ಬಿಗ್ ನ್ಯೂಸ್
Israel Prime Minister-ಸಂಪೂರ್ಣ ಗಾಜಾವನ್ನು ಹಿಡಿತಕ್ಕೆ ತೆಗೆದುಕೊಳ್ಳಲಿದ್ದೇವೆ-ಇಸ್ರೇಲ್ ಪ್ರಧಾನಿ ಘೋಷಣೆ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಜಾ ಪಟ್ಟಿಯ ಸಂಪೂರ್ಣ ನಿಯಂತ್ರಣವನ್ನು ಸಾಧಿಸುವ ತೀರ್ಮಾನವನ್ನು ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಇಸ್ರೇಲಿ ರಕ್ಷಣಾ ಪಡೆ (IDF) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ದಕ್ಷಿಣ ಗಾಜಾದ ಖಾನ್ ಯೂನಿಸ್ ಮತ್ತು ಸುತ್ತಲಿನ ಪ್ರದೇಶಗಳಿಂದ ಸ್ಥಳೀಯ ಪ್ಯಾಲೆಸ್ಟೀನಿಯನ್ ಜನರನ್ನು ತಕ್ಷಣವೇ ತೊರೆಯುವಂತೆ ಸೂಚನೆ ನೀಡಿದೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಜಾ ಪಟ್ಟಿಯ ಸಂಪೂರ್ಣ ನಿಯಂತ್ರಣವನ್ನು ಸಾಧಿಸುವ ತೀರ್ಮಾನವನ್ನು ಘೋಷಿಸಿದ್ದಾರೆ.
ಈ ನಿಟ್ಟಿನಲ್ಲಿ ಇಸ್ರೇಲಿ ರಕ್ಷಣಾ ಪಡೆ (IDF) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ದಕ್ಷಿಣ ಗಾಜಾದ ಖಾನ್ ಯೂನಿಸ್ ಮತ್ತು ಸುತ್ತಲಿನ ಪ್ರದೇಶಗಳಿಂದ ಸ್ಥಳೀಯ ಪ್ಯಾಲೆಸ್ಟೀನಿಯನ್ ಜನರನ್ನು ತಕ್ಷಣವೇ ತೊರೆಯುವಂತೆ ಸೂಚನೆ ನೀಡಿದೆ.
ನೆತನ್ಯಾಹು ತಮ್ಮ ಟೆಲಿಗ್ರಾಮ್ ವೀಡಿಯೊ ಸಂದೇಶದಲ್ಲಿ, “ಗಾಜಾದ ಎಲ್ಲಾ ಭಾಗಗಳನ್ನು ನಮ್ಮ ವಶಕ್ಕೆ ತೆಗೆದುಕೊಳ್ಳುವ ಗುರಿಯೊಂದಿಗೆ ಇಸ್ರೇಲಿ ಸೇನೆಯು ತೀವ್ರವಾದ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಹೋರಾಟದಲ್ಲಿ ನಾವು ಯಶಸ್ವಿಯಾಗಲೇಬೇಕು, ಇದಕ್ಕಾಗಿ ಯಾವುದೇ ತಡೆಯಿಲ್ಲದೆ ಮುನ್ನಡೆಯುತ್ತೇವೆ,” ಎಂದು ಘೋಷಿಸಿದ್ದಾರೆ.
ಕಳೆದ ಎರಡೂವರೆ ತಿಂಗಳಿಂದ ಗಾಜಾದಲ್ಲಿ ಆಹಾರ ದಾಸ್ತಾನು ಖಾಲಿಯಾಗಿದ್ದು, ವಿಶ್ವಸಂಸ್ಥೆ ಮತ್ತು ಇತರ ಸಂಸ್ಥೆಗಳ ದಾಸ್ತಾನು ಸಂಪೂರ್ಣವಾಗಿ ಕ್ಷೀಣಿಸಿದೆ.
ಈ ಕಾರಣದಿಂದಾಗಿ ಗಾಜಾದಲ್ಲಿ ಹಸಿವಿನ ಸಂಕಷ್ಟ ಹೆಚ್ಚಾಗಿದ್ದು, ಅಮೆರಿಕ ಸೇರಿದಂತೆ ಹಲವು ದೇಶಗಳು ಇಸ್ರೇಲ್ ಮೇಲೆ ಒತ್ತಡ ಹೇರಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ನೆತನ್ಯಾಹು ಗಾಜಾಕ್ಕೆ ಮಾನವೀಯ ಸಹಾಯವನ್ನು ಪುನರಾರಂಭಿಸುವಂತೆ ಆದೇಶಿಸಿದ್ದಾರೆ.
“ಗಾಜಾದಲ್ಲಿ ಕ್ಷಾಮ ಉಂಟಾಗದಂತೆ ತಡೆಯಲು ಸಹಾಯ ಕಳುಹಿಸುವುದು ಅತ್ಯಗತ್ಯ. ಇದು ಹಮಾಸ್ ವಿರುದ್ಧದ ನಮ್ಮ ಸೇನಾ ಕಾರ್ಯಾಚರಣೆಗೆ ಅಡ್ಡಿಯಾಗಬಾರದು. ಆದ್ದರಿಂದ, ಈ ಸಹಾಯವು ಕೇವಲ ಅಗತ್ಯವಿರುವವರಿಗೆ ಮಾತ್ರ ತಲುಪುವಂತೆ ಖಾತರಿಪಡಿಸುತ್ತೇವೆ, ಹಮಾಸ್ಗೆ ಅಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಕಾರ್ಯಾಚರಣೆಯಿಂದ ಗಾಜಾದ ರಾಜಕೀಯ ಮತ್ತು ಮಾನವೀಯ ಪರಿಸ್ಥಿತಿಯ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.
ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.
ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.
ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.
ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.
ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.
ಸಮಗ್ರ ತೋಟಗಾರಿಕಾ ಸೇವೆ:
ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್19 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ21 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ3 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಬಿಗ್ ನ್ಯೂಸ್24 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಅಪರಾಧ2 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸ್ಥಳೀಯ2 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ2 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಚಿನ್ನ-ಬೆಳ್ಳಿ ದರ2 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!















