Connect with us

ಬಿಗ್ ನ್ಯೂಸ್

Muneer Katipalla | ಡಾ. ಗಣೇಶ್ ಪ್ರಸಾದ್ ಮುದ್ರಾಜೆ ವಿರುದ್ದ ಯೂಟ್ಯೂಬಿನಲ್ಲಿ ಧರ್ಮಾಧಾರಿತ ಅಪಮಾನಕರ ಹೇಳಿಕೆ ಆರೋಪ – ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ದಾಖಲಿಸಲು ಐಎಂಎ ಪುತ್ತೂರು ಆಗ್ರಹ

Published

on



Ad Widget

Ad Widget

Ad Widget

Ad Widget

ಪುತ್ತೂರು: ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪುತ್ತೂರು ಶಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ಅವರ ವಿರುದ್ಧ ಮುನೀರ್ ಕಾಟಿಪಳ್ಳ (Muneer Katipalla) ಎಂಬವರು ಧರ್ಮಾಧಾರಿತ ಅಪಮಾನಕರ ಹೇಳಿಕೆ ನೀಡಿದ್ದಾರೆಂದು ಐಎಂಎ ಪುತ್ತೂರು ಶಾಖೆ ಆರೋಪಿಸಿದೆ.

Ad Widget

Ad Widget

Ad Widget

Ad Widget

ಮುನೀರ್‌ ಕಾಟಿಪಳ್ಳ ವಿರುದ್ದ ತಕ್ಷಣ ಎಫ್ಐಆರ್ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಐಎಂಎ ಪುತ್ತೂರು ಶಾಖೆಯ ಅಧ್ಯಕ್ಷ ಡಾ. ನರಸಿಂಹ ಶರ್ಮ ಕಾನಾವು ಒತ್ತಾಯಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಐಎಂಎ ಪುತ್ತೂರು ಶಾಖೆ ಹೊರಡಿಸರುವ ಪ್ರಕಟನೆಯಲ್ಲಿ ಏನಿದೆ ? ಇತ್ತೀಚೆಗೆ ಯೂಟ್ಯೂಬ್ ಚಾನೆಲ್ʼವೊಂದರಲ್ಲಿ ಮುನೀರ್ ಕಾಟಿಪಳ್ಳ ಅವರು, “ಡಾ. ಗಣೇಶ್ ಕೋಮು ಮನೋಭಾವ ಹೊಂದಿದ್ದು, ವೈದ್ಯಧರ್ಮಕ್ಕೆ ವ್ಯತಿರಿಕ್ತವಾಗಿ ನಡೆಯುವುದರಿಂದ ವೈದ್ಯರ ಹೋರಾಟದ ನೇತೃತ್ವ ವಹಿಸಲು ಅವರಿಗೆ ನೈತಿಕ ಹಕ್ಕಿಲ್ಲ” ಎಂದು ಹೇಳಿಕೆ ನೀಡಿದ್ದರು.

Ad Widget

Ad Widget <> Ad Widget

ಈ ಹೇಳಿಕೆಯು ಡಾ. ಮುದ್ರಾಜೆ ಅವರ 25 ವರ್ಷಗಳ ವೈದ್ಯಕೀಯ ಸೇವೆ ಮತ್ತು ಐಎಂಎ ಸಂಘಟನೆಯಲ್ಲಿನ ಅವರ ನಿಷ್ಠೆಯನ್ನು ಕುಗ್ಗಿಸುವ ಪ್ರಯತ್ನವಾಗಿದೆ ಎಂದು ಐಎಂಎ ಆಕ್ರೋಶ ವ್ಯಕ್ತಪಡಿಸಿದೆ.ಪುತ್ತೂರು ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯೆಯೊಬ್ಬರ ಮೇಲಿನ ದೌರ್ಜನ್ಯ ಖಂಡಿಸಿ ಡಾ. ಮುದ್ರಾಜೆ ನೇತೃತ್ವದಲ್ಲಿ ನಡೆದ ಯಶಸ್ವಿ ಹೋರಾಟದ ನಂತರ ಈ ಹೇಳಿಕೆ ಬಂದಿರುವುದು ಗಮನಾರ್ಹ. ಈ ಹೋರಾಟದಿಂದಾಗಿ ದೌರ್ಜನ್ಯ ಪ್ರಕರಣದ ಎಫ್ಐಆರ್ನಲ್ಲಿ ‘ಕರ್ನಾಟಕ ವೈದ್ಯಕೀಯ ಸೇವಾ ಸಿಬ್ಬಂದಿ ಹಾಗೂ ವೈದ್ಯಕೀಯ ಸಂಸ್ಥೆಗಳ ಮೇಲಿನ ಹಿಂಸಾಚಾರ ತಡೆ ಕಾಯ್ದೆ 2009 (2024ರ ತಿದ್ದುಪಡಿ)’ಯನ್ನು ಸೇರಿಸಲು ಸಾಧ್ಯವಾಗಿತ್ತು.ಡಾ. ಮುದ್ರಾಜೆ ಅವರು ಈ ಧಾರ್ಮಿಕ ನಿಂದನೆ ವಿರುದ್ಧ ಪೊಲೀಸರಿಗೆ ದೂರು ನೀಡಿದರೂ, ತಿದ್ದುಪಡಿ ಕಾಯ್ದೆಯಡಿ ಇದು ಗಂಭೀರ ಅಪರಾಧವಾಗಿದ್ದರೂ (Cognizable Offence), ಪೊಲೀಸರು ಇದನ್ನು ಸಾಮಾನ್ಯ ಆರೋಪವೆಂದು (Non-Cognizable Offence) ದಾಖಲಿಸಿಕೊಂಡಿರುವುದು ಅತ್ಯಂತ ಶೋಚನೀಯ ಎಂದು ಐಎಂಎ ತಿಳಿಸಿದೆ.



Ad Widget

ಮುನೀರ್ ಕಾಟಿಪಳ್ಳ ಅವರ ವಿರುದ್ಧ ತಿದ್ದುಪಡಿ ಮಾಡಿದ ಎಫ್ಐಆರ್ ದಾಖಲಿಸಿ, 2009ರ (2024ರ ತಿದ್ದುಪಡಿ) ಕಾಯ್ದೆ, ಮಾನಹಾನಿ ಮತ್ತು ಕೋಮುದ್ವೇಷದ ಹೇಳಿಕೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಡಾ. ಮುದ್ರಾಜೆ ಅವರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಐಎಂಎ ಒತ್ತಾಯಿಸಿದೆ.

Ad Widget

Ad Widget

“ಡಾ. ಗಣೇಶ್ ಅವರ ಕಾನೂನು ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ,” ಎಂದು ಐಎಂಎ ಪುತ್ತೂರು ಶಾಖೆಯ ಅಧ್ಯಕ್ಷ ಡಾ. ನರಸಿಂಹ ಶರ್ಮ ಕಾನಾವು ತಿಳಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಂಘವು ಆಗ್ರಹಿಸಿದೆ.

Ad Widget
Click to comment

Leave a Reply

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

Published

on



Ad Widget

Ad Widget

Ad Widget

Ad Widget

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.

Ad Widget

Ad Widget <> Ad Widget

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.



Ad Widget

ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.

Ad Widget

Ad Widget

ಸುಮಾರು ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಹಾಗೂ ಆಪರೇಷನ್ ಸಿಂಧೂರ್ ಸೇರಿದಂತೆ ಹಲವು ಪ್ರಮುಖ ಸೇನಾ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading