ಮಂಗಳೂರು
Anupam Agrawal-ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ದ್ವೇಷದ ಪೋಸ್ಟ್ : ಮೂರು ಪ್ರತ್ಯೇಕ ಕೇಸ್ – ಮಂಗಳೂರಿನಲ್ಲಿ ಪುತ್ತೂರಿನ ವ್ಯಕ್ತಿಯ ವಿಚಾರಣೆ; ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಹೇಳಿದ್ದೇನು ?
ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಸುದ್ದಿಗಳನ್ನು ಹಬ್ಬಿಸುವ, ಸಮಾಜದಲ್ಲಿ ದ್ವೇಷದ ಕಿಡಿ ಹೊತ್ತಿಸಿ ಶಾಂತಿ ಮತ್ತು ಸೌಹಾರ್ದ ಕದಡುವ ವ್ಯಕ್ತಿಗಳು ಹಾಗೂ ಗುಂಪುಗಳ ವಿರುದ್ಧ ಮಂಗಳೂರು ನಗರ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಸೋಮವಾರ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಸುದ್ದಿಗಳನ್ನು ಹಬ್ಬಿಸುವ, ಸಮಾಜದಲ್ಲಿ ದ್ವೇಷದ ಕಿಡಿ ಹೊತ್ತಿಸಿ ಶಾಂತಿ ಮತ್ತು ಸೌಹಾರ್ದ ಕದಡುವ ವ್ಯಕ್ತಿಗಳು ಹಾಗೂ ಗುಂಪುಗಳ ವಿರುದ್ಧ ಮಂಗಳೂರು ನಗರ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಸೋಮವಾರ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಾಟ್ಸ್ಆ್ಯಪ್ನಲ್ಲಿ ಪ್ರಚೋದನಕಾರಿ ಬಂದ್ ಕರೆ
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು, ಮನೀಶ್ ಎಸ್. ಎಂಬ ವ್ಯಕ್ತಿಯು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸಮಾಜದ ಶಾಂತಿ ಕದಡುವಂತಹ ಸಂದೇಶವನ್ನು ಹರಿಯಬಿಟ್ಟಿದ್ದ. “ನಮ್ಮ ಕಾರ್ಯಕರ್ತನಾದ ಸುಹಾಸ್ ಬಜಪೆಯ ಹತ್ಯೆಯನ್ನು ಖಂಡಿಸಿ ಇಂದು (ಮೇ 2) ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದ.ಕ ಜಿಲ್ಲೆ ಸಂಪೂರ್ಣ ಬಂದ್. ಸುಹಾಸ್ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಬಲವನ್ನು ಈಗ ತೋರಿಸದೇ ಇದ್ದಲ್ಲಿ ಮುಂದೊಂದು ದಿನ ನಾವೇ ಇರುವುದಿಲ್ಲ. ಹಿಂದೂ ಸಾಗರದ ಬಿಂದು ಬಿಂದುಗಳೇ ಒಟ್ಟಾಗೋಣ, ಬಲಿದಾನ ವ್ಯರ್ಥವಾಗದಿರಲಿ,” ಎಂಬ ಪ್ರಚೋದನಕಾರಿ ಪೋಸ್ಟ್ ಮಾಡಿದ್ದನು.
ಈ ಪೋಸ್ಟ್ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಿತ್ತು. ಈ ಹಿನ್ನೆಲೆಯಲ್ಲಿ, ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಕಲಂ 192ರ ಅಡಿಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುತ್ತೂರಿನ ನಿವಾಸಿ ಎನ್ನಲಾದ ಮನೀಶ್ನನ್ನು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರೆದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಫೇಸ್ಬುಕ್ನಲ್ಲಿ ಹಳೆಯ ಫೋಟೋ ಬಳಸಿ ಕಾಂಗ್ರೆಸ್ ನಾಯಕರ ವಿರುದ್ಧ ದುಷ್ಪ್ರಚಾರ
ಇನ್ನೊಂದು ಪ್ರಕರಣದಲ್ಲಿ, ‘ವಿಕಾಸ್ ಪಿ.’ ಎಂಬ ಫೇಸ್ಬುಕ್ ಖಾತೆಯಿಂದ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಯನ್ನು ಹರಡಲಾಗಿತ್ತು. “ಸುಹಾಸ್ ಶೆಟ್ಟಿ ಹತ್ಯೆಯ ಪ್ರಮುಖ ರೂವಾರಿ, ಎ1 ಆರೋಪಿ ಮಂಗಳೂರಿನ ಆದಿಲ್ ಮನೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರು ಸಂಚು ರೂಪಿಸುತ್ತಿರುವುದು” ಎಂದು ಹಳೆಯ, ಅಸಂಬದ್ಧ ಛಾಯಾಚಿತ್ರವನ್ನು ಬಳಸಿ, ಸಮಾಜದಲ್ಲಿ ತಪ್ಪು ತಿಳುವಳಿಕೆ ಮೂಡಿಸುವ ಮತ್ತು ರಾಜಕೀಯ ದ್ವೇಷವನ್ನು ಪ್ರಚೋದಿಸುವ ಪ್ರಯತ್ನ ಮಾಡಲಾಗಿತ್ತು. ಈ ಫೇಸ್ಬುಕ್ ಖಾತೆದಾರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಎಕ್ಸ್ (X) ಖಾತೆಯಲ್ಲಿ ಕೊಲೆಗೆ ಸರ್ಕಾರಿ ಪರಿಹಾರಧನ ಬಳಕೆಯ ಕಟ್ಟುಕಥೆ
‘ರಾಹುಲ್ ಶಿವಶಂಕರ್’ ಎಂಬ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ಮತ್ತೊಂದು ಆಘಾತಕಾರಿ ಸುಳ್ಳು ಸುದ್ದಿಯನ್ನು ಪ್ರಕಟಿಸಲಾಗಿತ್ತು. “ಶಾಕಿಂಗ್: ಮಂಗಳೂರು ಕೊಲೆ ಪ್ರಕರಣದ ಆರೋಪಿ ಆದಿಲ್, ತಮ್ಮ ಸಹೋದರ ಫಾಝಿಲ್ ಮೃತಪಟ್ಟಾಗ ರಾಜ್ಯ ಸರ್ಕಾರ ನೀಡಿದ್ದ ಪರಿಹಾರ ಮೊತ್ತವನ್ನು ಸುಹಾಸ್ ಶೆಟ್ಟಿ ಹತ್ಯೆಗೆ ಬಳಸಿಕೊಂಡು ಸೇಡು ತೀರಿಸಿಕೊಂಡಿದ್ದಾನೆ. ಸುಹಾಸ್ ಕೊಲೆ ಮಾಡಲು ಆರೋಪಿ ಸಫಾನ್ಗೆ ₹3 ಲಕ್ಷವನ್ನು, ಸರ್ಕಾರದಿಂದ ಪಡೆದ ಪರಿಹಾರ ಪ್ಯಾಕೇಜ್ನ ₹25 ಲಕ್ಷ ಮೊತ್ತದಿಂದ ನೀಡಲಾಗಿದೆ ಎಂಬ ಸಂಗತಿ ಪೊಲೀಸ್ ತನಿಖೆಯ ವೇಳೆ ತಿಳಿದು ಬಂದಿದೆ,” ಎಂದು ಸಂಪೂರ್ಣ ಆಧಾರರಹಿತ ಮತ್ತು ಸಮಾಜವನ್ನು ದಾರಿತಪ್ಪಿಸುವಂತಹ ಪೋಸ್ಟ್ ಮಾಡಲಾಗಿತ್ತು. ಈ ಕೃತ್ಯಕ್ಕಾಗಿ ಉರ್ವ ಪೊಲೀಸ್ ಠಾಣೆಯಲ್ಲಿ ಸದರಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ನಿಧನ ವಾರ್ತೆ13 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು12 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು9 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ13 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ13 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ13 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ13 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ14 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















