Connect with us

ರಾಜಕೀಯ

Ashok Rai-1993ರಲ್ಲಿ ಕೊಟ್ಟ ಹಕ್ಕುಪತ್ರಕ್ಕೆ 2025ರಲ್ಲಿ ನಿವೇಶನ; ಐತ್ತೂರು ಗ್ರಾಮದ ಬಡ ಕುಟುಂಬಗಳಿಗೆ ನ್ಯಾಯ ಒದಗಿಸಿದ ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಮಾರು 25 ಕುಟುಂಬಗಳಿಗೆ 1993 ರಲ್ಲಿ ನಿವೆಶನದ ಹಕ್ಕು ಪತ್ರ ನೀಡಲಾಗಿತ್ತು, ಹಕ್ಕು ಪತ್ರ ನೀಡಲಾಗಿತ್ತೇ ವಿನಾ ಅವರಿಗೆ ನಿವೇಶನ ಗುರುತು ಮಾಡಿರಲಿಲ್ಲ, ನಿವೇಶನಕ್ಕಾಗಿ ಕಳೆದ 25 ವರ್ಷಗಳಿಂದ ನಿರಂತರ ಹೋರಾಟ ಮಾಡಿದರೂ ಫಲನೀಡಲಿಲ್ಲ, ಕೊನೆಗೆ ಪುತ್ತೂರು ಶಾಸಕರ ಒಂದೇ ಒಂದು ಫೋನ್ ಕರೆಗೆ ಎಚ್ಚರಗೊಂಡ ಅಧಿಕಾರಿಗಳು 25 ಮಂದಿಯಲ್ಲಿ ಏಳು ಮಮದಿಗೆ ಮೊದಲ ಹಂತದ ನಿವೇಶನವನ್ನು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಮಾರು 25 ಕುಟುಂಬಗಳಿಗೆ 1993 ರಲ್ಲಿ ನಿವೆಶನದ ಹಕ್ಕು ಪತ್ರ ನೀಡಲಾಗಿತ್ತು, ಹಕ್ಕು ಪತ್ರ ನೀಡಲಾಗಿತ್ತೇ ವಿನಾ ಅವರಿಗೆ ನಿವೇಶನ ಗುರುತು ಮಾಡಿರಲಿಲ್ಲ, ನಿವೇಶನಕ್ಕಾಗಿ ಕಳೆದ 25 ವರ್ಷಗಳಿಂದ ನಿರಂತರ ಹೋರಾಟ ಮಾಡಿದರೂ ಫಲನೀಡಲಿಲ್ಲ, ಕೊನೆಗೆ ಪುತ್ತೂರು ಶಾಸಕರ ಒಂದೇ ಒಂದು ಫೋನ್ ಕರೆಗೆ ಎಚ್ಚರಗೊಂಡ ಅಧಿಕಾರಿಗಳು 25 ಮಂದಿಯಲ್ಲಿ ಏಳು ಮಮದಿಗೆ ಮೊದಲ ಹಂತದ ನಿವೇಶನವನ್ನು ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಐತ್ತೂರು ಗ್ರಾಮದ ಹನುಮಂತನ್, ವರದರಾಜ್, ತ್ಯಾಗಮೂರ್ತಿ, ಪಾರ್ಥೀವನ್, ಜಯಕುಮಾರ್, ಕುಮಾರ್ ಪಿ, ಹಾಗೂ ಜಿ ರವಿ ಎಂಬವರಿಗೆ ನಿವೇಶನ ನೀಡಲಾಗಿದೆ. ಹಕ್ಕು ಪತ್ರ ಪಡೆದುಕೊಂಡವರ ಪೈಕಿ ಕೆಲವರು ಮರಣಹೊಂದಿದ್ದಾರೆ. ಇವರಿಗೆ ವಿನಯಕುಮಾರ್ ಸೊರಕೆಯವರು ಪುತ್ತೂರು ಶಾಸಕರಾಗಿದ್ದ ಸಂದರ್ಬದಲ್ಲಿ ಹಕ್ಕು ಪತ್ರವನ್ನು ನೀಡಲಾಗಿತ್ತು. ಐತ್ತೂರು ಗ್ರಾಮ ಆಗಿನ ಕಾಲದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೊಳಪಟ್ಟಿತ್ತು. ಹಕ್ಕು ಪತ್ರ ಪಡೆದುಕೊಂಡ 25 ಕುಟುಂಬಗಳಿಗೆ ನಿವೇಶನ ನೀಡಿರಲಿಲ್ಲ. ನಿವೇಶನ ಕೊಡಿ ಎಂದು ಕಳೆದ ೨೫ ವರ್ಷಗಳಿಂದ ಸಿಕ್ಕ ಸಿಕ್ಕವರಲ್ಲಿ ಬೇಡಿಕೊಂಡರೂ ಯಾವುದೇ ಪ್ರಯೋಜನವಾಗಿರಲಿಲ್ಲ.

Ad Widget

Ad Widget <> Ad Widget

ಶಾಸಕ ಅಶೋಕ್ ರೈಗೆ ದೂರು
ಈ ಬಗ್ಗೆ ಐತ್ತೂರು ಗ್ರಾಪಂ ಸದಸ್ಯರಾದ ಈರೇಶ್ ಗೌಡರವರು ಫಲಾನುಭವಿಗಳನ್ನು ಕರೆದುಕೊಂಡು ಪುತ್ತೂರು ಶಾಕರಾದ ಅಶೋಕ್ ರೈ ಕಚೇರಿಗೆ ಬಂದಿದ್ದರು. ಶಾಸಕರಲ್ಲಿ ವಿಷಯ ತಿಳಿಸಿದಾಗ ಸಂಬಂಧಿಸಿದ ಅಧಿಕಾರಿಗೆ ಕರೆ ಮಾಡಿದ ಶಾಸಕರು ಯಾರಿಗೆಲ್ಲಾ 1993 ರಲ್ಲಿ ಹಕ್ಕು ಪತ್ರವನ್ನು ನೀಡಲಾಗಿದೆಯೋ ಅವರಿಗೆಲ್ಲಾ ನಿವೇಶನವನ್ನು ಯಾಕೆ ಕೊಟ್ಟಿಲ್ಲ? 25 ವರ್ಷಗಳಿಂದ ಅವರನ್ನು ಯಾಕೆ ಸತಾಯಿಸ್ತಿದ್ದೀರಿ, ನಿವೇಶನ ಇಲ್ಲದೇ ಇದ್ದರೆ ಹಕ್ಕು ಪತ್ರವನ್ನು ಯಾಕೆ ಕೊಟ್ಟಿದ್ದೀರಿ? ಇದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಗಾರರು ಎಂದು ಹೇಳಿದ್ದ ಶಾಸಕರು ತಕ್ಷಣವೇ ಎಲ್ಲಾ 25 ಮಂದಿ ಕುಟುಂಬಸ್ಥರಿಗೆ ನಿವೇಶನ ನೀಡುವಂತೆ ಸೂಚಿಸಿದ್ದರು. ಈ ಬಗ್ಗೆ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಅವರು ಈ ಫಲಾನುಭವಿಗೆ ನೆರವಾಗಿದ್ದರು. ಅಧಿಕಾರಿಗಳ ಬಳಿ ಫಲಾನುಭವಿಗಳನ್ನು ಕರೆದುಕೊಂಡು ಹೋಗಿ ಅಲ್ಲಿ ದಾಖಲೆಗಳನ್ನು ನೀಡಿ ಶಾಸಕರ ಸೂಚನೆಯಂತೆ ಶೀಘ್ರವೇ ನಿವೇಶನ ಮಂಜೂರುಗೊಳಿಸುವಲ್ಲಿ ಸಹಕಾರವನ್ನು ನೀಡಿದ್ದರು.



Ad Widget

ಹಕ್ಕು ಪತ್ರ ನೀಡಿದ್ದಾರೆ ನಿವೇಶನ ನೀಡಿಲ್ಲ ಎಂದು ಐತ್ತೂರು ಗ್ರಾಮದ 25 ಕುಟುಂಬಸ್ಥರು ನನ್ನ ಬಳಿ ಬಂದಿದ್ದರು. ಬಡವರಿಗೆ ಮನೆ ಕಟ್ಟಲು ಜಾಗದ ಹಕ್ಕು ಪತ್ರವನ್ನು ನೀಡಿದ್ದಾರೆ. ಅಂದಿನ ಶಾಸಕರಾಗಿದ್ದ ವಿನಯಕುಮಾರ್ ಸೊರಕೆಯವರು ಬಡವರಿಗೆ ಸಹಾಯವಾಗಲೆಂದು ಹಕ್ಕು ಪತ್ರವನ್ನು ನೀಡಿದ್ದರು. ಆದರೆ ಹಕ್ಕು ಪತ್ರ ನೀಡಿದ ಬಳಿಕ ನಿವೇಶನ ನೀಡುವ ಕೆಲಸವನ್ನು ಇಲಾಖಾ ಅಧಿಕಾರಿಗಳು ಮಾಡಬೇಕಿತ್ತು. ಯಾಕೆ ಆರೀತಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ನನ್ನ ಗಮನಕ್ಕೆ ಈ ವಿಚಾರ ಬಂದ ಕೂಡಲೇ ಸ್ಪಂದಿಸಿದ್ದೇನೆ. ಪ್ರಥಮ ಹಂತದಲ್ಲಿ 7 ಕುಟುಂಬಗಳಿಗೆ ನಿವೇಶನ ನೀಡಲಾಗಿದೆ. ಹಕ್ಕು ಪತ್ರ ಕೆಲವು ಮರಣಹೊಂದಿದ್ದಾರೆ. ಹಕ್ಕು ಪತ್ರ ಪಡೆದ ಎಲ್ಲರಿಗೂ ನಿವೇಶನ ನೀಡುವಂತೆ ಸೂಚನೆಯನ್ನು ನೀಡಿದ್ದೇನೆ. ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಹಾಗೂ ಗ್ರಾಪಂ ಸದಸ್ಯ ಈರೇಶ್‌ರವರು ಇದರಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.- ಅಶೋಕ್ ರೈ ಶಾಸಕರು, ಪುತ್ತೂರು

Ad Widget

Ad Widget

ಅದ್ಬುತ ಕೆಲಸ ಶಾಸಕರಿಂದ ಆಗಿದೆ; ಬಡಗನ್ನೂರು
ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಾತನಾಡಿ ಶಾಸಕ ಅಶೋಕ್ ರೈ ಅವರಿಂದ ಅದ್ಬುತ ಕೆಲಸವಾಗಿದೆ. ಇದು ಆಗುತ್ತದೆ, ನಿವೇಶನ ಸಿಗುತ್ತದೆ ಎಂಬ ಆಸೆಯನ್ನೇ ಬಿಟ್ಟಿದ್ದರು. 25 ವರ್ಷಗಳಿಂದ ಬಡ ಕುಟುಂಬಗಳು ಮಾಡಿದ ಹೋರಾಟಕ್ಕೆ ಶಾಸಕರಿಂದ ನ್ಯಾಯ ಸಿಕ್ಕಿದೆ.ಇಂದು ಆ ಕುಟುಂಬಗಳಿಗೆ ಆಗಿರುವ ಸಂತೋಷ ಅಷ್ಟಿಷ್ಟಲ್ಲ. ಒಬ್ಬ ಜನಪ್ರತಿನಿಧಿಯಾದವರು ಹೇಗೆ ಸಹಾಯ ಮಾಡಬಹುದು, ಬಡವರ ಕಣ್ಣೀರೊರೆಸಬಹುದು ಎಂಬುದಕ್ಕೆ ಶಾಸಕರು ನಿದರ್ಶನವಾಗಿದ್ದಾರೆ ಎಂದು ಆಬಿಪ್ರಾಯಿಸಿದರು.

ಯಾರಿದಂಲೂ ಆಗದ್ದು ಶಾಸಕರು ಮಾಡಿದ್ದಾರೆ: ಫಝಲ್ ಕೋಡಿಂಬಾಳ
ಕಳೆದ 25 ವರ್ಷಗಳಿಂದ ಗ್ರಾಪಂ ಸದಸ್ಯ ಈರೇಶ್ ಗೌಡ, ಕೃಷ್ಣಪ್ಪ ಸೇರಿದಂತೆ ಹಲವು ಮಂದಿ ನ್ಯಾಯಕ್ಕಾಗಿ ಹೋರಾಟ ಮಾಡಿದ್ದರು ಆದರೆ ನ್ಯಾಯ ಸಿಕ್ಕಿರಲಿಲ್ಲ, ಪುತ್ತೂರು ಶಾಸಕರ ಬಳಿ ನಮಗೆ ನ್ಯಾಯ ಸಿಕ್ಕಿದೆ, ಬಡವರಿಗೆ ಸ್ಪಂದನೆ ನೀಡುವ ಶಾಅಸಕರ ಮನೋಸ್ಥಿತಿ ಕಂಡು ನಮಗೂ ಅಚ್ಚರಿಯಾಗಿದೆ, ಯಾರಿದಂಲೂ ಮಾಡಲಾಗದ ಒಂದು ಪುಣ್ಯದ ಕೆಲಸವನ್ನು ಮಾಡಿರುವುದು ಅಭಿನಂದನಾರ್ಹವಾಗಿದೆ ಎಂದು ಮಾಜಿ ತಾಪಂ ಸದಸ್ಯ ಫಝಲ್ ಕೋಡಿಂಬಾಳ ಅಭಿಪ್ರಾಯಿಸಿದ್ದಾರೆ.

ಶಾಸಕರಿಗೆ ಅಭಿನಂದನೆ
ನಿವೇಶನ ಸಿಕ್ಕಿದ ಫಲಾನುಭವಿಗಳು ಸೋಮವಾರ ಶಾಸಕರ ಕಚೇರಿಗೆ ಬಂದು ಶಾಸಕರಿಗೆ ಹೂಗುಚ್ಚ ನೀಡಿ ಅಭಿನಂದಿಸಿದ್ದಾರೆ. ಶಾಸಕರ ಕಾಲಿಗೆ ನಮಸ್ಕರಿಸಿದ ಫಲಾನುಭವಿಗಳು ನೀವು ನಮ್ಮ ಪಾಲಿನ ದೇವರಾಗಿ ಬಂದಿದ್ದೀರಿ, ನಾವು ನಿಮ್ಮ ಕ್ಷೇತ್ರದವರೇ ಅಲ್ಲ, ನಾವು ನಿಮಗೆ ವೋಟು ಕೂಡಾ ಹಾಕಿಲ್ಲ, ಹಾಕಲು ಸಾಧ್ಯವೂ ಇಲ್ಲ ಆದರೆ ಯಾವುದೇ ಫಲಾಪೇಕ್ಷೆಯಿಲ್ಲದೆ ನಮ್ಮ ಮನವಿಗೆ ಸ್ಪಂದಿಸಿ 25 ವರ್ಷಗಳಿಂದ ಯಾರಿಂದಲೂ ಮಾಡಲು ಸಾಧ್ಯವಾಗದ ಕೆಲಸವನ್ನು ಮಾಡಿ ನಮ್ಮ ಕುಟುಂಬದ ಕಣ್ಣೀರು ಒರೆಸಿದ್ದೀರಿ, ನಿಮ್ಮ ಸೇವೆಯನ್ನು ನಾವು ಎಂದಿಗೂ ಮರೆಯಲಾರೆವು, ನಿಮ್ಮ ಹೆಸರು ಹೇಳಿ ನಮ್ಮ ಮನೆಯಲ್ಲಿ ದೀಪ ಹಚ್ಚುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಯುವಕ ಕಾಂಗ್ರೆಸ್ ಅಧ್ಯಕ್ಷರಾದ ಶಾಕಿರ್ ಇದ್ದರು.

Ad Widget
Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading