Connect with us

ನಿಧನ ವಾರ್ತೆ

Aagumbe-ಆಗುಂಬೆ: ಭಾರೀ ಗಾಳಿಮಳೆಗೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು

Published

on

Ad Widget

Ad Widget

Ad Widget

Ad Widget

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಗಾಳಿಮಳೆಗೆ ಯುವ ಯಕ್ಷಗಾನ ಕಲಾವಿದರೊಬ್ಬರು ಬಲಿಯಾಗಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಆಗುಂಬೆ ಘಾಟ್ ಸಮೀಪ ನಡೆದಿದೆ. ಕುಂದಾಪುರ ಮೂಲದ ಪ್ರತಿಭಾವಂತ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಮೃತಪಟ್ಟ ದುರ್ದೈವಿ.

Ad Widget

Ad Widget

Ad Widget

Ad Widget

ಉಡುಪಿ, ಮೇ 15: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಗಾಳಿಮಳೆಗೆ ಯುವ ಯಕ್ಷಗಾನ ಕಲಾವಿದರೊಬ್ಬರು ಬಲಿಯಾಗಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಆಗುಂಬೆ ಘಾಟ್ ಸಮೀಪ ನಡೆದಿದೆ. ಕುಂದಾಪುರ ಮೂಲದ ಪ್ರತಿಭಾವಂತ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಮೃತಪಟ್ಟ ದುರ್ದೈವಿ.

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ಶೃಂಗೇರಿ ಸಮೀಪದ ಕೊಪ್ಪದಲ್ಲಿ ಸೂರಾಲು ಮೇಳದ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ, ಪ್ರತಿಕೂಲ ಹವಾಮಾನ, ನಿರಂತರ ಮಳೆ ಹಾಗೂ ರಭಸದ ಗಾಳಿಯಿಂದಾಗಿ ಪ್ರದರ್ಶನವನ್ನು ಅರ್ಧದಲ್ಲೇ ರದ್ದುಗೊಳಿಸಲಾಯಿತು. ಇದರಿಂದಾಗಿ, ರಂಜಿತ್ ಬನ್ನಾಡಿ ಸೇರಿದಂತೆ ಇತರ ಕಲಾವಿದರು ತಮ್ಮ ತಮ್ಮ ಮನೆಗಳತ್ತ ರಾತ್ರಿ ವೇಳೆ ಹಿಂತಿರುಗುತ್ತಿದ್ದರು.

Ad Widget

Ad Widget <> Ad Widget

ರಂಜಿತ್ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಆಗುಂಬೆ ಮಾರ್ಗವಾಗಿ ಪ್ರಯಾಣಿಸುತ್ತಿದ್ದಾಗ, ರಸ್ತೆಯ ಬದಿಯಲ್ಲಿದ್ದ ಮರವೊಂದರ ಕೊಂಬೆ ರಭಸದ ಗಾಳಿಗೆ ಮುರಿದು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಇದರ ರಭಸಕ್ಕೆ ವಿದ್ಯುತ್ ತಂತಿಯೊಂದು ತುಂಡಾಗಿ ರಸ್ತೆಗೆ ಬಿದ್ದಿದ್ದು, ಅದೇ ಸಮಯಕ್ಕೆ ವಾಹನದಲ್ಲಿ ಸಾಗುತ್ತಿದ್ದ ರಂಜಿತ್ ಅವರ ಮೇಲೆ ಬಿದ್ದಿದೆ. ತೀವ್ರ ವಿದ್ಯುತ್ ಸ್ಪರ್ಶದಿಂದಾಗಿ ಅವರು ಗಂಭೀರವಾಗಿ ಗಾಯಗೊಂಡರು.

ಅವರೊಂದಿಗೆ ಹಿಂಬದಿ ಸವಾರರಾಗಿದ್ದ ಮತ್ತೊಬ್ಬ ಯಕ್ಷಗಾನ ಕಲಾವಿದ, ಸ್ತ್ರೀ ಪಾತ್ರಧಾರಿ ವಿನೋದ್ ರಾಜ್ ಅವರು ಅದೃಷ್ಟವಶಾತ್ ಈ ದುರಂತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

Ad Widget

Ad Widget

ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಸಹ ಕಲಾವಿದರು ರಂಜಿತ್ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲು ತುರ್ತಾಗಿ ಸಾಗಿಸಿದರು. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ರಾತ್ರಿ ಉಡುಪಿ, ಚಿಕ್ಕಮಗಳೂರು ಸೇರಿದಂತೆ ಮಲೆನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಕಾಡಿನ ನಡುವಿನ ರಸ್ತೆಯಲ್ಲಿ, ಕತ್ತಲಲ್ಲಿ ಸಾಗುತ್ತಿದ್ದ ಯಕ್ಷಗಾನ ಕಲಾವಿದರ ಪಾಲಿಗೆ ಹರಿದು ಬಿದ್ದ ವಿದ್ಯುತ್ ತಂತಿಯು ಯಮನ ರೂಪದಲ್ಲಿ ಬಂದೆರಗಿದ್ದು, ಯುವ ಪ್ರತಿಭೆಯೊಂದನ್ನು ಬಲಿ ಪಡೆದಿದೆ. ಈ ಘಟನೆಯು ಯಕ್ಷಗಾನ ಲೋಕಕ್ಕೆ ಹಾಗೂ ಮೃತರ ಕುಟುಂಬಕ್ಕೆ ತೀವ್ರ ಆಘಾತವನ್ನುಂಟುಮಾಡಿದೆ.

Ad Widget

ನಿಧನ ವಾರ್ತೆ

Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು

Published

on

Ad Widget

Ad Widget

Ad Widget

Ad Widget

ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ. ಅಲ್ಲದೇ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು: ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ.

Ad Widget

Ad Widget alt="Ad Widget"/>

Ad Widget

ನ. 24ರಂದು ಮುಂಜಾನೆ ರಾಸ್ ಅಲ್ ಖೈಮಾದ ಅಲ್ ವತನ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಓಮನ್‌ಗೆ ವೀಸಾ ನವೀಕರಣಕ್ಕಾಗಿ ತೆರಳಿ ವಾಪಸಾಗುತ್ತಿದ್ದ 41 ಪ್ರಯಾಣಿಕರಿದ್ದ ಬಸ್, ತಾಂತ್ರಿಕ ದೋಷದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಅಪಘಾತದ ತೀವ್ರತೆಗೆ ಒಟ್ಟು 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ 11 ಮಂದಿ ಭಾರತೀಯರು ಎಂದು ವರದಿಯಾಗಿದೆ.

ಅಶ್ರಫ್ ಅವರೊಂದಿಗೆ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ

Continue Reading

ನಿಧನ ವಾರ್ತೆ

ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget alt="Ad Widget"/>

Ad Widget

ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್‌ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget <> Ad Widget

ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್‌ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.

ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Ad Widget

Ad Widget

ಕಮರಿದ ಕುಟುಂಬಕ್ಕೆ ಆಧಾರವಾಗುವ ಕನಸು
ಕಷ್ಟದ ಪರಿಸ್ಥಿತಿಯಲ್ಲಿ ಬೆಳೆದು ಬಂದಿದ್ದ ಜ್ಯೋತಿ ನರ್ಸ್ ಆಗಿ ಕುಟುಂಬಕ್ಕೆ ಆಸರೆಯಾಗಬೇಕೆಂಬ ಕನಸು ಕಂಡಿದ್ದರು. ಆದರೆ, ರಸ್ತೆ ಅಪಘಾತ ಆಕೆಯ ಕನಸನ್ನು ನುಚ್ಚುನೂರಾಗಿಸಿದ್ದು, ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ.

Ad Widget
Continue Reading

ನಿಧನ ವಾರ್ತೆ

Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

Published

on

Ad Widget

Ad Widget

Ad Widget

Ad Widget

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Ad Widget

Ad Widget <> Ad Widget

ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

ಕುಟುಂಬದ ಸದಸ್ಯರು ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ದೇವರ ದರ್ಶನ ಪಡೆದು ಮನೆಗೆ ಮರಳುತ್ತಿದ್ದ ಕುಟುಂಬದ ಪ್ರಯಾಣ ಕೆಲವೇ ಸಮಯದಲ್ಲಿ ಭೀಕರ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!