ಮಂಗಳೂರು
Naveen D. Padil-ಕೋಮುಗಲಭೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನ ಕಷ್ಟಕರವಾಗಬಹುದು – ಈ ರೀತಿ ಆದರೆ ಉದ್ಯಮಗಳು ಇಲ್ಲಿಗೆ ಬರುವುದಿಲ್ಲ – ಇದು ಯುವ ಜನರ ಭವಿಷ್ಯಕ್ಕೆ ಮಾರಕವಾಗುವುದರಲ್ಲಿ ಸಂಶಯವಿಲ್ಲ : ನವೀನ್ ಡಿ. ಪಡೀಲ್ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಕಾಪಾಡಲು ಮತ್ತು ಬೆಳೆಸಲು ‘ನೆರೆ ಕೆರೆ’ ಎಂಬ ತುಳು ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಖ್ಯಾತ ತುಳು ರಂಗಭೂಮಿ ಮತ್ತು ಸಿನಿಮಾ ನಟ ನವೀನ್ ಡಿ. ಪಡೀಲ್ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಮಂಗಳೂರು, ಮೇ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಕಾಪಾಡಲು ಮತ್ತು ಬೆಳೆಸಲು ‘ನೆರೆ ಕೆರೆ’ ಎಂಬ ತುಳು ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಖ್ಯಾತ ತುಳು ರಂಗಭೂಮಿ ಮತ್ತು ಸಿನಿಮಾ ನಟ ನವೀನ್ ಡಿ. ಪಡೀಲ್ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
“ಮಂಗಳೂರು ಸೌಹಾರ್ದತೆ ಮತ್ತು ಬುದ್ಧಿವಂತಿಕೆಗೆ ಹೆಸರಾದ ನಗರ. ಆದರೆ ಇತ್ತೀಚಿನ ಜಾತಿ ಗಲಾಟೆಗಳು ಮತ್ತು ಕೋಮು ಗಲಭೆಗಳು ಇಲ್ಲಿನ ಜೀವನವನ್ನು ಕಷ್ಟಕರವಾಗಿಸಬಹುದು.
ಈ ರೀತಿ ಆದರೆ ಉದ್ಯಮಗಳು ಇಲ್ಲಿಗೆ ಬರುವುದಿಲ್ಲ. ಇದು ಯುವ ಜನರ ಭವಿಷ್ಯಕ್ಕೆ ಮಾರಕವಾಗಬಹುದು” ಎಂದು ಅವರು ಆತಂಕ ವ್ಯಕ್ತಪಡಿಸಿದರು.
“ಕೋಮುದ್ವೇಷವನ್ನು ತೊಡೆದುಹಾಕಿ, ಸೌಹಾರ್ದತೆಯನ್ನು ಉಳಿಸಿಕೊಳ್ಳಬೇಕು. ಈ ಗುರಿಯೊಂದಿಗೆ ‘ನೆರೆ ಕೆರೆ’ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಈ ಚಿತ್ರಕ್ಕೆ ಶಶಿರಾಜ್ ರಾವ್ ಕಾವೂರು ಅವರು ಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ,” ಎಂದರು.
ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯಗಳು ಒಗ್ಗಟ್ಟಿನಿಂದ ಬದುಕಿದರೆ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಒತ್ತಿ ಹೇಳಿದರು.
ರಾಜಕೀಯದಲ್ಲಿ ಓಟುಗಳಿಗಾಗಿ ಇತರರಿಗೆ ತೊಂದರೆ ನೀಡುವುದು ಮತ್ತು ಅಮಾಯಕರ ಸಾವಿಗೆ ಕಾರಣವಾಗುವ ರಾಜಕೀಯ ತಂತ್ರಗಳು ನಿಲ್ಲಬೇಕು ಎಂದು ನವೀನ್ ಒತ್ತಾಯಿಸಿದರು.
“ಕಲಾವಿದನಿಗೆ ಶಿಕ್ಷಣದ ಜೊತೆಗೆ ಸೌಹಾರ್ದತೆಯ ವಾತಾವರಣ ಮತ್ತು ಸಮಾಜದ ಬೆಂಬಲ ಅಗತ್ಯ. ನನ್ನ ಕಲಾ ಪ್ರತಿಭೆಯ ಬೆಳವಣಿಗೆಗೆ ಎಲ್ಲ ಧರ್ಮದವರ ಸಹಕಾರ ದೊರೆತಿದೆ. ವಿದ್ಯಾರ್ಥಿ ದಿನಗಳಲ್ಲಿ ಕ್ರೈಸ್ತ ಸ್ನೇಹಿತರೊಂದಿಗೆ ಕಳೆದ ಕ್ಷಣಗಳು, ಏಳನೇ ತರಗತಿಯಲ್ಲಿ ಕ್ರಿಸ್ಮಸ್ ಸಂದರ್ಭದಲ್ಲಿ ಸಾಂತಾಕ್ಲಾಸ್ ಪಾತ್ರದ ಮೂಲಕ ವೇದಿಕೆಗೆ ಕಾಲಿಟ್ಟಿದ್ದು ನನಗೆ ಧೈರ್ಯ ತುಂಬಿತು,” ಎಂದು ಭಾವುಕರಾಗಿ ನೆನಪಿಸಿಕೊಂಡರು.
ನಾಟಕ ಗುರುಗಳಾದ ಜಿ.ಕೆ. ಪುರುಷೋತ್ತಮ ಮತ್ತು ವಿಠಲ ಶೆಟ್ಟಿ ಕನಕವಾಡಿ ಅವರ ಮಾರ್ಗದರ್ಶನದಲ್ಲಿ ಬೆಳೆದ ನವೀನ್, ವಿಜಯಕುಮಾರ್ ಕೊಡಿಯಾಲಬೈಲ್ ಅವರ ‘ಒಂಜಿ ನಿಮಿಷ’ ನಾಟಕದ ಕೃಷ್ಣಪ್ಪನ ಪಾತ್ರದ ಮೂಲಕ ಜನಮನ್ನಣೆ ಗಳಿಸಿದರು. “ನಾಟಕಗಳಲ್ಲಿ ಹಾಸ್ಯದ ಜೊತೆಗೆ ಸಂದೇಶ ನೀಡುವ ಪ್ರಯತ್ನ ಮಾಡಿದ್ದೇನೆ. ಆದರೆ ಈಗಿನ ಕಾಲದಲ್ಲಿ ನೈಜ ಹಾಸ್ಯಕ್ಕೆ ಬೆಲೆ ಕಡಿಮೆಯಾಗಿದೆ. ತುಳು ಚಿತ್ರರಂಗವು ಕೇವಲ ಹಾಸ್ಯಕ್ಕೆ ಸೀಮಿತವಾಗದೆ, ಸಂದೇಶಾತ್ಮಕ ಚಿತ್ರಗಳ ಮೂಲಕ ಬೆಳೆಯಬೇಕು,” ಎಂದರು. ಅಡೂರು ಗೋಪಾಲಕೃಷ್ಣ ಅವರ ‘ವಿಧೇಯನ್’ ಚಿತ್ರದ ಸಣ್ಣ ಪಾತ್ರವು ಅವರ ಸಿನಿಮಾ ಜೀವನಕ್ಕೆ ದೊಡ್ಡ ತಿರುವು ನೀಡಿತು ಎಂದು ತಿಳಿಸಿದರು.
ತುಳು ಚಿತ್ರರಂಗ ಆರ್ಥಿಕ ಸಂಕಷ್ಟದಲ್ಲಿದ್ದರೂ, ನಿರ್ಮಾಪಕರು ಅದನ್ನು ಉಳಿಸಿ ಬೆಳೆಸಲು ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮವನ್ನು ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಮಾಜಿ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಪುಷ್ಪರಾಜ್ ಬಿಎನ್ ವಂದಿಸಿದರು, ಮತ್ತು ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.















