ಶಿಕ್ಷಣ
Philomena-ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಹಕಾರಿ ಯೂನಿಯನ್, ಸಹಕಾರ ಇಲಾಖೆಯಿಂದ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ‘ಸ್ವಚ್ಛತಾ ಸೇ ಸಹಕಾರ್’
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು, ಸಹಕಾರ ಇಲಾಖೆ ದ.ಕ.ಜಿಲ್ಲೆ ಹಾಗೂ ಸಂತ ಪೀಲೋಮಿನಾ ಕಾಲೇಜು(ಸ್ವಾಯತ್ತ) ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಪ್ರಯುಕ್ತ ಸ್ವಚ್ಛತಾ ಸೇ ಸಹಕಾರ್ ಕಾರ್ಯಕ್ರಮ ಮೇ 28ರಂದು ಸಂತ ಫಿಲೋಮಿನಾ ಕಾಲೇಜಿ(ಸ್ವಾಯತ್ತ)ನಲ್ಲಿ ನಡೆಯಿತು.
ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು, ಸಹಕಾರ ಇಲಾಖೆ ದ.ಕ.ಜಿಲ್ಲೆ ಹಾಗೂ ಸಂತ ಪೀಲೋಮಿನಾ ಕಾಲೇಜು(ಸ್ವಾಯತ್ತ) ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಪ್ರಯುಕ್ತ ಸ್ವಚ್ಛತಾ ಸೇ ಸಹಕಾರ್ ಕಾರ್ಯಕ್ರಮ ಮೇ 28ರಂದು ಸಂತ ಫಿಲೋಮಿನಾ ಕಾಲೇಜಿ(ಸ್ವಾಯತ್ತ)ನಲ್ಲಿ ನಡೆಯಿತು.

ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ ನಿರ್ಮಾಣ ಮಾಡುವುದು ಈ ಕಾರ್ಯಕ್ರಮ ಸಂಘಟನೆಯ ಉದ್ದೇಶವಾಗಿದೆ. ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತವೆ ಎಂಬುದು ಈ ಕಾರ್ಯಕ್ರಮದ ಧ್ಯೆಯವಾಗಿದೆ. ಇಂದು ಅಂತರಾಷ್ಟ್ರೀಯ ಸಹಕಾರಿ ದಿನಾಚರಣೆಯಾಗಿದ್ದು ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಅಂಗವಾಗಿ ಸ್ವಚ್ಛತಾ ಸೆ ಸಹಕಾರ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು. ಕೃಷಿ, ಸಹಕಾರಿ ಮತ್ತು ಸಹಕಾರಿ ಪತ್ತಿನ ಸಂಘಗಳಿಂದ ಆರ್ಥಿಕ ಸಬಲೀಕರಣವಾಗುತ್ತಿದೆ.
ಭಾರತ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಸಹಕಾರಿ ಸಂಘಗಳು ಮಹತ್ತರ ಪಾತ್ರವನ್ನು ವಹಿಸುತ್ತವೆ. ಸಹಕಾರಿ ಸಂಘಗಳು ಗ್ರಾಮೀಣ ಪ್ರದೇಶದಿಂದ ಬೆಳೆದು ಬಂದಿದ್ದು ರೈತರಿಗೆ ಅತ್ಯಂತ ಸಹಕಾರಿಯಾಗಿದೆ. ಸಹಕಾರಿ ರತ್ನ ಸವಣೂರು ಸೀತಾರಾಮ ರೈರವರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘವನ್ನು ಸ್ಥಾಪನೆ ಮಾಡಿದವರು. ಇಂದು ಅದರ 15 ಶಾಖೆಗಳನ್ನು ಮಾಡುವ ಮೂಲಕ ಸಂಸ್ಥೆಯನ್ನು ಬೆಳಗಿಸಿದ್ದಾರೆ ಎಂದರು. ಮೊಳಹಳ್ಳಿ ಶಿವರಾಯರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಿಸಿರುವ ಈ ಸಹಕಾರಿ ವ್ಯವಸ್ಥೆ ಹಲವಾರು ಜನರ ಬದುಕಿನಲ್ಲಿ ಬೆಳಕಾಗಿದೆ. ಅಲ್ಲದೆ ಭಾರತ ದೇಶದ ಭೂಪಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಗುರುತಿಸಲ್ಪಡುವಂತೆ ಬೆಳೆದು ನಿಂತಿದೆ. ವಿದ್ಯಾರ್ಥಿಗಳು ಹೇಗೆ ಈ ವ್ಯವಸ್ಥೆಯ ಒಂದು ಸಹಾಯವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ ಅವರು ಸಹಕಾರಿ ವ್ಯವಸ್ಥೆಯಿಂದ ಜೀವನ ರೂಪಿಸುವ ಅವಕಾಶಗಳನ್ನು ಉಪಯೋಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ ಮಾತನಾಡಿ ಹಿಂದಿನ ಕಾಲದಲ್ಲಿ ಲೇವಾದೇವಿ ವ್ಯವಸ್ಥೆಯ ಕಪಿಮುಷ್ಠಿಯಿಂದ ಸಾಮಾನ್ಯ ಜನರು ನಲುಗುತ್ತಿದ್ದರು. ಲೇವಾದೇವಿಯಿಂದ ಹೊರಬರಲು ಅಗತ್ಯದ ಹಣಕಾಸಿನ ನೆರವು ನೀಡುವ ಕಾರ್ಯಕ್ರಮ ಈ ಸಹಕಾರಿ ವ್ಯವಸ್ಥೆಯಿಂದ ಆರಂಭವಾಯಿತು. ನಾನು ನಿನಗಾಗಿ ನೀನು ನನಗಾಗಿ ನಾವು ಎಲ್ಲರಿಗಾಗಿ ಎಂಬ ನಂಬಿಕೆಯೊಂದಿಗೆ ಜನರ ಆರ್ಥಿಕ ಬದುಕನ್ನು ಸಬಲಗೊಳಿಸುವುದು ಸಹಕಾರಿಯ ಉದ್ಧೇಶವಾಗಿದೆ. ಹುಟ್ಟಿನಿಂದ ಚಟ್ಟದವರೆಗೆ ಎಂಬ ಗಾದೆ ಮಾತಿನಂತೆ ಜನತೆಯ ಬದುಕಿನ ಸಹಾಯಕ್ಕೆ ಸಹಕಾರಿ ಬ್ಯಾಂಕುಗಳು ಬದ್ಧವಾಗಿವೆ ಎಂದರು.
ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಡಾ||ಎಸ್.ಆರ್.ಹರೀಶ್ ಆಚಾರ್ಯ ವಿಷಯ ಮಂಡನೆ ಮಾಡಿ ಮಾತನಾಡಿ ಸಹಕಾರಿ ಕ್ಷೇತ್ರ ಎಂಬುದು ಜಾತ್ಯತೀತ, ವರ್ಗಾತೀತ, ವರ್ಣಾತಿತ, ಸೀಮಾತೀತ ಮತ್ತು ಯಾವುದೇ ಪಕ್ಷ ರಾಜಕೀಯದಿಂದ ಬಹು ದೂರವಾಗಿರುವುದಾಗಿದೆ. ಸ್ವಚ್ಛತೆಯ ನಿಜವಾದ ರಾಯಭಾರಿ ಮಹಾತ್ಮ ಗಾಂಧಿ. ಸ್ವಚ್ಛತೆಗೆ ಅಮೇರಿಕಾ ದೇಶ ಮಾಡೆಲ್ ಆಗಿದೆ. ಸ್ವಚ್ಛತೆಯಲ್ಲಿ ಸ್ವಯಂ ಜಾಗೃತಿ ಬೇಕು. ನಮ್ಮ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮ ಕರ್ತವ್ಯ. ಪ್ರತಿಯೊಬ್ಬ ನಾಗರಿಕರು ಈ ಜವಾಬ್ದಾರಿಯನ್ನು ಅರಿತರೆ ಸ್ವಚ್ಚತೆ ಸಾಧ್ಯ. ಯಾವುದೇ ಯೋಜನೆ ಜಾರಿ ಮಾಡುವಾಗ ನಾವು ಜಾಗೃತಿ ವಹಿಸಬೇಕು. ವ್ಯವಸ್ಥೆಗಳು ಸರಿಯಾಗಿ ಇರಲು ನಮ್ಮ ಜವಾಬ್ದಾರಿ ಕೂಡ ಇರಬೇಕು. ಪ್ರತಿಯೊಬ್ಬರು ವ್ಯವಸ್ಥೆಯ ಲೋಪದೋಷಕ್ಕೆ ಪರಿಹಾರ ಕಂಡುಕೊಳ್ಳಬೇಕು. ಆಗ ಮಾತ್ರ ಪರಿಸರ ಜಾಗೃತಿ ಮತ್ತು ದೇಶದಲ್ಲಿ ಬದಲಾವಣೆಯನ್ನು ತರಲು ಸಾಧ್ಯ. ಹಸಿ ತ್ಯಾಜ್ಯ ನಮ್ಮ ಮನೆಯ ಕೈತೋಟಕ್ಕೆ, ಕೃಷಿಗೆ ಉತ್ತಮವಾಗಿರುವ ಗೊಬ್ಬರವಾಗಿದೆ. ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಪ್ರಾಂಶುಪಾಲ ರೆ.ಡಾ.ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ ಕ್ರಮಬದ್ಧವಾದ ಪಾಠ ಪ್ರವಚನಗಳಿಗೆ ಹೊರತಾಗಿ ಜೀವನದಲ್ಲಿ ಕಲಿಯುವುದು ಬಹಳಷ್ಟು ಇದೆ. ಸ್ವಚ್ಛತೆ ಎಂದರೆ ಬೀದಿಬದಿಯ ಸ್ವಚ್ಛತೆ ಮಾತ್ರವಲ್ಲ ಸಮಾಜದ ಸ್ವಚ್ಛತೆ ಕೂಡ ಆಗಿದೆ. ಸಮಾಜದ ಸ್ವಚ್ಚತೆಗಿಂತ ನಮ್ಮ ಮನಸ್ಸಿನ ಸ್ವಚ್ಚತೆ ಆಗಬೇಕಿದೆ. ಮನೋಮಾಲಿನ್ಯ ನಿವಾರಣೆ ಮಾಡಿದಾಗ ಸ್ವಚ್ಚತೆಯ ಅರಿವು ಉಂಟಾಗುತ್ತದೆ. ಈ ವಿಚಾರದ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕಾದ ಸಮಯ ಬಂದಿದೆ. ದ.ಕ.ಜಿಲ್ಲೆ ಭಾರತ ದೇಶದಲ್ಲೇ ಗುರುತಿಸುವಂತಹ ಜಿಲ್ಲೆಯಾಗಿದೆ. ಆದರೆ ಇಲ್ಲಿನ ಜನರು ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬಿಟ್ಟು ಬದುಕುತ್ತಿದ್ದಾರೆ. ವಿದ್ಯಾರ್ಥಿಗಳು ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಬಗೆಗೆ ಒಲವು ಬೆಳೆಸಿಕೊಳ್ಳಬೇಕು. ಇದರಿಂದ ಮನಸ್ಸಿನ ಮಾಲಿಲ್ಯ ನಿವಾರಣೆಯಾಗುತ್ತದೆ ಎಂದು ಹೇಳಿದ ಅವರು ಕಾರ್ಯಕ್ರಮವನ್ನು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಆಯೋಜಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.
ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಮಂಜುನಾಥ ಎನ್.ಎಸ್., ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎನ್.ರಘು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಸಂಜೀವ ಪೂಜಾರಿ, ಆದರ್ಶ ವಿವಿದೋದ್ಧೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ವಸಂತ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತನ್ವಿ ರೈ ಮತ್ತು ಬಳಗ ಪ್ರಾರ್ಥಿಸಿ ಪಿಜಿ ಡಿಪಾರ್ಟ್‌ಮೆಂಟ್ ಆಫ್ ಕಾಮರ್ಸ್ ಕೋ ಆರ್ಡಿನೇಟರ್ ಹರ್ಷಿತ್ ಕೆ. ಕಾರ್ಯಕ್ರಮ ನಿರೂಪಿಸಿದರು. ಸ್ನಾತ್ತಕೋತ್ತರ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕುಮಾರ ಶಿಲ್ಪ ವಂದಿಸಿದರು. ಪಿ.ಜಿ. ಭೌತಶಾಸ್ತ್ರ ವಿಭಾಗದ ಕೋ-ಆರ್ಡಿನೇಟರ್ ವಿಪಿನ್ ನಾಯ್ಕ್ ಹಾಗೂ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜಿನಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ ಸಹಕರಿಸಿದರು. ಕಾಲೇಜು ಪರಿಸರದಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.
ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಮಾತಾಡಿದರು.
ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯ ಅನಿವಾರ್ಯತೆ ಹೆಚ್ಚಾಗುತ್ತಿದೆ. ಇಂಗ್ಲಿಷ್ ಕೌಶಲ ಎಷ್ಟಿದ್ದರೂ ಕಡಿಮೆಯೇ ಎನ್ನುವ ಸ್ಪರ್ಧಾತ್ಮಕ ಜಗತ್ತು ನಮ್ಮ ಮುಂದಿರುವ ಇಂತಹ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯೊಂದರಲ್ಲಿ ಕನ್ನಡ ಸಂಘ ಇರುವುದು ಆಶಾದಾಯಕ. ಇದು ಕೇವಲ ಭಾಷಾ ಚಟುವಟಿಕೆಗಳಿಗೆ ಸೀಮಿತವಾಗದೆ ಹೊಸ ಸಾಧ್ಯತೆಗಳ ವೇದಿಕೆಯಾಗಲಿ ಎಂದು ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.

ಕನ್ನಡ ನಮ್ಮ ಬೇರು, ತಂತ್ರಜ್ಞಾನ ನಮ್ಮ ರೆಕ್ಕೆ, ಜಗತ್ತಿನ ಯಾವುದೇ ತಂತ್ರಜ್ಞಾನವನ್ನು ಕಲಿಯಬಹುದು. ಆದರೆ ನಮ್ಮ ಬೇರುಗಳನ್ನು ಮರೆಯಬಾರದು. ಜಾಗತಿಕವಾಗಿ ಬೆಳೆಯಲು ಇಂಗ್ಲಿಷ್ ಬೇಕಾದರೆ ನಮ್ಮ ನೆಲದೊಂದಿಗೆ ಬೆಸೆಯಲು ಕನ್ನಡ ಬೇಕು ಎಂದರು. ಕೈಯಲ್ಲಿ ಮೊಬೈಲಿದೆ, ತಲೆಯಲ್ಲಿ ತಂತ್ರಜ್ಞಾನವಿದೆ, ಮುಂದೆ ವಿಶಾಲ ಜಗತ್ತಿದೆ ಈ ಮೂರರ ನಡುವೆ ಕನ್ನಡವನ್ನು ಕಳೆದುಕೊಳ್ಳಬೇಡಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಮನೋಜ್ ಕುಮಾರ್ ಮಾತನಾಡಿ ಪ್ರತಿಯೊಬ್ಬನಿಗೂ ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನವಿರಬೇಕು. ನಾವು ಎಲ್ಲಿ ಹೋದರು, ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ನಮ್ಮತನವನ್ನು ಎಂದಿಗೂ ಕಳೆದುಕೊಳ್ಳಬಾರದು ಎಂದರು. ದೇಶ-ಭಾಷೆ, ನಾಡು-ನುಡಿ, ನೆಲ-ಜಲದ ವಿಷಯದಲ್ಲಿ ಎಲ್ಲರೂ ಒಂದಾಗಿ ಅದರ ಸಾರ್ವಭೌಮತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.
ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಲಾದ ವಾಗ್-ವೈಖರಿ, ಸಮ್‌ವಾದ, ಜಸ್ಟ್ಮಾತು, ಮೇಧಮಂಥನ, ಪಿಕ್ಸೆಲ್‌ಪುಟ, ಭಾವಕುಂಚ ಮತ್ತು ಅನ್ವೇಷಣಾ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಲಹರಿ ಕನ್ನಡ ಸಂಘದ ಸಂಯೋಜಕ ಪ್ರೊ.ನವೀನ್.ಸಿ ಮತ್ತು ವಿದ್ಯಾರ್ಥಿ ಸಂಯೋಜಕ ಆದಿತ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಗೀತೆಗಳ ಗಾಯನದಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರೊ.ನವೀನ್.ಸಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಆದಿತ್ಯ ವಂದಿಸಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.
ಶಿಕ್ಷಣ
Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.
ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.
ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಎಸ್‌ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್‌ಐಟಿಕೆ (NITK) ಸುರತ್ಕಲ್‌ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್‌ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್‌ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.
ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.
ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.
-
ಶಿಕ್ಷಣ18 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು18 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್24 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್20 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು19 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ18 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ17 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಅಪರಾಧ1 hour agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ















