Connect with us

ಸ್ಥಳೀಯ

Subrahmanya Temple-ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಇನ್ನು ಮುಂದೆ ಸಿಗಲಿದೆ ಬೆಳಗಿನ ಉಪಾಹಾರ ಸೇವೆ: ಭಕ್ತರಿಗೆ ಮತ್ತೊಂದು ಕಲ್ಯಾಣಕಾರಿ ಯೋಜನೆ

Published

on



Ad Widget

Ad Widget

Ad Widget

Ad Widget

ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ, ಸರ್ಪದೋಷ ನಿವಾರಣೆಯ ಪುಣ್ಯಭೂಮಿ, ಲಕ್ಷಾಂತರ ಭಕ್ತರ ಆರಾಧ್ಯ ದೈವವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿಯಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಮಹತ್ವದ ಯೋಜನೆಯೊಂದು ರೂಪುಗೊಳ್ಳುತ್ತಿದೆ. ಪ್ರಸ್ತುತ ಮಧ್ಯಾಹ್ನ ಮತ್ತು ರಾತ್ರಿ ಯಶಸ್ವಿಯಾಗಿ ಅನ್ನ ಸಂತರ್ಪಣೆ ನಡೆಸುತ್ತಿರುವ ದೇಗುಲವು, ಇನ್ನು ಮುಂದೆ ಬೆಳಗಿನ ಉಪಾಹಾರ ಸೇವೆಯನ್ನು ಪ್ರಾರಂಭಿಸಲು ಸಜ್ಜಾಗುತ್ತಿದೆ.

Ad Widget

Ad Widget

Ad Widget

Ad Widget

ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ, ಸರ್ಪದೋಷ ನಿವಾರಣೆಯ ಪುಣ್ಯಭೂಮಿ, ಲಕ್ಷಾಂತರ ಭಕ್ತರ ಆರಾಧ್ಯ ದೈವವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿಯಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಮಹತ್ವದ ಯೋಜನೆಯೊಂದು ರೂಪುಗೊಳ್ಳುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಸ್ತುತ ಮಧ್ಯಾಹ್ನ ಮತ್ತು ರಾತ್ರಿ ಯಶಸ್ವಿಯಾಗಿ ಅನ್ನ ಸಂತರ್ಪಣೆ ನಡೆಸುತ್ತಿರುವ ದೇಗುಲವು, ಇನ್ನು ಮುಂದೆ ಬೆಳಗಿನ ಉಪಾಹಾರ ಸೇವೆಯನ್ನು ಪ್ರಾರಂಭಿಸಲು ಸಜ್ಜಾಗುತ್ತಿದೆ. ಈ ಕುರಿತು ದೇಗುಲದ ನೂತನ ವ್ಯವಸ್ಥಾಪನಾ ಸಮಿತಿಯು ಮಹತ್ವದ ತೀರ್ಮಾನ ಕೈಗೊಂಡಿದೆ, ಇದು ದೂರದೂರುಗಳಿಂದ ಆಗಮಿಸುವ ಭಕ್ತರಿಗೆ ಹೆಚ್ಚಿನ ಅನುಕೂಲವನ್ನು ಕಲ್ಪಿಸಲಿದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ, ಕುಮಾರ ಪರ್ವತದ ತಪ್ಪಲಿನಲ್ಲಿ, ಕುಮಾರಧಾರಾ ನದಿಯ ತಟದಲ್ಲಿ ನೆಲೆಸಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವು ನಾಗಾರಾಧನೆಗೆ ಪ್ರಸಿದ್ಧಿ ಪಡೆದಿದೆ. ಇಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯು ಸರ್ಪರಾಜ ವಾಸುಕಿಯೊಂದಿಗೆ ಆದಿಶೇಷನಾಗಿ ನೆಲೆಸಿದ್ದಾನೆ ಎಂಬುದು ಪ್ರತೀತಿ. ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಪೂಜೆ, ನಾಗಪ್ರತಿಷ್ಠೆ ಮುಂತಾದ ವಿಶೇಷ ಸೇವೆಗಳಿಗಾಗಿ ದೇಶದ ನಾನಾ ಭಾಗಗಳಿಂದ ಪ್ರತಿನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.



Ad Widget

ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆ ವ್ಯವಸ್ಥೆಯು ಅಖಂಡವಾಗಿ ನಡೆಯುತ್ತಿದ್ದು, ಪ್ರತಿನಿತ್ಯ ಸರಾಸರಿ 8,000 ದಿಂದ 10,000 ಭಕ್ತರು, ಹಾಗೂ ವಿಶೇಷ ದಿನಗಳಲ್ಲಿ 20,000ಕ್ಕೂ ಹೆಚ್ಚು ಭಕ್ತರು ಸ್ವಾಮಿಯ ಪ್ರಸಾದವನ್ನು ಸ್ವೀಕರಿಸಿ ಧನ್ಯರಾಗುತ್ತಾರೆ. ಸರಳವಾದರೂ ಶುಚಿ-ರುಚಿಯಾದ, ಸಾತ್ವಿಕ ಆಹಾರವನ್ನು (ಸಾಮಾನ್ಯವಾಗಿ ಅನ್ನ, ಸಾರು, ಪಲ್ಯ, ಪಾಯಸ) ಇಲ್ಲಿ ಬಡಿಸಲಾಗುತ್ತದೆ. ಈ ಸೇವೆಗಾಗಿ ದೇಗುಲದ ವತಿಯಿಂದ ಹಾಗೂ ಭಕ್ತರ ದೇಣಿಗೆಯಿಂದ ವ್ಯವಸ್ಥೆ ಕಲ್ಪಿಸಲಾಗಿದೆ.

Ad Widget

Ad Widget

ನೂತನ ಉಪಾಹಾರ ಯೋಜನೆಯ ವಿವರಗಳು:
ದೇಗುಲಕ್ಕೆ ಆಗಮಿಸುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಅದರಲ್ಲೂ ಮುಂಜಾನೆ ಹೊತ್ತು ಪೂಜೆ, ಸೇವೆಗಳಿಗೆ ಬರುವವರು, ಹಾಗೂ ರಾತ್ರಿ ತಂಗಿ ಬೆಳಿಗ್ಗೆ ದೇವರ ದರ್ಶನ ಪಡೆಯುವವರಿಗೆ ಉಪಾಹಾರದ ವ್ಯವಸ್ಥೆ ಇರಲಿಲ್ಲ. ಇದನ್ನು ಮನಗಂಡ ದೇಗುಲದ ನೂತನ ವ್ಯವಸ್ಥಾಪನಾ ಸಮಿತಿಯು, ಇತ್ತೀಚೆಗೆ ನಡೆದ ತನ್ನ ಸಭೆಯಲ್ಲಿ ಈ ವಿಷಯವನ್ನು ಗಂಭೀರವಾಗಿ ಚರ್ಚಿಸಿ, ಬೆಳಗಿನ ಉಪಾಹಾರ ಸೇವೆಯನ್ನು ಪ್ರಾರಂಭಿಸಲು ಸರ್ವಾನುಮತದಿಂದ ನಿರ್ಧರಿಸಿದೆ.

ಉಪಾಹಾರದ ವಿಧಗಳು, ಸಮಯ ನಿಗದಿ ಇತ್ಯಾದಿಗಳನ್ನು ಮುಂಬರುವ ದಿನಗಳಲ್ಲಿ ಸಮಿತಿಯು ಅಂತಿಮಗೊಳಿಸಲಿದ್ದು, ತದನಂತರ ಈ ಮಹತ್ಕಾರ್ಯವು ಅನುಷ್ಠಾನಗೊಳ್ಳಲಿದೆ.

ಅದ್ಯಕ್ಷ ಹರೀಶ್‌ ಇಂಜಾಡಿಯವರ ನೇತ್ರತ್ವದಲ್ಲಿ ನಡೆದ ವ್ಯವಸ್ಥಾಪನಾ ಸಮಿತಿಯ ಪ್ರಥಮ ಸಭೆಯಲ್ಲಿ ಸದಸ್ಯರಾದ ಡಾ.ಬಿ. ರಘು, ಅಶೋಕ್‌ ನೆಕ್ರಾಜೆ, ಮಹೇಶ್‌ ಕುಮಾರ್‌ ಕರಿಕ್ಕಳ, ಅಜಿತ್‌ ಕುಮಾರ್‌, ಸೌಮ್ಯ ಬಿ.ಕೆ., ಪ್ರವೀಣ ಪಿ., ಲೀಲಾ ಮನಮೋಹನ್‌, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್‌ ಭಾಗವಹಿಸಿದ್ದರು.

Ad Widget

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading