ಮಂಗಳೂರು
Mangalore-Crime Update : ಮಂಗಳೂರು : ಮನೆ ಬಿಟ್ಟು ಹೋದ ಪತ್ನಿ – ಸಂಬಂಧ ಕೂಡಿಸಿದ ದಲ್ಲಾಳಿಯ ಬರ್ಬರ ಹತ್ಯೆಗೈದ ಯುವಕ – ಆರೋಪಿ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ವಳಚ್ಚಿಲ್ ನಲ್ಲಿ ಗುರುವಾರ ರಾತ್ರಿ ನಡೆದ ಭಯಾನಕ ಘಟನೆಯೊಂದರಲ್ಲಿ, ಮದುವೆ ದಲ್ಲಾಳಿಯೊಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತರನ್ನು ವಾಮಂಜೂರಿನ ನಿವಾಸಿ ಸುಲೇಮಾನ್ (50) ಎಂದು ಗುರುತಿಸಲಾಗಿದೆ. ಕೃತ್ಯ ಎಸಗಿದ ಆರೋಪಿ ಮುಸ್ತಾಫಾ (30) ಎಂಬಾತನನ್ನು ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ.
ಮಂಗಳೂರು, ಮೇ 22: ದಕ್ಷಿಣ ಕನ್ನಡ ಜಿಲ್ಲೆಯ ವಳಚ್ಚಿಲ್ ನಲ್ಲಿ ಗುರುವಾರ ರಾತ್ರಿ ನಡೆದ ಭಯಾನಕ ಘಟನೆಯೊಂದರಲ್ಲಿ, ಮದುವೆ ದಲ್ಲಾಳಿಯೊಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತರನ್ನು ವಾಮಂಜೂರಿನ ನಿವಾಸಿ ಸುಲೇಮಾನ್ (50) ಎಂದು ಗುರುತಿಸಲಾಗಿದೆ. ಕೃತ್ಯ ಎಸಗಿದ ಆರೋಪಿ ಮುಸ್ತಾಫಾ (30) ಎಂಬಾತನನ್ನು ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ. ಈ ದಾಳಿಯಲ್ಲಿ ಮೃತ ಸುಲೇಮಾನ್ ಅವರ ಇಬ್ಬರು ಪುತ್ರರು ಸಹ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ಹಿನ್ನೆಲೆ:
ಕೊಲೆಯಾದ ಸುಲೇಮಾನ್ ಅವರು ಎಂಟು ತಿಂಗಳ ಹಿಂದೆ ಆರೋಪಿ ಮುಸ್ತಾಫಾನ ಮದುವೆಯನ್ನು ಶಾಹೀನಾಜ್ ಎಂಬ ಯುವತಿಯೊಂದಿಗೆ ನೆರವೇರಿಸಿದ್ದರು. ಆದರೆ, ಈ ವಿವಾಹದಲ್ಲಿ ಸಾಮರಸ್ಯ ಮೂಡದೆ, ದಾಂಪತ್ಯದಲ್ಲಿ ಕಲಹ ಉಂಟಾಗಿತ್ತು. ಇದರಿಂದ ಬೇಸತ್ತ ಶಾಹೀನಾಜ್ ಕಳೆದ ಎರಡು ತಿಂಗಳಿಂದ ತನ್ನ ತವರು ಮನೆಯಲ್ಲಿ ವಾಸವಾಗಿದ್ದರು. ಈ ಬೆಳವಣಿಗೆಯು ಮುಸ್ತಾಫಾ ಮತ್ತು ಸುಲೇಮಾನ್ ನಡುವೆ ತೀವ್ರ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.
ಮಾರಣಾಂತಿಕ ವಾಗ್ವಾದ:
ಗುರುವಾರ ರಾತ್ರಿ, ಮುಸ್ತಾಫಾ ಅವರು ಸುಲೇಮಾನ್ಗೆ ಆಕ್ಷೇಪಾರ್ಹ ರೀತಿಯಲ್ಲಿ ಫೋನ್ ಕರೆ ಮಾಡಿ ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ. ಈ ವಿಷಯವಾಗಿ ಚರ್ಚಿಸಲು ಸುಲೇಮಾನ್ ತಮ್ಮ ಇಬ್ಬರು ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಅವರೊಂದಿಗೆ ವಾಲಾಚಿಲ್ನಲ್ಲಿರುವ ಮುಸ್ತಾಫಾನ ಮನೆಗೆ ತೆರಳಿದ್ದರು. ಅಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ತೀವ್ರ ಜಗಳ ಉಂಟಾಗಿದೆ.
ಈ ಸಂದರ್ಭದಲ್ಲಿ ಆಕ್ರೋಶಗೊಂಡ ಮುಸ್ತಾಫಾ, ಏಕಾಏಕಿ ಚಾಕುವಿನಿಂದ ಸುಲೇಮಾನ್ಗೆ ಚೂರಿಯಿಂದಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಸುಲೇಮಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆಯನ್ನು ರಕ್ಷಿಸಲು ಮುಂದಾದ ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಅವರಿಗೂ ಚಾಕು ಇರಿತದಿಂದ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪರಾಧ
Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.
ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಡಿಆರ್ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.
ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ನಿಧನ ವಾರ್ತೆ
ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
-
ಸ್ಥಳೀಯ21 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ21 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಂತರ ರಾಜ್ಯ21 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ21 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು19 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್22 hours agoChetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್21 hours agoHeavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
-
ಅಂತರ ರಾಜ್ಯ21 hours agoRBI-ಡಿಜಿಟಲ್ ವಂಚನೆಗೆ ಆರ್ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!















