ಅಪರಾಧ
Trump-ದೋಸ್ತಾ ಅನ್ನುತ್ತಾ ಭಾರತಕ್ಕೆ ದ್ರೋಹ ಬಗೆಯುತ್ತಿರುವ ಟ್ರಂಪ್..! ಭಾರತದಲ್ಲಿ ಐಫೋನ್ ಉತ್ಪಾದನೆ ಬೇಡ ಅವರದನ್ನು ಅವರು ನೋಡಿಕೊಳ್ಳಲಿ, ನೀವು ಅಮೇರಿಕಾದಲ್ಲೇ ಹೆಚ್ಚಿಸಿ : Apple CEO ಗೆ ಟ್ರಂಪ್ ಸೂಚನೆ
ಆಪಲ್ ಕಂಪೆನಿಯ ಸಿಇಒ ಟಿಮ್ ಕುಕ್‌ಗೆ, ಭಾರತದಲ್ಲಿ ಐಫೋನ್ ಉತ್ಪಾದನೆಯನ್ನು ನಿಲ್ಲಿಸಿ, ಬದಲಿಗೆ ಅಮೆರಿಕದಲ್ಲಿ ಉತ್ಪಾದನೆಯನ್ನು ವಿಸ್ತರಿಸುವಂತೆ ಟ್ರಂಪ್ ಸೂಚಿಸಿದ್ದಾರೆ. ಈ ಹೇಳಿಕೆಯನ್ನು ಕತಾರ್‌ನ ದೋಹಾದಲ್ಲಿ ನಡೆದ ಬಿಸಿನೆಸ್ ಲೀಡರ್ಸ್ ಕಾರ್ಯಕ್ರಮದಲ್ಲಿ ಟ್ರಂಪ್ ಬಹಿರಂಗಪಡಿಸಿದ್ದಾರೆ.
ಬೆಂಗಳೂರು, ಮೇ 16: ಭಾರತದಲ್ಲಿ ತನ್ನ ಉತ್ಪಾದನೆಯನ್ನು ಹೆಚ್ಚಿಸಿರುವ ಹಾಗೂ ಚೀನಾದಲ್ಲಿದ ಕೈಗಾರಿಗಳನ್ನು ಭಾರತಕ್ಕೆ ಶಿಫ್ಟ್ ಮಾಡುವ ಯೋಚನೆಯಲ್ಲಿರುವ ಆಪಲ್ ಕಂಪನಿಗೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತ ನೀಡಿದ್ದಾರೆ. ಆಪಲ್‌ನ ಸಿಇಒ ಟಿಮ್ ಕುಕ್‌ಗೆ, ಭಾರತದಲ್ಲಿ ಐಫೋನ್ ಉತ್ಪಾದನೆಯನ್ನು ನಿಲ್ಲಿಸಿ, ಬದಲಿಗೆ ಅಮೆರಿಕದಲ್ಲಿ ಉತ್ಪಾದನೆಯನ್ನು ವಿಸ್ತರಿಸುವಂತೆ ಟ್ರಂಪ್ ಸೂಚಿಸಿದ್ದಾರೆ.
ಈ ಹೇಳಿಕೆಯನ್ನು ಕತಾರ್‌ನ ದೋಹಾದಲ್ಲಿ ನಡೆದ ಬಿಸಿನೆಸ್ ಲೀಡರ್ಸ್ ಕಾರ್ಯಕ್ರಮದಲ್ಲಿ ಟ್ರಂಪ್ ಬಹಿರಂಗಪಡಿಸಿದ್ದಾರೆ.
ಆಪಲ್ ಕಂಪನಿಯು ಚೀನಾದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಭಾರತದಲ್ಲಿ ತನ್ನ ಉತ್ಪಾದನಾ ಘಟಕಗಳನ್ನು ವಿಸ್ತರಿಸುತ್ತಿದೆ. ಪ್ರಸ್ತುತ, ಅಮೆರಿಕದಲ್ಲಿ ಮಾರಾಟವಾಗುವ 50% ಐಫೋನ್‌ಗಳನ್ನು ಭಾರತದಲ್ಲಿ ತಯಾರಿಸಲಾಗುತ್ತಿದೆ. 2026ರ ವೇಳೆಗೆ ಭಾರತದಲ್ಲಿ ವಾರ್ಷಿಕವಾಗಿ 6 ಕೋಟಿಗೂ ಹೆಚ್ಚು ಐಫೋನ್‌ಗಳ ಉತ್ಪಾದನೆಯ ಗುರಿಯನ್ನು ಆಪಲ್ ಹೊಂದಿದೆ. ಆದರೆ, ಟ್ರಂಪ್ ಈ ಯೋಜನೆಗೆ ತಡೆಯೊಡ್ಡಿದ್ದಾರೆ. “ನಾನು ಆಪಲ್‌ನ ಉತ್ಪನ್ನಗಳನ್ನು ಭಾರತದಲ್ಲಿ ತಯಾರಿಸುವುದನ್ನು ಬಯಸುವುದಿಲ್ಲ. ನೀವು ಅಮೆರಿಕದಲ್ಲಿಯೇ ಉತ್ಪಾದನೆಯನ್ನು ಹೆಚ್ಚಿಸಬೇಕು. ಭಾರತವು ತನ್ನನ್ನು ತಾನು ನೋಡಿಕೊಳ್ಳಬಲ್ಲದು” ಎಂದು ಟ್ರಂಪ್ ಟಿಮ್ ಕುಕ್‌ಗೆ ತಿಳಿಸಿದ್ದಾರೆ.
ಟ್ರಂಪ್ ಅವರು ಭಾರತದಿಂದ ಯಾವುದೇ ತೆರಿಗೆಯನ್ನು ತೆಗೆದುಕೊಳ್ಳಲು ಸಿದ್ಧವಿರುವುದಾಗಿಯೂ ಹೇಳಿದ್ದಾರೆ, ಆದರೆ ಆಪಲ್‌ನ ಉತ್ಪಾದನೆಯನ್ನು ಅಮೆರಿಕಕ್ಕೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಹೇಳಿಕೆಯು ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಸಂಬಂಧಗಳ ಕುರಿತು ಚರ್ಚೆಗೆ ಕಾರಣವಾಗಿದೆ. ಟ್ರಂಪ್‌ರ ಈ ನಿಲುವು ಆಪಲ್‌ನ ಭಾರತದ ಯೋಜನೆಗಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ.
ಆಪಲ್ ಸಿಇಒಗೆ ಟ್ರಂಪ್ ಸಲಹೆ
“ಟಿಮ್, ನೀವು ನನ್ನ ಸ್ನೇಹಿತರು. ನಾನು ನಿಮ್ಮೊಂದಿಗೆ ಉತ್ತಮವಾಗಿ ವ್ಯವಹರಿಸಿದ್ದೇನೆ. ನೀವು 500 ಬಿಲಿಯನ್ ಡಾಲರ್ ತರುತ್ತಿದ್ದೀರಿ. ಆದರೆ ನೀವು ಭಾರತದಲ್ಲಿ ಉತ್ಪಾದನೆ ಮಾಡುತ್ತಿರುವುದು ನನಗೆ ಇಷ್ಟವಿಲ್ಲ. ನೀವು ಭಾರತದ ಬಗ್ಗೆ ಕಾಳಜಿ ವಹಿಸಲು ಬಯಸಿದರೆ, ಅಲ್ಲಿ ಉತ್ಪಾದನೆ ಮಾಡಬಹುದು. ಆದರೆ ಅಮೆರಿಕದಲ್ಲಿ ಉತ್ಪಾದನೆ ಮಾಡುವುದು ಮುಖ್ಯ” ಎಂದು ಟ್ರಂಪ್ ಹೇಳಿದ್ದಾರೆ.
“ಭಾರತವು ವಿಶ್ವದಲ್ಲೇ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಒಂದಾಗಿದೆ. ಅಲ್ಲಿ ಮಾರಾಟ ಮಾಡುವುದು ಕಷ್ಟ. ಆದರೆ ಅವರು ನಮಗೆ ಯಾವುದೇ ತೆರಿಗೆ ವಿಧಿಸದಿರಲು ಒಪ್ಪಿಕೊಂಡಿದ್ದಾರೆ” ಎಂದು ಟ್ರಂಪ್ ತಿಳಿಸಿದ್ದಾರೆ.
ಟಿಮ್ ಕುಕ್ ಅವರು ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಅಮೆರಿಕದಲ್ಲಿ ಮಾರಾಟವಾಗುವ 50% ಐಫೋನ್‌ಗಳು ಭಾರತದಲ್ಲಿ ತಯಾರಾಗುತ್ತಿವೆ ಎಂದು ಹೇಳಿದ್ದರು. ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತವು ಅಮೆರಿಕದಲ್ಲಿ ಮಾರಾಟವಾಗುವ ಐಫೋನ್‌ಗಳ ಮೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಏರ್‌ಪಾಡ್ಸ್ ಮತ್ತು ಆಪಲ್ ವಾಚ್‌ನಂತಹ ಇತರ ಉತ್ಪನ್ನಗಳನ್ನು ಸಹ ವಿಯೆಟ್ನಾಂನಲ್ಲಿ ತಯಾರಿಸಲಾಗುತ್ತಿದೆ.
ಪ್ರಸ್ತುತ, ಐಫೋನ್ ಉತ್ಪಾದನೆಯಲ್ಲಿ ಚೀನಾ ಪ್ರಾಬಲ್ಯ ಹೊಂದಿದೆ. IDC ಪ್ರಕಾರ, 2024ರಲ್ಲಿ ಜಾಗತಿಕ ಐಫೋನ್ ಸಾಗಣೆಯಲ್ಲಿ ಚೀನಾದ ಪಾಲು ಸುಮಾರು 28% ಆಗಿತ್ತು.
ಭಾರತದಲ್ಲಿ ಹೆಚ್ಚಿರುವ ಐಫೋನ್ ಉತ್ಪಾದನೆ
ಮಾರ್ಚ್ 2024 ರಿಂದ ಮಾರ್ಚ್ 2025 ರವರೆಗೆ, ಆಪಲ್ ಭಾರತದಲ್ಲಿ 22 ಬಿಲಿಯನ್ ಡಾಲರ್ (ಸುಮಾರು ₹1.88 ಲಕ್ಷ ಕೋಟಿ) ಮೌಲ್ಯದ ಐಫೋನ್‌ಗಳನ್ನು ತಯಾರಿಸಿದೆ. ಇದು ಕಳೆದ ವರ್ಷಕ್ಕಿಂತ 60% ಹೆಚ್ಚಾಗಿದೆ. ಈ ಅವಧಿಯಲ್ಲಿ, ಆಪಲ್ ಭಾರತದಿಂದ 17.4 ಬಿಲಿಯನ್ ಡಾಲರ್ (ಸುಮಾರು ₹1.49 ಲಕ್ಷ ಕೋಟಿ) ಮೌಲ್ಯದ ಐಫೋನ್‌ಗಳನ್ನು ರಫ್ತು ಮಾಡಿದೆ. ಪ್ರಸ್ತುತ, ಜಗತ್ತಿನಲ್ಲಿ ಪ್ರತಿ 5 ಐಫೋನ್‌ಗಳಲ್ಲಿ ಒಂದು ಭಾರತದಲ್ಲಿ ತಯಾರಾಗುತ್ತಿದೆ.
ಭಾರತದಲ್ಲಿ ಐಫೋನ್‌ಗಳನ್ನು ತಮಿಳುನಾಡು ಮತ್ತು ಕರ್ನಾಟಕದ ಕಾರ್ಖಾನೆಗಳಲ್ಲಿ ತಯಾರಿಸಲಾಗುತ್ತಿದೆ. ಫಾಕ್ಸ್‌ಕಾನ್ ಅತಿ ಹೆಚ್ಚು ಉತ್ಪಾದನೆ ಮಾಡುತ್ತದೆ. ಫಾಕ್ಸ್‌ಕಾನ್ ಆಪಲ್‌ನ ನ ಅತಿದೊಡ್ಡ ಉತ್ಪಾದನಾ ಪಾಲುದಾರನಾಗಿದೆ. ಇದರ ಜೊತೆಗೆ ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಪೆಗಾಟ್ರಾನ್ ಸಹ ಉತ್ಪಾದನೆಯಲ್ಲಿ ತೊಡಗಿವೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.
ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:
- ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್‌ಗಳು.
- ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್‌ನ 30 ಕ್ಯಾನ್‌ಗಳು.
- ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್‌ಗಳು.
- ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ















