ಸ್ಥಳೀಯ
Dharmasthala-ಧರ್ಮಸ್ಥಳ : ಪಂಜಾಬ್ ನಲ್ಲಿ ಆಕಾಂಕ್ಷ ನಿಗೂಡ ಸಾವು – ತನಿಖೆಯ ದೃಷ್ಟಿಯಿಂದ ಸುಡದೆ ಮಣ್ಣು ಮಾಡಿದ ಕುಟುಂಬಸ್ಥರು
ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷಾ ಅವರ ಅಂತ್ಯಸಂಸ್ಕಾರವು ಸೋಮವಾರ ಅವರ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಬೋಳಿಯಾರ್ನಲ್ಲಿರುವ ನಿವಾಸದಲ್ಲಿ ನಡೆದಿದೆ. ಆಕಾಂಕ್ಷಾ ಅವರ ಸಾವಿನ ತನಿಖೆಗೆ ಅನುಕೂಲವಾಗುವ ದೃಷ್ಟಿಯಿಂದ, ಮಲಯಾಳಿ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರದ ಕ್ರಿಯೆಗಳು ನಡೆದರೂ, ಕುಟುಂಬಸ್ಥರು ಪಾರ್ಥಿವ ಶರೀರವನ್ನು ದಹಿಸದೆ, ಬಾಕ್ಸ್ನಲ್ಲಿಟ್ಟು ಮಣ್ಣು ಮಾಡುವ ಮೂಲಕ ಅಂತಿಮ ವಿಧಿವಿಧಾನಗಳನ್ನು ಪೂರೈಸಿದ್ದಾರೆ.
ಮಂಗಳೂರು: ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷಾ ಅವರ ಅಂತ್ಯಸಂಸ್ಕಾರವು ಸೋಮವಾರ ಅವರ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಬೋಳಿಯಾರ್ನಲ್ಲಿರುವ ನಿವಾಸದಲ್ಲಿ ನಡೆದಿದೆ. ಆಕಾಂಕ್ಷಾ ಅವರ ಸಾವಿನ ತನಿಖೆಗೆ ಅನುಕೂಲವಾಗುವ ದೃಷ್ಟಿಯಿಂದ, ಮಲಯಾಳಿ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರದ ಕ್ರಿಯೆಗಳು ನಡೆದರೂ, ಕುಟುಂಬಸ್ಥರು ಪಾರ್ಥಿವ ಶರೀರವನ್ನು ದಹಿಸದೆ, ಬಾಕ್ಸ್ನಲ್ಲಿಟ್ಟು ಮಣ್ಣು ಮಾಡುವ ಮೂಲಕ ಅಂತಿಮ ವಿಧಿವಿಧಾನಗಳನ್ನು ಪೂರೈಸಿದ್ದಾರೆ.
“ಆಕಾಂಕ್ಷಾಳ ಸಾವಿಗೆ ನ್ಯಾಯ ಸಿಗಬೇಕು. ಮುಂದಿನ ತನಿಖಾ ಪ್ರಕ್ರಿಯೆಗಳಿಗೆ ಯಾವುದೇ ಅಡಚಣೆಯಾಗಬಾರದು ಮತ್ತು ಅಗತ್ಯಬಿದ್ದರೆ ಹೆಚ್ಚಿನ ಪರೀಕ್ಷೆಗಳಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ” ಎಂದು ಕುಟುಂಬದ ಮೂಲಗಳು ತಿಳಿಸಿವೆ. ಆಕಾಂಕ್ಷಾ ಅವರ ಸಾವಿನ ಹಿಂದಿರುವ ಸತ್ಯಾಂಶ ಬಯಲಿಗೆ ಬರಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ದೃಢ ಸಂಕಲ್ಪದಿಂದ ಕುಟುಂಬಸ್ಥರು ಈ ಕ್ರಮ ಕೈಗೊಂಡಿದ್ದಾರೆ.
ಈ ದುಃಖದ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಆಕಾಂಕ್ಷಾ ಅವರ ಮನೆಗೆ ಭೇಟಿ ನೀಡಿ, ಮೃತರ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಆಕಾಂಕ್ಷಾ ಅವರ ಸಾವಿನ ಕುರಿತು ಕುಟುಂಬಸ್ಥರು ತೀವ್ರ ಅನುಮಾನ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಪೂಂಜಾ ಅವರು ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. “ಈಗಾಗಲೇ ಪಂಜಾಬ್ನ ಜಲಂಧರ್ ಪೊಲೀಸರ ಜೊತೆ ನಾವು ಮಾತುಕತೆ ನಡೆಸಿದ್ದೇವೆ. ಅವರು ನಿಷ್ಪಕ್ಷಪಾತವಾದ ತನಿಖೆ ನಡೆಸುವ ಭರವಸೆ ನೀಡಿದ್ದಾರೆ,” ಎಂದು ಶಾಸಕರು ತಿಳಿಸಿದರು.
“ಸಾವಿಗೆ ಕಾರಣ ಎನ್ನಲಾದ ಪ್ರೊಫೆಸರ್ ವಿರುದ್ಧ ಈಗಾಗಲೇ ಅಲ್ಲಿನ ಆಡಳಿತ ಕ್ರಮ ಕೈಗೊಂಡಿದೆ. ಆದರೆ, ಸಾವಿಗೆ ನಿಜವಾದ ಕಾರಣವೇನು ಎಂಬುದರ ಬಗ್ಗೆ ಆಳವಾದ ತನಿಖೆ ನಡೆಯಬೇಕು. ಈ ನಿಟ್ಟಿನಲ್ಲಿ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪಂಜಾಬ್ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಿ, ತನಿಖೆಯನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳಬೇಕು” ಎಂದು ಹರೀಶ್ ಪೂಂಜಾ ಆಗ್ರಹಿಸಿದರು. “ಅಕಾಂಕ್ಷ ಅವರ ಹೆತ್ತವರ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ. ಅವರ ಕಾನೂನು ಹೋರಾಟಕ್ಕೆ ನಾವು ಸಂಪೂರ್ಣವಾಗಿ ಜೊತೆ ನಿಲ್ಲುತ್ತೇವೆ ಮತ್ತು ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ಒದಗಿಸುತ್ತೇವೆ” ಎಂದು ಶಾಸಕರು ಭರವಸೆ ನೀಡಿದರು.
ತಂದೆಯ ಕಣ್ಣೀರು, ಕಾಲೇಜು ಆಡಳಿತದ ವಿರುದ್ಧ ಆರೋಪ
ಮಾಧ್ಯಮಗಳೊಂದಿಗೆ ತಮ್ಮ ನೋವನ್ನು ಹಂಚಿಕೊಂಡ ಅಕಾಂಕ್ಷಾ ಅವರ ತಂದೆ ಸುರೇಂದ್ರ ನಾಯರ್, “ನಾನು ತುಂಬಾ ಕಷ್ಟಪಟ್ಟು ನನ್ನ ಮಗಳು ಅಕಾಂಕ್ಷಾಳನ್ನು ಓದಿಸಿದ್ದೇನೆ. ಅವಳು ಆತ್ಮಹತ್ಯೆ ಮಾಡಿಕೊಳ್ಳುವ ಹುಡುಗಿಯೇ ಅಲ್ಲ. ಅವಳು ಕಾಲೇಜಿನಲ್ಲಿ ಹಾಗೂ ಉದ್ಯೋಗ ಮಾಡುತ್ತಿದ್ದ ಕಂಪನಿಯಲ್ಲೂ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಳು ಮತ್ತು ಒಳ್ಳೆಯ ಹೆಸರು ಗಳಿಸಿದ್ದಳು. ಜರ್ಮನಿಗೆ ಹೋಗಿ ಉದ್ಯೋಗ ಮಾಡುವ ಮಹತ್ವಾಕಾಂಕ್ಷೆ ಅವಳಲ್ಲಿತ್ತು. ಪ್ರತಿದಿನ ಮನೆಗೆ ಕರೆ ಮಾಡಿ ಸಂತೋಷದಿಂದ ಮಾತನಾಡುತ್ತಿದ್ದಳು,” ಎಂದು ಕಣ್ಣೀರು ಹಾಕಿದರು.
ಆಕಾಂಕ್ಷಾ ಸಾವಿನ ಪ್ರಕರಣದಲ್ಲಿ ಕಾಲೇಜು ಆಡಳಿತದವರು ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದ ಸುರೇಂದ್ರ ನಾಯರ್, “ನನ್ನ ಮಗಳದ್ದು ಆತ್ಮಹತ್ಯೆ ಎಂದು ಮುಚ್ಚಿಹಾಕಲು ಕಾಲೇಜಿನವರು ಪ್ರಯತ್ನಿಸುತ್ತಿದ್ದಾರೆ. ಮೊದಲ ಎಫ್ಐಆರ್ನಲ್ಲಿ ‘ಸಾವಿನ ಬಗ್ಗೆ ಯಾವುದೇ ಅನುಮಾನವಿಲ್ಲ’ ಎಂದು ನಮಗೆ ಅರ್ಥವಾಗದ ಪಂಜಾಬಿ ಭಾಷೆಯಲ್ಲಿ ಬರೆದು, ಸಹಿ ಹಾಕಿಸಿಕೊಂಡಿದ್ದರು. ನಂತರ ನಮಗೆ ವಿಷಯ ತಿಳಿದು ಗಲಾಟೆ ಮಾಡಿದಾಗ, ಒತ್ತಡಕ್ಕೆ ಮಣಿದು ಬೇರೆ ಎಫ್ಐಆರ್ ದಾಖಲಿಸಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ನನ್ನ ಮಗಳ ಸಾವಿಗೆ ನ್ಯಾಯ ಸಿಗಲೇಬೇಕು. ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಸತ್ಯಾಂಶವನ್ನು ಹೊರಗೆಳೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಈ ನಿಗೂಢ ಸಾವಿನ ಹಿಂದಿರುವ ಸತ್ಯ ಬಯಲಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ,” ಎಂದು ಸುರೇಂದ್ರ ನಾಯರ್ ಅವರು ನೋವಿನಿಂದ ನುಡಿದರು.
ಆಕಾಂಕ್ಷಾ ಅವರ ನಿಗೂಢ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಪ್ರಕರಣದ ತನಿಖೆ ಮುಂದುವರೆದಿದೆ. ಬೋಳಿಯಾರ್ನಲ್ಲಿ ನಡೆದ ಅಂತಿಮ ಕ್ರಿಯೆಯಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಭಾಗವಹಿಸಿದ್ದರು.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ
ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.
ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.
-
ಮಂಗಳೂರು13 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
Uncategorized10 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಸ್ಥಳೀಯ17 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು20 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ12 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ14 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ19 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















