ದಕ್ಷಿಣ ಕನ್ನಡ
Dharmasthala Akanksha Death cover-up allegations ಆಕಾಂಕ್ಷಾ ನಿಗೂಢ ಸಾವು: ನ್ಯಾಯಕ್ಕಾಗಿ ಪೋಷಕರ ಆರ್ತನಾದ, ಪಂಜಾಬ್ ಪೊಲೀಸರ ವಿರುದ್ಧ ಸತ್ಯ ಮುಚ್ಚಿಡುವ ಗಂಭೀರ ಆರೋಪ!

ಯುವ ಇಂಜಿನಿಯರ್ ಆಕಾಂಕ್ಷಾಳ ನಿಗೂಢ ಸಾವು; ಪಂಜಾಬ್ ಪೊಲೀಸರು ಸತ್ಯ ಮುಚ್ಚಿಡುತ್ತಿದ್ದಾರೆಂದು ಕುಟುಂಬದ ಗಂಭೀರ ಆರೋಪ, ನ್ಯಾಯಕ್ಕಾಗಿ ಒತ್ತಾಯ.ಆಕೆಯ ಸಾವಿನ ಸುತ್ತ ಅನುಮಾನದ ಹುತ್ತ, ಪ್ರಾಧ್ಯಾಪಕರೊಬ್ಬರ ಪಾತ್ರದ ಬಗ್ಗೆಯೂ ತನಿಖೆಗೆ ಆಗ್ರಹಿಸಿ ಕುಟುಂಬದಿಂದ ಹೋರಾಟ -ಹೆಚ್ಚಿನ ವಿವರಗಳಿಗೆ ಮುಂದೆ ಓದಿ
Dharmasthala Akanksha Death cover-up allegations ಬೆಳ್ತಂಗಡಿ, ಮೇ 19, 2025: ಬೆಳ್ತಂಗಡಿಯ ಯುವ ಪ್ರತಿಭೆ, ಏರೋನಾಟಿಕ್ಸ್ ಎಂಜಿನಿಯರ್ ಆಕಾಂಕ್ಷಾ ಎಸ್. ನಾಯರ್ (22) ಅವರ ಪಂಜಾಬ್ನ ಜಲಂಧರ್ನ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದಲ್ಲಿ ನಡೆದ ನಿಗೂಢ ಸಾವು ಇದೀಗ ಗಂಭೀರ ತಿರುವು ಪಡೆದುಕೊಂಡಿದೆ. ಮಗಳ ಸಾವಿನ ನೋವಿನೊಂದಿಗೇ ಸತ್ಯಕ್ಕಾಗಿ ಹೋರಾಡುತ್ತಿರುವ ತಂದೆ ಸುರೇಂದ್ರ ನಾಯರ್, ಸ್ಥಳೀಯ ಪೊಲೀಸರು ಸತ್ಯವನ್ನು ಹತ್ತಿಕ್ಕಿ, ತಮ್ಮ ಕುಟುಂಬಕ್ಕೆ ಘೋರ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಣ್ಣೀರು ಸುರಿಸಿದ್ದಾರೆ.
ಜಪಾನ್ನಲ್ಲಿ ಉಜ್ವಲ ಭವಿಷ್ಯದ ಕನಸು ಹೊತ್ತಿದ್ದ ಆಕಾಂಕ್ಷಾ, ತನ್ನ ಪ್ರಮಾಣಪತ್ರಗಳನ್ನು ಸಂಗ್ರಹಿಸಲು ಮೇ 17, 2025 ರಂದು ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ಆದರೆ, ಅದೇ ದಿನ ಆಕೆ ವಿವಿಯ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ದುರಂತ ಅಂತ್ಯ ಕಂಡಿದ್ದು, ಇಡೀ ಕುಟುಂಬವನ್ನೇ ಆಘಾತಕ್ಕೆ ದೂಡಿದೆ. ಘಟನೆಯ ಸುದ್ದಿ ತಿಳಿದು ಪಂಜಾಬ್ಗೆ ಧಾವಿಸಿದ ಸುರೇಂದ್ರ ನಾಯರ್ ಮತ್ತು ಕುಟುಂಬಸ್ಥರು, ಇದು ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಅಥವಾ ಕೊಲೆಗೆ ಪ್ರಚೋದನೆ ಎಂದು ಬಲವಾಗಿ ಶಂಕಿಸಿ, ಸಮಗ್ರ ತನಿಖೆಗೆ ಆಗ್ರಹಿಸಿ ದೂರು ದಾಖಲಿಸಿದ್ದರು..
ಸೋಮವಾರ, ಮೇ 19 ರಂದು, ಪೊಲೀಸರು ಸುರೇಂದ್ರ ಅವರಿಗೆ ಎಫ್ಐಆರ್ ಪ್ರತಿಯನ್ನು ನೀಡಿದ್ದಾರೆ. ಆದರೆ, ಈ ಎಫ್ಐಆರ್ ಪಂಜಾಬಿ ಭಾಷೆಯಲ್ಲಿದ್ದು, ಸ್ಥಳೀಯರ ಸಹಾಯದಿಂದ ಓದಿದಾಗ, ಆಕಾಂಕ್ಷಾ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಉಲ್ಲೇಖಿಸಿರುವುದು ಕುಟುಂಬಕ್ಕೆ ಮತ್ತಷ್ಟು ಆಘಾತ ನೀಡಿದೆ. “ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿಯಲ್ಲ, ಅವಳ ಸಾವಿನ ಹಿಂದೆ ಬೇರೆಯೇ ಸತ್ಯವಿದೆ” ಎಂದು ಕುಟುಂಬಸ್ಥರು ಈ ವರದಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ತಮ್ಮ ದು:ಖ ದುಮ್ಮಾನವನ್ನು ಹೇಳಿಕೊಂಡಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಮುಂದುವರಿದು, ಸುರೇಂದ್ರ ನಾಯರ್, ತಮ್ಮ ಮಗಳ ಸಾವಿಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸಿ. ಮ್ಯಾಥ್ಯೂ ಅವರೇ ನೇರ ಹೊಣೆಗಾರರು ಎಂದು ಆರೋಪಿಸಿ ಎರಡನೇ ದೂರು ದಾಖಲಿಸಿದ್ದಾರೆ. ಅಲ್ಲದೆ, ಘಟನೆಯ ದಿನದ ಸಂಪೂರ್ಣ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲು ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ. “ಕೇವಲ ಆಕಾಂಕ್ಷಾ ಕೆಳಗೆ ಬೀಳುವ ದೃಶ್ಯವನ್ನು ಮಾತ್ರ ತೋರಿಸುತ್ತಿದ್ದಾರೆ. ಆಕೆ ಹೇಗೆ ಬಿದ್ದಳು? ಯಾರಾದರೂ ತಳ್ಳಿದರೇ? ಅಥವಾ ಆಕೆಯೇ ಹಾರಿದಳೇ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ. ಇದರ ಹಿಂದೆ ದೊಡ್ಡ ಪಿತೂರಿಯೇ ಅಡಗಿರುವಂತಿದೆ,” ಎಂದು ಸುರೇಂದ್ರ ನಾಯರ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಆರಂಭದಲ್ಲಿ ತನಿಖೆಯ ಬಾಯಿಮಾತಿನ ಭರವಸೆ ನೀಡಿದ್ದ ಪೊಲೀಸರು, ಇದೀಗ ಸತ್ಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ ಎಂಬುದು ಕುಟುಂಬದ ಗಂಭೀರ ಆರೋಪ. ಈ ಎಲ್ಲಾ ಗೊಂದಲಗಳಿಂದಾಗಿ ಆಕಾಂಕ್ಷಾಳ ಮರಣೋತ್ತರ ಪರೀಕ್ಷೆಯೂ ವಿಳಂಬವಾಗುತ್ತಿರುವುದು ನೋವಿನ ಸಂಗತಿ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನ್ಯಾಯಯುತ ತನಿಖೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಸುರೇಂದ್ರ ತಿಳಿಸಿದ್ದಾರೆ.

ಸದ್ಯ, ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಸಿ. ಮ್ಯಾಥ್ಯೂ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ (ಐಪಿಸಿ ಸೆಕ್ಷನ್ 306) ಪ್ರಕರಣ ದಾಖಲಾಗಿದೆ. ಆದರೆ, ಸುರೇಂದ್ರ ನಾಯರ್ ಅವರ ಎರಡನೇ ದೂರಿನಲ್ಲಿರುವ ಗಂಭೀರ ಆರೋಪಗಳ ಮತ್ತು ಕಣ್ಮರೆಯಾಗಿರುವ ಸಾಕ್ಷ್ಯಗಳ ಕುರಿತು ಪೊಲೀಸರು ಯಾವ ದಿಟ್ಟ ಕ್ರಮ ಕೈಗೊಳ್ಳುತ್ತಾರೆ? ಆಕಾಂಕ್ಷಾಳ ಸಾವಿನ ಹಿಂದಿನ ಸತ್ಯ ಬಯಲಾಗುವುದೇ? ನೊಂದ ಕುಟುಂಬಕ್ಕೆ ನ್ಯಾಯ ಸಿಗುವುದೇ? ಎಂಬ ಪ್ರಶ್ನೆಗಳು ಉತ್ತರಕ್ಕಾಗಿ ಕಾಯುತ್ತಿವೆ.
ಪುತ್ತೂರು
ಮುಳಿಯ ಶ್ಯಾಮ್ ಭಟ್ ನಿಧನ : ‘ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ ಅ.6ರಂದು ಮಧ್ಯಾಹ್ನ 2 ಗಂಟೆಯವರೆಗೆ ಶೋರೂಮ್ ಬಂದ್
ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ್ ಭಟ್ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು ಹಾಗೂ ಸುಳ್ಯ ಶೋರೂಂಗಳನ್ನು ಅ.6ರಂದು ಮಧ್ಯಾಹ್ನದವರೆಗೆ ಬಂದ್ ಇರಿಸಲಾಗುವುದು.

ಚಿನ್ನಾಭರಣ ಉದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ಶ್ಯಾಮ್ ಭಟ್ ಅವರ ಅಗಲಿಕೆಗೆ ಸಂತಾಪ ಸೂಚಿಸುವ ಉದ್ದೇಶದಿಂದ ಶೋರೂಂ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ಯಾಮ್ ಭಟ್ ಅವರು ಅ.4ರಂದು ನಿಧನರಾಗಿದ್ದು, ಅ.6ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದೆ. ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
ಬಿಗ್ ನ್ಯೂಸ್
Puttur Dasara-92ನೇ ವರ್ಷದ ಶಾರದೋತ್ಸವಕ್ಕೆ ಹೊಸ ರೂಪ; ‘ಪುತ್ತೂರು ದಸರಾ’ ನಾಮಾಂಕಿತದಲ್ಲಿ ನವರಾತ್ರಿಯ ವೈಭವದ ಆಚರಣೆ
ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಪುತ್ತೂರು: ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.11ರಿಂದ 21ರವರೆಗೆ 92ನೇ ವರ್ಷದ ನವರಾತ್ರಿ ಪೂಜೆ ಹಾಗೂ ಶ್ರೀ ಶಾರದೋತ್ಸವ ವೈಭವದಿಂದ ನಡೆಯಲಿದೆ.
ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.21ರಂದು 20ಕ್ಕೂ ಅಧಿಕ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳೊಂದಿಗೆ ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಲಿದ್ದು, ಇದರೊಂದಿಗೆ ‘ಪುತ್ತೂರು ದಸರಾ’ ಸಂಪನ್ನಗೊಳ್ಳಲಿದೆ.
ದಸರಾ ಪರಂಪರೆಗೆ ಹೊಸ ರೂಪ
ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ ಮಾತನಾಡಿ, ಹಲವು ಪವಾಡಗಳಿಗೆ ಸಾಕ್ಷಿಯಾಗಿರುವ ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಶಾರದೋತ್ಸವವನ್ನು ಗತಕಾಲದ ವೈಭವವನ್ನು ಮರುಕಳಿಸುವ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದರು.
ಈ ಬಾರಿ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ನಾಮಾಂಕಿತ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಪುತ್ತೂರು ತಾಲೂಕಿನ ದಸರಾ ಮಹೋತ್ಸವವಾಗಿ ರೂಪಿಸುವ ಉದ್ದೇಶವಿದೆ. ಈ ಕುರಿತು ಮೂರು ವರ್ಷಗಳ ಹಿಂದೆಯೇ ಸಮಿತಿಯಲ್ಲಿ ಚಿಂತನೆ ನಡೆದಿತ್ತು ಎಂದು ಅವರು ತಿಳಿಸಿದರು.
ಪುತ್ತೂರಿನಲ್ಲೇ ದಸರಾ ವೈಭವ
ಹಿಂದೆ ದಸರಾ ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಳ್ಳಲು ಪುತ್ತೂರಿನ ಜನರು ಮಂಗಳೂರು ಹಾಗೂ ಮಡಿಕೇರಿಗೆ ತೆರಳುತ್ತಿದ್ದರು. ಆದರೆ ಕಳೆದ ಮೂರು ವರ್ಷಗಳಿಂದ ಪುತ್ತೂರು ಶಾರದೆಯ ವೈಭವದ ಶೋಭಾಯಾತ್ರೆ ಜನರ ಗಮನ ಸೆಳೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೊಸತನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಇದಕ್ಕೆ ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಸೀತಾರಾಮ ರೈ ಹೇಳಿದರು.
ಪುತ್ತೂರಿನಲ್ಲೇ ಜನರು ದಸರಾ ವೈಭವವನ್ನು ಕಣ್ತುಂಬಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ವಿಶಾಲ ರೂಪ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇದು ಪುತ್ತೂರು ತಾಲೂಕಿನ ಜನತೆಯ ದಸರಾ ಮಹೋತ್ಸವವಾಗಿ ಬೆಳೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಹತ್ತು ದಿನ ಧಾರ್ಮಿಕ-ಸಾಂಸ್ಕೃತಿಕ ಸಂಭ್ರಮ
ಅ.11ರಿಂದ ಆರಂಭವಾಗುವ ಉತ್ಸವದಲ್ಲಿ ನವರಾತ್ರಿ ಪೂಜೆ, ಶ್ರೀ ಶಾರದಾ ಆರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಚಂಡಿಕಾ ಹೋಮ ಸೇರಿದಂತೆ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರು ಹಾಗೂ ಸಾರ್ವಜನಿಕರನ್ನು ರಂಜಿಸಲಿವೆ.
ಅ.21ರಂದು ನಡೆಯುವ ಸಮಾರೋಪದಂದು 20ಕ್ಕೂ ಅಧಿಕ ಪ್ರಸಿದ್ಧ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳು ಶೋಭಾಯಾತ್ರೆಗೆ ಮೆರುಗು ನೀಡಲಿವೆ. ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯೊಂದಿಗೆ ಈ ಬಾರಿಯ ‘ಪುತ್ತೂರು ದಸರಾ’ ವೈಭವಕ್ಕೆ ತೆರೆ ಬೀಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ದಸರಾ ಸಮಿತಿಯ ಗೌರವ ಮಾರ್ಗದರ್ಶಕ ಡಾ. ಸುರೇಶ್ ಪುತ್ತೂರಾಯ, ಉಪಾಧ್ಯಕ್ಷ ದಯಾನಂದ ಪಿ., ಶಾರದಾ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ವಸಂತ್ ಕುಮಾರ್ ಹಾಗೂ ಶೋಭಾಯಾತ್ರೆಯ ಸಂಚಾಲಕರಾದ ಕೃಷ್ಣ ಎಂ. ಅಳಿಕೆ ಮತ್ತು ನವೀನ್ ಕುಲಾಲ್ ಪುತ್ತೂರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ನಿಧನ ವಾರ್ತೆ17 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್23 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಂತರ ರಾಜ್ಯ22 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಅಪರಾಧ23 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಸ್ಥಳೀಯ23 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
Uncategorized11 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ನಿಧನ ವಾರ್ತೆ21 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ರಾಜಕೀಯ17 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















