ಅಪರಾಧ
Uppinangady-ಆಡು ಖರೀದಿಗೆ ಹೋದ ಉಪ್ಪಿನಂಗಡಿಯ ಯುವಕರಿಗೆ ರಾಜಸ್ತಾನದಲ್ಲಿ ಬ್ಲ್ಯಾಕ್ ಮೇಲ್ ; ಹಣಕ್ಕೆ ಬೇಡಿಕೆ- ಮನೆಯವರ ಸಂಪರ್ಕಕ್ಕೆ ಸಿಗದ ಯುವಕರು; ಪೊಲೀಸರ ನಿಗೂಢ ನಡೆ:
ಬಕ್ರೀದ್ ಹಬ್ಬಕ್ಕಾಗಿ ಆಡುಗಳನ್ನು ಖರೀದಿಸಲು ರಾಜಸ್ಥಾನಕ್ಕೆ ತೆರಳಿದ್ದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯ ಯುವಕರಿಬ್ಬರು ಅಲ್ಲಿನ ವ್ಯಕ್ತಿಗಳಿಂದ ಬ್ಲಾಕ್ಮೇಲ್ಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ಹಾಗೂ ಸದ್ಯ ಮನೆಯವರ ಸಂಪರ್ಕಕ್ಕೆ ಸಿಗದಿರುವ ಆತಂಕಕಾರಿ ಘಟನೆ ನಡೆದಿದೆ.
ಉಪ್ಪಿನಂಗಡಿ: ಬಕ್ರೀದ್ ಹಬ್ಬಕ್ಕಾಗಿ ಆಡುಗಳನ್ನು ಖರೀದಿಸಲು ರಾಜಸ್ಥಾನಕ್ಕೆ ತೆರಳಿದ್ದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯ ಯುವಕರಿಬ್ಬರು ಅಲ್ಲಿನ ವ್ಯಕ್ತಿಗಳಿಂದ ಬ್ಲಾಕ್ಮೇಲ್ಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ಹಾಗೂ ಸದ್ಯ ಮನೆಯವರ ಸಂಪರ್ಕಕ್ಕೆ ಸಿಗದಿರುವ ಆತಂಕಕಾರಿ ಘಟನೆ ನಡೆದಿದೆ. ಸಂತ್ರಸ್ತ ಯುವಕ, 34 ನೆಕ್ಕಿಲಾಡಿಯ ಮುಹಮ್ಮದ್ ಝುಬೈರ್ ಆರೀಸ್ ಅವರ ತಂದೆ ಇಬ್ರಾಹಿಂ ಅವರು ಈ ಕುರಿತು ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆಯ ವಿವರ:
ಮುಹಮ್ಮದ್ ಝುಬೈರ್ ಆರೀಸ್ ಮತ್ತು ಅವರ ಸ್ನೇಹಿತರು ಬಕ್ರೀದ್ ಹಬ್ಬದ ಪ್ರಯುಕ್ತ ಆಡುಗಳನ್ನು ಖರೀದಿಸಲು ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿನ ವ್ಯಕ್ತಿಯೊಬ್ಬನೊಂದಿಗೆ ಆಡುಗಳನ್ನು ತರಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿದ್ದರು. ಒಪ್ಪಂದದಂತೆ, ಲಾರಿ ಬಾಡಿಗೆಗಾಗಿ 2 ಲಕ್ಷ ರೂಪಾಯಿಗಳನ್ನು ಮುಂಗಡವಾಗಿ ಪಾವತಿಸಲಾಗಿತ್ತು. ಆಡುಗಳು ತಲುಪಿದ ನಂತರ ಉಳಿದ ಹಣವನ್ನು ಪಾವತಿಸುವುದಾಗಿ ತೀರ್ಮಾನಿಸಲಾಗಿತ್ತು.
ಆದರೆ, ಝುಬೈರ್ ಮತ್ತು ಸ್ನೇಹಿತರು ರಾಜಸ್ಥಾನ ತಲುಪಿದಾಗ, ಒಪ್ಪಂದ ಮಾಡಿಕೊಂಡಿದ್ದ ವ್ಯಕ್ತಿಯು ಮಾತು ಬದಲಾಯಿಸಿ, 10 ಲಕ್ಷ ರೂಪಾಯಿ ನೀಡಿದರೆ ಮಾತ್ರ ಆಡುಗಳನ್ನು ನೀಡುವುದಾಗಿ ಬೇಡಿಕೆ ಇಟ್ಟಿದ್ದಾನೆ. ಈ ವಿಷಯವನ್ನು ಝುಬೈರ್ ದೂರವಾಣಿ ಮೂಲಕ ಕುಟುಂಬಕ್ಕೆ ತಿಳಿಸಿದ್ದು, ಕುಟುಂಬಸ್ಥರು ತಕ್ಷಣ 10 ಲಕ್ಷ ರೂಪಾಯಿಗಳನ್ನು ಆತನ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದಾರೆ. ಹಣ ತಲುಪಿದ ಬಳಿಕ, ಆಡುಗಳನ್ನು ಲಾರಿಗೆ ಲೋಡ್ ಮಾಡಿರುವ ಫೋಟೋವನ್ನು ಝುಬೈರ್ ಕಳುಹಿಸಿದ್ದಾನೆ.
ಆದರೆ, ಕೆಲ ಸಮಯದ ನಂತರ, ಆ ವ್ಯಕ್ತಿಯು ಮತ್ತೆ 20 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದರೆ ಆಡುಗಳನ್ನು ಕೊಡದೆ, ಝುಬೈರ್ ಮತ್ತು ಆತನ ಸ್ನೇಹಿತನನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಝುಬೈರ್ ಫೋನ್ನಲ್ಲಿ ತಿಳಿಸಿದ್ದಾನೆ. ಇದರ ನಂತರ ಝುಬೈರ್ನ ಫೋನ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಲಭ್ಯವಾಗಿಲ್ಲ.
ಪೊಲೀಸರ ನಿಗೂಢ ನಡೆ:
ಆತಂಕಗೊಂಡ ಇಬ್ರಾಹಿಂ ಅವರ ಪತ್ನಿ ಉಪ್ಪಿನಂಗಡಿ ಪೊಲೀಸ್ ಕಂಟ್ರೋಲ್ ರೂಂಗೆ ಸಂಪರ್ಕಿಸಿದಾಗ, ಅಲ್ಲಿಂದ ರಾಜಸ್ಥಾನದ ಪೊಲೀಸ್ ಕಂಟ್ರೋಲ್ ರೂಂನ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ರಾಜಸ್ಥಾನ ಪೊಲೀಸರಿಗೆ ವಿಷಯ ತಿಳಿಸಿದಾಗ, ಝುಬೈರ್ ಮತ್ತು ಆತನ ಸ್ನೇಹಿತರ ಮೊಬೈಲ್ ಲೊಕೇಶನ್ ಪತ್ತೆಹಚ್ಚಿ, ಅವರನ್ನು ಪೊಲೀಸ್ ಠಾಣೆಗೆ ಕರೆತಂದಿರುವುದಾಗಿ ಆರಂಭದಲ್ಲಿ ತಿಳಿಸಿದ್ದರು. ಆದರೆ, ನಂತರ ಆ ಪೊಲೀಸ್ ಅಧಿಕಾರಿ ಸರಿಯಾಗಿ ಪ್ರತಿಕ್ರಿಯಿಸದೆ ಕರೆ ಕಡಿತಗೊಳಿಸುತ್ತಿದ್ದು, ಅವರ ನಡೆಯಲ್ಲಿ ಸಂಶಯ ವ್ಯಕ್ತವಾಗಿದೆ ಎಂದು ಇಬ್ರಾಹಿಂ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಅನಿರೀಕ್ಷಿತ ಬೆಳವಣಿಗೆಯಿಂದ ಝುಬೈರ್ನ ಕುಟುಂಬ ತೀವ್ರ ಆತಂಕದಲ್ಲಿದ್ದು, ಅವರ ಸುರಕ್ಷತೆಯ ಬಗ್ಗೆ ಚಿಂತಿತವಾಗಿದೆ. ರಾಜಸ್ಥಾನ ಪೊಲೀಸರ ನಡೆ ಸಹ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಝುಬೈರ್ನ ಸುರಕ್ಷಿತ ವಾಪಸಾತಿಗಾಗಿ ಕುಟುಂಬವು ಪುತ್ತೂರು ಶಾಸಕರ ಸಹಾಯವನ್ನು ಕೋರಿದೆ.
ಈ ಘಟನೆಯು ಹೊರ ರಾಜ್ಯಗಳಲ್ಲಿ ವ್ಯಾಪಾರಕ್ಕೆ ತೆರಳುವಾಗ ಎದುರಾಗಬಹುದಾದ ವಂಚನೆ ಮತ್ತು ಬ್ಲಾಕ್ಮೇಲ್ನಂತಹ ಗಂಭೀರ ಅಪಾಯಗಳನ್ನು ಎತ್ತಿ ತೋರಿಸುತ್ತದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಶಿಕ್ಷಣ14 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ7 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ12 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ13 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ರಾಜಕೀಯ7 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ12 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ13 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ12 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು















