ರಾಜಕೀಯ
Ashok Rai-ಪುತ್ತೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ 3 ಸರಕಾರಿ ಜಿಮ್ ಸೆಂಟರ್; ಕ್ರೀಡಾ ಇಲಾಖೆಯ ಕಮಿಷನರ್ ಜೊತೆ ಶಾಸಕ ಅಶೋಕ್ ರೈ ಸಭೆ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕರಾದ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ ಕ್ರೀಡಾ ಇಲಾಖೆ ಕಮಿಷನರ್ ಮತ್ತು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸರಕಾರದ ಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದು ಶೀಘ್ರವೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕರಾದ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ ಕ್ರೀಡಾ ಇಲಾಖೆ ಕಮಿಷನರ್ ಮತ್ತು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸರಕಾರದ ಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದು ಶೀಘ್ರವೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಜಿಮ್ ಕೇಂದ್ರ ಪ್ರಾರಂಭ ಮಾಡುವಂತೆ ಈ ಹಿಂದೆಯೇ ಶಾಸಕರಿಗೆ ಹಲವಾರು ಮನವಿಗಳು ಬಂದಿದ್ದವು. ಯುವಕರು, ಯುವ ಸಂಘಟನೆಗಳಿಂದ ಶಾಸಕರಿಗೆ ಮನವಿ ಬಂದಿದ್ದು ಜಿಮ್ ಕೇಂದ್ರ ಪ್ರಾರಂಭ ಮಾಡುವಂತೆ ಮನವಿ ಮಾಡಿದ್ದರು. ಈ ವಿಚಾರವನ್ನು ಕಳೆದ ಕೆಲವು ತಿಂಗಳ ಹಿಂದೆ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವರ ಜೊತೆ ಮಾತುಕತೆ ನಡೆಸಿದ ವೇಳೆ ಸಚಿವರು ಅಸ್ತು ಎಂದಿದ್ದರು. ಕ್ರೀಡಾ ಇಲಾಖೆಯ ಮೂಲಕ ಜಿಮ್ ಕೇಂದ್ರ ತೆರೆಯಲು ಅವಕಾಶವಿರುವ ಬಗ್ಗೆ ಶಾಸಕರು ಸಚಿವರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಶಾಸಕರು ಮೂರು ಜಿಮ್ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಪ್ರಸ್ತಾವನೆ ಸಚಿವಾಲಯದಿಂದ ಕಮಿಷನರ್ ಅವರಿಗೆ ಬಂದಿದ್ದು ಈ ಬಗ್ಗೆ ಬುಧವಾರ ಶಾಸಕರು ಕಮಿಷನರ್ ಜೊತೆ ಸಭೆ ನಡೆಸಿ ಬೇಡಿಕೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿದ್ದಾರೆ.
ಯುವಕ, ಯುವತಿಯರಿಗಾಗಿ ಜಿಮ್ ಕೇಂದ್ರ
ಪುತ್ತೂರು ನಗರದಲ್ಲಿ ಮಾತ್ರ ಜಿಮ್ ಕೇಂದ್ರ ಇದ್ದು ಗ್ರಾಮಾಂತರ ಭಾಗದ ಯುವಕರಿಗೆ ಸಮಯಕ್ಕೆ ಸರಿಯಾಗಿ ಜಿಮ್ ಕೇಂದ್ರಕ್ಕಲೆ ಬರಲು ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಜಿಮ್ ಕೇಂದ್ರ ಪ್ರಾರಂಭ ಮಾಡಿದ್ದಲ್ಲಿ ಯುವಕರು ಇದನ್ನು ಬಳಕೆ ಮಾಡುತ್ತಾರೆ. ಕ್ಷೇತ್ರ ವ್ಯಾಪ್ತಿಯ ಆಯ್ದ ಮೂರು ಕಡೆಗಳಲ್ಲಿ ಈ ಕೇಂದ್ರ ಸ್ಥಾಪನೆಯಾಗಲಿದೆ.
ಕ್ರೀಡಾಂಗಣಕ್ಕೆ ಅನುದಾನ ಬಿಡುಗಡೆಗೆ ಮನವಿ
ಮುಂಡೂರು ಗ್ರಾಮದಲ್ಲಿ ನಿರ್ಮಾಣವಾಗಲಿರುವ ತಾಲೂಕು ಕ್ರೀಂಡಾAಗಣ ಸಮತಟ್ಟು ಮಾಡಲು ೮ ಕೋಟಿ ಅನುದಾನ ಬೇಕಾಗಿದ್ದು ಈ ಅನುದಾನವನ್ನು ಬಿಡುಗಡೆ ಮಾಡುವಂತೆ ಯುವಜನ ಕ್ರೀಡೆ ಮತ್ತು ಯುವ ಸಬಲಿಕರಣ ಇಲಾಖೆ ಸರಕಾರಿ ಕಾರ್ಯದರ್ಶಿ ರಣದೀಪ್ ಮತ್ತು ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಯ ಆಯುಕ್ತರಾದ ಚೇತನ್ ಅವಬರಿಗೆ ಶಾಸಕರು ಮನವಿ ಮಾಡಿದ್ದಾರೆ. ಮುಂಡೂರು ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬೃಹತ್ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಒಂದು ಹಂತದ ಕಾಮಗಾರಿ ಮುಗಿದಿದೆ, ಎರಡನೇ ಹಂತ ಸಮತಟ್ಟು ಕಾಮಗಾರಿಗೆ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ ಎಂದು Pಅಧಿಕಾರಿಗಳು ಭರವಸೆ ನೀಡಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಕೇಂದ್ರ ನಿರ್ಮಾಣವಾಗಲಿದೆ. ಈ ಕೇಂದ್ರದಲ್ಲಿ ಜಿಮ್ ಗೆ ಬೇಕಾದ ಎಲ್ಲಾ ಅಗತ್ಯ ಪರಿಕರಗಳು ಇರಲಿದೆ. ಗ್ರಾಮೀಣ ಯುವಕರನ್ನು ಲಕ್ಷö್ಯವಾಗಿಟ್ಟುಕೊಂಡು ಈ ಕೇಂದ್ರವನ್ನು ತೆರೆಯಲಾಗುತ್ತದೆ. ಫಿಟ್‌ನೆಸ್ ಕಡೆ ಯುವಕರು ಹೆಚ್ಚಿನ ಒಲವು ತೋರುತ್ತಿದ್ದು ಅವರಿಗೆ ವ್ಯವಸ್ಥೆ ಮಾಡಿಕೊಡಬೇಕಾಗಿದ್ದು ಸರಕಾರದ ಒಂದು ಭಾಗ ಎಂದು ಯುವಕರ ಮನವಿಗೆ ಸ್ಪಂದನೆ ನೀಡುವ ಕೆಲಸವನ್ನು ಮಾಡಲಿದ್ದೇವೆ, ಪುತ್ತೂರು ತಾಲೂಕು ಕ್ರೀಡಾಂಗಣಕ್ಕೆ ಶೀಘ್ರವೇ ೮ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಅನುದಾನ ತಕ್ಷಣ ಬಿಡುಗಡೆಯಾಗಲಿದೆ.-ಅಶೋಕ್ ರೈ, ಶಾಸಕರು ಪುತ್ತೂರು
ಸ್ಥಳೀಯ
Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.
ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.
ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
-
Uncategorized37 minutes ago
ಪುತ್ತೂರು : ಅಡಿಕೆ ತೆಗೆಯುವಾಗ ಕಂಗಿನಿಂದ ಬಿದ್ದು ಗಂಭೀರ ಗಾಯ: ಚಿಕಿತ್ಸೆಗೆ ₹8 ಲಕ್ಷದ ಅಗತ್ಯ; ದಾನಿಗಳ ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ
-
Uncategorized7 hours ago
ಕಾರ್ಯಕರ್ತರ ಶ್ರಮದಲ್ಲಿ ನೆಲಪ್ಪಾಲು ವೀರಾಂಜನೇಯ ಕ್ಷೇತ್ರ ನಿರ್ಮಾಣ: ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಶ್ರೀ ಪಂಚಮುಖಿ ಆಂಜನೇಯ ಯಾಗದ ಅಂಗವಾಗಿ ಧರ್ಮಸಭೆ
-
Uncategorized23 minutes ago
ಗ್ರಾಮೀಣ ವಿದ್ಯಾರ್ಥಿಗಳಿಗೆ ಮಡಿಯಾಲದಲ್ಲಿ ಉಚಿತ ಎಐ ಪದವಿ ಶಿಕ್ಷಣ ಕೇಂದ್ರ; ನ. 30ರಂದು ನಾರಾಯಣ ಭಟ್ ಜನ್ಮಶತಾಬ್ದಿ ಸ್ಮರಣಾರ್ಥ ಭೂಮಿಪೂಜೆ; 2027–28ರಿಂದ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಯೋಜನೆ















