ಬಿಗ್ ನ್ಯೂಸ್
ಪುತ್ತೂರು ನಗರದಲ್ಲೂ ʼಬೆಳಗಾವಿ ಮಾದರಿʼ ಗುತ್ತಿಗೆ …! ಕೋಟಿ ವೆಚ್ಚದಲ್ಲಿ ಅಗಲೀಕರಣಗೊಂಡು ಲೋಕಾರ್ಪಣೆಗೊಂಡ ಬಳಿಕ ಈ ರಸ್ತೆಯಲ್ಲಿ ಸಾಹಸ ಕ್ರೀಡೆಯಾಗಿ ಬದಲಾಗಿರುವ ವಾಹನ ಚಾಲನೆ | ಈ ರಸ್ತೆಯನ್ನು ನಿರ್ಮಿಸಿರುವುದು ʼನಾವಲ್ಲ, ನಾವಲ್ಲʼ ಎನ್ನುತ್ತಿರುವ ಪಿಡಬ್ಲ್ಯುಡಿ ಹಾಗೂ ನಗರ ಸಭೆ
ಪುತ್ತೂರಿನ ಹೃದಯಭಾಗದಲ್ಲಿ ಕೋಟಿ ರೂ. ವೆಚ್ಚದಲ್ಲಿ ಅಗಲೀಕರಣಗೊಂಡ ರಸ್ತೆಯೊಂದು ಎರಡು ವಾರಗಳ ಹಿಂದೆ ಲೋಕರ್ಪಾಣೆಗೊಂಡಿದ್ದು ಇದೀಗ ವಿವಾದದ ಕೇಂದ್ರ ಬಿಂದುವಾಗಿದೆ. ಪುತ್ತೂರು ನಗರ ಸಭೆ ವ್ಯಾಪ್ತಿಯ ನೆಹರು ನಗರ ಸಮೀಪದ ಮಂಜಲ್ಪಡ್ಪುವಿನಿಂದ ಪುತ್ತೂರು ಪೇಟೆಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ರಸ್ತೆಯನ್ನು ಅಗಲೀಕರಣಗೊಂಡ ಬಗ್ಗೆ ಏ. 10 ರಂದು ಸಂಜೆ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ನಗರ ಸಭೆ ಅಧ್ಯಕ್ಷ ಜೀವಂಧರ್ ಜೈನ್ ರವರ ಸಮ್ಮುಖ ಈ ರಸ್ತೆ ಲೋಕಾರ್ಪಣೆಗೊಂಡಿತ್ತು.
ಅನುದಾನ ಹಂಚಿಕೆಯ ಮಾಹಿತಿ :
ಅದಕ್ಕೂ ವಾರ ಮುಂಚೆ ( ಏ 5) ಈ ಕಾಮಾಗರಿಯ ಪ್ರಗತಿ ವೀಕ್ಷಣೆ ಮಾಡಿದ ಶಾಸಕ ಸಂಜೀವ ಮಠಂದೂರು ರವರು ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿ “ನಗರಸಭೆಯಿಂದ ರೂ. 18 ಲಕ್ಷ ಮತ್ತು ಲೋಕೋಪಯೋಗಿ ಇಲಾಖೆಯಿಂದ ರೂ. 1 ಕೋಟಿ ವೆಚ್ಚದಲ್ಲಿ ಮಂಜಲ್ಪಡ್ಪು ಕಿರಿದಾದ ತಿರುವು ರಸ್ತೆಯನ್ನು ಅಗಲೀಕರಣಗೊಳಿಸಿ ಚತುಷ್ಪತ ರಸ್ತೆ ಮಾಡುವ ಮೂಲಕ ವಾಹನ ಸವಾರರಿಗೆ ಪ್ರಯಾಣ ಮಾಡಲು ಅನುಕೂಲ ಮಾಡಲಾಗುತ್ತಿದೆ ಎಂದು ತಿಳಿಸಿದ್ದು, ಈ ಮೂಲಕ ಕಾಮಗಾರಿಗೆ ಅನುದಾನ ಹಂಚಿಕೆಯಾಗಿರುವ ವಿವರ ನೀಡಿದ್ದರು. ಅಲ್ಲದೇ ಮುಂದುವರಿದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಶುಭ ಸಂದರ್ಭದಲ್ಲಿ ರಸ್ತೆ ಮತ್ತು ಸೇತುವೆ ಲೋಕಾರ್ಪಣೆಯನ್ನು ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಮಾಡಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದರು. ಅಲ್ಲದೇ ಈ ಮಾಹಿತಿಯನ್ನು ಅವರು ತಮ್ಮ ಪೇಸ್ ಬುಕ್ ಪೇಜಿನಲ್ಲೂ ಹಾಕಿದ್ದರು.

ವಾಹನ ಸಂಚಾರ ದುಸ್ತರ :
ಆದರೇ ಆ ರಸ್ತೆ ಏ.10 ರಂದು ಲೋಕಾರ್ಪಣೆಗೊಂಡ ಬಳಿಕ ಈ ರಸ್ತೆ ಸಂಚಾರ ವಾಹನ ಸಂಚಾರರಿಗೆ ದುಸ್ತರವಾಗಿ ಪರಿಣಮಿಸಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರ ಪಾಡಂತು ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಉಧ್ಘಾಟನೆಗೊಂಡ ಬಳಿಕ ಈ ರಸ್ತೆಯಲ್ಲಿ ಪ್ರಯಾಣಿಸಿದ ಹಲವು ದ್ವಿಚಕ್ರ ಸವಾರರು ಸ್ಕಿಡ್ ಅಗಿ ಉರುಳಿಬಿದ್ದಿದ್ದು, ಕೈ ಕಾಲುಗಳಿಗೆ ಗಾಯ ಮಾಡಿಕೊಂಡಿದ್ದಾರೆ. ದ್ವಿ ಚಕ್ರ ವಾಹನ ಸವಾರಿಯ ವೇಳೆ ಕುದುರೆಯಲ್ಲಿ ಕೂತು ಪ್ರಯಾಣಿಸಿದಂತೆ ವಾಹನವು ಈ ರಸ್ತೆಯಲ್ಲಿ ನೆಗೆಯಲು ಪ್ರಾರಂಭಿಸುತ್ತದೆ ಎನ್ನುತ್ತಾರೆ ಹಲವು ದ್ವಿಚಕ್ರ ಸವಾರರು.

ಇನ್ನು ಈ ರಸ್ತೆ ಉಧ್ಗಾಟನೆಗೊಂಡ ಬಳಿಕವು ಕಾಮಾಗಾರಿ ಮುಂದುವರಿಯುತ್ತಿರುವುದು ಸಾರ್ವಜನಿಕರ ಅಚ್ಚರಿಗೆ ಕಾರಣವಾಗಿದೆ. ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಅತುರಾತುರವಾಗಿ ರಸ್ತೆಯನ್ನು ಉಧ್ಘಾಟನೆ ಮಾಡಲಾಗಿದೆ. ಇದರಿಂದಲೇ ರಸ್ತೆ ಕಾಮಾಗಾರಿ ಸಮರ್ಪಕವಾಗಿ ಆಗದೇ ವಾಹನ ಸವಾರರಿಗೆ ತೊಂದರೆಯಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ನಾಗರೀಕರಿಂದ ಇಲಾಖೆಗಳಿಗೆ ದೂರು :
ಆದರೇ ಈ ಮಧ್ಯೆ ಪುತ್ತೂರು ನಗರದ ನಾಗರೀಕರಾದ ನಿವೃತ್ತ ಬ್ಯಾಂಕ್ ಉದ್ಯೋಗಿ ಕೆ. ಅರ್ ಶಾನುಭೋಗ್ ರವರು ರಸ್ತೆ ಕಾಮಾಗಾರಿ ಸಮರ್ಪಕವಾಗಿಲ್ಲ. ದ್ವಿ ಚಕ್ರ ವಾಹನ ಸವಾರಿಯ ವೇಳೆ ಜಂಪ್ ನ ಅನುಭವವಾಗುತ್ತಿದೆ ಎಂದು ದೂರಿ ಪುತ್ತೂರು ನಗರ ಸಭೆ ಆಯುಕ್ತರಾದ ಮಧು ಎಸ್ ಅವರಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದರು, ಅದಕ್ಕೆ ಪ್ರತಿಕ್ರಿಯಿಸಿರುವ ನಗರಸಭೆ ಆಯುಕ್ತರು “ಈ ರಸ್ತೆ ಕಾಮಗಾರಿಯನ್ನು ನಗರ ಸಭೆ ಮಾಡಿಲ್ಲ. ಕಾಮಾಗಾರಿಯ ಜವಬ್ದಾರಿ ಲೊಕೋಪಯೋಗಿ ಇಲಾಖೆಯದು” ಎಂಬ ಮಾಹಿತಿ ಒದಗಿಸಿದ್ದಾರೆ.

ಇದೇ ದೂರನ್ನು ಶಾನುಬೋಗ್ ಅವರು ಲೊಕೋಪಯೋಗಿ ಇಲಾಖೆಯ ಎಇಇಯವರಿಗೆ ಇಮೇಲ್ ಮೂಲಕ ಪಾರ್ವರ್ಡ್ ಮಾಡಿದ್ದು ಅದಕ್ಕೆ ಅಸ್ಟಿಟೆಂಟ್ ಎಕ್ಸುಕ್ಯುಟೀವ್ ಇಂಜೀನಿಯರ್ ರವರು ಉತ್ತರಿಸಿದ್ದು ಅದರಲ್ಲಿ “ ಈ ರಸ್ತೆ ಕಾಮಗಾರಿಯನ್ನು ಪಿಡಬ್ಲ್ಯುಡಿ ಇಲಾಖೆಯು ನಿರ್ವಹಿಸಿಲ್ಲ. ಚರಂಡಿಯ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣದ ಕಾಮಗಾರಿಯನ್ನಷ್ಟೇ ಲೊಕೊಪಯೋಗಿ ಇಲಾಖೆ ಮಾಡಿದೆ. ಇನ್ನು ರಸ್ತೆ ನಿರ್ಮಾಣ ಕಾಮಗಾರಿಯ ವ್ಯಾಪ್ತಿಯು ನಗರ ಸಭೆ ವ್ಯಾಪ್ತಿಗೆ ಒಳಪಟ್ಟಿದ್ದು, ನಿಮ್ಮ ಯಾವುದೇ ಕುಂದು ಕೊರತೆಗಳಿದ್ದರು ಅಲ್ಲಿ ಬಗೆ ಹರಿಸಿಕೊಳ್ಳಿ “ ಎಂದು ತಿಳಿಸಿರುತ್ತಾರೆ.

ನಗರಸಭೆ ಅಧ್ಯಕ್ಷರು ಏನು ಹೇಳುತ್ತಾರೆ ?
ಈ ಬಗ್ಗೆ ನಿಖರ ನ್ಯೂಸ್ ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರಲ್ಲಿ ಪ್ರಶ್ನಿಸಿದಾಗ “ ಕಳೆದ ಹಲವು ವರ್ಷಗಳಿಂದ ರಸ್ತೆಯ ಅಗಲೀಕರಣಕ್ಕೆ ಸಾರ್ವಜನಿಕರಿಂದ ಬೇಡಿಕೆಯಿತ್ತು. ಹೀಗಾಗಿ ನನ್ನ ನೇತ್ರತ್ವದಲ್ಲಿ ಪುತ್ತೂರು ನಗರ ಸಭೆಯು ಸ್ಥಳೀಯ ಭೂಮಾಲಿಕರಲ್ಲಿ ವಿನಂತಿಸಿಕೊಂಡ ಹಿನ್ನಲೆಯಲ್ಲಿ ರಸ್ತೆ ಅಗಲೀಕರಣಕ್ಕೆ ಅಗತ್ಯವಾಗಿದ್ದ 6 ಮೀ ಉದ್ದ ಭೂಮಿಯನ್ನು ಸ್ವ ಇಚ್ಚೆಯಿಂದ ಬಿಟ್ಟುಕೊಟ್ಟಿದ್ದಾರೆ . ಹಾಗಾಗಿ ರಸ್ತೆ ಅಗಲೀಕರಣಗೊಳಿಸುವ ಬಗ್ಗೆ ನಗರಸಭೆಯಲ್ಲಿ ನಿರ್ಣಯ ಕೈಗೊಂಡು ಪುತ್ತೂರು ನಗರಸಭೆಗೆ ಸೇರಿದ 18 ಲ.ರೂ ಹಣವನ್ನು ಪಿಡಬ್ಲ್ಯುಡಿಗ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇವೆ . ಜಿಲ್ಲಾಧಿಕಾರಿಗಳ ಸಹಿಯಾಗಿ ಪಿಡಬ್ಲ್ಯುಡಿಯ ಖಾತೆಗೆ ಹಣ ಡೆಪಾಸಿಟ್ ಮಾಡುವ ಪ್ರಕ್ರಿಯೆ ಇನ್ನಷ್ಟೇ ಆಗಬೇಕಿದ್ದು, ಅದು ಕೆಲ ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಇನ್ನು ಪೂರ್ಣ ಕಾಮಾಗಾರಿಯ ನಿರ್ವಹಣೆಯ ಹೊಣೆ ಪಿಡಬ್ಲ್ಯುಡಿಯವರದೇ, ಕೇವಲ 18 ಲ. ರೂ ಹಣ ಮಾತ್ರ ನಗರಸಭೆ ನೀಡುತ್ತದೆ. ಉಳಿದ ಕಾಮಗಾರಿಗೆ ಅಗತ್ಯವಾದ 1 ಕೋಟಿ ರೂ ಅನುದಾನ ಪಿಡಬ್ಲ್ಯುಡಿ ಇಲಾಖೆಯ ಭರಿಸಿ ಕಾಮಾಗಾರಿ ಪೂರ್ನ ಗೊಳಿಸಬೇಕು ಎಂದು ವಿವರಿಸಿದರು.
ಕಾಮಗಾರಿ ಭಾಗಶ: ಪೂರ್ಣಗೊಂಡಿದ್ದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅದರ ವೇಗಕ್ಕೆ ಒಂದಷ್ಟು ಅಡ್ಡಿಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಜೈನ್ ತಿಳಿಸಿದರು.
ವರ್ಕ್ ಅರ್ಡರ್ʼಗೂ ಮುಂಚೆ ಕಾಮಗಾರಿ ?
ಇನ್ನು ಪಿಡಬ್ಲ್ಯುಡಿ ಮೂಲಗಳ ಪ್ರಕಾರ ರಸ್ತೆ ಕಾಮಗಾರಿಗೆ ಬೇಕಾದ ಒಂದು ಕೋಟಿ ರೂ ಅನುದಾನ ಮಂಜೂರುಗೊಂಡಿಲ್ಲ. ನಗರ ಸಭೆಯಿಂದ ಬರಬೇಕಿದ್ದ 18 ಲ.ರೂ ಹಣವು ಡೆಪಾಸಿಟ್ ಆಗಿ . ಹಾಗಾಗಿ ಕಾಮಾಗಾರಿ ನಡೆಸಲು ಗುತ್ತಿಗೆದಾರರಿಗೆ ನೀಡಬೇಕಾದ ವರ್ಕ್ ಅರ್ಡರ್ ನ್ನು ಲೊಕೋಪಯೋಗಿ ಇಲಾಖೆಯು ಇನ್ನು ಗುತ್ತಿಗೆದಾರರಿಗೆ ನೀಡಿಲ್ಲ ಎನ್ನಲಾಗಿದೆ.
ಹಾಗಾದರೇ ಈ ಕೋಟಿ ವೆಚ್ಚದ ರಸ್ತೆಯನ್ನು ನಿರ್ಮಿಸಿದ್ದು ಯಾರು ? ಗುತ್ತಿಗೆ ನೀಡಿದ್ದು ಯಾರು? ಎನ್ನುವ ಪ್ರಶ್ನೆ ಇದೀಗ ಉಧ್ಬವವಾಗಿದೆ. ಇತ್ತೀಚೆಗೆ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡು ರಾಜಾದ್ಯಂತ ಸುದ್ದಿಯಾಗಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲೂ 40% ಕಮೀಷನ್ ನ ಜತೆಗೆ ಇದೆ ರೀತಿಯ ಆರೋಪವು ಕೇಳಿ ಬಂದಿತ್ತು. ಸಂಬಂಧಪಟ್ಟ ಇಲಾಖೆಯಿಂದ ವರ್ಕ್ ಅರ್ಡರ್ ಸಿಗುವ ಮೊದಲೆ ʼದೊಡ್ಡವರʼ ಬಾಯ್ದೆರೆಯ ಭರವಸೆಯ ಮೇರೆಗೆ ರಸ್ತೆ ಕಾಮಗಾರಿಯನ್ನು ಗುತ್ತಿಗೆದಾರ ಪಾಟೀಲ್ ನಡೆಸಿದ್ದರು ಎನ್ನಲಾಗುತ್ತಿದೆ. ಹಾಗಾಗಿ ಬಳಿಕ ಅದರ ಬಿಲ್ ಪಾವತಿಗೆ ಸಮಸ್ಯೆಯಾಗಿ ಅವರು ಆತ್ಮಹತ್ಯೆ ಮಾಡಿಕೊಂಡರು ಎನ್ನುವುದು ಬೆಳಗಾವಿ ಪ್ರಕರಣದ ಒಟ್ಟಾರೆ ತಿರುಳು.
ಇಲ್ಲಿಯೂ ಕೂಡ ಗುತ್ತಿಗೆಯನ್ನು ಬಾಯ್ದೆರೆಯ ಅಧಾರದಲ್ಲಿ ನಿರ್ವಹಿಸಲಾಗಿದೆಯೇ ಎನ್ನುವ ಅನುಮಾನ ಸಾರ್ವಜನಿಕರದು. ಯಾರೋ ʼದೊಡ್ಡವರʼ ಚಿತಾವಣೆಗೆ ಒಳಗಾಗಿ ಗುತ್ತಿಗೆದಾರರು ರಸ್ತೆ ನಿರ್ಮಿಸಿದ್ದಾರೆಯೇ ಎಂಬ ಅನುಮಾನ ಪಿಡಬ್ಲ್ಯುಡಿ ಎಇಇ ಹಾಗೂ ನಗರಸಭೆ ಆಯುಕ್ತರ ರಿಪ್ಲೈಯಿಂದ ಸೃಷ್ಟಿಯಾಗಿದೆ.
40% ಕಮೀಷನ್ …!
ಇನ್ನು ಸಾಮಾಜಿಕ ಕಾರ್ಯಕರ್ತ ಯುವರಾಜ್ ಪ್ರಕಾರ “ ಈ ರಸ್ತೆ ನಿರ್ಮಾಣಕ್ಕೆ 1.18 ಕೋಟಿ ವೆಚ್ಚ ತಗುಲಿದೆ ಎನ್ನುವುದು ಭಾರೀ ಸಂಶಯಕ್ಕೆ ಕಾರಣವಾಗಿದೆ. ರಸ್ತೆ ಕಾಮಗಾರಿಯೂ ಮೇಲ್ನೋಟಕ್ಕೆ ಕಳಪೆಯಂತೆ ಕಾಣಿಸುತ್ತದೆ. ಹಾಗಾಗಿ ಇಲ್ಲೂ 40% ಕಮೀಷನ್ ವ್ಯವಹಾರ ನಡೆದಿದೆ ಎಂಬ ಅನುಮಾನ ಕಾಡಿದೆ. ಬೆಳಗಾವಿ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದ ಬಳಿಕ 25 ಲ.ರೂ ಗಿಂತ ಮೇಲ್ಪಟ್ಟ ಕಾಮಾಗಾರಿಗಳ ಪರಿಶೀಲನೆಗೆ ಹೊಸ ಟಾಸ್ಕ್ ಪೊರ್ಸ್ ರಚಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿಯವರು ಹೇಳಿದ್ದು ಈ ರಸ್ತೆ ಕಾಮಗಾರಿ ಬಗ್ಗೆಯೂ ಆ ಟಾಸ್ಕ್ ಪೋರ್ಸ್ ತನಿಖೆ ಮಾಡಬೇಕು ಎಂದು ಅವರು ಅಗ್ರಹಿಸಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
-
ಅಪರಾಧ18 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ18 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ23 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್17 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ23 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ23 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ24 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ23 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು















