ಕಾರ್ಯಕ್ರಮಗಳು
Pashupati-ಪುತ್ತೂರಿನಲ್ಲಿ ಪಶುಪತಿ ಮಲ್ಟಿ ಬ್ರಾಂಡೆಡ್ನ ನೂತನ ವಿಸ್ತೃತ ಮಳಿಗೆ ಲೋಕಾರ್ಪಣೆ; ಪಶುಪತಿ ಮಳಿಗೆ ಈಗ ಮತ್ತಷ್ಟು ದೊಡ್ಡದು, ಮತ್ತಷ್ಟು ಆಕರ್ಷಕ! ನೂತನ ಮಳಿಗೆಯಲ್ಲಿ ಭರ್ಜರಿ ಕೊಡುಗೆಗಳ ಸುರಿಮಳೆ!
ನಗರದ ಪ್ರತಿಷ್ಠಿತ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ಮಾರಾಟ ಮಳಿಗೆಯಾದ ಪಶುಪತಿ ಮಲ್ಟಿ ಬ್ರಾಂಡೆಡ್, ತನ್ನ ನೂತನ ಹಾಗೂ ವಿಸ್ತೃತ ಮಳಿಗೆಯನ್ನು ಮೇ 19ರಂದು ಬೊಳ್ವಾರು ಬಂಟರ ಭವನದ ಎದುರಿಗಿನ ಜಿ.ಎಲ್. ಟ್ರೇಡ್ ಸೆಂಟರ್ನಲ್ಲಿ ಲೋಕಾರ್ಪಣೆಗೊಂಡಿತ್ತು.
ಪುತ್ತೂರು, ಮೇ 19: ನಗರದ ಪ್ರತಿಷ್ಠಿತ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ಮಾರಾಟ ಮಳಿಗೆಯಾದ ಪಶುಪತಿ ಮಲ್ಟಿ ಬ್ರಾಂಡೆಡ್, ತನ್ನ ನೂತನ ಹಾಗೂ ವಿಸ್ತೃತ ಮಳಿಗೆಯನ್ನು ಮೇ 19ರಂದು ಬೊಳ್ವಾರು ಬಂಟರ ಭವನದ ಎದುರಿಗಿನ ಜಿ.ಎಲ್. ಟ್ರೇಡ್ ಸೆಂಟರ್ನಲ್ಲಿ ಲೋಕಾರ್ಪಣೆಗೊಂಡಿತ್ತು.
ಲೈಟ್ಸ್, ಫ್ಯಾನ್ಸ್, ಮತ್ತು ಇಲೆಕ್ಟ್ರಿಕಲ್ಸ್ ಉದ್ಯಮದಲ್ಲಿ ಶ್ರೇಷ್ಠ ಗುಣಮಟ್ಟ ಹಾಗೂ ಅತ್ಯುತ್ತಮ ಬೆಲೆಗೆ ಹೆಸರಾಗಿರುವ ಈ ಸಂಸ್ಥೆಯು, ದರ್ಬೆ ಫಿಲೋಮಿನಾ ಕಾಲೇಜು ಮುಂಭಾಗದಲ್ಲಿ ಹಲವು ವರ್ಷಗಳಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ.
ನೂತನ ವಿಸ್ತೃತ ಮಳಿಗೆಯನ್ನು ಪುತ್ತೂರು ಜಿ.ಎಲ್. ಸಮೂಹ ಸಂಸ್ಥೆಗಳ ಚೇರ್ಮನ್, ಬಲರಾಂ ಆಚಾರ್ಯ ಜಿ.ಎಲ್. ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪುತ್ತೂರು ನಗರವು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮವಾಗಿ ಬೆಳೆಯುತ್ತಿದ್ದು, ಉದ್ಯಮ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ. ಉತ್ತಮ ಸೇವೆ ನೀಡುವ ಸಂಸ್ಥೆಗಳನ್ನು ಗ್ರಾಹಕರು ತಾವೇ ಗುರುತಿಸಿ ಬರುತ್ತಾರೆ ಎಂಬುದಕ್ಕೆ ಪಶುಪತಿ ಶರ್ಮರವರ ಈ ಸಂಸ್ಥೆ ಉತ್ತಮ ಉದಾಹರಣೆಯಾಗಿದೆ. ಗ್ರಾಹಕರ ಅನುಕೂಲಕ್ಕಾಗಿ ಮಳಿಗೆಯನ್ನು ವಿಸ್ತರಿಸಿ, ಕಾಲಕ್ಕೆ ತಕ್ಕಂತೆ ನವೀನ ಉತ್ಪನ್ನಗಳನ್ನು ಒದಗಿಸುತ್ತಿರುವುದು ಶ್ಲಾಘನೀಯ,” ಎಂದರು.

ಸಂಸ್ಥೆಯ ‘ಪಶುಪತಿ ಸೇವಾ ಟ್ರಸ್ಟ್’ ಅನ್ನು ದರ್ಬೆ ಬ್ಯಾಂಕ್ ಆಫ್ ಬರೋಡಾದ ಚೀಫ್ ಮ್ಯಾನೇಜರ್ ಸಾದಿಕ್ ಎಸ್.ಎಂ. ರವರು ಉದ್ಘಾಟಿಸಿದರು. ಅವರು ಮಾತನಾಡಿ, “ವ್ಯಕ್ತಿಯ ವ್ಯಕ್ತಿತ್ವವನ್ನು ಅವರ ಮಾತು, ಜ್ಞಾನ ಮತ್ತು ಆಸಕ್ತಿಯಿಂದ ಗುರುತಿಸಬಹುದು. ಪಶುಪತಿ ಶರ್ಮರವರು ತಾವು ಆಯ್ಕೆ ಮಾಡಿದ ಉದ್ಯಮದ ಬಗ್ಗೆ ಹೊಂದಿರುವ ಅಪಾರ ಜ್ಞಾನ ಮತ್ತು ಆಸಕ್ತಿ ಮೆಚ್ಚುವಂತಹದ್ದು. ಈ ಸಂಸ್ಥೆಯು ಹಲವರಿಗೆ ಉದ್ಯೋಗ ನೀಡಿರುವುದಲ್ಲದೆ, ‘ಪಶುಪತಿ ಸೇವಾ ಟ್ರಸ್ಟ್’ ಸ್ಥಾಪಿಸಿ, ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಮೂಲಕ ಯುವಕರನ್ನು ಸ್ವಾವಲಂಬಿಗಳನ್ನಾಗಿಸುವ ಮತ್ತು ಸ್ಥಳೀಯವಾಗಿ ನುರಿತ ತಂತ್ರಜ್ಞರನ್ನು ಸಿದ್ಧಪಡಿಸುವ ಕಾರ್ಯ ಶ್ಲಾಘನೀಯ. ಇಂತಹ ಪ್ರಯತ್ನಗಳು ಊರಿನ ಅಭಿವೃದ್ಧಿಗೆ ಪೂರಕ,” ಎಂದು ಅಭಿಪ್ರಾಯಪಟ್ಟರು.
ಮಳಿಗೆಯ ವೈಶಿಷ್ಟ್ಯಗಳು ಮತ್ತು ಉತ್ಪನ್ನಗಳು:
ನೂತನ ಮಳಿಗೆಯಲ್ಲಿ ಫಿಲಿಪ್ಸ್, ಆಟೊಂಬರ್ಗ್, ಹ್ಯಾವೆಲ್ಸ್, ಪಾಲಿಕಾಬ್, ಕ್ರಾಂಪ್ಟನ್, ಓರಿಯೆಂಟ್, ಲ್ಯೂಕರ್, ಆ್ಯಂಕರ್, ಪ್ಯಾನಾಸೋನಿಕ್ ಸೇರಿದಂತೆ ಹಲವಾರು ಪ್ರತಿಷ್ಠಿತ ಕಂಪನಿಗಳ ಗುಣಮಟ್ಟದ ಎಲ್.ಇ.ಡಿ. ಲೈಟ್ಸ್, ವಿದ್ಯುತ್ ಉಳಿತಾಯ ಮಾಡುವ ಬಿ.ಎಲ್.ಡಿ.ಸಿ. ಫ್ಯಾನ್ಗಳು ಹಾಗೂ ಇತರೆ ಗೃಹೋಪಯೋಗಿ ವಿದ್ಯುತ್ ಉಪಕರಣಗಳು ಒಂದೇ ಸೂರಿನಡಿ ಲಭ್ಯವಿವೆ. ಗ್ರಾಹಕರ ಅನುಕೂಲಕ್ಕಾಗಿ ಮತ್ತು ಎಲ್ಲಾ ಉತ್ಪನ್ನಗಳನ್ನು ಪ್ರದರ್ಶಿಸಲು ಈ ವಿಸ್ತೃತ ಮಳಿಗೆಯನ್ನು ತೆರೆಯಲಾಗಿದೆ.
ವಿಶೇಷ ಕೊಡುಗೆಗಳು (ಮೇ 19 ರಿಂದ ಮೇ 31 ರವರೆಗೆ):
• ಎಲ್.ಇ.ಡಿ. ಲೈಟ್ಸ್ ಮತ್ತು ಬಿ.ಎಲ್.ಡಿ.ಸಿ. ಫ್ಯಾನ್ಗಳ ವಿಶೇಷ ಮಾರಾಟ ಮೇಳ.
• ಆಯ್ದ ಫ್ಯಾನ್ಸಿ ಲೈಟ್ಗಳ ಮೇಲೆ ಶೇ. 50% ರವರೆಗೆ ರಿಯಾಯಿತಿ.
• ಮಳಿಗೆಗೆ ಭೇಟಿ ನೀಡುವ ಪ್ರತಿಯೊಬ್ಬರಿಗೂ ಆಕರ್ಷಕ ಕೂಪನ್ ಗೆಲ್ಲುವ ಅವಕಾಶ.
• ವಿಶಾಲವಾದ ಪಾರ್ಕಿಂಗ್ ಸೌಲಭ್ಯ.
ಪಶುಪತಿ ಸೇವಾ ಟ್ರಸ್ಟ್ನ ಉದ್ದೇಶ:
ಮಳಿಗೆಯ ಮಾಲಕ ಪಶುಪತಿ ಶರ್ಮರವರು ಮಾತನಾಡಿ, “ಕೆಲವರಿಗೆ ಶಿಕ್ಷಣದಲ್ಲಿ ಆಸಕ್ತಿ ಕಡಿಮೆ ಇದ್ದರೂ, ಅವರಲ್ಲಿ ಉತ್ತಮ ಕೌಶಲ್ಯಗಳಿರುತ್ತವೆ. ಅಂತಹ ಯುವಕರಿಗೆ ತಾಂತ್ರಿಕ ಕ್ಷೇತ್ರದಲ್ಲಿ, ವಿಶೇಷವಾಗಿ ಎಲೆಕ್ಟ್ರಾನಿಕ್ ಉಪಕರಣಗಳ ರಿಪೇರಿ ಮುಂತಾದ ವಿಷಯಗಳಲ್ಲಿ ತರಬೇತಿ ನೀಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಹಾಗೂ ಸ್ವಾವಲಂಬಿ ಜೀವನ ನಡೆಸಲು ಪ್ರೋತ್ಸಾಹಿಸುವುದೇ ‘ಪಶುಪತಿ ಸೇವಾ ಟ್ರಸ್ಟ್’ನ ಮುಖ್ಯ ಉದ್ದೇಶವಾಗಿದೆ,” ಎಂದರು.
ಅವರು ಮುಂದುವರೆದು, “ದರ್ಬೆಯಲ್ಲಿರುವ ನಮ್ಮ ಹಳೆಯ ಮಳಿಗೆಯು ಎಂದಿನಂತೆ ಕಾರ್ಯನಿರ್ವಹಿಸಲಿದೆ. ಗ್ರಾಹಕರು ಈ ನೂತನ ಮಳಿಗೆಗೂ ಭೇಟಿ ನೀಡಿ, ಎಂದಿನಂತೆ ನಮ್ಮನ್ನು ಆಶೀರ್ವದಿಸಿ, ಪ್ರೋತ್ಸಾಹಿಸಬೇಕೆಂದು ಕೋರುತ್ತೇನೆ,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಳಿಗೆಯ ಮಾಲಕರ ತಾಯಿ ರತ್ನಾವತಿ, ಸಹೋದರ ಟಿ.ವಿ. ಕ್ಲಿನಿಕ್ ಸತ್ಯಶಂಕರ್, ಅತ್ತಿಗೆ ಸ್ಥಿತಾ, ನ್ಯಾಯವಾದಿ ವಿರೂಪಾಕ್ಷ, ಜ್ಯುವೆಲ್ ಲಿಂಕ್ಸ್ 916 ಇದರ ಸುದರ್ಶನ್, ಜಿ.ಎಲ್. ಆಚಾರ್ಯ ಸಂಸ್ಥೆಯ ಉದ್ಯೋಗಿ ಅವಿಲ್ ಪಾಯಿಸ್, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ನ ಮಾಜಿ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಸಹಿತ ಹಲವು ಗಣ್ಯರು, ಗ್ರಾಹಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು. ಮಳಿಗೆಯ ಮಾಲಕರ ಪತ್ನಿ ಅನ್ನಪೂರ್ಣ ಶರ್ಮ ವಂದಿಸಿದರು. ಮಳಿಗೆಯ ಮ್ಯಾನೇಜರ್ ಶಂಕರ್ ಭಟ್ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು. ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆ
ಜಿ.ಎಲ್. ಟ್ರೇಡ್ ಸೆಂಟರ್, ಬೊಳ್ವಾರು, (ಬಂಟರ ಭವನದ ಎದುರು), ಪುತ್ತೂರು
ದೂರವಾಣಿ: 9448953682, 9845522020
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಮಿಷನ್ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

ವಿಟ್ಲದ ಎಂಆರ್‌ಎಫ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.
ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.
ಅಶೋಕ್ ರೈಗೆ ವಿಶೇಷ ಸನ್ಮಾನ
ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.
ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.
ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.
-
ಪುತ್ತೂರು19 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್22 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು22 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್21 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ22 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ20 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ21 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ21 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















