ಬಿಗ್ ನ್ಯೂಸ್
ಕೋಮು ಸೂಕ್ಷ್ಮ ದಕ್ಷಿಣಕನ್ನಡಕ್ಕೆ ಇಬ್ಬರು ಖಡಕ್ ಅಧಿಕಾರಿಗಳ ನಿಯೋಜನೆ : ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರ್ ರೆಡ್ಡಿ – SPಯಾಗಿ ಉಡುಪಿಯಲ್ಲಿ ನಡುಕ ಹುಟ್ಟಿಸಿದ ಡಾ.ಅರುಣ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹ*ತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.
ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿಯಾಗಿರುವ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಗುಪ್ತಚರ ವಿಭಾಗದ ಎಸ್ ಪಿ ಆಗಿರುವ ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ(ಸಿ.ವಂಶಿ ಕೃಷ್ಣ ಅವರ ಜಾಗಕ್ಕೆ) ವರ್ಗಾವಣೆ ಮಾಡಲಾಗಿದೆ.
ಸಿಐಡಿಯ ಸೈಬರ್ ಕ್ರೈಮ್, ನಾಕ್ರೋಟಿಕ್ಸ್ ಡಿಐಜಿ ಆಗಿರುವ ಬೊರಸೆ ಭೂಷಣ್ ಗುಲಾಬ್ ರಾವ್ ಅವರನ್ನು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಮತ್ತು ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ನಗರ ಪೊಲೀಸ್ ಕಮಿಷನರ್ ಆಗಿ ಎಡ ಮಾರ್ಟಿನ್ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ21 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು17 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ21 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ20 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ20 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ16 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ20 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















