ರಾಜಕೀಯ
Ashok Rai-5 ವರ್ಷ ಏನು ಮಾಡಿದ್ರಿ? ತನ್ನ ನೆರೆಮನೆಯ ವ್ಯಕ್ತಿಯ ಅಕ್ರಮ ಸಕ್ರಮ ಮಾಡಲು ಯೋಗ್ಯತೆ ಇಲ್ಲದವರು : ಮಾಜಿ ಶಾಸಕರಿಗೆ ಅಶೋಕ್ ರೈ ಚಾಟಿ
“ಪುತ್ತೂರಲ್ಲಿ ಅಭಿವೃದ್ಧಿ ಕೆಲಸ ಆಗ್ತಿಲ್ಲ ಅಂತ ಬೊಬ್ಬೆ ಹೊಡೆಯೋರು, ಮೊದಲು ತಾವು ಶಾಸಕರಾಗಿದ್ದಾಗ ಏನು ಕಡಿದು ಕಟ್ಟೆ ಹಾಕಿದ್ದಾರೆ ಅಂತ ಆತ್ಮಾವಲೋಕನ ಮಾಡಿಕೊಳ್ಳಲಿ!” ಹೀಗೆಂದು ಶಾಸಕ ಅಶೋಕ್ ರೈ ಅವರು ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಪುತ್ತೂರು: “ಪುತ್ತೂರಲ್ಲಿ ಅಭಿವೃದ್ಧಿ ಕೆಲಸ ಆಗ್ತಿಲ್ಲ ಅಂತ ಬೊಬ್ಬೆ ಹೊಡೆಯೋರು, ಮೊದಲು ತಾವು ಶಾಸಕರಾಗಿದ್ದಾಗ ಏನು ಕಡಿದು ಕಟ್ಟೆ ಹಾಕಿದ್ದಾರೆ ಅಂತ ಆತ್ಮಾವಲೋಕನ ಮಾಡಿಕೊಳ್ಳಲಿ!” ಹೀಗೆಂದು ಶಾಸಕ ಅಶೋಕ್ ರೈ ಅವರು ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ನೆಕ್ಕಿಲಾಡಿಯಲ್ಲಿ ಅಕ್ರಮ-ಸಕ್ರಮ ಬೈಠಕ್ ಉದ್ಘಾಟಿಸಿ ಮಾತನಾಡಿದ ಅವರು, “ತನ್ನ ಪಕ್ಕದ ಮನೆಯವನಿಗೆ ಅಕ್ರಮ-ಸಕ್ರಮ ಮಾಡಿಸಿಕೊಡಲು ಯೋಗ್ಯತೆ ಇಲ್ಲದವರು, ಬೇರೆಯವರ ಬಗ್ಗೆ ಮಾತಾಡೋಕೆ ನಾಚಿಕೆಯಾಗಬೇಕು. ಮೆಡಿಕಲ್ ಕಾಲೇಜು ಬಜೆಟ್ನಲ್ಲಿ ಘೋಷಣೆಯಾದಾಗ ಕ್ಯಾತೆ ತೆಗೆದ ಇವರಿಗೆ, ಅದರ ಫೈಲನ್ನು ಸರ್ಕಾರಕ್ಕೆ ತಲುಪಿಸುವ ಯೋಗ್ಯತೆಯೂ ಇರಲಿಲ್ಲ!” ಎಂದು ನೇರವಾಗಿ ಚಾಟಿ ಬೀಸಿದರು.
“ಉಪ್ಪಿನಂಗಡಿಗೆ ಮಾಜಿ ಶಾಸಕರು ಕೊಟ್ಟ ಕೊಡುಗೆ ಏನು? ತಮ್ಮೂರಿನ ಜನಕ್ಕೇ ಸಹಾಯ ಮಾಡಲಾಗದ ಇವರು ಐದು ವರ್ಷ ಏನು ಮಾಡಿದರು ಎಂಬುದು ಜನತೆಗೆ ಚೆನ್ನಾಗಿ ಗೊತ್ತು,” ಎಂದು ಕುಟುಕಿದ ರೈ, “ನಾವು ಅಕ್ರಮ-ಸಕ್ರಮಕ್ಕೆ ಲಂಚ ಕೇಳುತ್ತಿಲ್ಲ. ಹಿಂದೆ ದುಡ್ಡು ಕೊಟ್ಟವರ ಫೈಲುಗಳು ಮಾತ್ರ ವಿಲೇವಾರಿಯಾಗುತ್ತಿದ್ದವು, ಬಡವರ ಕಡತ ಯಾಕೆ ಮುಟ್ಟಲಿಲ್ಲ? 9 ಸೆಂಟ್ಸ್ ಜಾಗದ 94ಸಿ ಹಕ್ಕುಪತ್ರ ಕೊಡಲಾಗದವರು ಬೇರೆಯವರ ಬಗ್ಗೆ ಮಾತಾಡುವ ನೈತಿಕತೆ ಕಳೆದುಕೊಂಡಿದ್ದಾರೆ,” ಎಂದು ತೀವ್ರ ವಾಗ್ದಾಳಿ ನಡೆಸಿದರು.
“ನಾನು ಶಾಸಕನಾದ ಮೇಲೆ 1600 ಮಂದಿಗೆ 94ಸಿ ಹಕ್ಕುಪತ್ರ, 1500ಕ್ಕೂ ಹೆಚ್ಚು ಅಕ್ರಮ-ಸಕ್ರಮ ಕಡತ ವಿಲೇವಾರಿ ಮಾಡಿದ್ದೇನೆ. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳ ಅಭಿವೃದ್ಧಿ, ಮೆಡಿಕಲ್ ಕಾಲೇಜು, ತಾಲೂಕು ಕ್ರೀಡಾಂಗಣ, ಆರ್ಟಿಒ ಟ್ರ್ಯಾಕ್, ಕೊಯಿಲ ಪಶುವೈದ್ಯಕೀಯ ಕಾಲೇಜು, ಕೆಎಂಎಫ್ಗೆ ಜಮೀನು ಮಂಜೂರು – ಇವೆಲ್ಲಾ ಕಣ್ಣಿಗೆ ಕಾಣುತ್ತಿಲ್ಲವೇ? ಉಳಿದ ಕಾಮಗಾರಿಗಳಿಗೆ ಎಷ್ಟು ಕೋಟಿ ಅನುದಾನ ತಂದಿದ್ದೇನೆ ಎಂಬುದನ್ನು ಬಂದು ಪರಿಶೀಲಿಸಲಿ,” ಎಂದು ಅಶೋಕ್ ರೈ ಸವಾಲು ಹಾಕಿದರು.
ಹಿಂದುತ್ವದ ಬಗ್ಗೆ ಭಾಷಣಮಾಡ್ತಾರೆ- ದೇವಸ್ಥಾನದ ಮೇಲೆ ಕೇಸ್ ಹಾಕ್ತಾರೆ…..
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಅಕ್ರಮವಾಗಿ ವಾಸಮಾಡಿಕೊಂಡಿದ್ದು ಮಾತ್ರವಲ್ಲದೆ ದೇವಸ್ಥಾನದ ಜಾಗದಿಂದ ಎಬ್ಬಿಸಿದ್ದಕ್ಕಾಗಿ ಶ್ರೀ ಮಹಾಲಿಂಗೇಶ್ವರ ದೇವರ ಮೇಲೆಯೇ ಕೇಸು ಹಾಕಿದ್ದಾರೆ. ಹೊರಗಡೆ ವೋಟಿಗಾಗಿ ಹಿಂದುತ್ವದ ಭಾಷಣ ಮಾಡುವುದು ಇವರೇ..ದೇವರ ಮೇಲೆ ಕೇಸು ಹಾಕುವುದು ಇವರೇ ಇವರದ್ದು ಎಂಥಾ ಹಿಂದುತ್ವ ಎಂದು ಶಾಸಕರು ಲೇವಡಿ ಮಾಡಿದರು.
ವೇದಿಕೆಯಲ್ಲಿ ತಹಶಿಲ್ದಾರ್ ಪುರಂದರ ಹೆಗ್ಡೆ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ರೂಪರೇಖಾ ಆಲ್ವ, ರಾಮಣ್ಣ ಪಿಲಿಂಜ,ನೆಕ್ಕಿಲಾಡಿ ಗ್ರಾಪಂ ಅಧ್ಯಕ್ಷೆ ಸುಜಾತಾ ರೈ, ಉಪಾಧ್ಯಕ್ಷ ಹರೀಶ್ ಉಪಸ್ಥಿತರಿದ್ದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.


















