ಬಿಗ್ ನ್ಯೂಸ್
American President Trump-ಅಮೆರಿಕದ ಮಧ್ಯಸ್ಥಿಕೆಯ ಪರಿಣಾಮ ಭಾರತ-ಪಾಕಿಸ್ತಾನ ನಡುವಿನ ಅಣ್ವಸ್ತ್ರ ಯುದ್ಧ ತಪ್ಪಿದೆ; ಯುದ್ಧ ನಿಲ್ಲಿಸದಿದ್ದರೇ ನಿಮ್ಮೊಟ್ಟಿಗೆ ವ್ಯವಹಾರ ಮಾಡುವುದಿಲ್ಲ ಎಂದು ಬೆದರಿಸಿದೆ – ಯುದ್ಧ ನಿಲ್ಲಿಸುವುದಾಗಿ 2 ರಾಷ್ಟ್ರಗಳು ಒಪ್ಪಿಕೊಂಡವು; ಮೋದಿ ಭಾಷಣ ಅನೌನ್ಸ್ ಆಗುತ್ತಿದ್ದಂತೆ ಅಮೇರಿಕಾ ಅಧ್ಯಕ್ಷ ಟ್ರಂಪ್ ಪತ್ರಿಕಾಗೋಷ್ಠಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ಪುನರುಚ್ಛಿಸಿದ್ದು ʻʻಅಮೆರಿಕದ ಮಧ್ಯಸ್ಥಿಕೆಯ ಪರಿಣಾಮವಾಗಿ ಉಭಯ ರಾಷ್ಟ್ರಗಳ ನಡುವೆ ಪರಮಾಣು ಯುದ್ಧ ತಪ್ಪಿದೆ” ಎಂದು ಹೇಳಿದ್ದಾರೆ.
ವಾಷಿಂಗ್ಟನ್ ಡಿಸಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ಪುನರುಚ್ಛಿಸಿದ್ದು ʻʻಅಮೆರಿಕದ ಮಧ್ಯಸ್ಥಿಕೆಯ ಪರಿಣಾಮವಾಗಿ ಉಭಯ ರಾಷ್ಟ್ರಗಳ ನಡುವೆ ಪರಮಾಣು ಯುದ್ಧ ತಪ್ಪಿದೆ” ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣಕ್ಕೂ ಮೊದಲೇ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ “ಭಾರತ ಮತ್ತು ಪಾಕಿಸ್ತಾನ ನಡುವೆ ಅಣ್ವಸ್ತ್ರ ಯುದ್ಧವಾಗೋದನ್ನು ತಪ್ಪಿಸಿದ್ದೇ ಅಮೆರಿಕ” ಎಂದು ವಾದಿಸಿದರು.
ಡೊನಾಲ್ಡ್ ಟ್ರಂಪ್ ಅವರು “ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದಂತೇ ಅಮೆರಿಕ ಮಧ್ಯಪ್ರವೇಶ ಮಾಡಿತು. ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ಕಾರ್ಯದರ್ಶಿ ಮಾರ್ಕ್ ರೂಬಿಯೋ ಸಕಾಲಕ್ಕೆ ಉಭಯ ದೇಶಗಳನ್ನು ಸಂಪರ್ಕಿಸಿ, ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು. ನಾನೂ ಕೂಡ ಭಾರತ ಮತ್ತು ಪಾಕಿಸ್ತಾನಕ್ಕೆ ವ್ಯಾಪಾರ ಒಪ್ಪಂದದ ಭರವಸೆ ನೀಡಿದೆ.
ಯುದ್ಧ ನಿಲ್ಲಿಸದಿದ್ದರೇ ನಿಮ್ಮೊಟ್ಟಿಗೆ ವ್ಯವಹಾರ ಮಾಡುವುದಿಲ್ಲ ಎಂದು ಬೆದರಿಸಿದೆ ಹಾಗಾಗಿ ಯುದ್ಧ ನಿಲ್ಲಿಸುವುದಾಗಿ 2 ರಾಷ್ಟ್ರಗಳು ಒಪ್ಪಿಕೊಂಡವು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಎರಡೂ ಶಕ್ತಿಶಾಲಿ ರಾಷ್ಟ್ರಗಳಾಗಿದ್ದು, ತಮ್ಮ ನಿರ್ಧಾರಕ್ಕೆ ಅಚಲವಾಗಿ ಅಂಟಿಕೊಂಡಿದ್ದವು. ಆದರೆ ಅಮೆರಿಕದ ಮಧ್ಯಪ್ರವೇಶದಿಂದಾಗಿ ಮತ್ತು ವ್ಯಾಪಾರ ಒಪ್ಪಂದದ ಭರವಸೆಯ ಪರಿಣಾಮವಾಗಿ ಕದನ ವಿರಾಮಕ್ಕೆ ಒಪ್ಪಿಕೊಂಡವು. ಒಂದರ್ಥದಲ್ಲಿ ಅಮೆರಿಕವು ಭಾರತ-ಪಾಕಿಸ್ತಾನ ನಡುವಿನ ಅಣ್ವಸ್ತ್ರ ಯುದ್ಧವನ್ನು ತಪ್ಪಿಸಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಮಧ್ಯಸ್ಥಿಕೆ ವಾದ ತಿರಸ್ಕರಿಸಿದ ಭಾರತ:
ಆದರೆ ಅಮೆರಿಕ ಅಧ್ಯಕ್ಷರ ಮಧ್ಯಸ್ಥಿಕೆ ವಾದವನ್ನು ತಿರಸ್ಕರಿಸಿರುವ ಭಾರತ, “ಪ್ರಾದೇಶಿಕ ಸಮಸ್ಯೆಗಳನ್ನು ಬಗೆಹರಿಸಲು ನಮಗೆ ಮೂರನೇ ಶಕ್ತಿಯ ಅವಧ್ಯಕತೆ ಇಲ್ಲ” ಎಂದು ಸ್ಪಷ್ಟಪಡಿಸಿದೆ. “ಭಾರತ ತನಗೆ ಎದುರಾಗುವ ಸವಾಲುಗಳನ್ನು ಎದುರಿಸುವ ಮತ್ತು ಅದನ್ನು ಪರಿಹರಿಸುವ ಸಾಮರ್ಥ್ಯ ಹೊಂದಿದೆ. ಕಾಶ್ಮೀರವೂ ಒಳಗೊಂಡಂತೆ ಯಾವುದೇ ವಿಚಾರದಲ್ಲಿ ನಮಗೆ ಮೂರನೇ ಶಕ್ತಿಯ ಮಧ್ಯಸ್ಥಿಕೆಯ ಅವಶ್ಯಕತೆ ಇಲ್ಲ” ಎಂದು ಭಾರತ ಖಡಾಖಂಡಿತವಾಗಿ ಹೇಳಿದೆ.
“ಪಾಕಿಸ್ತಾನವೇ ಮೊದಲು ಕದನ ವಿರಾಮ ಒಪ್ಪಂದದ ಪ್ರಸ್ತಾವನೆ ಸಲ್ಲಿಸಿತು. ಇದಕ್ಕೆ ಯಾರ ಒತ್ತಡ ಕಾರಣ ಎಂಬುದು ನಮಗೆ ಮುಖ್ಯವಲ್ಲ. ಅದೇ ರೀತಿ ಉಭಯ ರಾಷ್ಟ್ರಗಳ ಸಂಘರ್ಷಮಯ ಪರಿಸ್ಥಿತಿಯನ್ನು ತಿಳಿಗೊಳಿಸಲು ನಡೆಸಿದ ಪ್ರಯತ್ನವನ್ನೇ, ಮಧ್ಯಸ್ಥಿಕೆ ಎಂದು ಅಮೆರಿಕ ಕರೆದರೆ ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ” ಎಂದು ಭಾರತ ಸ್ಪಷ್ಟಪಡಿಸಿದೆ.
ಇಷ್ಟೇ ಅಲ್ಲದೇ ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ನಮಗೆ ಕರೆ ಮಾಡಿರುವುದನ್ನು ಭಾರತ ಒಪ್ಪಿಕೊಂಡಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರು ಮೇ 9 (ಶುಕ್ರವಾರ) ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದರು. ಕಾರ್ಯದರ್ಶಿ ರುಬಿಯೋ ಅವರು ಮೇ 8 (ಗುರುವಾರ) ಮತ್ತು ಮೇ 10 (ಶನಿವಾರ) ರಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮತ್ತು ಮೇ 10 (ಶನಿವಾರ) ರಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತನಾಡಿದರು. ಆದರೆ ಈ ಯಾವುದೇ ಮಾತುಕತೆಗಳಲ್ಲಿ ವ್ಯಾಪಾರದ ಬಗ್ಗೆ ಯಾವುದೇ ಉಲ್ಲೇಖವಿರಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಭಾಷಣದಲ್ಲಿ ಅಮೆರಿಕ ಹೆಸರನ್ನೇ ಉಲ್ಲೇಖಿಸದ ಮೋದಿ
ಇನ್ನು ನಿನ್ನೆ (ಮೇ 12-ಸೋಮವಾರ) ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ಎಲ್ಲಿಯೂ ಅಮೆರಿಕದ ಹೆಸರನ್ನೇ ಪ್ರಸ್ತಾಪಿಸಲಿಲ್ಲ. ಕದನ ವಿರಾಮ ಒಪ್ಪಂದಕ್ಕೆ ಮನವಿ ಮಾಡಿದ್ದೇ ಪಾಕಿಸ್ತಾನ ಎಂಬುದನ್ನು ಪುನರುಚ್ಛಿಸಿದ ಪ್ರಧಾನಿ ಮೋದಿ, “ನೆರೆ ರಾಷ್ಟ್ರದ ನಡುವಳಿಕೆಯ ಆಧಾರದ ಮೇಲೆ ಈ ಕದನ ವಿರಾಮದ ಭವಿಷ್ಯ ನಿಂತಿದೆ” ಎಂಬ ಗಟ್ಟಿ ಸಂದೇಶವನ್ನು ಸಾರಿದ್ದಾರೆ.
ಒಟ್ಟಿನಲ್ಲಿ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮದ ಕ್ರೆಡಿಟ್‌ನ್ನು ಬಲವಂತವಾಗಿ ತೆಗೆದುಕೊಳ್ಳಲು ಯತ್ನಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಭಯ ರಾಷ್ಟಗಳ ನಡುವಿನ ಸಂಭಾವ್ಯ ಪರಮಾಣು ಯುದ್ಧವನ್ನು ತಪ್ಪಿಸಿರುವುದಾಗಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿರುವುದು ಗಮನಿಸಬೇಕಾದ ಸಂಗತಿ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಮಂಗಳೂರು16 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized13 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ20 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ15 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
Uncategorized11 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು


















