Connect with us

ಶಿಕ್ಷಣ

Akshaya College-ಭವಿಷ್ಯ ಅರಸಿ ಬರುವ ವಿದ್ಯಾರ್ಥಿಗಳ ಬಾಳಿನ ದೀವಿಗೆ ಪುತ್ತೂರಿನ ಅಕ್ಷಯ ಕಾಲೇಜು; ಉದ್ಯೋಗಾಧಾರಿತ ಕೋರ್ಸುಗಳು; ವಿಪುಲ ಉದ್ಯೋಗ ಅವಕಾಶ; ಉತ್ತಮ ಕ್ಯಾಂಪಸ್

Published

on

Ad Widget

Ad Widget

Ad Widget

Ad Widget

ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಉದ್ಯೋಗ ವೃತ್ತಿ ಶಿಕ್ಷಣ ನೀಡುವ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಕ್ಷಯ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಪಾಲಿಗೆ ವರವಾಗಿರುವ ಈ ವಿದ್ಯಾಸಂಸ್ಥೆ ಕಲಿಕಾ ಗುಣಮಟ್ಟ, ಫಲಿತಾಂಶ, ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮೆರೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಉದ್ಯೋಗ ವೃತ್ತಿ ಶಿಕ್ಷಣ ನೀಡುವ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಕ್ಷಯ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಪಾಲಿಗೆ ವರವಾಗಿರುವ ಈ ವಿದ್ಯಾಸಂಸ್ಥೆ ಕಲಿಕಾ ಗುಣಮಟ್ಟ, ಫಲಿತಾಂಶ, ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮೆರೆದಿದೆ.

Ad Widget

Ad Widget alt="Ad Widget"/>

Ad Widget

ಉದ್ಯೋಗ ಆಧಾರಿತ ಕೋರ್ಸುಗಳು:

Ad Widget

Ad Widget <> Ad Widget

1.ಬಿ.ಕಾಂ ವಿತ್ ಏವಿಯೇಶನ್ & ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ – ಬಿ.ಕಾಂ ವಿತ್ ಎವಿಯೇಶನ್ & ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ಪದವಿ ಗಳಿಸಿದಲ್ಲಿ ಏರ್‌ಪೋರ್ಟ್ ಗ್ರೌಡ್ ಲೆವೆಲ್ ಸ್ಟಾಫ್, ಕ್ರೂಝ್ ಮೆಂಬರ್ ಮೊದಲಾದ ಹುದ್ದೆಗಳನ್ನು ಪಡೆಯಬಹುದು. ಹಾಸ್ಪಿಟಾಲಿಟಿ ಮ್ಯಾನೇಜ್‌ಮೇಂಟ್ ಮೂಲಕ 3 ಸ್ಟಾರ್, 5 ಸ್ಟಾರ್ ಹೋಟೆಲ್‌ಗಳಲ್ಲಿ ಉತ್ತಮ ಉದ್ಯೋಗ ಪಡೆಯಬಹುದಾಗಿದೆ.

2.ಬಿಎಸ್ಸಿ ಫ್ಯಾಶನ್ ಡಿಸೈನ್ – ಮಾಡೆಲಿಂಗ್, ಸಿನಿಮಾರಂಗ, ವಸ್ತ್ರವಿನ್ಯಾಸ, ರೀಟೇಲ್ ಬಯರ್, ರಿಟೇಲ್ ಮ್ಯಾನೇಜರ್, ಮರ್ಚಂಡೈಸರ್‌ಗಳಿಗೆ ದೇಶ ವಿದೇಶಗಳ ಕಂಪೆನಿಗಳಲ್ಲಿ ತಿಂಗಳಿಗೆ ಲಕ್ಷಕ್ಕಿಂತಲೂ ಅಧಿಕ ಸಂಬಳ ಸಿಗುತ್ತದೆ.

Ad Widget

Ad Widget

3. ಬಿಎಸ್ಸಿ ಇಂಟೀರಿಯರ್ ಡಿಸೈನ್ ಆಂಡ್ ಡೆಕೋರೇಶನ್ – ಪ್ರಸ್ತುತ ಇಂಟೀರಿಯರ್ ಡಿಸೈನ್ ಔದ್ಯೋಗಿಕ ರಂಗದಲ್ಲಿ ತನ್ನದೇ ಛಾಪು ಮೂಡಿಸುತ್ತಿದ್ದು, ವಿದ್ಯಾರ್ಥಿಗಳು ಹೊಸ ವೃತ್ತಿ ಜೀವನದ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಳಾಂಗಣ ವಿನ್ಯಾಸಗಾರರಿಗೆ ವಿಫುಲವಾದ ಬೇಡಿಕೆ ಇದ್ದು, ವಾಸ್ತುಶಿಲ್ಪ ಸಂಸ್ಥೆಗಳು, ಪೀಠೋಪಕರಣ ಕಂಪೆನಿಗಳು, ನಿರ್ಮಾಣ ಸಂಸ್ಥೆಗಳು, ಹೋಟೆಲ್, ರೆಸಾರ್ಟ್, ಕಾರ್ಪೋರೇಟ್ ವಲಯ, ಸ್ವಯಂ ಉದ್ಯೋಗ ಹೀಗೆ ಬಹುತೇಕ ಎಲ್ಲ ಕ್ಷೇತ್ರ ಮತ್ತು ಉದ್ಯೋಗ ಕ್ಷೇತ್ರಗಳಿಗೆ ಪ್ರತಿಭಾನ್ವಿತ ಇಂಟೀರಿಯರ್ ಡಿಸೈನರ್‌ಗಳ ಬೇಡಿಕೆ ಇದ್ದು ಟ್ರೆಂಡ್ ಸೃಷ್ಟಿಸಿದೆ.

4. ಬಿಸಿಎ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ & ಸೈಬರ್ ಸೆಕ್ಯೂರಿಟಿ – ಬಿಸಿಎ ವಿತ್ ಆರ್ಟಿಫಿಷಲ್ ಇಂಟೆಲಿಜೆನ್ಸಿ ಮೂಲಕ ವಿದ್ಯಾರ್ಥಿಗಳು ಸಾಪ್ಟ್‌ವೇರ್ ಕಂಪನಿ ಮಾರ್ಕೆಟಿಂಗ್ ಇ ಕಾಮರ್ಸ್ ಸಾಪ್ಟ್‌ವೇರ್ ಡೆವಲಪರ್ ಮುಂತಾದ ಉದ್ಯೋಗಗಳನ್ನು ಹೊಂದಬಹುದು.

5.  ಬಿಎಚ್‌ಎಸ್ ಬ್ಯಾಚುಲರ್ ಇನ್ ಹಾಸ್ಪಿಟಾಲಿಟಿ ಸೈನ್ಸ್(ಹೊಟೇಲ್ ಮ್ಯಾನೇಜ್‌ಮೆಂಟ್) – ಬಿಎಸ್ಸಿ ಹಾಸ್ಪಿಟಾಲಿಟಿ ಸಯನ್ಸ್(ಹೊಟೇಲ್ ಮ್ಯಾನೇಜ್‌ಮೆಂಟ್) ಪದವಿಯಿಂದ ಕ್ಯಾಬಿನ್ ಕ್ರೂ, ಏರ್‌ಲೈನ್ಸ್, ಟೂರಿಸಂ, 5 ಸ್ಟಾರ್ & 7 ಸ್ಟಾರ್ ಹೋಟೇಲ್ ಉದ್ಯಮಗಳಲ್ಲಿ ಹಾಗೂ ವಿದೇಶದಲ್ಲಿ ಹಲವಾರು ಕ್ಷೇತ್ರಗಳಲ್ಲಿ ಫೀಲ್ಡ್ ಮ್ಯಾನೇಜರ್ ಮೊದಲಾದ ಉನ್ನತ ಉದ್ಯೋಗಗಳನ್ನು ಗಳಿಸಬಹುದಾಗಿದೆ.

 6. ಬಿ.ಎ ವಿಥ್ ಫ್ಯಾಶನ್ ಡಿಸೈನ್ ಅಥವಾ ಏವಿಯೇಶನ್– ಏರ್‌ಲೈನ್ಸ್, ಟೂರಿಸಂ, 5 ಸ್ಟಾರ್ & 7 ಸ್ಟಾರ್ ಹೋಟೇಲ್ ಉದ್ಯಮಗಳಲ್ಲಿ ಹಾಗೂ ಮಾಡೆಲಿಂಗ್, ಸಿನಿಮಾರಂಗ, ವಸ್ತ್ರವಿನ್ಯಾಸ, ರೀಟೇಲ್ ಬಯರ್, ರಿಟೇಲ್ ಮ್ಯಾನೇಜರ್ ಉದ್ಯೋಗ ಪಡೆಯುವ ಅವಕಾಶ.

ಉತ್ತಮ ಕ್ಯಾಂಪಸ್ ವಿಶೇಷತೆ:

ಅಕ್ಷಯ ಕಾಲೇಜಿನಲ್ಲಿ ವಿಶಾಲವಾದ ಕೊಠಡಿ, ಉತ್ತಮ ಕ್ಯಾಂಪಸ್ ಅಕ್ಷಯ ಸಂಸ್ಥೆಯ ವಿಶೇಷತೆಗಳಲ್ಲೊಂದಾಗಿದೆ. ಹುಡುಗ/ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್, ಶಿಕ್ಷಣ ಸಾಲ ಸಹಾಯಕ, ರಾಷ್ಟ್ರ ಮಟ್ಟದ ಸ್ಕಾಲರ್‌ಶಿಪ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಪ್ಲೇಸ್‌ಮೆಂಟ್ ಸೆಲ್ ಮತ್ತು ಕ್ಯಾಂಪಸ್ ಇಂಟರ್‌ವ್ಯೂ, ಅನುಭವಿ ನುರಿತ ಉಪನ್ಯಾಸಕ ವೃಂದ, ಗ್ರಂಥಾಲಯ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ, ಇಂಗ್ಲೀಷ್ ತರಗತಿಗಳು, ಸೆಮಿನಾರ‍್ಸ್ ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಮುಂತಾದ ಸೌಲಭ್ಯ ಹೊಂದಿದೆ.

ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ:

ಕೋಸ್ಟಲ್ ಕ್ವೀನ್, ಮಿಸ್ಟರ್ ಕರ್ನಾಟಕ ಸಾಧನೆಯನ್ನು ಹಾಗೂ ಯುವಜನೋತ್ಸವದಲ್ಲಿ  ಪೃಶಸ್ತಿಯ ಸಾಧನೆ  ವಿದ್ಯಾರ್ಥಿಗಳು ಮಾಡಿದ್ದಲ್ಲದೇ, ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ 5 ವಿದ್ಯಾರ್ಥಿಗಳು ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ರಾಷ್ಟ್ರ, ರಾಜ್ಯ ಹಾಗೂ ವಿಶ್ವವಿದ್ಯಾನಿಲಯದ ಮಟ್ಟದಲ್ಲಿ ಹಲವು ಸಾಂಸ್ಕೃತಿಕ ಮತ್ತು ಸಾಹಿತಿಕ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡಿದ್ದು, ಎನ್.ಎಸ್.ಎಸ್, ಸೋರ್ಟ್ಸ್, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಪಿಯು ವಿದ್ಯಾರ್ಥಿಗಳ ಕೌಶಲ್ಯತೆಯನ್ನು ಹೆಚ್ಚಿಸಲು “ಅಟೆರ್ನಸ್s” ಮತ್ತು ವಿ.ವಿ ಮಟ್ಟದ ಪದವಿ ವಿದ್ಯಾರ್ಥಿಗಳಿಗೆ “ಕೃತ್ವ” ಸ್ಪರ್ಧೆಗಳನ್ನು ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಒಣಂ ಆಚರಣೆ, ಆಟಿದ ಕೂಟ ಆಚರಣೆ, ಅಕ್ಷಯ ವೈಭವದಂತಹ ಕಾರ್ಯಕ್ರಮಗಳು ಇಲ್ಲಿನ ವಿಶೇಷತೆಯಾಗಿದೆ.

ಹೆಚ್ಚಿಮ ಮಾಹಿತಿಗೆ 9141160704(ಪ್ರಾಂಶುಪಾಲರು), 8088381678(ಆಡಳಿತಾಧಿಕಾರಿ),08251-200030, 8050108510(PÀbÉÃj), http://WWW.akshayacollegeputtur.com, http://WWW.akshayacollegeputtur.comಸಂಪರ್ಕಿಸಬಹುದಾಗಿದೆ.

ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ನೆರವು ನೀಡಲಾಗುತ್ತಿದೆ. ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗೆ ಇಲ್ಲಿ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ವಿಶ್ವದಾಖಲೆ ಸಾಧನೆಯ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲತೆಗಾಗಿ ಅಕ್ಷಯ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ್ದು ಸ್ವಾವಲಂಬಿಯಾಗಿ ಬದುಕಬಲ್ಲೆ ಎನ್ನುವ ವಾತಾವರಣ ಮೂಡಿಸುವುದೇ ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. –ಜಯಂತ್ ನಡುಬೈಲು, ಚೇರ್‌ಮ್ಯಾನ್, ಅಕ್ಷಯ ಕಾಲೇಜು

ಹಲವು ರ‍್ಯಾಂಕ್‌ಗಳು..

2021-22ರಲ್ಲಿ ಬಿಎಸ್ಸಿ ಫ್ಯಾಷನ್ ಡಿಸೈನ್‌ನಲ್ಲಿ ಸ್ವರ್ಣ ಜ್ಯೋತ್ಸ್ನಾರವರಿಗೆ ಪ್ರಥಮ, ಜಶ್ಮಿತಾರವರಿಗೆ ದ್ವಿತೀಯ ರ‍್ಯಾಂಕ್, 2022-23ರಲ್ಲಿ ಬಿಎಸ್ಸಿ ಫ್ಯಾಷನ್ ಡಿಸೈನ್‌ನಲ್ಲಿ ಪ್ರಣಮ್ಯ ಸಿ.ರವರಿಗೆ ಪ್ರಥಮ ರ‍್ಯಾಂಕ್, 2023-24ರಲ್ಲಿ ಜೀವಿತಾ ಎಸ್.ಕೆರವರಿಗೆ ಪ್ರಥಮ, ರಿಯಾ ಪೊನ್ನಮ್ಮ ಡಿ.ಕೆರವರಿಗೆ ದ್ವಿತೀಯ ರ‍್ಯಾಂಕ್ ಸಂಸ್ಥೆಗೆ ಲಭಿಸಿರುತ್ತದೆ.

ಉದ್ಯೋಗದಲ್ಲಿ..

ಕ್ಯಾಂಪಸ್ ಡ್ರೈವ್ 2024ರಲ್ಲಿ

ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಮೈಸೂರು ಕೂರ್ಗಳ್ಳಿ ಶಾಹಿ ಎಕ್ಸ್‌ಪೋರ್ಟ್ ಪ್ರೈವೇಟ್ ಲಿ. ಯುನಿಟ್ 37 ಇಲ್ಲಿ ಐಇ ಅಸಿಸ್ಟೆಂಟ್ ಆಗಿ 14 ವಿದ್ಯಾರ್ಥಿಗಳು, ಬೆಂಗಳೂರು ಜಿಗಾನಿ ಎಂವಿ ಡಿಸೈನ್ಸ್ ಆಂಡ್ ಫಾಸ್ಟನರ‍್ಸ್‌ನಲ್ಲಿ ಇಂಟೀರಿಯರ್ ಡಿಸೈನರ್ ಆಗಿ 5 ವಿದ್ಯಾರ್ಥಿಗಳು,ಮೈಸೂರು ಶಾಹಿ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕ್ವಾಲಿಟಿ ಕಂಟ್ರೋಲರ್ ಆಗಿ 8 ವಿದ್ಯಾರ್ಥಿಗಳು,ಬೆಂಗಳೂರಿನ ಏರ್‌ಪೋರ್ಟ್ ಟರ್ಮಿನಲ್-2ನಲ್ಲಿ 8 ಹಾಗೂ ಸಿ.ಎಸ್.ಆರ್ ರಿಲೇಯಲ್ಲಿ 4  ವಿದ್ಯಾರ್ಥಿಗಳು,ಬೆಂಗಳೂರು ಪೋರ್ಟರ್ ಲಾಜಿಸ್ಟಿಕ್‌ನಲ್ಲಿ  5 ವಿದ್ಯಾರ್ಥಿಗಳು, ಮ್ಯಾಚಿಂಗ್ & ಮ್ಯಾಚಿಂಗ್ ಗಾರ್ಮೆಂಟ್ ಮ್ಯಾನುಪ್ಯಾಕ್ಚರಿಂಗ್ ಅಲ್ಲಿ 4 ವಿದ್ಯಾರ್ಥಿಗಳು, ಅರೆನಾ ಇಂಟಿರೀಯರ್ಸ್, ಲೀಸ ಅಪೆರಲ್ ಇಂಡಸ್ಟರಿಯಲ್ಲಿ ಉದ್ಯೋಗದಲ್ಲಿದ್ದಾರೆ.

ಅಕ್ಷಯ ಪಿಯು ಕಾಲೇಜು ಆರಂಭ..

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಕ್ಷಯ ಕಾಲೇಜು ಅಕ್ಷಯ ಪದವಿ ಪೂರ್ವ ಕಾಲೇಜು ಅನ್ನು ಆರಂಭಿಸುತ್ತಿದೆ. ಕಾಮರ್ಸ್(ವಾಣಿಜ್ಯ) ಹಾಗೂ ಸೈನ್ಸ್(ವಿಜ್ಞಾನ) ತರಗತಿಗಳನ್ನು ಆರಂಭಿಸಲಾಗುತ್ತಿದ್ದು ಪಿಯುಸಿ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳೊಂದು ಸುವರ್ಣಾವಕಾಶವಾಗಿದೆ. ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಂಪೂರ್ಣ ಸ್ಕಾಲರ್ ಶಿಪ್ ಸಂಸ್ಥೆ ಒದಗಿಸುತ್ತದೆ. ನುರಿತ ತಂಡದೊಂದಿಗೆ ಕಾಮರ್ಸ್ ಜೊತೆ ಸಿ.ಎ ಕೋರ್ಸ್ ಹಾಗೂ ಸೈಯನ್ಸ್ ಜೊತೆಗೆ ಸಿ.ಇ.ಟಿ, ನೀಟ್, ಜೆ.ಇ.ಇ ತರಬೇತಿ ನೀಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

Ad Widget
Click to comment

Leave a Reply

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.

Ad Widget

Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!