ಸಿನೆಮಾ
Kangana-ಭಾರತ – ಪಾಕ್ ಬಿಕ್ಕಟ್ಟು ನಡುವೆ ಪಾಕ್ ಗಾಯಕನ ಹಾಡಿಗೆ ರೀಲ್ಸ್ ಮಾಡಿದ ಬಿಜೆಪಿ ಸಂಸದೆ, ನಟಿ ಕಂಗನಾ : ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳ ಸುರಿಮಳೆ
ಭಾರತ ಮತ್ತು ಪಾಕಿಸ್ತಾನದ ನಡುವಣ ಬಿಕ್ಕಟ್ಟಿನ ಸಂದರ್ಭದಲ್ಲಿ ಪಾಕಿಸ್ತಾನಿ ವಸ್ತುಗಳ ಬಹಿಷ್ಕಾರದ ಕೂಗು ಜೋರಾಗಿರುವಾಗಲೇ, ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಪಾಕಿಸ್ತಾನಿ ಗಾಯಕನ ಹಾಡೊಂದಕ್ಕೆ ಹೆಜ್ಜೆ ಹಾಕುವ ಮೂಲಕ ವಿವಾದದ ಕೇಂದ್ರಬಿಂದುವಾಗಿದ್ದಾರೆ.
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಣ ಬಿಕ್ಕಟ್ಟಿನ ಸಂದರ್ಭದಲ್ಲಿ ಪಾಕಿಸ್ತಾನಿ ವಸ್ತುಗಳ ಬಹಿಷ್ಕಾರದ ಕೂಗು ಜೋರಾಗಿರುವಾಗಲೇ, ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಪಾಕಿಸ್ತಾನಿ ಗಾಯಕನ ಹಾಡೊಂದಕ್ಕೆ ಹೆಜ್ಜೆ ಹಾಕುವ ಮೂಲಕ ವಿವಾದದ ಕೇಂದ್ರಬಿಂದುವಾಗಿದ್ದಾರೆ.
ನಟಿ ಕಂಗನಾ ರಣಾವತ್ ಅವರು ತಮ್ಮ ಇತ್ತೀಚಿನ ಇನ್‌ಸ್ಟಾಗ್ರಾಮ್ ರೀಲ್‌ನಲ್ಲಿ, ಪಾಕಿಸ್ತಾನಿ ಗಾಯಕ ಜೈನ್ ಜೊಹೈಬ್ ಹಾಡಿರುವ “ರಂಜೇಯಾ ವೇ” ಎಂಬ ಹಾಡನ್ನು ಹಿನ್ನೆಲೆಯಾಗಿ ಬಳಸಿಕೊಂಡಿದ್ದಾರೆ. ಇದರಲ್ಲಿ ಅವರು ನವಿಲೊಂದರ ಜೊತೆ ನೃತ್ಯ ಮಾಡುತ್ತಾ, ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸುತ್ತಿರುವ ದೃಶ್ಯವಿದೆ. “ಜಿಂದಾ ರಹನೇ ಕೇ ಲಿಯೇ ಸಿರ್ಫ್ ಏಕ್ ಚೀಜ್ ಜರೂರಿ ಹೈ, ಔರ್ ವೋ ಹೈ ಜಿಂದಗಿ” ಎಂಬ ಶೀರ್ಷಿಕೆಯನ್ನೂ ಈ ರೀಲ್‌ಗೆ ನೀಡಿದ್ದಾರೆ. ಇಂಟರ್ನೆಟ್ ಅದನ್ನು ತಕ್ಷಣ ಗಮನಿಸಿ ಅವರಿಗೆ ಎಚ್ಚರಿಕೆ ನೀಡಿತ್ತು.
ಈ ರೀಲ್ಸ್ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದ್ದಂತೆ, ಅನೇಕ ಬಳಕೆದಾರರು ಕಂಗನಾ ಅವರ ಈ ನಡೆಯನ್ನು ಪ್ರಶ್ನಿಸಿದ್ದಾರೆ. “ಇದು ಪಾಕಿಸ್ತಾನಿ ಗಾಯಕನ ಹಾಡು” ಎಂದು ಕೆಲವರು ನೆನಪಿಸಿದರೆ, “ಒಂದು ಕಡೆ ಪಾಕಿಸ್ತಾನದ ವಿರುದ್ಧ ತೀವ್ರ ದ್ವೇಷ ಕಾರುವ ನೀವು, ಮತ್ತೊಂದೆಡೆ ಅವರ ಹಾಡುಗಳಿಗೆ ರೀಲ್ಸ್ ಮಾಡುತ್ತಿದ್ದೀರಿ. ಇದು ನಿಮ್ಮ ದ್ವಂದ್ವ ನಿಲುವನ್ನು ತೋರಿಸುತ್ತದೆ” ಎಂದು ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತ-ಪಾಕ್ ಸಂಬಂಧ ಹದಗೆಟ್ಟಿರುವ ಈ ಸಮಯದಲ್ಲಿ ಇಂತಹ ನಡೆ ಸರಿಯಲ್ಲ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ.
ಭಾರತವು ಪಾಕಿಸ್ತಾನದೊಂದಿಗಿನ ಯುದ್ಧದಂತಹ ಪರಿಸ್ಥಿತಿ ಎದುರಾದಾಗ, ಆ ದೇಶದ ಹಲವು ವಸ್ತುಗಳನ್ನು, ವಿಶೇಷವಾಗಿ ಕಲೆ ಮತ್ತು ಮನರಂಜನಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಿಷೇಧಿಸುವ ಅಥವಾ ಬಹಿಷ್ಕರಿಸುವ ಪ್ರವೃತ್ತಿ ಇದೆ. ಇಂತಹ ಸೂಕ್ಷ್ಮ ಸನ್ನಿವೇಶದಲ್ಲಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಕಂಗನಾ ಅವರ ಈ ನಡೆ ಚರ್ಚೆಗೆ ಗ್ರಾಸವಾಗಿದೆ.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಸಿನೆಮಾ
Bethlehem Family Unit-ಮಲಯಾಳಂ ಚಿತ್ರರಂಗದಲ್ಲಿ ದಾಖಲೆ ಬರೆದ ‘ಬೆತ್ಲೆಹೆಮ್ ಕುಟುಂಬ ಯೂನಿಟ್’: ಅ.2ಕ್ಕೆ ಒಟಿಟಿ ಎಂಟ್ರಿ
ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಗಿರೀಶ್ ಎ.ಡಿ. ನಿರ್ದೇಶನದ ಈ ರೊಮ್ಯಾಂಟಿಕ್ ಕಾಮಿಡಿ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸುಮಾರು 326 ಕೋಟಿ ರೂ. ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆ ನಿರ್ಮಿಸಿದೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ‘ಲೋಕಾ ಚಾಪ್ಟರ್ 1: ಚಂದ್ರ’ ಚಿತ್ರ 304 ಕೋಟಿ ರೂ. ಗಳಿಕೆಯೊಂದಿಗೆ ಮೊದಲ ಸ್ಥಾನದಲ್ಲಿತ್ತು. ‘ಬೆತ್ಲೆಹೆಮ್ ಕುಟುಂಬ ಯೂನಿಟ್’ ಈ ದಾಖಲೆಯನ್ನು ಹಿಂದಿಕ್ಕಿದೆ.
ಚಿತ್ರವು ಕೇರಳದಲ್ಲಿ ಮೊದಲ ಬಾರಿಗೆ 150 ಕೋಟಿ ರೂ. ಗಳಿಕೆ ದಾಖಲಿಸಿದ ಮಲಯಾಳಂ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಅತಿ ವೇಗವಾಗಿ 300 ಕೋಟಿ ರೂ. ಕ್ಲಬ್ ಸೇರಿದ ಚಿತ್ರ ಎಂಬ ದಾಖಲೆಗೂ ಪಾತ್ರವಾಗಿದೆ.
ಸಿನೆಮಾ
Hanuman Ansh-₹2 ಕೋಟಿ ಬಜೆಟ್ ಸಿನಿಮಾ ₹347 ಕೋಟಿ ಗಳಿಕೆ; ‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ‘ಹನುಮಾನ್ ಅಂಶ್ʼ
ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ. ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ.
ಮುಂಬಯಿ: ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ.
ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ. ಸಿನಿಮಾ ಬಿಡುಗಡೆಯಾಗಿ 45 ದಿನಗಳು ಕಳೆದರೂ ಬಾಕ್ಸ್ ಆಫೀಸ್‌ನಲ್ಲಿ ಗಳಿಕೆ ಮುಂದುವರಿದಿರುವುದು ವಿಶೇಷವಾಗಿದೆ.
‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ಸಿನಿಮಾ
ಭಾನುವಾರ (ಸೆ.20) ‘ಹನುಮಾನ್ ಅಂಶ್’ ಭಾರತದಲ್ಲಿ ₹13.75 ಕೋಟಿ ಹಾಗೂ ವಿದೇಶದಲ್ಲಿ ₹1.50 ಕೋಟಿ ಗಳಿಕೆ ಮಾಡಿದೆ. ಇದರೊಂದಿಗೆ ಚಿತ್ರದ ಒಟ್ಟು ಜಾಗತಿಕ ಗಳಿಕೆ ₹347.05 ಕೋಟಿಗೆ ತಲುಪಿದೆ ಎಂದು ಸ್ಯಾಕ್‌ನಿಲ್ಕ್ ವರದಿ ಮಾಡಿದೆ.
ಈ ಮೂಲಕ ರಾಮ್ ಚರಣ್ ಅಭಿನಯದ ‘ಪೆದ್ದಿ’ ಹಾಗೂ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗಳ ವಿಶ್ವದಾದ್ಯಂತದ ಗಳಿಕೆಯನ್ನು ‘ಹನುಮಾನ್ ಅಂಶ್’ ಹಿಂದಿಕ್ಕಿದೆ.
‘ಪೆದ್ದಿ’ ₹341.90 ಕೋಟಿ ಹಾಗೂ ‘ಟಾಕ್ಸಿಕ್’ ₹341.99 ಕೋಟಿ ಗಳಿಕೆ ಮಾಡಿದ್ದರೆ, ‘ಹನುಮಾನ್ ಅಂಶ್’ ₹347.05 ಕೋಟಿ ಗಳಿಕೆಯೊಂದಿಗೆ ಈ ಎರಡೂ ಸಿನಿಮಾಗಳನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲಾ’ ಸಿನಿಮಾದ ಗಳಿಕೆಯನ್ನೂ ಹಿಂದಿಕ್ಕಿರುವ ‘ಹನುಮಾನ್ ಅಂಶ್’, ಈ ವರ್ಷದ ಹಿಂದಿ ಸಿನಿಮಾಗಳ ಪೈಕಿ ಅತಿ ಹೆಚ್ಚು ಗಳಿಕೆ ಕಂಡ ಮೂರನೇ ಚಿತ್ರವಾಗಿ ಹೊರಹೊಮ್ಮಿದೆ ಎಂದು ವರದಿಯಾಗಿದೆ.
ಇತರ ಭಾಷೆಯ ಸಿನಿಮಾಗಳನ್ನೂ ಹಿಂದಿಕ್ಕಿದ ‘ಹನುಮಾನ್ ಅಂಶ್’
ಕಳೆದ ವಾರದಲ್ಲಿಯೂ ಸಿನಿಮಾ ತನ್ನ ಗಳಿಕೆಯ ಓಟ ಮುಂದುವರಿಸಿದ್ದು, ‘ಜನಾ ನಾಯಕನ್’, ‘ಬೆತ್ತೆಹೇಮ್ ಕುಟುಂಬ ಯೂನಿಟ್’, ‘ಮಾನ ಶಂಕರ ವರಪ್ರಸಾದ್ ಗಾರು’ ಹಾಗೂ ‘ಕರುಪ್ಪು’ ಸೇರಿದಂತೆ ವಿವಿಧ ಚಿತ್ರರಂಗಗಳ ಪ್ರಮುಖ ಸಿನಿಮಾಗಳ ಜಾಗತಿಕ ಗಳಿಕೆಯನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ವಿಶಾಲ್ ಚತುರ್ವೇದಿ ನಿರ್ದೇಶನದ ‘ಹನುಮಾನ್ ಅಂಶ್’ ಚಿತ್ರವು ‘ಮಹಾರಾಜ್ ಜಿ’ ಎಂದೇ ಜನಪ್ರಿಯರಾಗಿದ್ದ ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದೆ.
ಸ್ವಯಂಭೂ ಮೀಡಿಯಾ ನೆಟ್‌ವರ್ಕ್, ರಾಗಿಣಿ ಎಸ್., ನಮ್ರತಾ ಜಿ.ಎಸ್. ಹಾಗೂ ಅನುಪ್ರಿಯಾ ಎ. ನಗರ್ ನಿರ್ಮಿಸಿರುವ ಚಿತ್ರದಲ್ಲಿ ಚಂದನ್ ಕೆ. ಆನಂದ್ ಮತ್ತು ಶೋಭಿನವ್ ಸತ್ಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿಖಿಲ್ ದುಬೆ, ಉದಯಸಿಂಹ ರಜಪೂತ್, ಪೂರ್ಣಿಮಾ ತಿವಾರಿ ಹಾಗೂ ಮನೀಶ್ ಚೌಧರಿ ಸೇರಿದಂತೆ ಹಲವು ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
-
ನಿಧನ ವಾರ್ತೆ23 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್18 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು18 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized23 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ21 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್17 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ20 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!


















