Connect with us

ರಾಜಕೀಯ

Manjunath Bhandari’s letter-ಕರಾವಳಿ ಜಿಲ್ಲೆಗಳ ಶಾಂತಿ ಪಾಲನೆಗೆ ಕಠಿಣ ಕ್ರಮ ಅಗತ್ಯ – 2 ತಿಂಗಳಲ್ಲಿ ನಡೆದ 3 ಕೊಲೆ ಮತ್ತು ಚೂರಿ ಇರಿತ ಪ್ರಕರಣಗಳ ತನಿಖೆಗೆ ಎ.ಡಿ.ಜಿ.ಪಿ ಮಾರ್ಗದರ್ಶನದಲ್ಲಿ ಎಸ್‌ ಐಟಿ ರಚಿಸಿ: ಮುಖ್ಯಮಂತ್ರಿಗಳಿಗೆ ಮಂಜುನಾಥ ಭಂಡಾರಿ ಪತ್ರ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿರುವ ಕೋಮು ಸಂಘರ್ಷದ ಘಟನೆಗಳು ಮತ್ತು ಇತ್ತೀಚೆಗೆ ನಡೆದ ಸರಣಿ ಕೊಲೆ ಹಾಗೂ ಚೂರಿ ಇರಿತ ಪ್ರಕರಣಗಳ ಹಿನ್ನೆಲೆಯಲ್ಲಿ, ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಕಾನೂನು ರೀತಿಯಲ್ಲೇ ಕಠಿಣ ಕ್ರಮಕೈಗೊಳ್ಳಬೇಕೆಂದು ವಿ, ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿಯವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿರುವ ಕೋಮು ಸಂಘರ್ಷದ ಘಟನೆಗಳು ಮತ್ತು ಇತ್ತೀಚೆಗೆ ನಡೆದ ಸರಣಿ ಕೊಲೆ ಹಾಗೂ ಚೂರಿ ಇರಿತ ಪ್ರಕರಣಗಳ ಹಿನ್ನೆಲೆಯಲ್ಲಿ, ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಕಾನೂನು ರೀತಿಯಲ್ಲೇ ಕಠಿಣ ಕ್ರಮಕೈಗೊಳ್ಳಬೇಕೆಂದು ವಿ, ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿಯವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕರಾವಳಿ ಜಿಲ್ಲೆಗಳಲ್ಲಿ ಕೆಲವೇ ಕೆಲವು ಸಮಾಜಘಾತುಕ ಶಕ್ತಿಗಳಿಂದ ನಡೆಯುತ್ತಿರುವ ಕೋಮು ಸಂಘರ್ಷದ ಘಟನೆಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳು ಜಿಲ್ಲೆಯ ಜನರ ಶಾಂತಿಯನ್ನು ಕದಡುತ್ತಿವೆ. ಇದು ಕರಾವಳಿ ಜಿಲ್ಲೆಗಳಿಗೆ ಕಪ್ಪು ಚುಕ್ಕೆಯಾಗಿದ್ದು, ಅಭಿವೃದ್ಧಿಗೆ ಮಾರಕವಾಗಿದೆ. ಈ ಮತಾಂಧತೆ ಮತ್ತು ರಾಜಕೀಯ ಹುನ್ನಾರವನ್ನು ನಿಯಂತ್ರಿಸದಿದ್ದಲ್ಲಿ, ಇದು ರಾಜ್ಯದ ಇತರ ಭಾಗಗಳಿಗೂ ಹರಡುವ ಆತಂಕವಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಇಲಾಖೆ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Ad Widget

Ad Widget <> Ad Widget

ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಮನವಿ
ಈ ನಿಟ್ಟಿನಲ್ಲಿ, ಭಂಡಾರಿಯವರು ಹಲವಾರು ಪ್ರಮುಖ ಸಲಹೆಗಳನ್ನು ಮುಂದಿಟ್ಟಿದ್ದಾರೆ. ಮೊದಲನೆಯದಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ನಡೆದ ಮೂರು ಕೊಲೆ ಮತ್ತು ಚೂರಿ ಇರಿತ ಪ್ರಕರಣಗಳ ಸಮಗ್ರ ತನಿಖೆಗಾಗಿ ಎ.ಡಿ.ಜಿ.ಪಿ. ಅವರ ಮಾರ್ಗದರ್ಶನದಲ್ಲಿ ಪ್ರತ್ಯೇಕ ವಿಶೇಷ ತನಿಖಾ ತಂಡವನ್ನು (ಎಸ್.ಐ.ಟಿ) ರಚಿಸಬೇಕು ಹಾಗೂ ಪ್ರಕರಣಗಳ ಶೀಘ್ರ ವಿಲೇವಾರಿಗೆ ವಿಶೇಷ ಅಭಿಯೋಜಕರನ್ನು ನೇಮಿಸಬೇಕು. ಕೋಮುವಾದಿ ಶಕ್ತಿಗಳ ವಿರುದ್ಧ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.

ಪ್ರಚೋದನಕಾರಿ ಭಾಷಣ ಮಾಡುವ ನಾಯಕರ ವಿರುದ್ಧ ಗೃಹ ಸಚಿವರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನೀಡಿದ್ದ ಕಠಿಣ ಕ್ರಮದ ಭರವಸೆಯನ್ನು ಕಾರ್ಯಗತಗೊಳಿಸಬೇಕು. ಪದೇ ಪದೇ ನಡೆಯುವ ದುಷ್ಕೃತ್ಯಗಳಲ್ಲಿ ಅಮಾಯಕರು ಬಲಿಯಾಗುತ್ತಿದ್ದು, ಇದರಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಪೊಲೀಸರು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Ad Widget

Ad Widget

ಸಂತ್ರಸ್ತರಿಗೆ ನೆರವು, ಜಾಲತಾಣ ನಿಗಾಕ್ಕೆ ಒತ್ತಾಯ
ಇಂತಹ ಪ್ರಕರಣಗಳಲ್ಲಿ ಬಲಿಯಾದ ಅಮಾಯಕ ಸಂತ್ರಸ್ತರ ಕುಟುಂಬಗಳ ಹಿನ್ನೆಲೆಯನ್ನು ಪರಿಶೀಲಿಸಿ, ಸರ್ಕಾರದಿಂದ ಸೂಕ್ತ ಆರ್ಥಿಕ ಪರಿಹಾರವನ್ನು ಒದಗಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳು, ಎಚ್ಚರಿಕೆಗಳು ಮತ್ತು ಬೆದರಿಕೆಗಳು ಹರಿದಾಡುತ್ತಿದ್ದು, ಇಂತಹ ಮಾನಸಿಕತೆಯುಳ್ಳ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಯಾರೊಬ್ಬರನ್ನೂ ಬಂಧಿಸಿಲ್ಲ. ಕೂಡಲೇ ಇವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಜೊತೆಗೆ, ಸುಳ್ಳು ಸುದ್ದಿ ಹರಡುವ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಲ್ಲದೆ, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಮತ್ತು ಸುಳ್ಳು ಸುದ್ದಿ ಸಂದೇಶಗಳಿಗೆ ಕಡಿವಾಣ ಹಾಕಲು ವಿಶೇಷ ಕಾನೂನನ್ನು ಜಾರಿಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ.

ಪೊಲೀಸ್ ನಿಗಾ, ಗುಪ್ತಚರ ವ್ಯವಸ್ಥೆ ಬಲಪಡಿಸಲು ಆಗ್ರಹ
ಪೊಲೀಸ್ ಇಲಾಖೆಯ ಕಾರ್ಯವೈಖರಿಯಲ್ಲಿಯೂ ಸುಧಾರಣೆಗಳಾಗಬೇಕಿದೆ. ಕಮಿಷನರೇಟ್ ವ್ಯಾಪ್ತಿ ಮತ್ತು ಜಿಲ್ಲಾ ಎಸ್.ಪಿ. ವ್ಯಾಪ್ತಿಯಲ್ಲಿರುವ ರೌಡಿಶೀಟರ್ಗಳ ಮೇಲೆ ಪೊಲೀಸರು ವಿಶೇಷ ನಿಗಾ ಇರಿಸಬೇಕು ಮತ್ತು ತಿಂಗಳಿಗೊಮ್ಮೆ ರೌಡಿಶೀಟರ್ ಪರೇಡ್ ನಡೆಸಬೇಕು. ಕ್ರಿಮಿನಲ್ ಹಿನ್ನೆಲೆಯುಳ್ಳ ಕೆಲವರಿಗೆ ನೀಡಿರುವ ಗನ್ ಪರವಾನಗಿಗಳನ್ನು ಪುನರ್ ಪರಿಶೀಲಿಸಬೇಕು ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳ ಹಲವರು ಅಕ್ರಮವಾಗಿ ಗನ್ ಹೊಂದಿರುವುದನ್ನು ಗೂಢಚಾರಿಕೆ ಮೂಲಕ ಪತ್ತೆಹಚ್ಚಿ ವಶಪಡಿಸಿಕೊಳ್ಳಬೇಕು. ಕರಾವಳಿಯಲ್ಲಿ ಗುಪ್ತಚರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು ಹಾಗೂ ಕೋಮುವಾದಿ ಸಂಘಟನೆಗಳ ಮುಖಂಡರ ಪ್ರತಿ ಚಟುವಟಿಕೆಗಳ ಮೇಲೆ ಪೊಲೀಸ್ ಇಲಾಖೆ ಸದಾ ಕಣ್ಣಾವಲು ಇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಕ್ರಮ ದಂಧೆಗಳ ನಿರ್ಮೂಲನೆಗೆ ಕರೆ
ಕರಾವಳಿ ಭಾಗದಲ್ಲಿ ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ವ್ಯವಹಾರವನ್ನು ಮಟ್ಟಹಾಕಲು ಪರಿಣಾಮಕಾರಿ ಕಾರ್ಯಾಚರಣೆಗಳನ್ನು ನಡೆಸಬೇಕು. ಅಕ್ರಮ ಚಟುವಟಿಕೆಗಳು ಇಲ್ಲಿ ದೊಡ್ಡ ದಂಧೆಯಾಗಿದ್ದು, ದುಷ್ಕೃತ್ಯಗಳಲ್ಲಿ ಭಾಗಿಯಾಗುವ ಬಹುತೇಕ ಮಂದಿ ಇಂತಹ ಅಕ್ರಮ ದಂಧೆಗಳ ಹಿಂದೆ ಇರುವವರಾಗಿದ್ದಾರೆ. ಈ ಅಕ್ರಮ ಚಟುವಟಿಕೆಗಳಿಂದ ಗಳಿಸುವ ಆರ್ಥಿಕ ಸಂಪತ್ತನ್ನೇ ಸಮಾಜಘಾತುಕ ಕೃತ್ಯಗಳಿಗೆ ಬಳಸಲಾಗುತ್ತಿದೆ. ಆದ್ದರಿಂದ, ಎಲ್ಲಾ ರೀತಿಯ ಅಕ್ರಮ ಚಟುವಟಿಕೆಗಳನ್ನು ನಿಷೇಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಮಾಲೋಚನೆಗೆ ಒತ್ತು
ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಸರ್ಕಾರದಿಂದ ಅನುಮತಿ ಪಡೆಯದೆ ಸಭೆಗಳು ಮತ್ತು ಮೆರವಣಿಗೆಗಳನ್ನು ನಡೆಸುವವರ ವಿರುದ್ಧ ಹಾಗೂ ಅಂತಹ ಕಾರ್ಯಕ್ರಮಗಳ ನಂತರ ನಡೆಯುವ ಯಾವುದೇ ಅಹಿತಕರ ಘಟನೆಗಳಿಗೆ ಆಯೋಜಕರನ್ನೇ ಹೊಣೆಗಾರರನ್ನಾಗಿಸಿ ಕಠಿಣ ಕ್ರಮ ಜರುಗಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಗೆ ಕೊಡುಗೆ ನೀಡಿದ ಪ್ರತಿಷ್ಠಿತ ಉದ್ಯಮಿಗಳನ್ನು ಒಟ್ಟುಗೂಡಿಸಿ, ಮಾನ್ಯ ಗೃಹ ಸಚಿವರು ಅಥವಾ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ‘ಇನ್ ಕ್ಯಾಮೆರಾ’ ಗಂಭೀರ ಚರ್ಚೆ ನಡೆಸಿ, ಕೋಮು ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅವರಿಂದ ಸಲಹೆಗಳನ್ನು ಪಡೆದುಕೊಳ್ಳಬೇಕು.

ಆಡಳಿತದಲ್ಲಿ ವಿಶ್ವಾಸ, ಶಾಂತಿ ಸಭೆಗಳ ಆಯೋಜನೆ
ಜಿಲ್ಲಾಡಳಿತ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯಲ್ಲಿ ಸಮಗ್ರ ಬದಲಾವಣೆಗಳನ್ನು ತಂದು ಜಿಲ್ಲೆಯ ಜನತೆಯಲ್ಲಿ ವಿಶ್ವಾಸ ಮೂಡಿಸಬೇಕು. ಉದ್ದೇಶಪೂರ್ವಕವಾಗಿ ಪೊಲೀಸ್ ಇಲಾಖೆಯ ವೈಫಲ್ಯ ಕಂಡುಬಂದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ತಾರತಮ್ಯ ನೀತಿ ಮರುಕಳಿಸದಂತೆ ನಿಗಾವಹಿಸಬೇಕು. ಅಂತಿಮವಾಗಿ, ಕನಿಷ್ಠ ಮೂರು ತಿಂಗಳಿಗೊಮ್ಮೆ ಜಿಲ್ಲಾಮಟ್ಟದಲ್ಲಿ ಶಾಂತಿ ಸಭೆಗಳನ್ನು ನಿರಂತರವಾಗಿ ನಡೆಸುತ್ತಿರಬೇಕು ಎಂದು ಭಂಡಾರಿ ಸಲಹೆ ನೀಡಿದ್ದಾರೆ.

ಈ ರೀತಿಯ ಕಠಿಣ ಕ್ರಮಗಳು ಖಂಡಿತವಾಗಿಯೂ ಜಿಲ್ಲೆಯಲ್ಲಿ ಸಂಚಲನ ಮೂಡಿಸಲು ಸಾಧ್ಯ ಮಾತ್ರವಲ್ಲದೆ, ದುಷ್ಕೃತ್ಯಗಳನ್ನು ತಡೆಯಲು ಸಹಕಾರಿಯಾಗಲಿವೆ ಎಂದು ಭಂಡಾರಿಯವರು ವಿಶ್ವಾಸ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡುವರೆಂಬ ಭರವಸೆಯನ್ನು ಪತ್ರದ ಮೂಲಕ ವ್ಯಕ್ತಪಡಿಸಿದ್ದಾರೆ.

Ad Widget
Click to comment

Leave a Reply

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ರಾಜಕೀಯ

Puttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ

Published

on

Ad Widget

Ad Widget

Ad Widget

Ad Widget

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಬಂಟರ ಭವನದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರ ವಿವಾಹ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಇದಲ್ಲದೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಬಿಜೆಪಿ ಶಾಸಕರು ಕೂಡ ಈ ಆರತಕ್ಷತೆ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೂಲತಃ ಕಡಬ ತಾಲೂಕಿನ ಸವಣೂರು ಸಮೀಪದ ಕೆಡೆಂಜಿ ಬಳಿಯ ಅರಲ್ತೆಡಿ ನಿವಾಸಿಯಾಗಿರುವ ಪ್ರಶಾಂತ್ ಅವರು ಪ್ರಸ್ತುತ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನಾಯಕರ ಈ ಭೇಟಿ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆಯುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಪುತ್ತೂರಿನ ವಿವಾಹ ಸಮಾರಂಭಕ್ಕೆ ಆಗಮಿಸಿ, ಕಾರ್ಯಕ್ರಮ ಮುಗಿದ ಬಳಿಕ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

Ad Widget

Ad Widget

ಪುತ್ತೂರು ಬಿಜೆಪಿಯ ಪುನಶ್ಚೇತನಕ್ಕೆ ಸಿಗಲಿದೆಯೇ ಹೊಸ ದಿಕ್ಸೂಚಿ?
ಇನ್ನೊಂದೆಡೆ, ಕಳೆದ ಮೂರು ವರ್ಷಗಳಿಂದ ಆಂತರಿಕ ಭಿನ್ನಾಭಿಪ್ರಾಯ ಹಾಗೂ ರಾಜಕೀಯ ಸಂಘರ್ಷಗಳಿಂದಾಗಿ ಸಂಘಟನಾತ್ಮಕವಾಗಿ ಸವಾಲುಗಳನ್ನು ಎದುರಿಸುತ್ತಿರುವ ಪುತ್ತೂರು ಬಿಜೆಪಿಗೆ ಈ ನಾಯಕರ ಭೇಟಿ ಹೊಸ ಚೈತನ್ಯ ನೀಡುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ನಾಳಿನ ಭೇಟಿಗೆ ವಿಶೇಷ ಮಹತ್ವ ಲಭಿಸಿದೆ. ಸ್ಥಳೀಯ ಮಟ್ಟದಲ್ಲಿ ಮುಖಂಡರ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ನಾಯಕರು ಮಧ್ಯಪ್ರವೇಶಿಸಬಹುದೇ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ನಾಯಕರು ಖಾಸಗಿ ಕಾರ್ಯಕ್ರಮಕ್ಕೆ ಮಾತ್ರ ಆಗಮಿಸುತ್ತಿದ್ದರೂ, ಪುತ್ತೂರು ಬಿಜೆಪಿಯ ಇಂದಿನ ಸ್ಥಿತಿಗತಿ ಮತ್ತು ಸಂಘಟನೆಯ ಭವಿಷ್ಯದ ಕುರಿತು ಯಾವುದೇ ಅನೌಪಚಾರಿಕ ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ, ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರ ಈ ಭೇಟಿಯು ಕೇವಲ ವಿವಾಹ ಸಮಾರಂಭಕ್ಕೆ ಸೀಮಿತವಾಗುತ್ತದೆಯೇ ಅಥವಾ ಅಥವಾ ಪುತ್ತೂರಿನ ಸ್ಥಳೀಯ ರಾಜಕೀಯಕ್ಕೆ ಯಾವುದಾದರೂ ಹೊಸ ಸಂದೇಶ ನೀಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Ad Widget
Continue Reading

ಅಂತರ ರಾಜ್ಯ

Election Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಲಕ್ನೋ: ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ಆತಂಕ ವ್ಯಕ್ತಪಡಿಸಿದ್ದರು.

Ad Widget

Ad Widget <> Ad Widget

ರಾಜ್ಯದ ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿದ್ದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಕಾಣೆಯಾಗಿವೆ ಎಂದು ಅವರು ಆರೋಪಿಸಿದ್ದರು. ಈ ವ್ಯತ್ಯಾಸಗಳ ಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ ಎಂದೂ ತಿಳಿಸಿದ್ದರು.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ, ಚುನಾವಣಾ ಇಲಾಖೆಯು ಮತದಾರರ ಧರ್ಮ ಅಥವಾ ಜಾತಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಂಗ್ರಹಿಸುವುದಿಲ್ಲ. ಹೀಗಾಗಿ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಅಧಿಕೃತ ವಿಶ್ಲೇಷಣೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Ad Widget

Ad Widget

ಮತದಾರರ ದತ್ತಾಂಶದಲ್ಲಿ ಹೆಸರು, ತಂದೆ ಅಥವಾ ಸಂಗಾತಿಯ ಹೆಸರು, ವಯಸ್ಸು, ಮನೆ ಸಂಖ್ಯೆ ಹಾಗೂ ಲಿಂಗದಂತಹ ವಿವರಗಳು ಮಾತ್ರ ದಾಖಲಾಗಿರುತ್ತವೆ. ಧರ್ಮ ಮತ್ತು ಜಾತಿಗೆ ಸಂಬಂಧಿಸಿದ ಮಾಹಿತಿಗಳನ್ನು ಚುನಾವಣಾ ಆಯೋಗದ ಡೇಟಾಬೇಸ್‌ನಲ್ಲಿ ಸಂಗ್ರಹಿಸಲಾಗುವುದಿಲ್ಲ ಎಂದು ಅವರು ವಿವರಿಸಿದರು.

ಮತದಾರರ ಪಟ್ಟಿಗಳು ಸಾರ್ವಜನಿಕ ದಾಖಲೆಗಳಾಗಿರುವುದರಿಂದ ಮಾಧ್ಯಮ ಸಂಸ್ಥೆಗಳು ಹಾಗೂ ಸ್ವತಂತ್ರ ವಿಶ್ಲೇಷಕರು ಮತದಾರರ ಹೆಸರುಗಳು ಮತ್ತು ಲಭ್ಯವಿರುವ ಇತರ ಮಾಹಿತಿಗಳ ಆಧಾರದಲ್ಲಿ ತಮ್ಮದೇ ಆದ ವಿಶ್ಲೇಷಣೆ ನಡೆಸಬಹುದು. ಆದರೆ ಅಂತಹ ವಿಶ್ಲೇಷಣೆಗಳನ್ನು ಚುನಾವಣಾ ಇಲಾಖೆಯ ಅಧಿಕೃತ ದತ್ತಾಂಶ ಅಥವಾ ಸಂಶೋಧನೆ ಎಂದು ಪರಿಗಣಿಸಬಾರದು ಎಂದು ರಿನ್ವಾ ಸ್ಪಷ್ಟಪಡಿಸಿದರು.

ಯುಪಿಯಲ್ಲಿ 13.58 ಕೋಟಿ ಮತದಾರರು
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 13.58 ಕೋಟಿ ಮತದಾರರಿದ್ದು, ಅವರಲ್ಲಿ 6.20 ಕೋಟಿ ಮಹಿಳಾ ಮತದಾರರು ಸೇರಿದ್ದಾರೆ ಎಂದು ನವದೀಪ್ ರಿನ್ವಾ ಮಾಹಿತಿ ನೀಡಿದರು.

ಏಪ್ರಿಲ್‌ನಲ್ಲಿ ಘೋಷಿಸಲಾಗಿದ್ದ ಎಸ್‌ಐಆರ್ ಪ್ರಕ್ರಿಯೆಯ ನಂತರ ನಡೆದ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್‌ಎಸ್‌ಆರ್) ಅವಧಿಯಲ್ಲಿ 18 ಲಕ್ಷಕ್ಕೂ ಅಧಿಕ ಮತದಾರರ ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.

ಉತ್ತರ ಪ್ರದೇಶದ ಅಂತಿಮ ಮತದಾರರ ಪಟ್ಟಿಯನ್ನು 2027ರ ಜನವರಿ 4ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳು ಮತ್ತು ಪರಿಷ್ಕರಣೆ ಪ್ರಕ್ರಿಯೆ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!