ಬಿಗ್ ನ್ಯೂಸ್
Bantwal-ಬಂಟ್ವಾಳ: ಕೊಲೆಯತ್ನ – ನಾಲ್ವರು ಆರೋಪಿಗಳ ಬಂಧನ – ಸೂತ್ರಧಾರಿ ಪರಾರಿ
ಬಂಟ್ವಾಳ ಬಸ್ ನಿಲ್ದಾಣದ ಬಳಿ ಮೇ 16ರ ಶುಕ್ರವಾರ ರಾತ್ರಿ 7:45ರ ಸುಮಾರಿಗೆ ಅಕ್ಕರಂಗಡಿ ನಿವಾಸಿ ಅಮ್ಮಿ ಯಾನೆ ಹಮೀದ್ ಎಂಬಾತನ ಮೇಲೆ ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ, ಮೇ 29: ಬಂಟ್ವಾಳ ಬಸ್ ನಿಲ್ದಾಣದ ಬಳಿ ಮೇ 16ರ ಶುಕ್ರವಾರ ರಾತ್ರಿ 7:45ರ ಸುಮಾರಿಗೆ ಅಕ್ಕರಂಗಡಿ ನಿವಾಸಿ ಅಮ್ಮಿ ಯಾನೆ ಹಮೀದ್ ಎಂಬಾತನ ಮೇಲೆ ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪೊಲೀಸ್ ಇನ್ಸ್‌ಪೆಕ್ಟರ್ ಆನಂತ ಪದ್ಮನಾಭ ಅವರ ನೇತೃತ್ವದಲ್ಲಿ ಎಸ್.ಐ. ನಂದಕುಮಾರ್, ರಾಮಕೃಷ್ಣ, ಮತ್ತು ಮಂಜುನಾಥ್ ಅವರ ತಂಡವು ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ಕಾರ್ಯಾಚರಣೆ ನಡೆಸಿತ್ತು. ಇದೀಗ ಆರೋಪಿಗಳಾದ ಉಳ್ಳಂಜೆಯ ನೌಷದ್, ಕೈಕಂಬದ ನಿವಾಸಿ ನವಾಜ್ ಯಾನೆ ಬೀಡಿ ನವಾಜ್, ನೆಹರುನಗರದ ಮೇಹರೂಪ್, ಮತ್ತು ನೆಹರುನಗರದ ರಿಝಾನ್ ಎಂಬವರನ್ನು ಬಂಧಿಸಲಾಗಿದೆ.
ಕೊಲೆ ಯತ್ನದ ಹಿನ್ನೆಲೆ
ಹಮೀದ್, ತಸ್ಲಿಮ್ ಎಂಬಾತನ ಸ್ನೇಹಿತನಾಗಿದ್ದ. ತಸ್ಲಿಮ್ ಮತ್ತು ಹ್ಯಾರೀಶ್ ಎಂಬಾತನ ನಡುವೆ ವೈಯಕ್ತಿಕ ವಿಚಾರದಲ್ಲಿ ಗಲಾಟೆ ನಡೆದಿತ್ತು. ಈ ವಿವಾದದಲ್ಲಿ ಹ್ಯಾರೀಶ್ ತಸ್ಲಿಮ್‌ನ ಮೇಲೆ ಚೂರಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ. ಹ್ಯಾರೀಶ್‌ನನ್ನು ಪತ್ತೆಹಚ್ಚಲು ಪೊಲೀಸರು ಶೋಧ ನಡೆಸುತ್ತಿದ್ದಾರೆ, ಆದರೆ ಆತ ಇನ್ನೂ ಬಂಧನಕ್ಕೆ ಸಿಕ್ಕಿಲ್ಲ. ಈ ನಡುವೆ, ಹಮೀದ್ ತನ್ನ ಮೊಬೈಲ್ ಸ್ಟೇಟಸ್‌ನಲ್ಲಿ ಹ್ಯಾರೀಶ್‌ನ ಪತ್ತೆಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ್ದ. ಇದರಿಂದ ಕೋಪಗೊಂಡ ಹ್ಯಾರೀಶ್, ನೌಷದ್‌ನನ್ನು ಬಳಸಿಕೊಂಡು ಹಮೀದ್‌ನ ಕೊಲೆಗೆ ಸುಫಾರಿ ನೀಡಿ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಸೂತ್ರದಾರಿಯಾದ ಹ್ಯಾರೀಶ್ ಇನ್ನೂ ಪರಾರಿಯಾಗಿದ್ದಾನೆ. ಪೊಲೀಸರು ಆತನಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಿಗ್ ನ್ಯೂಸ್
ಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ.
ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.
ಬಸ್ ಟಿಕೆಟ್ ದರ ಹಾಗೂ ಹಾಲಿನ ದರ ಎರಡು ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಅಧಿಕೃತ ಘೋಷಣೆ ಮಾಡದಿರಲು ತೀರ್ಮಾನಿಸಿದೆ. ಚುನಾವಣಾ ಆಯೋಗಕ್ಕೆ ಪ್ರಸ್ತಾಪ ಕಳುಹಿಸಿ ಅವರ ಅನುಮತಿ ಸಿಕ್ಕ ಮೇಲೆ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ಹಾಲಿನ ಮೇಲೆ ಪೂರ್ಣ 8 ರೂ. ದರ ಏರಿಕೆಯಾದರೆ
1 ಲೀಟರ್ ದರ
ಟೋನ್ಡ್ ಹಾಲು
46- 54 ರೂ.
ಹೋಮೋಜಿನೈಸ್ಡ್ ಟೋನ್ಡ್ ಹಾಲು
47- 55 ರೂ.
ಅಂತರ ರಾಜ್ಯ
ID-ಪ್ರತಿಭಟನೆ ವರದಿ ಮಾಡುವ ಪತ್ರಕರ್ತರಿಗೆ ಐಡಿ ಕಡ್ಡಾಯ; ಮಹಿಳಾ ಪತ್ರಕರ್ತರ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ದಿಲ್ಲಿ ಪೊಲೀಸರ ಹೊಸ ಮಾರ್ಗಸೂಚಿ
ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಹೊಸದಿಲ್ಲಿ: ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ.
‘ಸುದ್ದಿ ಮುಖ್ಯ, ಅದನ್ನು ಹೇಗೆ ಪಡೆಯುತ್ತೀರಿ ಎಂಬುದೂ ಮುಖ್ಯ’ ಎಂಬ ಸಂದೇಶದೊಂದಿಗೆ ದಿಲ್ಲಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪತ್ರಕರ್ತರು ಕರ್ತವ್ಯ ನಿರ್ವಹಿಸುವ ವೇಳೆ ಪಾಲಿಸಬೇಕಾದ ನಾಲ್ಕು ಪ್ರಮುಖ ನಿರ್ದೇಶನಗಳನ್ನು ಹಂಚಿಕೊಂಡಿದ್ದಾರೆ.
ಪ್ರತಿಭಟನೆಗಳನ್ನು ವರದಿ ಮಾಡಲು ನಿಯೋಜಿಸಲ್ಪಟ್ಟಿರುವ ಎಲ್ಲ ಪತ್ರಕರ್ತರು ತಮ್ಮ ಸಂಸ್ಥೆಗಳು ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ ಮಾನ್ಯ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕೊಂಡೊಯ್ಯಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
ಸ್ಥಳದಲ್ಲಿರುವ ಕಾನೂನು ಜಾರಿ ಸಿಬ್ಬಂದಿಗೆ ಪತ್ರಕರ್ತರ ಗುರುತು ಸುಲಭವಾಗಿ ತಿಳಿಯುವಂತೆ ಗುರುತಿನ ಚೀಟಿಗಳನ್ನು ಸದಾ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ.
ಅದೇ ರೀತಿ, ಪತ್ರಕರ್ತರ ಉಪಸ್ಥಿತಿ ಅಥವಾ ಚಟುವಟಿಕೆಗಳು ಪೊಲೀಸ್ ಕಾರ್ಯಾಚರಣೆಗಳಿಗೆ ಹಾಗೂ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಉದ್ವಿಗ್ನ ಪರಿಸ್ಥಿತಿಗಳಲ್ಲಿ ಘಟನೆಗಳನ್ನು ವರದಿ ಮಾಡುವಾಗ ಹಾಗೂ ದೃಶ್ಯಗಳನ್ನು ದಾಖಲಿಸುವಾಗ ಪತ್ರಕರ್ತರು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಪ್ರತಿಭಟನಾಕಾರರಿಂದ ತಮ್ಮನ್ನು ಸ್ಪಷ್ಟವಾಗಿ ಪ್ರತ್ಯೇಕಿಸುವ ರೀತಿಯಲ್ಲಿ ಅಂತರ ಕಾಯ್ದುಕೊಂಡು ವರದಿ ಮಾಡಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
#EthicsofJournalism ಹ್ಯಾಶ್‌ಟ್ಯಾಗ್‌ನೊಂದಿಗೆ ದಿಲ್ಲಿ ಪೊಲೀಸರು ಈ ನಾಲ್ಕು ನಿರ್ದೇಶನಗಳನ್ನು ಪ್ರಕಟಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ವಿರುದ್ಧ ಮೂವರು ಮಹಿಳಾ ಪತ್ರಕರ್ತರಿಂದ ಲೈಂಗಿಕ ಕಿರುಕುಳ ಆರೋಪ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ದಿಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಈ ಸಂಬಂಧ ದಿಲ್ಲಿ ಪೊಲೀಸರು ದೂರುಗಳನ್ನು ಸ್ವೀಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಿದ್ದಾರೆ.
ಅಕ್ಟೋಬರ್ 3ರಂದು ಹೊಸದಿಲ್ಲಿ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ‘ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ’ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ದಿಲ್ಲಿ ಪೊಲೀಸರು ರವಿವಾರ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದರು.
ಮೂವರು ಮಹಿಳಾ ಪತ್ರಕರ್ತರಿಂದ ಬಂದ ದೂರುಗಳನ್ನು ಹೊಸದಿಲ್ಲಿ ಜಿಲ್ಲೆ ಸ್ವೀಕರಿಸಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಆರೋಪಗಳ ಬಳಿಕ ಹಲವು ಸ್ವತಂತ್ರ ಪತ್ರಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದರು.
ಬಿಗ್ ನ್ಯೂಸ್
Puttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.
ಪುತ್ತೂರು, ಅ.6: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಸಮಸ್ತ ಹಿಂದೂ ಸಮಾಜಕ್ಕೆ ಸೇರಿದ್ದಾಗಿದ್ದು, ದೇವಸ್ಥಾನದ ಪ್ರಮುಖ ವಿಚಾರಗಳಲ್ಲಿ ಭಕ್ತರ ವಿಶ್ವಾಸ ಪಡೆದುಕೊಳ್ಳುವುದು ಅಗತ್ಯ ಎಂದರು.
ಭಕ್ತರ ಸಭೆ ನಡೆಸದೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಸಮಿತಿ ರಚಿಸದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.
ದೇವಸ್ಥಾನದ ಐತಿಹಾಸಿಕ ಪವಿತ್ರ ಪುಷ್ಕರಿಣಿಯ ಅಭಿವೃದ್ಧಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಅಪೂರ್ಣವಾಗಿರುವ ನಡುವೆಯೇ ಜಾತ್ರಾ ಸಂದರ್ಭದಲ್ಲಿ ದೇವರಿಗೆ ಕೆರೆ ಉತ್ಸವ ನಡೆಸಿರುವುದು ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದೆ ಎಂದು ಕೃಷ್ಣಪ್ರಸನ್ನ ಆಕ್ಷೇಪಿಸಿದರು. ಪುಷ್ಕರಿಣಿಯ ಕಾಮಗಾರಿಯನ್ನು ವ್ಯವಸ್ಥಾಪನಾ ಸಮಿತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ದೇವಸ್ಥಾನದ ಆಡಳಿತದ ಕಾರ್ಯವೈಖರಿಯಿಂದ ಭಕ್ತರ ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳಿಗೆ ಧಕ್ಕೆ ಉಂಟಾಗುವ ಸಂದರ್ಭಗಳಲ್ಲಿ ವಿಶ್ವಹಿಂದು ಪರಿಷತ್ ಧ್ವನಿ ಎತ್ತಲಿದೆ. ಅಗತ್ಯ ಬಿದ್ದರೆ ಹಿಂದೂ ಸಮಾಜವನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲೂ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಉಪಾಧ್ಯಕ್ಷ ಸತೀಶ್ ಬಿ.ಎಸ್., ನಗರ ಸಂಚಾಲಕ ಚೇತನ್ ಹಾಗೂ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ18 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized23 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಅಪರಾಧ17 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್23 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ನಿಧನ ವಾರ್ತೆ16 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಮಂಗಳೂರು24 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು
-
ಅಪರಾಧ22 hours agoArrested-ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಕೈದಿ ಬಿಡುಗಡೆ; ಜೈಲು ಡಿಐಜಿ ಸೋಮಶೇಖರ್ ಬಂಧನ
-
ನಿಧನ ವಾರ್ತೆ16 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ


















