ಈ […]" /> ಈ […]"> Lashkar-ಆಪರೇಷನ್ ಸಿಂಧೂರದಲ್ಲಿ ಧ್ವಂಸಗೊಂಡ ಲಷ್ಕರ್ ಉಗ್ರರ ಕೇಂದ್ರ ಕಚೇರಿ ಪಾಕ್ ಸರ್ಕಾರದ ಖರ್ಚಿನಲ್ಲಿ ಪುನರ್ ನಿರ್ಮಾಣ..!  ಸಚಿವ ಪ್ರತಿಜ್ಞೆ - Nikhara News | Kannada News Website
Connect with us

ಬಿಗ್ ನ್ಯೂಸ್

Lashkar-ಆಪರೇಷನ್ ಸಿಂಧೂರದಲ್ಲಿ ಧ್ವಂಸಗೊಂಡ ಲಷ್ಕರ್ ಉಗ್ರರ ಕೇಂದ್ರ ಕಚೇರಿ ಪಾಕ್ ಸರ್ಕಾರದ ಖರ್ಚಿನಲ್ಲಿ ಪುನರ್ ನಿರ್ಮಾಣ..!  ಸಚಿವ ಪ್ರತಿಜ್ಞೆ

Published

on

Ad Widget

Ad Widget

Ad Widget

Ad Widget

ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಅವರು ಮೇ 14 ರಂದು ಮುರಿಡೈಗೆ ಭೇಟಿ ನೀಡಿ, ಧ್ವಂಸಗೊಂಡ ಮಸೀದಿ ಮತ್ತು ಕಟ್ಟಡಗಳನ್ನು ಪಾಕ್ ಸರ್ಕಾರದ ಖರ್ಚಿನಲ್ಲಿ ಪುನರ್‌ನಿರ್ಮಾಣ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಇಸ್ಲಾಮಾಬಾದ್: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಸ್ಥಳಗಳಲ್ಲಿ “ಆಪರೇಷನ್ ಸಿಂಧೂರ” ಕಾರ್ಯಾಚರಣೆ ನಡೆಸಿ, ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತು. ಈ ಕಾರ್ಯಾಚರಣೆಯಲ್ಲಿ 100ಕ್ಕೂ ಅಧಿಕ ಉಗ್ರರನ್ನು ಹತ್ಯೆಗೈಯಲಾಯಿತು.

Ad Widget

Ad Widget alt="Ad Widget"/>

Ad Widget

ಈ ಘಟನೆಯ ಬೆನ್ನಲ್ಲೇ, ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಅವರು ಮೇ 14 ರಂದು ಮುರಿಡೈಗೆ ಭೇಟಿ ನೀಡಿ, ಧ್ವಂಸಗೊಂಡ ಮಸೀದಿ ಮತ್ತು ಕಟ್ಟಡಗಳನ್ನು ಪಾಕ್ ಸರ್ಕಾರದ ಖರ್ಚಿನಲ್ಲಿ ಪುನರ್‌ನಿರ್ಮಾಣ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಇದರೊಂದಿಗೆ, ಪಾಕಿಸ್ತಾನವು ತನ್ನ ಇಬ್ಬಗೆ ನೀತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ವರದಿಗಳು ತಿಳಿಸಿವೆ.

Ad Widget

Ad Widget <> Ad Widget

ಇದೇ ವೇಳೆ, ರಾಣಾ ತನ್ವೀರ್ ಹುಸೈನ್ ಅವರು ಭಾರತದ ಅತ್ಯಾಧುನಿಕ ತಂತ್ರಜ್ಞಾನವಾದ ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ರಫೇಲ್ ಯುದ್ಧವಿಮಾನಗಳನ್ನು ಲಾಹೋರ್‌ನ ಬಿಲಾಲ್ ಗಂಜ್‌ನಲ್ಲಿ ಶೀಘ್ರದಲ್ಲೇ ಮಾರಾಟ ಮಾಡುವುದನ್ನು ನೋಡಬಹುದು ಎಂದು ವ್ಯಂಗ್ಯವಾಡಿರುವುದಾಗಿ ವರದಿಗಳು ತಿಳಿಸಿವೆ. ಇದರ ಮೂಲಕ ಭಾರತೀಯ ಸೇನೆಯ ಸಾಮರ್ಥ್ಯವನ್ನು ಅಣಕಿಸುವ ಪ್ರಯತ್ನ ನಡೆಸಲಾಗಿದೆ.

ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಅವರು ಈ ಪುನರ್‌ನಿರ್ಮಾಣಕ್ಕೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಲಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

Ad Widget

Ad Widget

ಮುರಿಡೈ ಏಕೆ ಪ್ರಮುಖ?
ಲಾಹೋರ್‌ನಿಂದ 33 ಕಿಮೀ ದೂರದಲ್ಲಿರುವ ಮುರಿಡೈ, ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯ ಸಮೀಪವಿದೆ. ಇಲ್ಲಿ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಇ-ತೊಯ್ಬಾದ ಪ್ರಧಾನ ಕಚೇರಿ “ಮರ್ಕಝ್-ಇ-ತೊಯ್ಬಾ” ಇದೆ. 200 ಎಕರೆಗೂ ಅಧಿಕ ವಿಸ್ತೀರ್ಣವಿರುವ ಈ ಕಾಂಪ್ಲೆಕ್ಸ್‌ನಲ್ಲಿ ಉಗ್ರರ ತರಬೇತಿ, ನೇಮಕಾತಿ ಮತ್ತು ಭಯೋತ್ಪಾದಕ ದಾಳಿಗಳ ಸಂಚು ರೂಪಿಸಲಾಗುತ್ತದೆ. 1980ರಲ್ಲಿ ಹಫೀಜ್ ಸಯೀದ್ ಅವರು ಪಾಕ್ ಐಎಸ್‌ಐ ಬೆಂಬಲದೊಂದಿಗೆ ಈ ಸಂಘಟನೆಯನ್ನು ಸ್ಥಾಪಿಸಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.

Ad Widget

Ad Widget <> Ad Widget

ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.

ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.

Ad Widget

Ad Widget

ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.

ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.

ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.

ಸಮಗ್ರ ತೋಟಗಾರಿಕಾ ಸೇವೆ:

ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!