ಸ್ಥಳೀಯ
Dharmasthala-ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನ ಬಳಕೆ, ಸುರಕ್ಷತೆ, ಬದ್ಧತೆ, ಬ್ಯಾಂಕ್ ಮೂಲಕ ನಡೆಸುವ ವ್ಯವಹಾರಗಳ ದಾಖಲಾತಿ ನಿರ್ವಹಣೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ ಮೊದಲಾದ 114 ಅಂಶಗಳಲ್ಲಿ 109 ಪ್ರಮುಖ ಅಂಶಗಳನ್ನು ಗಮನಿಸಿದ ಲಂಡನ್‌ನ ಎನ್‌ಕ್ಯೂಎ(National Quality Assurance) ಸಂಸ್ಥೆ ಈ ಹಿಂದೆ 2024ರಲ್ಲಿ ಗ್ರಾಮಾಭಿವೃದ್ಧಿ ಯೋಜನೆಗೆ ಕೊಡಮಾಡಿದ ಐಎಸ್‌ಒ 27001–2013 ಅನ್ನು ಮೇಲ್ದರ್ಜೆಗೇರಿಸಿದೆ.
ಐಎಸ್‌ಒ ಸಂಸ್ಥೆಯಲ್ಲಿ ಸುಮಾರು 120 ದೇಶಗಳು ತಮ್ಮ ಸದಸ್ಯತ್ವವನ್ನು ಹೊಂದಿವೆ. ಎನ್‌ಕ್ಯೂಎ ಸಂಸ್ಥೆ 90 ದೇಶಗಳ ಪ್ರತಿಷ್ಠಿತ ಸಂಸ್ಥೆಗಳನ್ನು ಐಎಸ್‌ಒಗಾಗಿ ಆಡಿಟ್ ಮಾಡುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆಯನ್ನು 38 ನಿಯಮಗಳು ಮತ್ತು 93ರಲ್ಲಿ 90 ಅಂಶಗಳ ಕುರಿತು ಸೂಕ್ಷ್ಮವಾಗಿ ಗಮನಿಸಿ ಈ ಹಿಂದೆ ನೀಡಲಾದ ಐಎಸ್‌ಒ ಅನ್ನು ಇದೀಗ 27001–2022 ಆಗಿ ಮೇಲ್ದರ್ಜೆಗೇರಿಸಿದೆ.
ಜಿ. ಎಸ್. ಭಾರ್ಗವ್ ಅವರು ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಗ್ಗಡೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಭಾರತ ದೇಶದಲ್ಲಿಯೇ ISO 27001–2022 ಪ್ರಮಾಣಪತ್ರ ಪಡೆದ ಚಾರಿಟೇಬಲ್ ಟ್ರಸ್ಟ್ಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊದಲಿಗ ಸಂಸ್ಥೆಯಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳ ನಿರ್ವಹಣೆಯ ಅತ್ಯುತ್ತಮ ಗುಣಮಟ್ಟದ ತಂತ್ರಜ್ಞಾನ, ಪಾರದರ್ಶಕತೆ, ಲೆಕ್ಕಾಚಾರಗಳು, ನಿಯಮಪಾಲನೆ ಮುಂತಾದ ಅನೇಕ ಪ್ರಮುಖ ವಿಷಯಗಳಲ್ಲಿ ವಿಶ್ವದರ್ಜೆಯ ಗುಣಮಟ್ಟವನ್ನು ಹೊಂದಿರುವುದಕ್ಕೆ ಈ ಪ್ರಮಾಣಪತ್ರ ಸಾಕ್ಷಿಯಾಗಿದೆ.
ಬ್ಯಾಂಕ್‌ಗಳ ವ್ಯವಹಾರಗಳ ಪಾರದರ್ಶಕತೆ, ನಿಖರತೆಯ ಉದ್ದೇಶದಿಂದ ‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ ಎಲ್ಲಾ ಬ್ಯಾಂಕ್‌ಗಳಿಗೆ ISO 27001 ಮಾನ್ಯತೆಯನ್ನು ಪಡೆಯಲೇಬೇಕೆಂದು ನಿರ್ದೇಶಿಸಿದೆ. ಬ್ಯಾಂಕಿನ ಸೇವೆಗಳನ್ನು ಬ್ಯಾಂಕಿನ ಬ್ಯುಸಿನೆಸ್ ಕರೆಸ್ಪಾಂಡೆಂಟ್ ಮೂಲಕ ಸ್ವಸಹಾಯ ಸಂಘ ವ್ಯವಸ್ಥೆಯಲ್ಲಿ ಗ್ರಾಮ ಗ್ರಾಮಗಳಲ್ಲಿ ತರುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯು ಸ್ವಯಂಪ್ರೇರಿತವಾಗಿ ತನ್ನ ಸಂಸ್ಥೆಯನ್ನು ಈ ಉತ್ಕೃಷ್ಟ ಆಡಿಟ್‌ಗೆ ಒಳಪಡಿಸಿ ಈ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.
ನಿಧನ ವಾರ್ತೆ
Subramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ
ದೇವೇಗೌಡ ಅವರು ತುರುವೇಕೆರೆಯಿಂದ ಇತರ ಯಾತ್ರಾರ್ಥಿಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಬಂದಿದ್ದರು ಎನ್ನಲಾಗಿದೆ. ದೂರದ ಪ್ರಯಾಣದ ಬಳಿಕ ಅನಾರೋಗ್ಯಕ್ಕೆ ಒಳಗಾದ ಅವರು, ಪೂಜಾ ಸ್ಥಳಕ್ಕೆ ತೆರಳದೆ ತಾವು ತಂಗಿದ್ದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ನದಿಯಲ್ಲಿ ತೇಲುತ್ತಿದ್ದ ಮೃತದೇಹ ಪತ್ತೆ
ಮಂಗಳವಾರ ಮುಂಜಾನೆ ಸುಬ್ರಹ್ಮಣ್ಯದ ಕುಲ್ಕುಂದ ಕಾಲನಿ ರಸ್ತೆಯಿಂದ ಕುಮಾರಧಾರ ನದಿಗೆ ಸಂಪರ್ಕ ಕಲ್ಪಿಸುವ ಸ್ಥಳದ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.
ಇದೇ ವೇಳೆ, ವಸತಿಗೃಹದಲ್ಲಿದ್ದ ದೇವೇಗೌಡ ಅವರು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಅವರೊಂದಿಗೆ ಬಂದಿದ್ದವರು ಹುಡುಕಾಟ ನಡೆಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಲು ತೆರಳಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿರುವ ಮಾಹಿತಿ ಲಭಿಸಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹ ದೇವೇಗೌಡ ಅವರದ್ದೇ ಎಂಬುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಸಾವಿನ ಸುತ್ತ ಹಲವು ಅನುಮಾನ
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡ ಅವರು ನದಿಯ ಬಳಿಗೆ ತೆರಳಿದ್ದು ಹೇಗೆ? ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ನಿಧನ ವಾರ್ತೆ8 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
Uncategorized22 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಸ್ಥಳೀಯ7 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಸ್ಥಳೀಯ8 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಮಂಗಳೂರು6 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ನಿಧನ ವಾರ್ತೆ3 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ರಾಜಕೀಯ7 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಬಿಗ್ ನ್ಯೂಸ್3 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ


















