ಬಿಗ್ ನ್ಯೂಸ್
Sharan Pumpwell-ರಾಜ್ಯ ಸರ್ಕಾರ ರಾಜೀನಾಮೆ ನೀಡಲಿ, ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿ! ತಮಿಳುನಾಡಿನಿಂದ ಬಂದು ಇಲ್ಲಿ ಅಹಂಕಾರ ಮೆರೆಯುತ್ತಿರುವ ರೌಡಿ ಶೀಟರ್ನನ್ನು ಚಡ್ಡಿಯಲ್ಲಿ ಓಡಿಸುವ ಕಾರ್ಯ ಬ್ಯಾರಿ ಹುಡುಗರಿಂದ ಆಗಲಿದೆ: ಶರಣ್ ಪಂಪ್ವೆಲ್ ಗೆ ಅಶ್ರಫ್ ಕಲ್ಲೇಗ ಛಾಲೆಂಜ್
“ಬಂಟ್ವಾಳದಲ್ಲಿ ನಡೆದ ಬರ್ಬರ ಕೊಲೆಯು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ‘ದರಿದ್ರ’ ಸರ್ಕಾರ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿದ್ದು, ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ನೀಡಿ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು,” ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ತೀಕ್ಷ್ಣವಾಗಿ ಆಗ್ರಹಿಸಿದ್ದಾರೆ.
ಪುತ್ತೂರು: “ಬಂಟ್ವಾಳದಲ್ಲಿ ನಡೆದ ಬರ್ಬರ ಕೊಲೆಯು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ‘ದರಿದ್ರ’ ಸರ್ಕಾರ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿದ್ದು, ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ನೀಡಿ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು,” ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ತೀಕ್ಷ್ಣವಾಗಿ ಆಗ್ರಹಿಸಿದ್ದಾರೆ.
ದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರತೀಕಾರದ ಮಾತುಗಳನ್ನಾಡಿದ ಶರಣ್ ಪಂಪ್ವೆಲ್ನನ್ನು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಬಂಧಿಸುವ ನಾಟಕವಾಡಿತು. ಎರಡು ಗಂಟೆಯ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಿತು. ಈ ಮೂಲಕ ಮುಸ್ಲಿಮರ ಕಣ್ಣಿಗೆ ಮಣ್ಣೆರೆಚುವ ಕಾರ್ಯ ಮಾಡಿದ್ದಾರೆ. ತಮಿಳುನಾಡಿನಿಂದ ಬಂದ ರೌಡಿ ಶೀಟರ್ ಇಲ್ಲಿ ಇಷ್ಟೊಂದು ಅಹಂಕಾರದಲ್ಲಿ ಮೆರೆಯುವುದಾದರೆ, ಇಲ್ಲಿನ ಬ್ಯಾರಿ ಯುವಕರು ಅವನನ್ನು ತಮಿಳುನಾಡಿಗೆ ಚಡ್ಡಿಯಲ್ಲಿ ಓಡಿಸುವ ಕೆಲಸವನ್ನು ಇನ್ನು ಮುಂದೆ ಮಾಡಲಿದ್ದಾರೆ,” ಎಂದು ಹೇಳಿದರು.
“ಕೊಲೆಯಾದ ರೌಡಿ ಶೀಟರ್ನ ಸಂತಾಪ ಸಭೆಗಳಲ್ಲಿ ಹಿಂದುತ್ವವಾದಿಗಳು ಬಹಿರಂಗವಾಗಿ ಪ್ರತೀಕಾರದ ಮಾತುಗಳನ್ನಾಡುತ್ತಿದ್ದರೂ, ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆ. ಅವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳುವ, ಬಂಧಿಸುವ ಗೋಜಿಗೆ ಹೋಗಿಲ್ಲ. ಅನುಮತಿಯಿಲ್ಲದೆ ಬಜ್ಪೆಯಲ್ಲಿ ಕಾರ್ಯಕ್ರಮ ನಡೆಸಿ ಯುವಕರನ್ನು ಕೆರಳಿಸುವ ದುಷ್ಕೃತ್ಯ ಎಸಗಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಮತ್ತು ಸರ್ಕಾರ ಅಸ್ತಿತ್ವದಲ್ಲಿದೆಯೇ ಅಥವಾ ಇಲ್ಲವೇ ಎಂಬ ಅನುಮಾನ ಜನರನ್ನು ಕಾಡುತ್ತಿದೆ,” ಎಂದು ಕಿಡಿಕಾರಿದರು.
ಗೃಹಸಚಿವರ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದ ಕಲ್ಲೇಗ, “ಈ ‘ನಾಲಾಯಕ್’ ಗೃಹಸಚಿವರಿಗೆ ಪೊಲೀಸ್ ಇಲಾಖೆಯನ್ನು ನಿಯಂತ್ರಿಸುವ ಯಾವುದೇ ಯೋಗ್ಯತೆ ಇಲ್ಲ. ಜಿಲ್ಲೆಯ ಉಸ್ತುವಾರಿ ಹೊತ್ತಿರುವ ಅತಿಥಿ ಸಚಿವರಿಗೆ ಇಲ್ಲಿನ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದರ ಅರಿವೇ ಇಲ್ಲ. ಏನಾದರೂ ‘ಗಡಿಬಿಡಿ ಆದಂಗೆ’ ಎಂದು ಹೇಳುವ ಸ್ಪೀಕರ್ ಸಾಹೇಬರ ‘ಅಡ್ಜಸ್ಟ್ಮೆಂಟ್’ ರಾಜಕಾರಣವೇ ಜಿಲ್ಲೆಯಲ್ಲಿ ಇಂತಹ ಅರಾಜಕತೆಗೆ ಕಾರಣವಾಗಿದೆ,” ಎಂದು ನೇರ ಆರೋಪ ಮಾಡಿದರು.
“ನಿರಪರಾಧಿ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಘಟನೆ ನಡೆದ ನಂತರ ಇಲಾಖೆಗಳು ಕೇವಲ ನಾಟಕವಾಡುತ್ತಿವೆ. ತಮಿಳುನಾಡಿನಿಂದ ಬಂದು ಹಾರಾಡುವ ರೌಡಿ ಶೀಟರ್ಗಳನ್ನು ಇಲ್ಲಿನ ಯುವಕರು ಚಡ್ಡಿಯಲ್ಲಿ ಅವರ ಊರಿಗೆ ಓಡಿಸುವ ಕೆಲಸ ಮಾಡಬೇಕಿದೆ. ಅದೇ ರೀತಿ, ಡೋಂಗಿ ಹಿಂದುತ್ವವಾದಿಗಳನ್ನು ಜಿಲ್ಲೆಯಿಂದ ಓಡಿಸುವ ಜವಾಬ್ದಾರಿಯನ್ನು ಜಿಲ್ಲೆಯ ಹಿಂದೂ ಸಮಾಜವೇ ಹೊರಬೇಕು,” ಎಂದು ಅವರು ಕರೆ ನೀಡಿದರು.
“ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಲು ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಬೇಕಾದ ಅನಿವಾರ್ಯತೆ ಇದೆ. ಜಿಲ್ಲೆಯಲ್ಲಿರುವ ‘ಆ್ಯಂಟಿ ಕಮ್ಯುನಲ್ ವಿಂಗ್’ (Anti-Communal Wing) ಕೇವಲ ಮುಸ್ಲಿಮರಿಗೆ ಮಾತ್ರ ಸೀಮಿತವಾಗಿದೆಯೇ? ಇಂತಹ ಗಲಭೆಗಳಿಂದಾಗಿ ಉದ್ಯೋಗಾವಕಾಶಗಳು ಮರೀಚಿಕೆಯಾಗುತ್ತಿದ್ದು, ಶಿಕ್ಷಣ ಕ್ಷೇತ್ರದ ಮೇಲೂ ಗಂಭೀರ ಹೊಡೆತ ಬೀಳುತ್ತಿದೆ,” ಎಂದು ಆತಂಕ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಬಶೀರ್ ಪರ್ಲಡ್ಕ, ಮೋನು ಬಪ್ಪಳಿಗೆ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಮಂಗಳೂರು8 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ12 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು14 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ12 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ14 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಉದ್ಯೋಗ9 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ13 hours agoFire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
-
ಅಂತರ ರಾಜ್ಯ7 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















