ಬಿಗ್ ನ್ಯೂಸ್
Ind-Pak War | ಕತ್ತಲೆಯಾಗುತ್ತಿದ್ದಂತೆ ಮತ್ತೆ ಡ್ರೋನ್, ಫಿರಂಗಿ ಮತ್ತು ಶೆಲ್ ದಾಳಿ ಪ್ರಾರಂಭಿಸಿದ ಪಾಕ್ : ಕೆಲವು ಕಡೆ ಸ್ಪೋಟ..! ಡ್ರೋನ್ ಶೆಲ್ ಗಳನ್ನು ಹೊಡೆದುರುಳಿಸುತ್ತಿರುವ ಭಾರತೀಯ ಸೇನೆ – ಮಸೀದಿ ಮೈಕದಿಂದ ಬ್ಲ್ಯಾಕೌಟ್ ಘೋಷಣೆ – ಎಲ್ಲೆಡೆ ಸೈರನ್..! ರಾಜಸ್ಥಾನ ಗಡಿಯಲ್ಲಿ ಹೈ ರೆಡ್ ಅಲರ್ಟ್ ಘೋಷಣೆ
ಶ್ರೀನಗರ: ಭಾರತ ಮತ್ತು ಪಾಕಿಸ್ಥಾನ ನಡುವೆ ಸಂಘರ್ಷ ತಾರಕಕ್ಕೇರಿರುವ (Ind-Pak War) ಬೆನ್ನಲ್ಲೇ ಶುಕ್ರವಾರ ರಾತ್ರಿ ಜಮ್ಮು ನಗರವು ಕತ್ತಲೆಯಲ್ಲಿ ಮುಳುಗುತ್ತಿದ್ದಂತೆ ಸ್ಫೋಟಗಳ ಶಬ್ದಗಳು ಮತ್ತು ಸೈರನ್ಗಳು ಕೇಳಿಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯರಿಗೆ ದೀಪಗಳನ್ನು ಆರಿಸಲು ತಿಳಿಸಲು ಮಸೀದಿಗಳ ಧ್ವನಿವರ್ಧಕಗಳನ್ನು ಬಳಸಲಾಗಿದೆ. ಭಾರತೀಯ ಪಡೆಗಳು ಪ್ರಸ್ತುತ ಕನಿಷ್ಠ ಏಳು ಸ್ಥಳಗಳಲ್ಲಿ ಗಡಿಯಾಚೆಗಿನ ದಾಳಿಗಳಿಗೆ ಪ್ರತಿಕ್ರಿಯಿಸುತ್ತಿವೆ.
ಸಾಂಬಾದಲ್ಲಿ ಶೆಲ್ ದಾಳಿ ಮತ್ತು ಡ್ರೋನ್ ದಾಳಿ, ಉತ್ತರ ಕಾಶ್ಮೀರದ ಕುಪ್ಪಾರಾದ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರೀ ಫಿರಂಗಿ ಗುಂಡಿನ ದಾಳಿ, ಉರಿಯಲ್ಲಿ ಶೆಲ್ ದಾಳಿ, ನೌಗಾಮ್-ಹಂದ್ವಾರ, ಪೂಂಚ್ ನಲ್ಲಿ ಶೆಲ್ ದಾಳಿ, ಜಮ್ಮುವಿನಲ್ಲಿ ಡ್ರೋನ್ಗಳು ಕಾಣಿಸಿಕೊಂಡ ಬಳಿಕ ವಿದ್ಯುತ್ ಕಡಿತ ಮತ್ತು ಸೈರನ್ಗಳು ಮೊಳಗಿವೆ.
ಪಠಾಣ್ಕೋಟ್ ನಲ್ಲಿ ಡ್ರೋನ್ ಮತ್ತು ಬ್ಲ್ಯಾಕೌಟ್ ಕಂಡುಬಂದಿದೆ. ಈ ವಾರದ ಆರಂಭದಲ್ಲಿ ಭಾರತವು ಆಪರೇಷನ್ ಸಿಂದೂರ್ನ ಭಾಗವಾಗಿ ದೇಶದಲ್ಲಿ ಭ*ಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸಿದ ನಂತರ ಪಾಕಿಸ್ಥಾನವು ನಿರಂತರ ಶೆಲ್ ದಾಳಿ ನಡೆಸುತ್ತಿರುವ ಮಧ್ಯೆಯೇ ಈ ಸ್ಫೋಟಗಳು ಸಂಭವಿಸಿವೆ. ಎಲ್ಲಾ ದಾಳಿಗಳನ್ನು ಭಾರತ ತಡೆಯುತ್ತಿದೆ ಎನ್ನಲಾಗಿದೆ.
“ನಾನು ಇರುವ ಸ್ಥಳದಿಂದ ಸ್ಫೋಟಗಳ ಮಧ್ಯಂತರ ಶಬ್ದಗಳು, ಬಹುಶಃ ಭಾರೀ ಫಿರಂಗಿ, ಈಗ ಕೇಳಿಬರುತ್ತಿವೆ” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಕತ್ತಲೆಯಲ್ಲಿರುವ ನಗರದ ಚಿತ್ರವನ್ನು ಸಹ ಪೋಸ್ಟ್ ಮಾಡಿದ್ದಾರೆ, “ಜಮ್ಮುವಿನಲ್ಲಿ ಈಗ ಬ್ಲ್ಯಾಕೌಟ್. ನಗರದಾದ್ಯಂತ ಸೈರನ್ಗಳು ಕೇಳಿಬರುತ್ತಿವೆ” ಎಂದು ಪೋಸ್ಟ್ಗೆ ಶೀರ್ಷಿಕೆ ನೀಡಿದ್ದಾರೆ.
ಪಾಕಿಸ್ಥಾನ ಡ್ರೋನ್ಗಳ ಮೂಲಕ ಅನೇಕ ನಗರಗಳನ್ನು ಗುರಿಯಾಗಿಸಿಕೊಂಡಿದ್ದರಿಂದ ಅಮೃತಸರದಲ್ಲಿ ನಾಲ್ಕು ಸ್ಪೋ*ಟಗಳು ಕೇಳಿಬಂದಿವೆ ಎಂದು ಪ್ರತ್ಯಕ್ಷದರ್ಶಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಸಾಂಬಾದಲ್ಲಿ ಕತ್ತಲೆಯಾದಾಗ ಭಾರತದ ವಾಯು ರಕ್ಷಣಾ ಪಡೆಗಳು ಪಾಕಿಸ್ಥಾನಿ ಡೋನ್ಗಳನ್ನು ತಡೆಹಿಡಿಯುತ್ತಿದ್ದಂತೆ ಸ್ಫೋಟಗಳು ಕೇಳಿಬರುತ್ತಿವೆ.
ರಾಜಸ್ಥಾನದ ಬರ್ಮರ್ ಗಡಿಯಲ್ಲಿ ಹೈ ರೆಡ್ ಅಲರ್ಟ್ ಘೋಷಣೆಯಾಗಿದೆ. ಮನೆಯಲ್ಲಿ ಯಾವೂದೇ ದೀಪ ಉರಿಸಬಾರದು ಮತ್ತು ವಾಹನಗಳಲ್ಲಿ ಹೊರಗೆ ಹೋಗಬಾರದೆಂದು ಆದೇಶಿಸಲಾಗಿದೆ.
ಮೂರು ಸೇನಾ ಮುಖ್ಯಸ್ಥರ ಜೊತೆ ಮೋದಿ ಹೈಲೆವೆಲ್ ಮೀಟಿಂಗ್ : ಪ್ರಧಾನಿ ಮೋದಿ ಇಂದು ದೆಹಲಿಯಲ್ಲಿ ಮೂರು ಸೇನಾ ಮುಖ್ಯಸ್ಥರು, ರಾಷ್ಟ್ರೀಯ ಭಧ್ರತಾ ಸಲಹೆಗಾರ ಅಜಿತ್ ದೋವೆಲ್, ರಾ ಮುಖ್ಯಸ್ಥರು, ಇಂಟಲಿಜೆನ್ಸ್ ಮುಖ್ಯಸ್ಥರು ಹಾಗೂ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಜೊತೆ ಸುದೀರ್ಘ ಹೈಲೆವೆಲ್ ಮೀಟಿಂಗ್ ನಡೆಸಿದ್ದಾರೆ.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು7 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ12 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ13 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ13 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ7 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















