Connect with us

ಬಿಗ್ ನ್ಯೂಸ್

Dr. M.A. Saleem-ಡಾ. ಅಲೋಕ್ ಮೋಹನ್ ಸೇವೆಯಿಂದ ನಿವೃತ್ತಿ; ಹಂಗಾಮಿ ಡಿಜಿ ಐಜಿಪಿಯಾಗಿ ಡಾ. ಎಂ.ಎ. ಸಲೀಂ ಆಯ್ಕೆ

Published

on

Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಡಾ. ಅಲೋಕ್ ಮೋಹನ್ ಅವರು ಮೇ 21ರಂದು ಸೇವೆಯಿಂದ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ, 1993ನೇ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ. ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಡಾ. ಅಲೋಕ್ ಮೋಹನ್ ಅವರು ಮೇ 21ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಜ್ಯ ಪೊಲೀಸ್ ಇಲಾಖೆಯ ಮುಂದಿನ ಮುಖ್ಯಸ್ಥರು ಯಾರು ಎಂಬ ಕುತೂಹಲ ಮೂಡಿದೆ. ಸದ್ಯಕ್ಕೆ, 1993ನೇ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ. ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಕಾಯಂ ಹುದ್ದೆಗೆ ಪೈಪೋಟಿ ಮತ್ತು ಕಾನೂನು ತೊಡಕು:
ಮೂಲಗಳ ಪ್ರಕಾರ, ಕಾಯಂ ಡಿಜಿ ಮತ್ತು ಐಜಿಪಿ ಹುದ್ದೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಡಾ. ಎಂ.ಎ. ಸಲೀಂ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಡಾ. ಸಲೀಂ ಅವರನ್ನೇ ಈ ಹುದ್ದೆಗೆ ಆಯ್ಕೆ ಮಾಡಲು ಸರ್ಕಾರ ಒಲವು ಹೊಂದಿದೆ ಎನ್ನಲಾಗಿದ್ದರೂ, ಸೇವಾ ಹಿರಿತನದ ನಿಯಮಗಳು ಇದಕ್ಕೆ ಅಡ್ಡಿಯಾಗುವ ಸಾಧ್ಯತೆಗಳಿವೆ.

Ad Widget

Ad Widget <> Ad Widget

ಡಾ. ಸಲೀಂ ಅವರು ಪ್ರಶಾಂತ್ ಕುಮಾರ್ ಠಾಕೂರ್ ಅವರಿಗಿಂತ ಒಂದು ವರ್ಷ ಕಡಿಮೆ ಸೇವಾ ಹಿರಿತನ ಹೊಂದಿದ್ದಾರೆ. ಹೀಗಾಗಿ, ಅವರನ್ನು ಕಾಯಂ ಆಗಿ ನೇಮಿಸಿದರೆ ಕಾನೂನು ತೊಡಕುಗಳು ಎದುರಾಗಬಹುದು ಎಂಬುದು ಸರ್ಕಾರದ ಚಿಂತೆಗೆ ಕಾರಣವಾಗಿದೆ. ಈ ಕಾರಣದಿಂದ, ಡಾ. ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ನೇಮಿಸುವ ಮೂಲಕ ಸರ್ಕಾರ ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ. ಆದರೆ, ಕಾಯಂ ಡಿಜಿ ಮತ್ತು ಐಜಿಪಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ಇನ್ನೂ ಅಂತಿಮಗೊಂಡಿಲ್ಲ.

ಡಾ. ಎಂ.ಎ. ಸಲೀಂ ಯಾರು?
ಡಾ. ಎಂ.ಎ. ಸಲೀಂ ಅವರು 1993ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಪೊಲೀಸ್‌ ಇಲಾಖೆಯಲ್ಲಿ ಕಳೆದ 30 ವರ್ಷಗಳಿಂದ ವಿವಿಧ ಮಹತ್ವದ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. 1995ರಲ್ಲಿ ಕುಶಾಲನಗರ ಎಎಸ್‌ಪಿಯಾಗಿ ತಮ್ಮ ವೃತ್ತಿಜೀವನ ಆರಂಭಿಸಿದರು. 1998ರಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಪದೋನ್ನತಿ ಪಡೆದರು. ನಂತರ, ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರು (ಐಜಿಪಿ), ಮೈಸೂರು ನಗರ ಪೊಲೀಸ್ ಆಯುಕ್ತರು, ಮತ್ತು ಬೆಂಗಳೂರು ನಗರ ವಿಶೇಷ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪೊಲೀಸ್ ಇಲಾಖೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ ಅನುಭವ ಅವರಿಗಿದೆ. ಪ್ರಸ್ತುತ, ಕರ್ನಾಟಕ ಅಪರಾಧ ತನಿಖಾ ದಳದ (ಸಿಐಡಿ) ಡಿಜಿಪಿ ಹುದ್ದೆಯಲ್ಲಿದ್ದು, ಇದೀಗ ಹಂಗಾಮಿ ಡಿಜಿ ಮತ್ತು ಐಜಿಪಿ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ.

Click to comment

Leave a Reply

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಬಿಗ್ ನ್ಯೂಸ್

Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.

Ad Widget

Ad Widget <> Ad Widget

ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.

ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.

Ad Widget

Ad Widget

ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.

ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.

ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.

ಸಮಗ್ರ ತೋಟಗಾರಿಕಾ ಸೇವೆ:

ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!