ಬಿಗ್ ನ್ಯೂಸ್
Puttur-ವಿದ್ಯುತ್ ಕಂಬಕ್ಕೆ ರಿಕ್ಷಾ ಅಪ್ಪಳಿಸಿ ಪಲ್ಟಿ; ಚಾಲಕ ಅದೃಷ್ಟವಶಾತ್ ಪಾರು
ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ರಭಸವಾಗಿ ಅಪ್ಪಳಿಸಿ ಪಲ್ಟಿಯಾದ ಘಟನೆ ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ನಿನ್ನೆ ರಾತ್ರಿ ಸುಮಾರು 10.30ಕ್ಕೆ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ರಭಸವಾಗಿ ಅಪ್ಪಳಿಸಿ ಪಲ್ಟಿಯಾದ ಘಟನೆ ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ನಿನ್ನೆ ರಾತ್ರಿ ಸುಮಾರು 10.30ಕ್ಕೆ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ವಿವರ:
ಪರ್ಪುಂಜ ಕಡೆಯಿಂದ ಬರುತ್ತಿದ್ದ ರಿಕ್ಷಾ, ಕಲ್ಲರ್ಪೆ ತಲುಪುತ್ತಿದ್ದಂತೆಯೇ ಚಾಲಕನ ಹತೋಟಿ ಕಳೆದುಕೊಂಡಿದೆ. ಪರಿಣಾಮವಾಗಿ, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದು, ಬಳಿಕ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವು ಒಂದು ಬದಿಗೆ ವಾಲಿದ್ದು, ವಿದ್ಯುತ್ ತಂತಿಗಳು ಪರಸ್ಪರ ತಾಗಿ ಬೆಂಕಿಯ ಕಿಡಿಗಳು ಚಿಮ್ಮಿವೆ. ಇದರಿಂದಾಗಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತದ ತೀವ್ರತೆಗೆ ರಿಕ್ಷಾ ನಜ್ಜುಗುಜ್ಜಾಗಿದ್ದರೂ, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವುದು ಅದೃಷ್ಟವೇ ಸರಿ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದರು. ತಕ್ಷಣವೇ ಸ್ಥಳೀಯರು ನೆರವಿಗೆ ಧಾವಿಸಿ ಚಾಲಕನನ್ನು ಉಪಚರಿಸಿದ್ದಾರೆ.
ಬಿಗ್ ನ್ಯೂಸ್
Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.
ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Arshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.
ಮಂಗಳೂರು: ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.
‘ಯಕ್ಷಪ್ರಿಯೆ ತನು ವಿಟ್ಲ’ ಎಂದೇ ಪರಿಚಿತರಾಗಿರುವ ಅರ್ಷಿಯಾ ಖಾನ್ ಅವರು ಕದ್ರಿಯ ಕದಳಿ ಕಲಾ ಕೇಂದ್ರದ ವಿದ್ಯಾರ್ಥಿನಿ. ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಕದಳಿ ಕಲಾ ಕೇಂದ್ರ ಆಯೋಜಿಸಿರುವ ‘ಕದಳಿ ದಶಾಹಃ’ ಯಕ್ಷಗಾನ ಹಬ್ಬದ ಅಂಗವಾಗಿ ಅ.20ರಂದು ಸಂಪೂರ್ಣ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದಲ್ಲಿ ಅರ್ಷಿಯಾ ಅವರು ದೇವಿ ಪಾತ್ರ ನಿರ್ವಹಿಸಲಿದ್ದಾರೆ.
ಕಳೆದ 12 ವರ್ಷಗಳಿಂದ ಯಕ್ಷಗಾನದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುವ ಅರ್ಷಿಯಾ, ಆದಿಮಾಯೆ ಸೇರಿದಂತೆ ಹಲವು ಅಸುರ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.
“ಉಳ್ಳಾಲ್ತಿ ಅಮ್ಮನ (ಕಟೀಲು ದುರ್ಗಾಪರಮೇಶ್ವರಿ) ಮೇಲಿನ ಭಕ್ತಿಯೇ ನನ್ನಲ್ಲಿ ಯಕ್ಷಗಾನದ ಆಸಕ್ತಿ ಮೂಡಲು ಕಾರಣ. ಈ ಬಾರಿ ನವರಾತ್ರಿಯ ಪರ್ವಕಾಲದಲ್ಲಿ ದೇವಿ ಪಾತ್ರ ನಿರ್ವಹಿಸುವ ಅವಕಾಶ ದೊರೆತಿದೆ. ಅಷ್ಟಭುಜ ಧರಿಸಿ ರಂಗಸ್ಥಳ ಏರುವ ಆ ಪವಿತ್ರ ಕ್ಷಣವನ್ನು ಕಲ್ಪಿಸಿಕೊಂಡಾಗಲೇ ರೋಮಾಂಚನವಾಗುತ್ತದೆ” ಎಂದು ಅರ್ಷಿಯಾ ಹೇಳಿದ್ದಾರೆ.
ಯಕ್ಷಗಾನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ ಎಂದು ಹೇಳಿದ ಅವರು, ದೇವಿ ಪಾತ್ರ ನಿರ್ವಹಿಸುವ ಸಂದರ್ಭದಲ್ಲಿ ಪರಿಶುದ್ಧತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಕಳೆದ ಆರು ತಿಂಗಳಿಂದ ಮಾಂಸಾಹಾರ ತ್ಯಜಿಸಿ ವ್ರತ ಆಚರಿಸುತ್ತಿರುವುದಾಗಿ ತಿಳಿಸಿದ್ದಾರೆ.
ಪ್ರತಿದಿನ ದೈವಸ್ಥಾನ ಅಥವಾ ದೇವಸ್ಥಾನಕ್ಕೆ ಭೇಟಿ ನೀಡಿ ಧ್ಯಾನ ಮಾಡುತ್ತಿದ್ದೇನೆ. ನವರಾತ್ರಿ ಆರಂಭವಾದ ಬಳಿಕ ಇನ್ನಷ್ಟು ಕಟ್ಟುನಿಟ್ಟಿನ ವ್ರತ ಆಚರಿಸಲು ಉದ್ದೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಯಕ್ಷಗಾನ ಪ್ರೇಮಕ್ಕೆ ಕುಟುಂಬದ ಬೆಂಬಲ
“ಯಕ್ಷಗಾನವು ಪೌರಾಣಿಕ ಕಥಾನಕಗಳನ್ನು ಆಧರಿಸಿದೆ. ನಮ್ಮ ಧರ್ಮ ಬೇರೆಯಾಗಿರುವುದರಿಂದ ಯಕ್ಷಗಾನದ ಕಥಾನಕಗಳಲ್ಲಿನ ಪ್ರತಿಯೊಂದು ಪಾತ್ರವನ್ನೂ ಓದಿ ತಿಳಿದುಕೊಳ್ಳುವುದು ಅಗತ್ಯ. ಇದು ನನಗಿರುವ ದೊಡ್ಡ ಸವಾಲು. ಆದರೆ ಯಕ್ಷಗುರು ರಮೇಶ್ ಭಟ್ ಅವರ ಮಾರ್ಗದರ್ಶನದಲ್ಲಿ ಎಲ್ಲವನ್ನೂ ಕಲಿಯಲು ಪ್ರಯತ್ನಿಸುತ್ತಿದ್ದೇನೆ” ಎಂದು ಅರ್ಷಿಯಾ ತಿಳಿಸಿದ್ದಾರೆ.
ತಮ್ಮ ಯಕ್ಷಗಾನ ಆಸಕ್ತಿಗೆ ಕುಟುಂಬದವರ ಸಂಪೂರ್ಣ ಸಹಕಾರವಿದೆ. ಸಾರ್ವಜನಿಕರಿಂದಲೂ ಸಾಕಷ್ಟು ಬೆಂಬಲ ದೊರೆತಿದೆ. ಕೆಲವರು ಟೀಕಿಸಿದರೂ ಅದನ್ನೂ ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಪದವೀಧರೆಯಾಗಿರುವ ಅರ್ಷಿಯಾ ಖಾನ್ ಅವರು ಪ್ರಸ್ತುತ ಮಾಧ್ಯಮ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ.
ರಾಜ್ಯ
Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.
ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ21 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















