ಬಿಗ್ ನ್ಯೂಸ್
Chaitra Kundapura-“ಇಬ್ಬರೂ ಕಳ್ಳರು, ನನ್ನನ್ನು ಮದುವೆಗೆ ಕರೆದಿಲ್ಲ..! ನಾನು ಕಟ್ಟಿದ ಮನೆಯಲ್ಲಿ ನಾನೇ ಅನಾಥ – ತಂದೆಗೆ ಅನ್ನ ಹಾಕದವಳು ದೇಶ ಸೇವೆ ಮಾಡೋದು ಹೇಗೆ..?” ಚೈತ್ರಾ ಕುಂದಾಪುರ ತಂದೆ ಗಂಭೀರ ಆರೋಪ : ತಂದೆಯ ವಿರುದ್ಧ ಚೈತ್ರಾ ತಿರುಗೇಟು..!
ಚೈತ್ರಾ ಕುಂದಾಪುರ ಇತ್ತೀಚೆಗೆ ಶ್ರೀಕಾಂತ್ ಕಶ್ಯಪ್ ಎಂಬಾತನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ, ಚೈತ್ರಾ ತಮ್ಮ ಸ್ವಂತ ತಂದೆ ಬಾಲಕೃಷ್ಣ ನಾಯ್ಕ್ ಅವರನ್ನು ಮದುವೆಗೆ ಆಹ್ವಾನಿಸದಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ತಂದೆ ಬಾಲಕೃಷ್ಣ ನಾಯ್ಕ್, ಚೈತ್ರಾ ಮತ್ತು ಆಕೆಯ ಪತಿ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಬೆಂಗಳೂರು, ಮೇ 15: ಬಿಗ್ ಬಾಸ್ ಕನ್ನಡ ಸೀಸನ್ 11 ಖ್ಯಾತಿಯ ಚೈತ್ರಾ ಕುಂದಾಪುರ ಇತ್ತೀಚೆಗೆ ಶ್ರೀಕಾಂತ್ ಕಶ್ಯಪ್ ಎಂಬಾತನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು-ಹಿರಿಯರ ಸಮ್ಮುಖದಲ್ಲಿ ನಡೆದ ಈ ಮದುವೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಆದರೆ, ಚೈತ್ರಾ ತಮ್ಮ ಸ್ವಂತ ತಂದೆ ಬಾಲಕೃಷ್ಣ ನಾಯ್ಕ್ ಅವರನ್ನು ಮದುವೆಗೆ ಆಹ್ವಾನಿಸದಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ತಂದೆ ಬಾಲಕೃಷ್ಣ ನಾಯ್ಕ್, ಚೈತ್ರಾ ಮತ್ತು ಆಕೆಯ ಪತಿ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ತಂದೆಯ ಆರೋಪಗಳೇನು?
ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕೃಷ್ಣ ನಾಯ್ಕ್, “ಚೈತ್ರಾ ಮತ್ತು ಆಕೆಯ ಪತಿ ಶ್ರೀಕಾಂತ್ ಇಬ್ಬರೂ ಕಳ್ಳರು. ಈ ಮದುವೆಯನ್ನು ನಾನು ಒಪ್ಪುವುದಿಲ್ಲ. ಚೈತ್ರಾ ನನ್ನನ್ನು ಮದುವೆಗೆ ಆಹ್ವಾನಿಸಲೇ ಇಲ್ಲ. ಆಕೆ ಮತ್ತು ಆಕೆಯ ತಾಯಿ ಹಣದ ಆಸೆಗಾಗಿ ನನ್ನನ್ನು ದೂರವಿಟ್ಟಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲಿ ಚೈತ್ರಾ ಹಣ ಹಂಚಿಕೊಂಡಿದ್ದಾಳೆ. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥನಾಗಿದ್ದೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಮುಂದುವರಿದು, “ಚೈತ್ರಾ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಆದರೆ, ಅದು ಮೋಸದಿಂದ ಸಂಪಾದಿಸಿದ ಹಣವಾಗಿದ್ದರೆ ಏನು ಪ್ರಯೋಜನ? ಆಕೆಯ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ. ಜನರು ಆಕೆಗೆ ದೊಡ್ಡ ಸ್ಥಾನಮಾನ ಕೊಡಬಾರದು” ಎಂದು ಕಿಡಿಕಾರಿದ್ದಾರೆ. ಚೈತ್ರಾ ತನ್ನ ದೊಡ್ಡ ಮಗಳಾದ ಗಾಯತ್ರಿ ವಿರುದ್ಧವೂ ಸುಳ್ಳು ಆರೋಪ ಮಾಡಿದ್ದಾಳೆ ಎಂದು ಅವರು ದೂರಿದ್ದಾರೆ.
“ತಂದೆಗೆ ಅನ್ನ ಹಾಕದವಳು ದೇಶ ಸೇವೆ ಮಾಡುವುದಾದರೂ ಹೇಗೆ?”
ಬಾಲಕೃಷ್ಣ ನಾಯ್ಕ್, “ನಾನು ಸಾಮಾನ್ಯ ಹೋಟೆಲ್ ನೌಕರ. ಚೈತ್ರಾ ಮದುವೆಗೆ ಹಣ ಕೇಳಿದಾಗ ನಾನು ನೀಡಲಾಗಲಿಲ್ಲ. ಆಕೆ ಮತ್ತು ಆಕೆಯ ತಾಯಿ ಹಣದ ಆಸೆಗಾಗಿ ನನ್ನನ್ನು ಕಡೆಗಣಿಸಿದ್ದಾರೆ. ಚೈತ್ರಾ ಪತಿ ಶ್ರೀಕಾಂತ್ ಕೂಡ ನಮ್ಮ ಮನೆಯಲ್ಲಿದ್ದವನೇ, ಆದರೆ ಅವನೂ ಕಳ್ಳನೇ. ಆಕೆಗೆ ಮಾನ-ಮರ್ಯಾದೆ ಇಲ್ಲ. ತಂದೆಗೆ ಒಂದು ತುತ್ತು ಅನ್ನ ಹಾಕದವಳು ಯಾವ ದೇಶ ಸೇವೆಯನ್ನು ಮಾಡುತ್ತಾಳೆ?” ಎಂದು ಪ್ರಶ್ನಿಸಿದ್ದಾರೆ.
ಕುಟುಂಬದ ಮರ್ಯಾದೆಗೆ ಧಕ್ಕೆ ಎಂದ ತಂದೆ
“ನಾನು ಮತ್ತು ನನ್ನ ದೊಡ್ಡ ಮಗಳು ಗಾಯತ್ರಿ ಮರ್ಯಾದೆಯಿಂದ ಬದುಕುತ್ತಿದ್ದೇವೆ. ಗಾಯತ್ರಿ ಶಾಲೆಯಲ್ಲಿ ಕೆಲಸ ಮಾಡಿಕೊಂಡು, ಹೊಲಿಗೆ ಮಾಡಿಕೊಂಡು ಗೌರವಾನ್ವಿತ ಜೀವನ ನಡೆಸುತ್ತಿದ್ದಾಳೆ. ಆದರೆ, ಚೈತ್ರಾ ಬಿಗ್ ಬಾಸ್ ವೇದಿಕೆಯಲ್ಲಿ ಸುಳ್ಳು ಬಿಂಬಿಸಿಕೊಂಡಿದ್ದಾಳೆ. ಬೇರೆ ಬೇರೆ ಬ್ಯಾಂಕ್ಗಳಲ್ಲಿ ಸಾಲ ಪಡೆದು, ಬಾಂಡ್ಗಳ ಮೂಲಕ ಹಣ ಸಂಪಾದಿಸಿದ್ದಾಳೆ. ಆಕೆಯನ್ನು ನನ್ನ ಮಗಳು ಎಂದು ಕರೆಯಲು ನನಗೆ ನಾಚಿಕೆಯಾಗುತ್ತದೆ” ಎಂದು ಬಾಲಕೃಷ್ಣ ನಾಯ್ಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚೈತ್ರಾ ತಾಯಿ ಮೇಲೂ ಆರೋಪ
ಚೈತ್ರಾಳ ತಾಯಿಯೂ ಆಕೆಗೆ ಬೆಂಬಲ ನೀಡುತ್ತಿದ್ದಾಳೆ ಎಂದು ಆರೋಪಿಸಿರುವ ಬಾಲಕೃಷ್ಣ, “ನನ್ನ ಹೆಂಡತಿಗೂ ಹಣ ಕೊಟ್ಟಿದ್ದಾಳೆ. ಆಕೆಗೆ ಗಂಡನ ಗೌರವ ಬೇಡ. ಚೈತ್ರಾಳನ್ನು ಸಮರ್ಥಿಸುತ್ತಾಳೆ” ಎಂದು ದೂರಿದ್ದಾರೆ. “ಜನರು ಚೈತ್ರಾಗೆ ಮನ್ನಣೆ ಕೊಡಬಾರದು. ಆಕೆ ತಂದೆ ಇಲ್ಲದವಳಂತೆ ನಟಿಸುತ್ತಾಳೆ” ಎಂದು ಅವರು ಕಿಡಿಕಾರಿದ್ದಾರೆ.
ತಂದೆಯ ಆರೋಪಗಳಿಗೆ ಚೈತ್ರಾ ತಿರುಗೇಟು!
ಪ್ರೀತಿಸಿದ ಹುಡುಗನನ್ನು ಮದುವೆಯಾದ ಖುಷಿಯಲ್ಲಿದ್ದ ಚೈತ್ರಾ ವಿರುದ್ಧ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ಸಾಲು ಸಾಲು ಆರೋಪಗಳನ್ನು ಮಾಡಿದ್ದರು. “ಅವರಿಬ್ಬರು ದೊಡ್ಡ ಕಳ್ಳರು. ನನ್ನನ್ನು ಮದುವೆಗೆ ಕರೆದಿಲ್ಲ” ಎಂದು ಹೇಳಿದ್ದರು. ಈ ಆರೋಪಗಳಿಗೆ ಚೈತ್ರಾ ಕುಂದಾಪುರ ಇದೀಗ ರಿಯಾಕ್ಟ್ ಮಾಡಿದ್ದಾರೆ.
ಚೈತ್ರಾ ಕುಂದಾಪುರ ವಿರುದ್ಧ ಅವರ ತಂದೆ ಬಾಲಕೃಷ್ಣ ನಾಯ್ಕ್ ಹಲವು ಆರೋಪಗಳನ್ನು ಮಾಡಿದ್ದರು. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ತನ್ನ ತಂದೆಯ ಹೇಳಿಕೆಗಳಿಗೆಲ್ಲಾ ಚೈತ್ರಾ ಕುಂದಾಪುರ ರಿಯಾಕ್ಟ್ ಮಾಡಿದ್ದಾರೆ.
“ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗುತ್ತಾರೆ” ಎಂದು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
ಬಿಗ್ ನ್ಯೂಸ್
Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.
ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.
ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.
ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.
ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.
ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.
ಸಮಗ್ರ ತೋಟಗಾರಿಕಾ ಸೇವೆ:
ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್19 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ21 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ4 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ3 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸ್ಥಳೀಯ3 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ2 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ3 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized5 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















