ನಿಧನ ವಾರ್ತೆ
Ullal-ಉಳ್ಳಾಲ: ಮನೆಯ ತಡೆಗೋಡೆ ಕುಸಿದು ಬಾಲಕಿ ಮೃತ್ಯು
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಅವಿರತವಾಗಿ ಸುರಿಯುತ್ತಿರುವ ಮಹಾಮಳೆಗೆ ಉಳ್ಳಾಲ ತಾಲೂಕಿನ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ಮನೆಯೊಂದರ ತಡೆಗೋಡೆ ಕುಸಿದು ಹತ್ತು ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಉಳ್ಳಾಲ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಅವಿರತವಾಗಿ ಸುರಿಯುತ್ತಿರುವ ಮಹಾಮಳೆಗೆ ಉಳ್ಳಾಲ ತಾಲೂಕಿನ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ಮನೆಯೊಂದರ ತಡೆಗೋಡೆ ಕುಸಿದು ಹತ್ತು ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ
ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ನೌಶಾದ್ ಅವರ ಪುತ್ರಿ ಫಾತಿಮ ನಈಮ (10) ಎಂದು ಗುರುತಿಸಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ನೌಶಾದ್ ಅವರ ಕಾನಕರೆಯಲ್ಲಿರುವ ಮನೆಯ ಹಿಂಭಾಗದಲ್ಲಿದ್ದ ಗುಡ್ಡ ಹಾಗೂ ಅದಕ್ಕೆ ಹೊಂದಿಕೊಂಡಿದ್ದ ತಡೆಗೋಡೆಯು ನಿರಂತರ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಕುಸಿದುಬಿದ್ದಿದೆ. ಈ ಸಂದರ್ಭದಲ್ಲಿ, ಮನೆಯ ಕೋಣೆಯ ಕಿಟಕಿಯು ಒಳಗೆ ನಿದ್ರಿಸುತ್ತಿದ್ದ ಫಾತಿಮಳ ಮೇಲೆ ಬಿದ್ದ ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ತಕ್ಷಣವೇ ಸ್ಥಳೀಯರು ಮತ್ತು ಕುಟುಂಬಸ್ಥರು ನೆರವಿನಿಂದ ಬಾಲಕಿಯನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದು ಬಂದಿದೆ
ನಿಧನ ವಾರ್ತೆ
Kankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
ರಸ್ತೆ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ಮೂಲದ ಮಂಗಳೂರಿನಲ್ಲಿ ಕೂಲಿ ಕಾರ್ಮಿಕರಾಗಿರುವ ಲಕ್ಷ್ಮೀ – ಅಶೋಕ್ ಎಂಬ ದಂಪತಿಯ ಮಗ ವಿಶ್ವಾಸ್ (8) ಮೃತ ಬಾಲಕ.
ಶಾಲೆಯಿಂದ ಮನೆ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿ ಬಾಲಕನಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.
ಗದಗ ಜಿಲ್ಲೆಯ ರೋಣ ಮೂಲದ ಮಂಗಳೂರಿನಲ್ಲಿ ಕೂಲಿ ಕಾರ್ಮಿಕರಾಗಿರುವ ಲಕ್ಷ್ಮೀ – ಅಶೋಕ್ ಎಂಬ ದಂಪತಿಯ ಮಗ ವಿಶ್ವಾಸ್ (8) ಮೃತ ಬಾಲಕ.
ಕಂಕನಾಡಿಯಲ್ಲಿ ಸೈಂಟ್ ಜೋಸೆಫ್ ಅನುದಾನಿತ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಬಾಲಕ ಬುಧವಾರ ಸಂಜೆ ಶಾಲೆ ಬಿಟ್ಟ ನಂತರ ಹೊರಗೆ ಬಂದಿದ್ದ. ಯಾವಾಗಲೂ ತಾಯಿ ಕರೆದೊಯ್ಯಲು ಬರುತ್ತಿದ್ದು ತಾಯಿ ಬರದೇ ಇದ್ದುದರಿಂದ ಶಾಲೆಯಿಂದ ಹೊರಗೆ ಬಂದಿದ್ದ ಹುಡುಗ ಕಂಕನಾಡಿ- ಫಳೀರ್ ರಸ್ತೆ ಬದಿಯಲ್ಲಿ ಮನೆ ಕಡೆಗೆ ನಡೆದು ಹೋಗಲು ರಸ್ತೆ ದಾಟಿದ್ದ. ಈ ವೇಳೆ, ಸ್ಟೇಟ್ ಬ್ಯಾಂಕ್ ಕಡೆಗೆ ತೆರಳುತ್ತಿದ್ದ ರಾಜಲಕ್ಷ್ಮಿ ಎನ್ನುವ 4 ನಂಬರಿನ ಬಸ್ ಡಿಕ್ಕಿಯಾಗಿದ್ದು ಅದರ ಎಡಬದಿಯ ಹಿಂಭಾಗದ ಚಕ್ರ ಹರಿದು ಬಾಲಕ ತೀವ್ರ ಗಾಯಗೊಂಡಿದ್ದಾನೆ.
ಕೂಡಲೇ ಬಾಲಕನನ್ನು ಬಸ್ಸಿನ ಸಿಬಂದಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಒಯ್ದಿದ್ದು ಸಂಜೆಯ ವೇಳೆಗೆ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬಸ್ ತಾಗಿದ ರಭಸಕ್ಕೆ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟಿದ್ದು ದೇಹದ ಒಂದು ಬದಿಗೆ ತೀವ್ರ ಪೆಟ್ಟು ಬಿದ್ದಿತ್ತು. ಬಸ್ ಚಾಲಕನ ನಿರ್ಲಕ್ಷ್ಯದ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಧನ ವಾರ್ತೆ
Kolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯ ಬಳಿ ಪಾರ್ಸೆಲ್‌ನಂತೆ ಕಟ್ಟಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.
ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯ ಬಳಿ ಪಾರ್ಸೆಲ್‌ನಂತೆ ಕಟ್ಟಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಈ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಪಾರ್ಸೆಲ್ ರೂಪದ ವಸ್ತುವೊಂದು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅದರಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ತಕ್ಷಣ ಬೇತಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರೊಳಗೆ ಮಹಿಳೆಯ ಮೃತದೇಹ ಇರುವುದು ಪತ್ತೆಯಾಗಿದೆ.
ಮೃತ ಮಹಿಳೆಗೆ ಸುಮಾರು 35 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ, ಮೃತದೇಹವನ್ನು ಕುಳಿತ ಭಂಗಿಯಲ್ಲಿ ಕೈಕಾಲುಗಳನ್ನು ಕಟ್ಟಿ ಗೋಣಿ ಚೀಲದಲ್ಲಿ ತುಂಬಿಸಲಾಗಿತ್ತು. ಬಳಿಕ ಅದರ ಮೇಲೆ ಪ್ಲಾಸ್ಟಿಕ್ ಕವರ್ ಸುತ್ತಿ, ಪಾರ್ಸೆಲ್ ಪ್ಲಾಸ್ಟರ್‌ನಿಂದ ಬಿಗಿಯಾಗಿ ಕಟ್ಟಲಾಗಿತ್ತು. ಮೃತದೇಹವನ್ನು ಸಾಗಿಸಲು ಅನುಕೂಲವಾಗುವಂತೆ ಟ್ರಾಲಿಯ ಮೇಲೆ ಇರಿಸಿ ಎಸೆದಿರುವುದು ಪೊಲೀಸರ ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ:
ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್ಪಿ ಲಕ್ಷ್ಮಯ್ಯ ಸೇರಿದಂತೆ ಸೋಕೋ ತಂಡ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಸಿಟಿವಿ ಸುಳಿವು; ವಿಶೇಷ ತಂಡ ರಚನೆ:
ದುಷ್ಕರ್ಮಿಗಳು ಕಾರಿನಲ್ಲಿ ಬಂದು ಮೃತದೇಹವನ್ನು ಎಸೆದು ಹೋಗಿರುವ ದೃಶ್ಯಗಳು ಹೆದ್ದಾರಿಯ ಟೋಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಸುಂದರಪಾಳ್ಯ ಅಂತಾರಾಜ್ಯ ಗಡಿ ಪ್ರದೇಶದಲ್ಲಿರುವ ಹಿನ್ನೆಲೆಯಲ್ಲಿ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡು ಪೊಲೀಸರಿಗೂ ಮಾಹಿತಿ ರವಾನಿಸಲಾಗಿದೆ.
ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ನಿಧನ ವಾರ್ತೆ
Beltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದೇವಸಕೋಡಿ ನಿವಾಸಿ ಹರ್ಷಿತ್ (18) ಎಂಬ ಯುವಕ ವಿಷ ಸೇವಿಸಿ ಮೃತಪಟ್ಟ ಘಟನೆ ನವೆಂಬರ್ 27ರಂದು ನಡೆದಿದೆ. ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್, ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು.
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ದೇವಸಕೋಡಿ ನಿವಾಸಿ ಹರ್ಷಿತ್ (18) ಎಂಬ ಯುವಕ ವಿಷ ಸೇವಿಸಿ ಮೃತಪಟ್ಟ ಘಟನೆ ನವೆಂಬರ್ 27ರಂದು ನಡೆದಿದೆ.
ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್, ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಕುಟುಂಬಸ್ಥರು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ನವೆಂಬರ್ 27ರಂದು ಹರ್ಷಿತ್ ಕೊನೆಯುಸಿರೆಳೆದಿದ್ದಾರೆ.
ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ ಚೆಲುವಮ್ಮ ಹಾಗೂ ಸಹೋದರಿ ಪ್ರತೀಕ್ಷಾ ಅವರನ್ನು ಅಗಲಿದ್ದಾರೆ.
-
ನಿಧನ ವಾರ್ತೆ19 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ19 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ18 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ18 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ19 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಸ್ಥಳೀಯ12 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಅಂತರ ರಾಜ್ಯ19 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ18 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















