Connect with us

ಆರೋಗ್ಯ

Buttermilk-ಮಜ್ಜಿಗೆ ಅಮೃತವೇ? ಎಲ್ಲರಿಗೂ ಅಲ್ಲ! ಈ ಸಮಸ್ಯೆಗಳಿದ್ದರೆ ಮಜ್ಜಿಗೆಯಿಂದ ದೂರವಿರಿ!

Published

on

Ad Widget

Ad Widget

Ad Widget

Ad Widget

ಬೇಸಿಗೆ ಬಂತೆಂದರೆ ಸಾಕು, ದೇಹಕ್ಕೆ ತಂಪು ನೀಡುವ ಪಾನೀಯಗಳತ್ತ ನಮ್ಮ ಮನಸ್ಸು ಹರಿಯುತ್ತದೆ. ಅದರಲ್ಲೂ ಮಜ್ಜಿಗೆ ಎಂದರೆ ಎಷ್ಟೋ ಜನರಿಗೆ ಪಂಚಪ್ರಾಣ. ಜ್ಯೂಸ್‌ಗಳಿಗಿಂತ ಮನೆಯಲ್ಲೇ ತಯಾರಿಸಬಹುದಾದ ಮಜ್ಜಿಗೆ ಅಥವಾ ಮೊಸರನ್ನು ಹೆಚ್ಚು ಮಂದಿ ಇಷ್ಟಪಡುತ್ತಾರೆ. ಆದರೆ, “ಅತಿಯಾದರೆ ಅಮೃತವೂ ವಿಷ” ಎಂಬಂತೆ, ಆರೋಗ್ಯಕರ ಎಂದುಕೊಂಡಿರುವ ಮಜ್ಜಿಗೆ ಕೂಡ ಕೆಲವರಿಗೆ ಹಾನಿಕಾರಕವಾಗಬಹುದು.

Ad Widget

Ad Widget

Ad Widget

Ad Widget

ಬೇಸಿಗೆ ಬಂತೆಂದರೆ ಸಾಕು, ದೇಹಕ್ಕೆ ತಂಪು ನೀಡುವ ಪಾನೀಯಗಳತ್ತ ನಮ್ಮ ಮನಸ್ಸು ಹರಿಯುತ್ತದೆ. ಅದರಲ್ಲೂ ಮಜ್ಜಿಗೆ ಎಂದರೆ ಎಷ್ಟೋ ಜನರಿಗೆ ಪಂಚಪ್ರಾಣ. ಜ್ಯೂಸ್‌ಗಳಿಗಿಂತ ಮನೆಯಲ್ಲೇ ತಯಾರಿಸಬಹುದಾದ ಮಜ್ಜಿಗೆ ಅಥವಾ ಮೊಸರನ್ನು ಹೆಚ್ಚು ಮಂದಿ ಇಷ್ಟಪಡುತ್ತಾರೆ. ಆದರೆ, “ಅತಿಯಾದರೆ ಅಮೃತವೂ ವಿಷ” ಎಂಬಂತೆ, ಆರೋಗ್ಯಕರ ಎಂದುಕೊಂಡಿರುವ ಮಜ್ಜಿಗೆ ಕೂಡ ಕೆಲವರಿಗೆ ಹಾನಿಕಾರಕವಾಗಬಹುದು.

Ad Widget

Ad Widget alt="Ad Widget"/>

Ad Widget

ಕೆಲವೊಂದು ಆರೋಗ್ಯ ಸಮಸ್ಯೆಗಳಿರುವವರು ಮಜ್ಜಿಗೆ ಸೇವನೆಯನ್ನು ಮಿತಿಗೊಳಿಸುವುದು ಅಥವಾ ಸಂಪೂರ್ಣವಾಗಿ ತ್ಯಜಿಸುವುದು ಒಳಿತು. ಇಲ್ಲವಾದರೆ, ಆರೋಗ್ಯ ವೃದ್ಧಿಸುವ ಬದಲು ಅಪಾಯವನ್ನು ಮೈಮೇಲೆ ಎಳೆದುಕೊಂಡಂತಾಗುತ್ತದೆ. ಹಾಗಾದರೆ, ಯಾರಿಗೆಲ್ಲಾ ಮಜ್ಜಿಗೆ ಶತ್ರು? ಮಜ್ಜಿಗೆಯಿಂದಾಗುವ ಅಡ್ಡಪರಿಣಾಮಗಳೇನು? ಇಲ್ಲಿದೆ ನೋಡಿ ವಿವರವಾದ ಮಾಹಿತಿ.

Ad Widget

Ad Widget <> Ad Widget

ಮಜ್ಜಿಗೆ ಸೇವನೆಯಿಂದ ಎದುರಾಗಬಹುದಾದ ಸಂಭಾವ್ಯ ತೊಂದರೆಗಳು:
ಜೀರ್ಣಕ್ರಿಯೆಯ ಸಮಸ್ಯೆ: ಮಜ್ಜಿಗೆಯಲ್ಲಿ ಲ್ಯಾಕ್ಟೋಸ್ ಅಂಶ ಅಧಿಕವಾಗಿರುತ್ತದೆ. ಲ್ಯಾಕ್ಟೋಸ್ ಅಸಹಿಷ್ಣುತೆ (Lactose intolerance) ಇರುವವರಿಗೆ ಇದು ಜೀರ್ಣವಾಗದೆ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್, ಮತ್ತು ಹೊಟ್ಟೆ ನೋವನ್ನು ಉಂಟುಮಾಡಬಹುದು.

ಕರುಳಿನ ಅಸಮತೋಲನ: ಮಜ್ಜಿಗೆಯಲ್ಲಿರುವ ಪ್ರೋಬಯಾಟಿಕ್‌ಗಳು ಸಾಮಾನ್ಯವಾಗಿ ಕರುಳಿಗೆ ಒಳ್ಳೆಯದು. ಆದರೆ, ಕೆಲವರಲ್ಲಿ ಇದು ಕರುಳಿನ ಸೂಕ್ಷ್ಮ ಪರಿಸರಕ್ಕೆ ಅಡ್ಡಿಪಡಿಸಿ, ಅತಿಸಾರ ಅಥವಾ ಮಲಬದ್ಧತೆಗೆ ಕಾರಣವಾಗಬಹುದು.

Ad Widget

Ad Widget

ಕೊಲೆಸ್ಟ್ರಾಲ್ ಹೆಚ್ಚಳ: ಮಜ್ಜಿಗೆಯಲ್ಲಿ (ವಿಶೇಷವಾಗಿ ಕೆನೆಭರಿತ ಮೊಸರಿನಿಂದ ಮಾಡಿದ ಮಜ್ಜಿಗೆ) ಕೊಬ್ಬಿನಾಂಶ ಅಧಿಕವಾಗಿದ್ದರೆ, ಅದರ ಅತಿಯಾದ ಸೇವನೆಯು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಿ, ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ತಂದೊಡ್ಡಬಹುದು.

ಮೈಗ್ರೇನ್ ಮತ್ತು ತಲೆನೋವು: ಮಜ್ಜಿಗೆಯಲ್ಲಿರುವ ‘ಟೈರಮೈನ್’ ಎಂಬ ರಾಸಾಯನಿಕಕ್ಕೆ ಸೂಕ್ಷ್ಮವಾಗಿರುವ ವ್ಯಕ್ತಿಗಳಲ್ಲಿ ಇದು ಮೈಗ್ರೇನ್ ಮತ್ತು ತೀವ್ರ ತಲೆನೋವನ್ನು ಪ್ರಚೋದಿಸಬಹುದು.

ಈ ವ್ಯಕ್ತಿಗಳು ಮಜ್ಜಿಗೆಯಿಂದ ದೂರವಿದ್ದರೆ ಕ್ಷೇಮ:
ಹಾಲಿನ ಉತ್ಪನ್ನಗಳ ಅಲರ್ಜಿ (Milk Allergy) ಇರುವವರು:
ಹಾಲಿನ ಅಲರ್ಜಿ ಇರುವವರು ಮಜ್ಜಿಗೆಯನ್ನು ಸೇವಿಸಲೇಬಾರದು. ಸೇವಿಸಿದ ತಕ್ಷಣ ಲಕ್ಷಣಗಳು ಕಾಣಿಸದಿದ್ದರೂ, ನಿಧಾನವಾಗಿ ದೇಹದ ಮೇಲೆ ಗಂಭೀರ ಅಡ್ಡಪರಿಣಾಮಗಳು ಉಂಟಾಗಬಹುದು.

ಅಧಿಕ ರಕ್ತದೊತ್ತಡ (High Blood Pressure) ರೋಗಿಗಳು:
ಸಾಮಾನ್ಯವಾಗಿ ಮಜ್ಜಿಗೆಗೆ ಉಪ್ಪು ಸೇರಿಸಿ ಕುಡಿಯುವ ಅಭ್ಯಾಸವಿರುತ್ತದೆ. ಉಪ್ಪಿನ ಅಧಿಕ ಸೇವನೆಯು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಹೀಗಾಗಿ, ಅಧಿಕ ರಕ್ತದೊತ್ತಡವಿರುವವರು ಉಪ್ಪುರಹಿತ ಮಜ್ಜಿಗೆಯನ್ನು ಮಿತವಾಗಿ ಸೇವಿಸಬೇಕು ಅಥವಾ ವೈದ್ಯರ ಸಲಹೆ ಪಡೆಯಬೇಕು.

ಮೂತ್ರಪಿಂಡ (ಕಿಡ್ನಿ) ರೋಗಿಗಳು:
ಮಜ್ಜಿಗೆಯಲ್ಲಿ ಪೊಟ್ಯಾಸಿಯಮ್ ಮತ್ತು ರಂಜಕ (Phosphorus) ಅಂಶಗಳು ಇರುವುದರಿಂದ, ಮೂತ್ರಪಿಂಡದ ಕಾರ್ಯಕ್ಷಮತೆ ಕಡಿಮೆಯಿರುವ ರೋಗಿಗಳಿಗೆ ಇದು ಹಾನಿಕಾರಕ. ಇವರು ಮಜ್ಜಿಗೆಯನ್ನು ಆದಷ್ಟು ಕಡಿಮೆ ಪ್ರಮಾಣದಲ್ಲಿ ಅಥವಾ ವೈದ್ಯರ ನಿರ್ದೇಶನದಂತೆ ಮಾತ್ರ ಸೇವಿಸಬೇಕು.

ಆಮ್ಲೀಯತೆ (Acidity) ಸಮಸ್ಯೆ ಇರುವವರು:
ಆಮ್ಲೀಯತೆಯಿಂದ ಬಳಲುತ್ತಿರುವವರು ಮಜ್ಜಿಗೆಯಿಂದ ದೂರವಿರುವುದು ಉತ್ತಮ. ಮಜ್ಜಿಗೆಯ ಸೇವನೆಯು ಕೆಲವರಲ್ಲಿ ಆಮ್ಲೀಯತೆಯನ್ನು ಇನ್ನಷ್ಟು ಹೆಚ್ಚಿಸಬಹುದು.

ಮಜ್ಜಿಗೆಯು ಆರೋಗ್ಯಕರ ಪಾನೀಯವಾದರೂ, ನಿಮ್ಮ ದೇಹ ಪ್ರಕೃತಿ ಮತ್ತು ಆರೋಗ್ಯ ಸ್ಥಿತಿಗನುಗುಣವಾಗಿ ಅದನ್ನು ಸೇವಿಸುವುದು ಮುಖ್ಯ. ಮೇಲೆ ತಿಳಿಸಿದ ಯಾವುದೇ ಸಮಸ್ಯೆಗಳಿದ್ದರೆ, ಮಜ್ಜಿಗೆಯನ್ನು ಸೇವಿಸುವ ಮುನ್ನ ಎಚ್ಚರಿಕೆ ವಹಿಸಿ ಅಥವಾ ನಿಮ್ಮ ವೈದ್ಯರ ಸಲಹೆ ಪಡೆಯಿರಿ. ಕೆಲವೊಮ್ಮೆ, ಅತಿಯಾದ ಮಜ್ಜಿಗೆ ಸೇವನೆಯೂ ಸಹ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು.

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಆರೋಗ್ಯ

‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ

Published

on

Ad Widget

Ad Widget

Ad Widget

Ad Widget

35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.

Ad Widget

Ad Widget <> Ad Widget

ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.

‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.

Ad Widget

Ad Widget

ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.

Ad Widget
Continue Reading

ಆರೋಗ್ಯ

Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ

Published

on

Ad Widget

Ad Widget

Ad Widget

Ad Widget

ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.

Ad Widget

Ad Widget <> Ad Widget

ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.

ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!