Connect with us

ರಾಜಕೀಯ

Munduru-ಮುಂಡೂರು: 13 ನೇ ಅಕ್ರಮ ಸಕ್ರಮ ಬೈಠಕ್; ಬಡವರ ಜಾಗಕ್ಕೆ ಕುಮ್ಕಿ ಎಂದು ಬರೆದು ಬಿಟ್ಟಿದ್ದಾರೆ ಇದು ದೇವರು ಮೆಚ್ಚದ ಕೆಲಸವಾಗಿದೆ- ಶಾಸಕ ಅಶೋಕ್ ರೈ

Published

on

Ad Widget

Ad Widget

Ad Widget

Ad Widget

ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿ ನಮ್ಮದು ಇವತ್ತು ಆಗುತ್ತದೆ, ನಾಳೆ ಆಗ್ತದೆ ಎಂದು ಕೆಲವರು ಆಸೆಯಿಂದ ಕಾಯುತ್ತಿದ್ದಾರೆ. ಇವರೆಲ್ಲಾ ಈ ಹಿಂದೆ ಅಕ್ರಮ ಸಕ್ರಮ ಮಾಡಿ ಎಂದು ಹಣವನ್ನು ನೀಡಿದ್ದರು, ಬಡವರಿಂದ ಹಣ ಪಡೆದುಕೊಂಡ ಬಳಿಕವೂ ಅವರ ಕಡತದಲ್ಲಿ ಕುಮ್ಕಿ ಎಂದು ಬರೆದು ಏನೂ ಅರಿಯದ ಮುಗ್ದರಿಗೆ ಅನ್ಯಾಯ ಮಾಡಿದ್ದಾರೆ ಇದು ದೇವರು ಮೆಚ್ಚದ ಕೆಲಸವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಷಾದ ವ್ಯಕ್ತಪಡಿಸಿದ ಘಟನೆ ಮುಂಡೂರಿನಲ್ಲಿ ನಡೆದಿದೆ

Ad Widget

Ad Widget

Ad Widget

Ad Widget

ಪುತ್ತೂರು: ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿ ನಮ್ಮದು ಇವತ್ತು ಆಗುತ್ತದೆ, ನಾಳೆ ಆಗ್ತದೆ ಎಂದು ಕೆಲವರು ಆಸೆಯಿಂದ ಕಾಯುತ್ತಿದ್ದಾರೆ. ಇವರೆಲ್ಲಾ ಈ ಹಿಂದೆ ಅಕ್ರಮ ಸಕ್ರಮ ಮಾಡಿ ಎಂದು ಹಣವನ್ನು ನೀಡಿದ್ದರು, ಬಡವರಿಂದ ಹಣ ಪಡೆದುಕೊಂಡ ಬಳಿಕವೂ ಅವರ ಕಡತದಲ್ಲಿ ಕುಮ್ಕಿ ಎಂದು ಬರೆದು ಏನೂ ಅರಿಯದ ಮುಗ್ದರಿಗೆ ಅನ್ಯಾಯ ಮಾಡಿದ್ದಾರೆ ಇದು ದೇವರು ಮೆಚ್ಚದ ಕೆಲಸವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಷಾದ ವ್ಯಕ್ತಪಡಿಸಿದ ಘಟನೆ ಮುಂಡೂರಿನಲ್ಲಿ ನಡೆದಿದೆ.
ಮಂಗಳವಾರ ಮುಂಡೂರಿನ ಸಹಕಾರಿ ಸಂಘದ ಸಬಾಭವನದಲ್ಲಿ ನಡೆದ 13 ನೇ ಅಕ್ರಮ ಸಕ್ರಮ ಬೈಠಕ್ ಉದ್ಘಾಟಿಸಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ಸಾವಿರಾರು ಅಕ್ರಮ ಸಕ್ರಮ ಕಡತಗಳು ಇನ್ನೂ ಇದೆ, ಕಳೆದ ಕೆಲವು ತಿಂಗಳಿAದ ನಾವು ಕಡತಗಳನ್ನು ಪರಿಶೀಲನೆ ಮಾಡುವ ವೇಳೆ ಬಡವರಿಗೆ ಸೇರಿದ ಹೆಚ್ಚಿನ ಕಡತಗಳಲ್ಲಿ ಕುಮ್ಕಿ ಎಂದು ಬರೆಯಲಾಗಿದೆ, ಅದನ್ನು ನಾವು ಏನೂ ಮಾಡುವ ಹಾಗಿಲ್ಲ ಆ ನಮೂನೆಯಾಗಿ ಕಡತವನ್ನು ಮಾಡಿದ್ದಾರೆ, ಮುಂದೆ ಕುಮ್ಕಿ ಕಾನೂನು ಬಂದಾಗ ಮಾತ್ರ ಅದನ್ನು ನಮಗೆ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ, ಈ ವಿಚಾರದಲ್ಲಿ ನನ್ನ ಕ್ಷೇತ್ರದ ಜನತೆ ನನಗೆ ಕ್ಷಮೆ ನೀಡಬೇಕು, ಹಿಂದಿನ ಶಾಸಕರ ಅವದಿಯಲ್ಲಿ ಮಾಡಿದ ತಪ್ಪಿಗೆ ಈಗ ಏನೂ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಬಡವರಿಂದ ಹಣ ಪಡೆದುಕೊಂಡಿದ್ದಾರೆ ಆ ಬಳಿಕ ಈ ರೀತಿಯಾಗಿ ಕುಮ್ಕಿ ಎಂದು ಬರೆದಿರುವುದು ನ್ಯಾಯವಲ್ಲ , ಹಣ ಕೊಟ್ಟ ಕಾರಣಕ್ಕಾದರೂ ಅದನ್ನು ವಿಲೇವಾರಿ ಮಾಡಬೇಕಿತ್ತು, ಬಡವರಿಗೆ ಮಾಡಿರುವ ಅನ್ಯಾಯವನ್ನು ದೇವರು ಮೆಚ್ಚಲಾರ ಎಂದು ಶಾಸಕರು ಗದ್ಗಧಿತರಾಗಿ ನುಡಿದರು.

Ad Widget

Ad Widget <> Ad Widget

ತಾಲೂಕು ಕಚೇರಿಯ ಕೋಣೆಯಲ್ಲಿ ಬಾಗಿಲು ಹಾಕಿ ಬೈಠಕ್…!
ಈ ಹಿಂದೆ ಅಕ್ರಮ ಸಕ್ರಮ ಬೈಠಕ್ ಗ್ರಾಮಗಳಲ್ಲಿ ನಡೆಯುತ್ತಿರಲಿಲ್ಲ, ತಾಲೂಕು ಕಚೇರಿಯಲ್ಲಿ ಬಾಗಿಲು ಹಾಕಿ ಕಡತ ವಿಲೇವಾರಿ ಮಾಡುತ್ತಿದ್ದರು. ವರ್ಷಕ್ಕೆ ಎರಡು ಬಾರಿ ಅಕ್ರಮ ಸಕ್ರಮ ಬೈಠಕ್ ಆಗುತ್ತಿತ್ತು ಆದರೆ ಈಗ ಅದೇ ಬೈಠಕನ್ನು ಜನರ ಮನೆ ಬಾಗಿಲಲ್ಲಿ ಮಾಡುತ್ತಿದ್ದೇನೆ. ಯಾರಿದಂಲೂ ನಯಾ ಪೈಸೆ ಲಂಚ ಪಡೆದಿಲ್ಲ, ಯಾವುದೇ ರಾಜಕೀಯ ಮಾಡದೆ ಎಲ್ಲಾ ಪಕ್ಷದವರ ಕಡತವನ್ನು ವಿಲೇವಾರಿ ಮಾಡಿದ್ದೇನೆ. ಹಿಂದೆAದೂ ಆಗದ ರೀತಿಯಲ್ಲಿ ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡುತ್ತಿದ್ದೇನೆ ಇದನ್ನು ಜನ ಸ್ವೀಕರಿಸುತ್ತಾರೆ ಎಂಬ ನಂಬಿಕೆ ಇದೆ. ಕೊಟ್ಟ ಮಾತಿಗೆ ಎಂದೂ ದ್ರೋಹ ಬಗೆದವನು ನಾನಲ್ಲ, ಚುನಾವಣೆ ಸಂದರ್ಭದಲ್ಲಿ ವೋಟು ಕೇಳುವಾಗ ನಿಮ್ಮಲ್ಲಿ ಏನು ಹೇಳಿದ್ದೇನೋ ಅದನ್ನು ಮಾಡುವ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಶಾಸಕರು ಹೇಳಿದರು.

ಭಾಷಣ ಮಾಡಿದವನ ಮಕ್ಕಳು ಗಲಾಟೆಗೆ ಹೋಗುವುದಿಲ್ಲ
ಜಿಲ್ಲೆಯಲ್ಲಿ ಧರ್ಮದ ಹೆಸರಿನಲ್ಲಿ ಅಲ್ಲಲ್ಲಿ ಗಲಾಟೆಗಳು ಆಗುತ್ತದೆ, ಈ ಗಲಾಟೆಯಲ್ಲಿ ಸಾವು ನೋವು ಉಂಟಾಗುವುದು ಬಡವರ ಮಕ್ಕಳಿಗೆ, ಬಾಯಿಗೆ ಬಂದ ಹಾಗೆ ಭಾಷಣ ಮಾಡಿ ಬಡವರ ಮಕ್ಕಳನ್ನು ಉದ್ರೇಕಿಸಿ ಬಿಡುತ್ತಾರೆ ಆ ಬಳಿಕ ಅವರಿಗೇನಾದರೂ ಆದರೆ ಯಾರೂ ಇಲ್ಲ, ಭಾಷಣ ಮಾಡಿದವರ ಮಕ್ಕಳು ಎಲ್ಲೋ ಉನ್ನತ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುತ್ತಾರೆ ಅಥವಾ ಒಳ್ಳೆಯ ಉದ್ಯೋಗವನ್ನು ಮಾಡಿಕೊಂಡಿರುತ್ತಾರ. ಕಂಡವರ ಮಕ್ಕಳನ್ನು ತಮ್ಮ ಲಾಭಕ್ಕೋಸ್ಕರ ಬಳಸುವುದನ್ನು ಎಲ್ಲಾ ಸಂಘಟನೆಗಳು ನಿಲ್ಲಿಸಬೇಕು. ಯುವಕರನ್ನು ಒಳ್ಳೆಯ ಕೆಲಸಕ್ಕೆ ಬಳಕೆ ಮಾಡಿಕೊಳ್ಳಿ, ಅವರಿಗೆ ಉದ್ಯೋಗ ಕೊಡಿಸಿ, ಅವರಿಗೆ ನೆಮ್ಮದಿಯ ಜೀವನ ಕೊಡಿಸಿ ಎಂದು ಹೇಳಿದ ಶಾಸಕರು ಸಮಾಜಘಾತುಕ ಶಕ್ತಿಗಳನ್ನಾಗಿ ಯುವಕರನ್ನು ಮಾಡಬೇಡಿ ಅವರಿಗೂ ತಂದೆ ತಾಯಿ ಇದ್ದಾರೆ, ಹೆಂಡತಿ ಮಕ್ಕಳಿದ್ದಾರೆ ಎಂಬ ವಿಚಾರವನ್ನು ಎಲ್ಲಾ ಧರ್ಮದ ಸಂಘಟನೆಯ ಮುಖಂಡರು ಅರ್ಥಮಾಡಿಕೊಳ್ಳಬೇಕು ಎಂದು ಶಾಸಕರು ಹೇಳಿದರು.

Ad Widget

Ad Widget

ಹಿಂದುತ್ವದ ಬಗ್ಗೆ ಭಾಷಣ ಮಾಡುವವರು ದೇವಸ್ಥಾನದ ಜಾಗವನ್ನು ಸಕ್ರಮ ಮಾಡಿಲ್ಲ ಯಾಕೆ?
ಬಿಜೆಪಿಯವರು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳು ರಸ್ತೆಯಲ್ಲಿ ನಡೆದಾಡಲು ಸಾಧ್ಯವಿಲ್ಲ ಎಂದು ಅಪಪ್ರಚಾರ ಮಾಡುತ್ತಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಅಪಾಯ ಎಂದು ಪ್ರಚಾರ ಮಾಡುತ್ತಾರೆ ಆದರೆ ಇದೇ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ದೇವಸ್ಥಾನ, ದೈವಸ್ಥಾನ, ನಾಗನಕಟ್ಟೆ, ಭಜನಾಮಂದಿರದ ಜಾಗವನ್ನು ಸಕ್ರಮ ಮಾಡಿಲ್ಲ ಯಾಕೆ? ಇವರಿಗೆ ವೋಟಿಗಾಗಿ ಮಾತ್ರ ಹಿಂದುತ್ವ ಬಳಕೆ ಮಾಡುತ್ತಾರೆ, ವೋಟು ಮುಗಿದ ಬಳಿಕ ಸುಮ್ಮನಾಗುತ್ತಾರೆ. ಕಾಂಗ್ರೆಸ್ ಸರಕಾರ ಈ ಬಾರಿ ರಾಜ್ಯದಲ್ಲಿ ಸರಕಾರಿ ಜಾಗದಲ್ಲಿರುವ ಎಲ್ಲಾ ಹಿಂದೂ ಧಾರ್ಮಿಕ ಕೇಂದ್ರಗಳನ್ನು , ಮಸೀದಿ, ಚರ್ಚುಗಳನ್ನು ಸಕ್ರಮ ಮಾಡಿಕೊಡಲಿದೆ ಎಂದು ಶಾಸಕರು ಹೇಳಿದರು. ಹಿಂದೂ ಧರ್ಮದ ಬಗ್ಗೆ ಮಾತನಾಡುವ ಬಿಜೆಪಿಯವರು ಹಿಂದುತ್ವಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ತಿಳಿಸಲು ನನ್ನ ಜೊತೆ ಚರ್ಚೆಗೆ ಬರಲಿ ನಾನು ಸಿದ್ದನಿದ್ದೇನೆ. ಅಭಿವೃದ್ದಿ ಬಿಜೆಪಿಗೆ ಬೇಕಾಗಿಲ್ಲ, ಚುನಾವಣೆ ಸಮಯದಲ್ಲಿ ಕೋಮುಗಲಭೆ ವಾತಾವರಣ ಸೃಷ್ಟಿಸಿ ಅದರ ಹೆಸರಲ್ಲಿ ವೋಟು ಗಿಟ್ಟಿಸುವುದು ಮಾತ್ರ ಬಿಜೆಪಿ ಗೆ ಬೇಕಾಗಿದೆ ಎಂದು ಹೇಳಿದರು.

ಏನ್ರೀ 9 ಸೆಂಟ್ಸ್ ಜಾಗ ಕೊಟ್ರೆ ನಿಮ್ಮ ಗಂಟು ಹೋಗ್ತದಾ?
ಕೆಲವೊಂದು ಗ್ರಾಮಗಳಲ್ಲಿ 94 ಸಿ ಗೆ ಅರ್ಜಿ ಹಾಕಿದ್ದರೂ ವಿನಾ ಕಾರಣ ಕೆಲವೊಂದು ಗ್ರಾಮಗಳ ಗ್ರಾಮಕರಣಿಕರು ಅರ್ಜಿ ವಿಲೇವಾರಿ ಮಾಡಿಲ್ಲ ಇದರ ಬಗ್ಗೆ ಗರಂ ಆದ ಶಾಸಕರು ಏನ್ರಿ 9 ಸೆಂಟ್ಸ್ ಜಾಗ ಬಡವರಿಗೆ ಕೊಟ್ರೆ ನಿಮ್ಮ ಗಂಟು ಹೋಗ್ತದಾ? ನಿಮ್ಮ ಜಾಗವನ್ನು ಅವರು ಕೇಳಿದ್ದಲ್ಲ. ಅವರು ಹಲವು ವರ್ಷಗಳಿಂದ ಮನೆ ಕಟ್ಟಿ ವಾಸ್ತವ್ಯ ಇರುವ ಜಾಗಕ್ಕೆ ಹಕ್ಕು ಪತ್ರಕ್ಕಾಗಿ ಅರ್ಜಿ ಹಾಕಿದ್ದು ಅದನ್ನು ಮಾಡಿ ಕೊಡ್ಲಿಕ್ಕೆ ನಿಮಗೇನಾಗಿದೆ? ಎಂದು ಸಭೆಯಲ್ಲಿದ್ದ ಗ್ರಾಮಕರಣಿಕರನ್ನು ಶಾಕರು ಪ್ರಶ್ನಿಸಿದರು. ಮುಂದಿನ ಬೈಠಕ್‌ನಲ್ಲಿ ಎಲ್ಲಾ 94 ಸಿ ಅರ್ಜಿಗಳು ವಿಲೇವಾರಿಯಾಗಬೇಕು. ಬಡವರ ಶಾಪಕ್ಕೆ ಗುರಿಯಾಗಬೇಡಿ ಎಂದು ಶಾಸಕರು ಹೇಳಿದರು.

ಸಿಂಹ ಗರ್ಜನೆ ಮಾಡಿದ್ದರಿಂದ ಪುತ್ತೂರಲ್ಲಿ ಭೈಠಕ್ ನಡೆಯುತ್ತಿದೆ:
ಅಕ್ರಮ ಸಕ್ರಮದಲ್ಲಿ ಕರ್ನಾಟಕದಲ್ಲಿ ಪುತ್ತೂರು ಮೊದಲ ಸ್ಥಾನದಲ್ಲಿದೆ ಇದಕ್ಕೆ ಕಾರಣ ಶಾಸಕ ಅಶೋಕ್ ರೈ ಅವರು. ಶಾಸಕರು ವಿಧಾನಸಭೆಯಲ್ಲಿ ಸಿಂಹ ಗರ್ಜನೆ ಮಾಡದೇ ಇರುತ್ತಿದ್ದರೆ ಅಕ್ರಮ ಸಕ್ರಮವೇ ಆಗುತ್ತಿರಲಿಲ್ಲ ಎಂದು ಪುತ್ತೂರು ತಹಶಿಲ್ದಾರ್ ಪುರಂದರ್ ಹೆಗ್ಡೆ ಹೇಳಿದರು.
ಅವರು ಮುಂಡೂರಿನಲ್ಲಿ ನಡೆದ ಅಕ್ರಮ ಸಕ್ರಮ ಬೈಠಕ್ ನಲ್ಲಿ ಮಾತನಾಡಿದರು.
ಶಾಸಕರಾದವರು ಹೇಗೆ ಕೆಲಸ ಮಾಡಬೇಕು ಎಂಬುದಕ್ಕೆ ಕರ್ನಾಟಕದ ಶಾಸಕರಿಗೆ ಅಶೋಕ್ ರೈ ಮಾದರಿಯಾಗಿದ್ದಾರೆ. ಶಾಸಕರಾದ ಬಳಿಕ ಅಧಿವೇಶನದಲ್ಲಿ ಗರ್ಜನೆ ಮಾಡಿದ್ದನ್ನು ಎಲ್ಲರೂ ನೋಡಿದ್ದಾರೆ ಅವರು ಬೆಂಗಳೂರಿಗೆ ವಾರಕ್ಕೊಮ್ಮೆ ಹೋಗಿ ಅನುದಾನ ತರುತ್ತಾರೆ,ಪುತ್ತೂರಿಗೆ ಏನೆಲ್ಲಾ ಬೇಕೋ ಅದೆಲ್ಲವನ್ನೂ ತರುತ್ತಿದ್ದಾರೆ,ಇಂಥಹ ಶಾಸಕರನ್ನು ಪಡೆದ ಇಲ್ಲಿನ ಜನರು ಭಾಗ್ಯವಂತರು ಎಂದು ಹೇಳಿದರು.

ಸರ್ವಧರ್ಮ ಪ್ರೇಮಿ
ಶಾಸಕರು ಸರ್ವ ಧರ್ಮ ಪ್ರೇಮಿಯಾಗಿದ್ದಾರೆ. ಅನಧಿಕೃತವಾಗಿರುವ ದೇವಸ್ಥಾನ, ದೈವಸ್ಥಾನ,ಮಸೀದಿ ಚರ್ಚು,ಬಸದಿಗಳನ್ನು ಸಕ್ರಮ ಮಾಡಲು ಪಣ ತೊಟ್ಟಿದ್ದಾರೆ. ಧರ್ಮ ರಕ್ಷಣೆ ಭಾಷಣ ಮಾಡಿದರೆ ಸಾಧ್ಯವಿಲ್ಲ. ಅಕ್ರಮವಾಗಿರುವ ದೇವರ ಜಾಗವನ್ನು ಸಕ್ರಮ ಮಾಡುವುದು ನಿಜವಾದ ಧರ್ಮಪ್ರೇಮ ಎಂದ ತಹಶಿಲ್ದಾರ್ ರವರು ಶಾಸಕ ರ ಸರ್ವ ಧರ್ಮ ಪ್ರೇಮಕ್ಕೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ: ಮಹಮ್ಮದ್ ಬಡಗನ್ನೂರು
ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಾತನಾಡಿ ೧೩ ನೇ ಅಕ್ರಮ ಸಕ್ರಮ ಭೈಠಕನ್ನು ಮುಂಡೂರಿನಲ್ಲಿ ನಡೆಸಲಾಗುತ್ತಿದೆ. ಚುನಾವಣೆ ಪೂರ್ವದಲ್ಲಿ ಶಾಸಕರು ಜನತೆಗೆ ಏನು ಭರವಸೆ ಕೊಟ್ಟಿದ್ದಾರೋ ಅದೆಲ್ಲವನ್ನೂ ಈಡೇರಿಸುವ ಕೆಲಸವನ್ನು ಶಾಸಕರು ಮಾಡುತ್ತಿದ್ದಾರೆ. ಅಕ್ರಮ ಸಕ್ರಮ ಕಡತ,೯೪ ಸಿ ಮತ್ತು ೯೪ ಸಿ ಸಿ ಕಡತವನ್ನು ವಿಲೇವಾರಿ ಮಾಡಿ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಿದ್ದಾರೆ. ಈ ಹಿಂದೆ ವರ್ಷದಲ್ಲಿ ಎರಡು ಬೈಠಕ್ ನಡೆಯುತ್ತಿತ್ತು ಆದರೆ ಈಗ ತಿಂಗಳಿಗೆ ನಾಲ್ಕು ಬೈಠಕ್ ನಡೆಯುತ್ತಿದೆ ಇದು ಶಾಸಕರ ತಾಕತ್ತು ಮತ್ತು ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಶಾಸಕರ ಕಚೇರಿಗೆ ಬರುವ ಜನರೇ ಸಾಕ್ಷಿ:
ಪ್ರತೀ ಸೋಮವಾರ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಭೇಟಿ ಕೊಡುತ್ತಾರೆ. ಈ ಹಿಂದೆ ಪುತ್ತೂರಲ್ಲಿ ಅದೆಷ್ಟು ಜನ ಶಾಸಕರಾಗಿದ್ದಾರೆ ಅವರುಗಳ ಕಚೇರಿಗೆ ಜನ ಬರುತ್ತಿದ್ದರೇ ಎಂಬುದು ಪುತ್ತೂರಿನ ಜನತೆಗೆ ಗೊತ್ತಿದೆ.ಜನರ ಸಮಸ್ಯೆಗೆ ಸ್ಪಂದನೆ ಮಾಡುತ್ತಾರೆ ಎಂಬ ಕಾರಣಕ್ಕೆ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದರು. ಸರಕಾರ ಜನರಿಗೆ ಪಂಚ ಗ್ಯಾರಂಟಿ ನೀಡಿದೆ, ಶಾಸಕರು ಜನರ ನೋವು ನಲಿವುಗಳಿಗೆ ಸ್ಪಂದನೆ ನೀಡುವ ಮೂಲಕ ತಾನೊಬ್ಬ ರಾಜಧರ್ಮ ಪಾಲನೆ ಮಾಡುತ್ತಿರುವ ಶಾಸಕ ಎಂಬ ಹೆಗ್ಗಳಿಕೆಗೆ ಫಾತ್ರರಾಗಿದ್ದಾರೆ ಎಂದು ಹೇಳಿದರು.ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಾತನಾಡಿ ೧೩ ನೇ ಅಕ್ರಮ ಸಕ್ರಮ ಭೈಠಕನ್ನು ಮುಂಡೂರಿನಲ್ಲಿ ನಡೆಸಲಾಗುತ್ತಿದೆ. ಚುನಾವಣೆ ಪೂರ್ವದಲ್ಲಿ ಶಾಸಕರು ಜನತೆಗೆ ಏನು ಭರವಸೆ ಕೊಟ್ಟಿದ್ದಾರೋ ಅದೆಲ್ಲವನ್ನೂ ಈಡೇರಿಸುವ ಕೆಲಸವನ್ನು ಶಾಸಕರು ಮಾಡುತ್ತಿದ್ದಾರೆ. ಅಕ್ರಮ ಸಕ್ರಮ ಕಡತ,೯೪ ಸಿ ಮತ್ತು ೯೪ ಸಿ ಸಿ ಕಡತವನ್ನು ವಿಲೇವಾರಿ ಮಾಡಿ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಿದ್ದಾರೆ. ಈ ಹಿಂದೆ ವರ್ಷದಲ್ಲಿ ಎರಡು ಬೈಠಕ್ ನಡೆಯುತ್ತಿತ್ತು ಆದರೆ ಈಗ ತಿಂಗಳಿಗೆ ನಾಲ್ಕು ಬೈಠಕ್ ನಡೆಯುತ್ತಿದೆ ಇದು ಶಾಸಕರ ತಾಕತ್ತು ಮತ್ತು ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಶಾಸಕರ ಕಚೇರಿಗೆ ಬರುವ ಜನರೇ ಸಾಕ್ಷಿ:
ಪ್ರತೀ ಸೋಮವಾರ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಭೇಟಿ ಕೊಡುತ್ತಾರೆ. ಈ ಹಿಂದೆ ಪುತ್ತೂರಲ್ಲಿ ಅದೆಷ್ಟು ಜನ ಶಾಸಕರಾಗಿದ್ದಾರೆ ಅವರುಗಳ ಕಚೇರಿಗೆ ಜನ ಬರುತ್ತಿದ್ದರೇ ಎಂಬುದು ಪುತ್ತೂರಿನ ಜನತೆಗೆ ಗೊತ್ತಿದೆ.ಜನರ ಸಮಸ್ಯೆಗೆ ಸ್ಪಂದನೆ ಮಾಡುತ್ತಾರೆ ಎಂಬ ಕಾರಣಕ್ಕೆ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದರು. ಸರಕಾರ ಜನರಿಗೆ ಪಂಚ ಗ್ಯಾರಂಟಿ ನೀಡಿದೆ, ಶಾಸಕರು ಜನರ ನೋವು ನಲಿವುಗಳಿಗೆ ಸ್ಪಂದನೆ ನೀಡುವ ಮೂಲಕ ತಾನೊಬ್ಬ ರಾಜಧರ್ಮ ಪಾಲನೆ ಮಾಡುತ್ತಿರುವ ಶಾಸಕ ಎಂಬ ಹೆಗ್ಗಳಿಕೆಗೆ ಫಾತ್ರರಾಗಿದ್ದಾರೆ ಎಂದು ಹೇಳಿದರು.

60 ಕಡತ ವಿಲೇವಾರಿ
ಬೈಠಕ್‌ನಲ್ಲಿ ಒಟ್ಟು 60 ಕಡತವನ್ನು ವಿಲೇವಾರಿ ಮಾಡಲಾಗಿದೆ. ಅಕ್ರಮ ಸಕ್ರಮ ಮತ್ತು 94 ಸಿ ಹಕ್ಕುಪತ್ರವನ್ನು ವಿತರಣೆ ಮಾಡಲಾಯಿತು. ಒಳಮೊಗ್ರು, ಸರ್ವೆ, ಮುಂಡೂರು, ಶಾಂತಿಗೋಡು, ಕೆದಂಬಾಡಿ ಗ್ರಾಮದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.ವೇದಿಕೆಯಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ ಮತ್ತು ರೂಪರೇಖಾ ಆಳ್ವ ಉಪಸ್ಥಿತರಿದ್ದರು. ಗ್ರಾಮಕರಣಿಕ ಉಮೇಶ್ ಕಾವಾಡಿಗ ಸ್ವಾಗತಿಸಿದರು. ಕಂದಾಯ ನಿರೀಕ್ಷರಾದ ಗೋಪಾಲ ವಂದಿಸಿದರು.

Ad Widget
Click to comment

Leave a Reply

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!