Connect with us

ನಿಧನ ವಾರ್ತೆ

Kundapura-ಕುಂದಾಪುರ: ಸಾಲದ ಶೂಲಕ್ಕೆ ಬೆದರಿ ಬಾವಿಗೆ ಹಾರಿದ ತಂದೆ ಸಾವು- ರಕ್ಷಣೆಗೆ ಧಾವಿಸಿದ ಮಗನೂ ಬಲಿ; ಇವರಿಬ್ಬರನ್ನೂ ರಕ್ಷಿಸಲು ಬಾವಿಗಿಳಿದ  ತಾಯಿ

Published

on

Ad Widget

Ad Widget

Ad Widget

Ad Widget

ಸಾಲದ ಹೊರೆ ತಾಳಲಾರದೆ ಬಾವಿಗೆ ಹಾರಿ ಜೀವ ಕಳೆದುಕೊಳ್ಳಲು ಮುಂದಾದ ತಂದೆಯನ್ನು ರಕ್ಷಿಸಲು ಹೋಗಿ ಮಗನೂ ಪ್ರಾಣ ಕಳೆದುಕೊಂಡ ಮನಕಲಕುವ ಘಟನೆ ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಬಳಿ ಸಂಭವಿಸಿದೆ. ಪತಿ ಹಾಗೂ ಪುತ್ರನ ಜೀವ ಉಳಿಸಲು ತಾಯಿಯೂ ಬಾವಿಗೆ ಜಿಗಿದಿದ್ದು, ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

Ad Widget

Ad Widget

Ad Widget

Ad Widget

ಕುಂದಾಪುರ: ಸಾಲದ ಹೊರೆ ತಾಳಲಾರದೆ ಬಾವಿಗೆ ಹಾರಿ ಜೀವ ಕಳೆದುಕೊಳ್ಳಲು ಮುಂದಾದ ತಂದೆಯನ್ನು ರಕ್ಷಿಸಲು ಹೋಗಿ ಮಗನೂ ಪ್ರಾಣ ಕಳೆದುಕೊಂಡ ಮನಕಲಕುವ ಘಟನೆ ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಬಳಿ ಸಂಭವಿಸಿದೆ. ಪತಿ ಹಾಗೂ ಪುತ್ರನ ಜೀವ ಉಳಿಸಲು ತಾಯಿಯೂ ಬಾವಿಗೆ ಜಿಗಿದಿದ್ದು, ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ದುರಂತದಲ್ಲಿ ಜೀವ ತೆತ್ತವರು ತೆಕ್ಕಟ್ಟೆ ನಿವಾಸಿ ಮಾಧವ ದೇವಾಡಿಗ (55) ಹಾಗೂ ಅವರ ಮಗ ಪ್ರಸಾದ್ ದೇವಾಡಿಗ (22). ಇವರಿಬ್ಬರನ್ನೂ ಉಳಿಸಲು ಯತ್ನಿಸಿ ಬಾವಿಗೆ ಹಾರಿದ್ದ ಮಾಧವ ಅವರ ಪತ್ನಿ ತಾರಾ ದೇವಾಡಿಗ ಅವರನ್ನು ಸ್ಥಳೀಯರ ಸಮಯೋಚಿತ ನೆರವಿನಿಂದ ರಕ್ಷಿಸಲಾಗಿದ್ದು, ಅವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget

Ad Widget <> Ad Widget

ಮಾಧವ ದೇವಾಡಿಗ ಅವರ ಕುಟುಂಬ ಕಳೆದ ಏಳು ವರುಷಗಳಿಂದ ತೆಕ್ಕಟ್ಟೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿತ್ತು. ಮಾಧವ ಹಾಗೂ ಮಗ ಪ್ರಸಾದ್ ಕುಂದಾಪುರದ ರಿಲಯನ್ಸ್ ಪೆಟ್ರೋಲ್ ಬಂಕ್ನಲ್ಲಿ ಉದ್ಯೋಗದಲ್ಲಿದ್ದರೆ, ಪತ್ನಿ ತಾರಾ ಅವರು ಕುಂಭಾಸಿಯ ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಡುಗೆ ಸಹಾಯಕರಾಗಿ ದುಡಿಯುತ್ತಿದ್ದರು.

ಘಟನೆಯ ವಿವರ:
ಗುರುವಾರ ಬೆಳಗಿನ ಜಾವ ಸುಮಾರು 6 ಗಂಟೆಗೆ, ಪಕ್ಕದ ಮನೆಯ ಮಹಿಳೆಯೊಬ್ಬರು ರಂಗೋಲಿ ಬಿಡಿಸಲು ಮನೆಯಿಂದ ಹೊರಬಂದಾಗ, ಎದುರಿನ ಬಾವಿಯಿಂದ ಸಹಾಯಕ್ಕಾಗಿ ಕೂಗು ಕೇಳಿಬಂತು. ಕೂಡಲೇ ಬಾವಿಗೆ ಇಣುಕಿ ನೋಡಿದಾಗ, ತಾರಾ ದೇವಾಡಿಗ ಅವರು ನೀರಿನಲ್ಲಿ ಜೀವಕ್ಕಾಗಿ ಹೋರಾಡುತ್ತಿರುವುದು ಗೋಚರಿಸಿತು. ತಕ್ಷಣವೇ ಆಕೆ ಅಕ್ಕಪಕ್ಕದವರನ್ನು ಕೂಗಿ ಕರೆದರು. ಧಾವಿಸಿ ಬಂದ ಸ್ಥಳೀಯರು ತಾರಾ ಅವರನ್ನು ಮೇಲೆತ್ತಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅಷ್ಟರಲ್ಲಾಗಲೇ ಮಾಧವ ಮತ್ತು ಪ್ರಸಾದ್ ನೀರಿನಲ್ಲಿ ಮುಳುಗಿ ಇಹಲೋಕ ತ್ಯಜಿಸಿದ್ದರು.

Ad Widget

Ad Widget

ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಯಿಂದ ಮಾಧವ ಮತ್ತು ಪ್ರಸಾದ್ ಅವರ ಮೃತದೇಹಗಳನ್ನು ಹೊರತೆಗೆದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಕೋಟಾ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಘವೇಂದ್ರ ಸಿ. ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಾಥಮಿಕ ತನಿಖೆಯ ಪ್ರಕಾರ, ಮಾಧವ ದೇವಾಡಿಗ ಅವರು ತೀವ್ರ ಆರ್ಥಿಕ ಸಂಕಷ್ಟ ಹಾಗೂ ಸಾಲದ ಬಾಧೆಯಿಂದ ಈ ದುಡುಕಿನ ನಿರ್ಧಾರಕ್ಕೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!

Published

on

Ad Widget

Ad Widget

Ad Widget

Ad Widget

ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget

Ad Widget

Ad Widget

ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget <> Ad Widget

ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.

Ad Widget

Ad Widget

ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು

Published

on

Ad Widget

Ad Widget

Ad Widget

Ad Widget

ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.

Ad Widget

Ad Widget

Ad Widget

Ad Widget

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Ad Widget

Ad Widget

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.

ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Ad Widget

Ad Widget

ಘಟನೆಯಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಅವರು ಸೆಲೂನ್ ಸಿಬ್ಬಂದಿ ಎಂದು ತಿಳಿದುಬಂದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!