ಬಿಗ್ ನ್ಯೂಸ್
Suhas Shetty | ಸುಹಾಸ್ ಶೆಟ್ಟಿ ಕೊ*ಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮೂವರ ಬಂಧನ – ಬಂಧಿತರ ಸಂಖ್ಯೆ 11ಕ್ಕೆ ಏರಿಕೆ
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಮೂಲಕ ಬಂಧಿತರ ಸಂಖ್ಯೆ 11ಕ್ಕೆ ಏರಿದೆ. ಕಳವಾರು ಆಶ್ರಯ ಕಾಲೊನಿಯ ಅಬೂಬಕರ್ ಪುತ್ರ ಅಜರುದ್ದೀನ್ ಅಲಿಯಾಸ್ ಅಜರ್ ಯಾನೆ ಅಜ್ಜು (29), ಉಡುಪಿ ಕಾಪು ಮೂಲದ, ಬಟ್ಟೆ ಭಟ್ರಕರೆ ಉಸ್ಮಾನೀಯಾ ಮಸೀದಿ ಬಳಿಯ ನಿವಾಸಿ ಕೆಎಂ ನಜೀರ್ ಎಂಬವರ ಪುತ್ರ ಅಬ್ದುಲ್ ಖಾದರ್ ಯಾನೆ ನೌಫಲ್(24) ಹಾಗೂ ಬಂಟ್ವಾಳ ಫರಂಗಿಪೇಟೆ ಮೂಲದ ಹಾಸನ ಕೆ.ಆರ್.ಪುರಂನಲ್ಲಿ ವಾಸವಿದ್ದ ದಿ|ನಸ್ರುದ್ದೀನ್ ಎಂಬವರ ಪುತ್ರ ನೌಷದ್ ಯಾನೆ ವಾಮಂಜೂರು ನೌಷದ್ ಯಾನೆ ಚೊಟ್ಟೆ ನೌಷದ್(39) ಬಂಧಿತರು.
ಆರೋಪಿಗಳ ಪೈಕಿ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿರುತ್ತದೆ. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿರುತ್ತಾನೆ. ಆರೋಪಿ ಅಬ್ದುಲ್ ಖಾದರ್ ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಅವರಿಗೆ ಸಹಕಾರವಿತ್ತಿದ್ದ.
ಇನ್ನೋರ್ವ ಆರೋಪಿ ನೌಷದ್ ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿದ್ದಲ್ಲದೆ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನು ಈ ಹಿಂದೆ ಸುರತ್ಕಲ್, ಬಜಪೆ, ಮೂಡುಬಿದಿರೆ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಜರುದ್ದೀನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಬ್ದುಲ್ಖಾದರ್ ಹಾಗೂ ನೌಷದ್‌ರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
-
ಮಂಗಳೂರು8 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ11 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ13 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್13 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ13 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ8 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸಿನೆಮಾ12 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್12 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















