ಬಿಗ್ ನ್ಯೂಸ್
Operation Sindoor | ಆಪರೇಷನ್ ಸಿಂಧೂರ್ ನಲ್ಲಿ ನಮ್ಮ 5 ಸೈನಿಕರು ಹುತಾತ್ಮರಾಗಿದ್ದಾರೆ – ಪಾಕ್ ನ 35 ಸೈನಿಕರು 100ಕ್ಕೂ ಮಿಕ್ಕಿ ಭಯೋತ್ಪಾದಕರು ಸಾವನ್ನಪ್ಪಿ 9 ಭಯೋತ್ಪಾದಕ ಹಾಗೂ ಸೇನಾ ನೆಲೆ ದ್ವಂಸ ಮಾಡಿದ್ದೇವೆ – ಪೆಹಲ್ಗಾಮ್ ದಾಳಿಯಲ್ಲಿ ಮೃತರಾದ 26 ಕುಟುಂಬಗಳಿಗೆ ನ್ಯಾಯ ಒದಗಿಸಿದ್ದೇವೆ : ‘ನಮ್ಮ ಕೆಲಸ ಶತ್ರುಗಳ ಟಾರ್ಗೆಟ್ ನಾಶ ಮಾಡೋದು. ಅಲ್ಲಿ ಸತ್ತಿರುವ ಜನರ ಲೆಕ್ಕ ಹಾಕೋದು ಅವರ ಕೆಲಸʼ ಎಂದ ಡಿಜಿಎಂಒ ರಾಜೀವ್ ಘಾಯ್ – ರಾಫೇಲ್ ಹೊಡೆದುರುಳಿಸಲಾಗಿದೆ ಎಂಬ ಆರೋಪಕ್ಕೆ ಭಾರ್ತಿ ಕೊಟ್ಟ ಉತ್ತರವೇನೂ..?
ಹೊಸದಿಲ್ಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಉಗ್ರದಾಳಿಗೆ ಪ್ರತಿಕ್ರಿಯೆಯಾಗಿ ನಡೆಸಿದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ 5 ಸೈನಿಕರನ್ನು ಕಳೆದುಕೊಂಡಿದೆ. ಮೇ 7 ರಿಂದ ಮೇ 10 ರ ನಡುವೆ LOCಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಸೇನೆಯ ಸುಮಾರು 35 ರಿಂದ 40 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಮಡಿದ ಭಾರತೀಯ ಸೇನೆಯು ತನ್ನ ಐವರು ಸೈನಿಕರಿಗೆ ಗೌರವ ಸಲ್ಲಿಸಲಾಗಿದೆ. ‘ಸಶಸ್ತ್ರ ಪಡೆಗಳ ಐವರು ಸಿಬ್ಬಂದಿಗೆ ನಾನು ಗೌರವ ಸಲ್ಲಿಸುತ್ತೇವೆ, ಅವರ ತ್ಯಾಗವನ್ನು ಸದಾ ನೆನಪಿನಲ್ಲಿಡಲಾಗುತ್ತದೆʼ ಎಂದು ಭಾರತೀಯ ಸೇನೆ ಹೇಳಿದೆ.
ಪತ್ರಿಕಾಗೋಷ್ಠಿಯಲ್ಲಿ ಭಾರತದ ವಾಯು ದಾಳಿಯಲ್ಲಿ ಎಷ್ಟು ಜನ ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎನ್ನುವ ನಂಬರ್ ಇದ್ಯಾ? ಎಂಬ ಪ್ರಶ್ನೆ ಬಂತು. ಇದಕ್ಕೆ ಖಡಕ್ ಆಗಿ ಉತ್ತರಿಸಿ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ, ‘ನಮ್ಮ ಕೆಲಸ ಶತ್ರುಗಳ ಟಾರ್ಗೆಟ್ ನಾಶ ಮಾಡೋದು. ಅಲ್ಲಿ ಸತ್ತಿರುವ ಜನರ ಲೆಕ್ಕ ಹಾಕೋದು ಅವರ ಕೆಲಸʼ ಎಂದು ಹೇಳಿದರು.
ಭಾರತ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತು. 100 ಕ್ಕೂ ಮಿಕ್ಕಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನಿ ನಾಗರಿಕರು ಅಥವಾ ಪಾಕ್ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಉದ್ದೇಶಿಸಿರಲಿಲ್ಲ. ನಮ್ಮ ಗುರಿ ಸ್ಪಷ್ಟವಾಗಿತ್ತು. ಭಯೋತ್ಪಾದಕರ ನೆಲೆಗಳನ್ನು ಮಾತ್ರ ಗುರಿಯಾಗಿಸಿದ್ದೆವು ಎಂದು ಸೇನೆ ಸ್ಪಷ್ಟಪಡಿಸಿದೆ.
‘ಶಿವ ತಾಂಢವ’ ಹಾಡಿನ ಮೂಲಕ ಭಾರತ ನಡೆಸಿದ ದಾಳಿಯನ್ನು ಪತ್ರಿಕಾಗೋಷ್ಠಿಯಲ್ಲಿ ತೋರಿಸಲಾಯಿತು.
‘ಮೇ 7 ರ ಸಂಜೆ, ನಮ್ಮ ನಾಗರಿಕರು ಮತ್ತು ಮಿಲಿಟರಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಮಾನವರಹಿತ ಸಣ್ಣ ಪ್ರಮಾಣದ ಕ್ಷಿಪಣಿ ಮತ್ತು ಸಣ್ಣ ಡ್ರೋನ್‌ಗಳ ಮೂಲಕ ದಾಳಿ ಆರಂಭಿಸಿತು. ಅವುಗಳನ್ನು ನಾವು ಯಶಸ್ವಿಯಾಗಿ ತಡೆಹಿಡಿದಿದ್ದೇವೆ. ಮೂರು ಡ್ರೋನ್‌ಗಳು ನೆಲಕ್ಕಪ್ಪಳಿಸಿದ್ದರೂ, ಅವು ಕನಿಷ್ಠ ಹಾನಿಯನ್ನು ಉಂಟು ಮಾಡಿದವುʼ ಎಂದು ಸೇನೆ ತಿಳಿಸಿದೆ.
‘ನಮಗೂ ಅವರಿಗೂ ಸಾಕಷ್ಟು ವ್ಯತ್ಯಾಸವಿದೆ. ನಾವು ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡಿದ್ದೇವೆ. ಆದರೆ ಪಾಕಿಸ್ತಾನದ ಪ್ರತಿಕ್ರಿಯೆ ನಮ್ಮ ನಾಗರಿಕರು ಮತ್ತು ಮಿಲಿಟರಿ ಮೂಲಸೌಕರ್ಯಗಳ ಮೇಲೆ ಆಗಿತ್ತು. ಈ ಕ್ರಮಕ್ಕೆ ಪ್ರತಿಕ್ರಿಯೆ ಬೇಕು. ಪ್ರತೀಕಾರವಾಗಿ, ನಾವು ಲಾಹೋರ್ ಬಳಿ ಮತ್ತು ಗುಜ್ರಾನ್‌ವಾಲಾ ಬಳಿಯಿದ್ದ ರಾಡಾರ್ ಸ್ಥಾಪನೆಗಳ ಮೇಲೆ ದಾಳಿ ಮಾಡಿದ್ದೇವೆ. ಆದರೂ, ಹೆಚ್ಚಿನ ಪ್ರಮಾಣದಲ್ಲಿ ಹಾನಿ ಮಾಡುವುದು ನಮ್ಮ ಗುರಿಯಲ್ಲ. ನಮ್ಮ ಸಂಘರ್ಷ ಭಯೋತ್ಪಾದಕರ ಜೊತೆಗಿದೆ, ಪಾಕಿಸ್ತಾನಿ ಮಿಲಿಟರಿಯೊಂದಿಗೆ ಅಲ್ಲʼ ಎಂದು ಸೇನೆ ಹೇಳಿದೆ.
ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ 26 ಜನರ ಕುಟುಂಬಕ್ಕೆ ನ್ಯಾಯ ಒದಗಿಸಿದ್ದೇವೆ. ಸಾಧ್ಯವಾದಷ್ಟು ಉಗ್ರರ ನೆಲೆಗಳನ್ನು ನಾಶಪಡಿಸಿದ್ದೇವೆ. ಆದರೆ ಭದ್ರತೆಯ ದೃಷ್ಟಿಯಿಂದ ಪಾಕಿಸ್ತಾನದ ಮೇಲೆ ದಾಳಿಗೆ ಯಾವ್ಯಾವ ಶಸ್ತ್ರಾಸ್ತ್ರಗಳನ್ನು ಬಳಸಿದ್ದೇವೆ ಎಂದು ಮಾಹಿತಿ ನೀಡುವುದಿಲ್ಲ. ಪಾಕ್‌ನ ಹೈಟೆಕ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದೇವೆ ಎಂದು ಸೇನೆ ತಿಳಿಸಿದೆ.
ಪಾಕಿಸ್ತಾನಕ್ಕೆ ಆದ ನಷ್ಟಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ತೋರಿಸಲಾಯಿತು.
ಭಾರತದ ವಿಮಾನ ರಾಫೇಲ್ ಹೊಡೆದುರುಳಿಸಲಾಗಿದಾ..? ಎಂಬ ಪ್ರಶ್ನೆಗೆ ಏರ್ ಮಾರ್ಷಲ್ ಭಾರ್ತಿ ಉತ್ತರಿಸಿದ್ದಾರೆ. ಅವರು ಹೇಳಿದ್ದು ಹೀಗೆ: ‘ನಾವು ಯುದ್ಧದ ಸನ್ನಿವೇಶದಲ್ಲಿದ್ದೇವೆ, ಇದರಲ್ಲಿ ನಷ್ಟಗಳು ಆಗುತ್ತವೆ. ನಾವು ನಮ್ಮನ್ನು ಕೇಳಿಕೊಳ್ಳಬೇಕಾದ ಮುಖ್ಯ ಪ್ರಶ್ನೆಯೆಂದರೆ, ಭಯೋತ್ಪಾದಕರ ಶಿಬಿರಗಳನ್ನು ನಾಶಪಡಿಸುವಲ್ಲಿ ನಮ್ಮ ಗುರಿಗಳನ್ನು ಸಾಧಿಸಿದ್ದೇವೆಯೇ ಎಂಬುದು. ಮತ್ತು ಅದಕ್ಕೆ ಉತ್ತರ ಖಂಡಿತವಾಗಿಯೂ ‘ಹೌದು’. ನಮ್ಮೆಲ್ಲಾ ಪೈಲಟ್‌ಗಳು ಸುರಕ್ಷಿತವಾಗಿ ಮನೆಗೆ ಹಿಂದಿರುಗಿದ್ದಾರೆ..’ ಎಂದಿದ್ದಾರೆ.
ಖ್ಯಾತ ಪತ್ರಕರ್ತ ಶಿವ್ ಆರೂರು ತನ್ನ x ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.
ಅಂತರ ರಾಜ್ಯ
Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.
ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.
1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.
ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.
ಗಣ್ಯರಿಂದ ಸಂತಾಪ
ನಾನಾ ಪಾಟೇಕರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.
ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.
ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.
ಬಿಗ್ ನ್ಯೂಸ್
Reservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.
ಜಿಲ್ಲೆಯ ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಡಿ ಮೀಸಲಿಡಲಾಗಿದೆ.
ತಾಲೂಕು ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪಂಚಾಯಿತಿಗಳಲ್ಲಿ ಒಟ್ಟು 126 ಸ್ಥಾನಗಳಿದ್ದು, 65 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 13 ಸ್ಥಾನಗಳಿದ್ದು, ಈ ಪೈಕಿ 9 ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ 10 ಸ್ಥಾನಗಳಿದ್ದು, 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಹಿಂದುಳಿದ ವರ್ಗ ‘ಎ’ಗೆ 29 ಸ್ಥಾನಗಳು ಮೀಸಲಾಗಿದ್ದು, 16 ಸ್ಥಾನಗಳು ಮಹಿಳೆಯರಿಗೆ ಮೀಸಲು. ಹಿಂದುಳಿದ ವರ್ಗ ‘ಬಿ’ಗೆ 7 ಸ್ಥಾನಗಳಿದ್ದು, 4 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಸಾಮಾನ್ಯ ವರ್ಗದ 67 ಸ್ಥಾನಗಳ ಪೈಕಿ 27 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ತಾಲೂಕುವಾರು ಗಮನಿಸಿದರೆ ಮೂಲ್ಕಿಯಲ್ಲಿ 7, ಮೂಡುಬಿದಿರೆಯಲ್ಲಿ 9, ಸುಳ್ಯದಲ್ಲಿ 11, ಉಳ್ಳಾಲದಲ್ಲಿ 12, ಪುತ್ತೂರಿನಲ್ಲಿ 12, ಮಂಗಳೂರಿನಲ್ಲಿ 14, ಬೆಳ್ತಂಗಡಿಯಲ್ಲಿ 14, ಕಡಬದಲ್ಲಿ 22 ಹಾಗೂ ಬಂಟ್ವಾಳದಲ್ಲಿ 25 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಬಂಟ್ವಾಳದಲ್ಲಿ ಅತಿ ಹೆಚ್ಚು 25 ಹಾಗೂ ಮೂಲ್ಕಿಯಲ್ಲಿ ಅತಿ ಕಡಿಮೆ 7 ಕ್ಷೇತ್ರಗಳಿವೆ.
ಜಿಲ್ಲಾ ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 35 ಸ್ಥಾನಗಳಿದ್ದು, 18 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 3 ಸ್ಥಾನಗಳಿದ್ದು, 2 ಮಹಿಳೆಯರಿಗೆ ಮೀಸಲು. ಪರಿಶಿಷ್ಟ ಪಂಗಡಕ್ಕೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ.
ಹಿಂದುಳಿದ ವರ್ಗ ‘ಎ’ಗೆ 10 ಸ್ಥಾನಗಳಿದ್ದು, 5 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಹಿಂದುಳಿದ ವರ್ಗ ‘ಬಿ’ಗೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲು. ಸಾಮಾನ್ಯ ವರ್ಗದ 18 ಸ್ಥಾನಗಳ ಪೈಕಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಮೀಸಲಾತಿ ವಿವರ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಯಾವ ಕ್ಷೇತ್ರದಲ್ಲಿ ಯಾವ ವರ್ಗಕ್ಕೆ ಮೀಸಲಾತಿ ದೊರೆತಿದೆ ಎಂಬುದನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.
ಅಂತರ ರಾಜ್ಯ
CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized23 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized9 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
Uncategorized7 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ8 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ7 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ6 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















