2025-26ನೇ ಸಾಲಿಗೆ ವಿನಾಯಿತಿ:ಪ್ರಸ್ತುತ ರೂಪಿಸಲಾಗಿರುವ ಒಂದನೇ ತರಗತಿಗೆ 6 ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮವು 2025-26ನೇ ಶೈಕ್ಷಣಿಕ […]" /> 2025-26ನೇ ಸಾಲಿಗೆ ವಿನಾಯಿತಿ:ಪ್ರಸ್ತುತ ರೂಪಿಸಲಾಗಿರುವ ಒಂದನೇ ತರಗತಿಗೆ 6 ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮವು 2025-26ನೇ ಶೈಕ್ಷಣಿಕ […]"> Admission-ಒಂದನೇ ತರಗತಿ ಪ್ರವೇಶಕ್ಕೆ ಈ ದಾಖಲೆಗಳನ್ನು ತಪ್ಪದೇ ಒಯ್ಯಿರಿ! - Nikhara News | Kannada News Website
Connect with us

ಶಿಕ್ಷಣ

Admission-ಒಂದನೇ ತರಗತಿ ಪ್ರವೇಶಕ್ಕೆ ಈ ದಾಖಲೆಗಳನ್ನು ತಪ್ಪದೇ ಒಯ್ಯಿರಿ!

Published

on

Ad Widget

Ad Widget

Ad Widget

Ad Widget

ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಕನಿಷ್ಠ ವಯೋಮಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊಸ ನಿಯಮಗಳನ್ನು ರೂಪಿಸಿದೆ. ಇದರ ಅನ್ವಯ, ಮಗುವು ಜೂನ್ 1ಕ್ಕೆ ಆರು ವರ್ಷಗಳನ್ನು ಪೂರ್ಣಗೊಳಿಸಿರಬೇಕು.

Ad Widget

Ad Widget

Ad Widget

Ad Widget

ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಕನಿಷ್ಠ ವಯೋಮಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊಸ ನಿಯಮಗಳನ್ನು ರೂಪಿಸಿದೆ. ಇದರ ಅನ್ವಯ, ಮಗುವು ಜೂನ್ 1ಕ್ಕೆ ಆರು ವರ್ಷಗಳನ್ನು ಪೂರ್ಣಗೊಳಿಸಿರಬೇಕು.

Ad Widget

Ad Widget alt="Ad Widget"/>

Ad Widget

2025-26ನೇ ಸಾಲಿಗೆ ವಿನಾಯಿತಿ:
ಪ್ರಸ್ತುತ ರೂಪಿಸಲಾಗಿರುವ ಒಂದನೇ ತರಗತಿಗೆ 6 ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮವು 2025-26ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ.

Ad Widget

Ad Widget <> Ad Widget

2026-27 ರಿಂದ ಕಡ್ಡಾಯ:
ಈ ನಿಯಮವು 2026-27ನೇ ಶೈಕ್ಷಣಿಕ ವರ್ಷದಿಂದ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. ಅಂದರೆ, 2026-27ನೇ ಸಾಲಿನಿಂದ ಒಂದನೇ ತರಗತಿಗೆ ದಾಖಲಾಗುವ ಮಕ್ಕಳು ಆ ವರ್ಷದ ಜೂನ್ 1ನೇ ತಾರೀಖಿಗೆ 6 ವರ್ಷಗಳನ್ನು ಪೂರ್ಣಗೊಳಿಸಿರಲೇಬೇಕು.

ಎಲ್.ಕೆ.ಜಿ ಮತ್ತು ಯು.ಕೆ.ಜಿ ಪ್ರವೇಶಾತಿ ವಯೋಮಿತಿ (2025-26 ರಿಂದ):
ಸರ್ಕಾರದ ಆದೇಶ ಸಂಖ್ಯೆ: ಇಪಿ 100 ಪಿಜಿಸಿ 22024, ದಿನಾಂಕ 26.06.2024 ರ ಅನ್ವಯ, 2025-26ನೇ ಶೈಕ್ಷಣಿಕ ವರ್ಷದಿಂದ ಈ ಕೆಳಗಿನ ಕನಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಎಲ್.ಕೆ.ಜಿ. (LKG) ಅಥವಾ ತತ್ಸಮಾನ ತರಗತಿ: ದಾಖಲಾತಿಗೆ 4 ವರ್ಷಗಳು ಪೂರ್ಣಗೊಂಡಿರಬೇಕು.
ಯು.ಕೆ.ಜಿ. (UKG) ಅಥವಾ ತತ್ಸಮಾನ ತರಗತಿ: ದಾಖಲಾತಿಗೆ 5 ವರ್ಷಗಳು ಪೂರ್ಣಗೊಂಡಿರಬೇಕು.

Ad Widget

Ad Widget

ದಾಖಲಾತಿಗೆ ಕಡ್ಡಾಯ ದಾಖಲೆಗಳು:
* ಮಕ್ಕಳ ಜನನ ಪ್ರಮಾಣಪತ್ರ
* ಆಸ್ಪತ್ರೆಯ ದಾಖಲೆ
* ಅಂಗನವಾಡಿ ದಾಖಲೆ
* ಆರೋಗ್ಯ ಸಹಾಯಕಿಯರ ದೃಢೀಕರಣ
* ಆಧಾರ್ ಕಾರ್ಡ್
* ಪೋಷಕರು ನೀಡುವ ಸ್ವಯಂ ದೃಢೀಕರಿಸಿದ ಪ್ರಮಾಣಪತ್ರ

ಮಕ್ಕಳ ಶಾಲಾ ಪ್ರವೇಶಾತಿ ಸಂದರ್ಭದಲ್ಲಿ ವಯಸ್ಸನ್ನು ದೃಢೀಕರಿಸಲು ಈ ಮೇಲಿನ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

Ad Widget

ಶಿಕ್ಷಣ

Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Published

on

Ad Widget

Ad Widget

Ad Widget

Ad Widget

ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

Ad Widget

Ad Widget <> Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.

Ad Widget

Ad Widget <> Ad Widget

ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!