗಣಕ್ಕೆ ಧಾವಿಸಿದರು. ಮಾರ್ಗಮಧ್ಯೆ ತಮ್ಮ ಮಕ್ಕಳಿಗೆ ಏನಾಗಿದೆಯೋ ಎಂದು ಹೆದರಿ, ನಗರದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಧ್ಯಪ್ರವೇಶಿಸುವಂತೆ ಕೇಳಿಕೊಂಡರು. ಆದರೆ ಯಾರೂ ಸಹಾಯಕ್ಕೆ ಬರದಿದ್ದಾಗ, ಐಪಿಎಸ್ ಅಧಿಕಾರಿಯ ಪತ್ನಿ ತನ್ನ ಮಕ್ಕಳಿಗೆ ಕ್ರೀಡಾಂಗಣದಿಂದ ಹೊರಗೆ ಹೋಗಲು ಹೇಳಿದ್ದಾರೆ. ನಂತರ ಅವರಿಬ್ಬರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ, ‘ಆ ವ್ಯಕ್ತಿ ತನ್ನ ಮಗಳಿಗೆ ಕಿರುಕುಳ ನೀಡಿದ್ದಾನೆ ಮತ್ತು ಆಕೆಯ ಖಾಸಗಿತನಕ್ಕೆ ಅಡ್ಡಿಪಡಿಸಿದ್ದಾನೆʼ ಎಂದು ಆರೋಪಿಸಲಾಗಿದೆ. ಆ ವ್ಯಕ್ತಿಯು ಅನುಚಿತವಾಗಿ ವರ್ತಿಸಿದ ದೃಶ್ಯಗಳನ್ನು ಮಗ ತನ್ನ ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾನೆ ಎಂದು ತಿಳಿಸಿದ್ದಾರೆ. ಘಟನೆ ನಡೆದಾಗ ಡೈಮಂಡ್ ಬಾಕ್ಸ್‌ನಲ್ಲಿ ಯಾವುದೇ ಪೊಲೀಸರು ಇರಲಿಲ್ಲ. ಘಟನೆ ರಾತ್ರಿ 9.40 ರಿಂದ 10.20 ರ ನಡುವೆ ನಡೆದಿದೆ.
ದೂರಿನ ಆಧಾರದ ಮೇಲೆ, ಪೊಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351 (ಕ್ರಿಮಿನಲ್ ಬೆದರಿಕೆ), 352 (ಶಾಂತಿ ಭಂಗ ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು), 75 (ಲೈಂಗಿಕ ಕಿರುಕುಳ, ಇದರಲ್ಲಿ ಅನಗತ್ಯ ಸ್ಪರ್ಶ ಸೇರಿದೆ), ಮತ್ತು 79 (ಮಹಿಳೆಯ ಘನತೆಗೆ ಧಕ್ಕೆ ತರುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡು ಗಂಟೆಗಳ ನಂತರ, ಆ ವ್ಯಕ್ತಿ ಮತ್ತು ಆತನ ಹೆಂಡತಿಯನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು. ನಂತರ ಅವರನ್ನು ಹೋಗಲು ಅನುಮತಿಸಲಾಯಿತು.
ಅಸಹಾಯಕ ಸ್ಥಿತಿಯಲ್ಲಿ ಪೊಲೀಸರು!
ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಪೊಲೀಸ್ ಅಧಿಕಾರಿಗಳು, ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ‘ಒಬ್ಬರು ಹಿರಿಯ ಐಪಿಎಸ್ ಅಧಿಕಾರಿ, ಇನ್ನೊಬ್ಬರು ಹಿರಿಯ ಆದಾಯ ತೆರಿಗೆ ಅಧಿಕಾರಿ, ನಾವು ಸಂಕಷ್ಟದಲ್ಲಿದ್ದೇವೆʼ ಎಂದು ಪೊಲೀಸ್ ಅಧಿಕಾರಿಯೊಬ್ಬರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು ಸಾರ್ವಜನಿಕವಾಗಿ ಈ ರೀತಿ ವರ್ತಿಸುವುದು ಸರಿಯಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆಯು ಅಧಿಕಾರಿಗಳ ನಡವಳಿಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಬಿಗ್ ನ್ಯೂಸ್
Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.
ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.
ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸಿನೆಮಾ
Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.
ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಸ್ಥಳೀಯ
Beltangadi-ಬೆಳ್ತಂಗಡಿ: ಆನೆಗಳ ಸಂಚಾರ ಹೆಚ್ಚಳ ಹಿನ್ನೆಲೆ; ದಿಡುಪೆ ಫಾಲ್ಸ್ ವೀಕ್ಷಣೆಗೆ ನಿರ್ಬಂಧ
ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಈ ನಿರ್ಬಂಧ ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶ ಹೊರಬೀಳುವವರೆಗೆ ಪ್ರವಾಸಿಗರಿಗೆ ದಿಡುಪೆ ಫಾಲ್ಸ್ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ವನ್ಯಜೀವಿ ವಲಯದ ಅರಣ್ಯಾಧಿಕಾರಿ ಶರ್ಮಿಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನೆಗಳ ಸಂಚಾರ ಹೆಚ್ಚಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.
-
ಬಿಗ್ ನ್ಯೂಸ್24 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್23 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ23 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ22 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ22 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಸ್ಥಳೀಯ5 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ5 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಮಂಗಳೂರು21 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















