Connect with us

ನಿಧನ ವಾರ್ತೆ

Ullal-ಉಳ್ಳಾಲ : ಗುಡ್ಡ ಕುಸಿಯಿತು, ಗೂಡು ಚೂರಾಯಿತು, ಜೀವಗಳು ಹಾರಿಹೋದವು! ಮಣ್ಣಿನ ರಾಶಿಯಡಿ ಇಬ್ಬರು ಕಂದಮ್ಮಗಳ ದುರಂತ ಅಂತ್ಯ ! ಫಲ ನೀಡದ ಸತತ 8 ಗಂಟೆ ನಡೆಸಿದ ರಕ್ಷಣಾ ಕಾರ್ಯ

Published

on



Ad Widget

Ad Widget

Ad Widget

Ad Widget

ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಶುಕ್ರವಾರ ಮುಂಜಾನೆ ಸುರಿದ ಧಾರಾಕಾರ ಮಳೆಗೆ ಗುಡ್ಡವೊಂದು ಕುಸಿದು, ಮನೆಯೊಂದು ಸಂಪೂರ್ಣವಾಗಿ ಧರೆಗುರುಳಿದ ಪರಿಣಾಮ ಓರ್ವ ಮಹಿಳೆ ಹಾಗೂ ಇಬ್ಬರು ಮುದ್ದು ಕಂದಮ್ಮಗಳು ದಾರುಣವಾಗಿ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಈ ಘೋರ ದುರಂತ ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.

Ad Widget

Ad Widget

Ad Widget

Ad Widget

ಉಳ್ಳಾಲ (ದಕ್ಷಿಣ ಕನ್ನಡ), ಮೇ 30: ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಶುಕ್ರವಾರ ಮುಂಜಾನೆ ಸುರಿದ ಧಾರಾಕಾರ ಮಳೆಗೆ ಗುಡ್ಡವೊಂದು ಕುಸಿದು, ಮನೆಯೊಂದು ಸಂಪೂರ್ಣವಾಗಿ ಧರೆಗುರುಳಿದ ಪರಿಣಾಮ ಓರ್ವ ಮಹಿಳೆ ಹಾಗೂ ಇಬ್ಬರು ಮುದ್ದು ಕಂದಮ್ಮಗಳು ದಾರುಣವಾಗಿ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಈ ಘೋರ ದುರಂತ ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕಾಂತಪ್ಪ ಪೂಜಾರಿಯವರ ಪತ್ನಿ ಶ್ರೀಮತಿ ಪ್ರೇಮಾ (58) ಹಾಗೂ ಅವರ ಮೊಮ್ಮಕ್ಕಳಾದ, ಸೀತಾರಾಮ್-ಅಶ್ವಿನಿ ದಂಪತಿಯ ಪುತ್ರರಾದ ಆರ್ಯನ್ ಮತ್ತು ಆರುಷ್ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಘಟನೆಯ ವಿವರ:
ಶುಕ್ರವಾರ ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ, ಇಡೀ ಗ್ರಾಮವೇ ಗಾಢ ನಿದ್ರೆಯಲ್ಲಿದ್ದಾಗ, ಕಾಂತಪ್ಪ ಪೂಜಾರಿಯವರ ಮನೆಗೆ ಹೊಂದಿಕೊಂಡಿದ್ದ ಗುಡ್ಡವು ಭಾರಿ ಮಳೆಗೆ ಜರಿದು ಮನೆಯ ಮೇಲೆ ಬಿದ್ದಿದೆ. ಮನೆಯ ಯಜಮಾನ ಕಾಂತಪ್ಪ ಪೂಜಾರಿಯವರು ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.



Ad Widget

ಅವರ ಪತ್ನಿ ಪ್ರೇಮಾ ಅವರು ಮನೆಯ ಅವಶೇಷಗಳಡಿ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮನೆಯ ಇನ್ನೊಂದು ಕೋಣೆಯಲ್ಲಿ ಕಾಂತಪ್ಪ ಪೂಜಾರಿಯವರ ಪುತ್ರ ಸೀತಾರಾಮ್, ಅವರ ಪತ್ನಿ ಅಶ್ವಿನಿ ಹಾಗೂ ಇಬ್ಬರು ಚಿಣ್ಣರಾದ ಆರ್ಯನ್ ಮತ್ತು ಆರುಷ್ ಮಲಗಿದ್ದರು. ಗುಡ್ಡ ಕುಸಿತದ ರಭಸಕ್ಕೆ ಸೀತಾರಾಮ್ ಅವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಆದರೆ, ಅವರ ಪತ್ನಿ ಅಶ್ವಿನಿ ಹಾಗೂ ಮುದ್ದು ಮಕ್ಕಳಿಬ್ಬರೂ ಮನೆಯ ಅವಶೇಷಗಳಡಿ ಸಿಲುಕಿಕೊಂಡಿದ್ದರು.

Ad Widget

Ad Widget

ಫಲ ಕೊಡದ ರಕ್ಷಣಾ ಯತ್ನ:
ಮುಂಜಾನೆಯಿಂದಲೇ ಸ್ಥಳೀಯರು ಒಗ್ಗೂಡಿ ತಾಯಿ ಮತ್ತು ಮಕ್ಕಳ ರಕ್ಷಣೆಗೆ ಧಾವಿಸಿದ್ದರು. ಅವಶೇಷಗಳಡಿಯಿಂದ ಅಶ್ವಿನಿಯವರ ಕ್ಷೀಣ ದನಿ ಹಾಗೂ ಒಂದು ಮಗುವಿನ ಅಳುವ ಸದ್ದು ಕೇಳಿಬರುತ್ತಿದ್ದು, ಇದರಿಂದ ಎಲ್ಲರನ್ನೂ ಜೀವಂತವಾಗಿ ಹೊರತೆಗೆಯಬಹುದೆಂಬ ಆಶಾಭಾವನೆ ಅಲ್ಲಿದ್ದವರಲ್ಲಿ ಮೂಡಿತ್ತು. ಆದರೆ, ಮನೆ ಸಂಪೂರ್ಣವಾಗಿ ನೆಲಸಮವಾಗಿದ್ದರಿಂದ ಮತ್ತು ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆಯುಂಟಾಯಿತು.

ಬೆಳಗ್ಗೆ ಸ್ಥಳಕ್ಕೆ ದೌಡಾಯಿಸಿದ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ, ಸ್ಥಳೀಯರೊಂದಿಗೆ ಸೇರಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದರು 8. ಗಂಟೆಗಳ ಕಾಲ ನಡೆದ ಸತತ ಪ್ರಯತ್ನದ ಹೊರತಾಗಿಯೂ, ವಿಧಿಯಾಟ ಬೇರೆಯೇ ಇತ್ತು. ಪುಟ್ಟ ಕಂದ ಆರ್ಯನ್ ಮಣ್ಣಿನ ರಾಶಿಯಲ್ಲೇ ಉಸಿರುಚೆಲ್ಲಿದ್ದರೆ, ಮತ್ತೊಬ್ಬ ಕಂದ ಆರುಷ್ನನ್ನು ಗಂಭೀರ ಸ್ಥಿತಿಯಲ್ಲಿ ರಕ್ಷಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟನು. ಈ ದೃಶ್ಯ ನೆರೆದವರ ಕಣ್ಣಂಚಲ್ಲಿ ನೀರು ತರಿಸಿತು.

ದುರಂತದ ನಡುವೆ ಸಣ್ಣ ಸಮಾಧಾನ:
ಈ ಘೋರ ದುರಂತದ ನಡುವೆಯೂ, ಇಬ್ಬರು ಮಕ್ಕಳ ತಾಯಿ ಅಶ್ವಿನಿಯವರನ್ನು ಜೀವಂತವಾಗಿ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿರುವುದು ತುಸು ಸಮಾಧಾನ ತಂದಿದೆ. ಅವರು ಸದ್ಯ ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕಚೇರಿಯ ಎಡಿಸಿ ಸಂತೋಷ್ ಕುಮಾರ್, ತಹಶೀಲ್ದಾರ್ ಪುಟ್ಟರಾಜು, ಡಿಸಿಪಿ ಸಿದ್ದಾರ್ಥ್ ಫೋಯಲ್, ಪ್ರಾಕೃತಿಕ ವಿಕೋಪ ನಿರ್ವಹಣಾಧಿಕಾರಿ ವಿಜಯ್, ಕಾರ್ಯನಿರ್ವಹಣಾಧಿಕಾರಿ ಗುರುದತ್, ಮಂಜನಾಡಿ ಪಂಚಾಯತ್ ಅಧ್ಯಕ್ಷೆ ಸರೋಜಿನಿ, ನರಿಂಗಾನ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ಹಾಗೂ ಸ್ಥಳೀಯ ಮುಖಂಡರಾದ ಐವನ್ ಡಿಸೋಜ, ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್, ರಮೇಶ್ ಶೆಟ್ಟಿ ಬೋಳಿಯಾರ್, ಎನ್.ಎಸ್. ಕರೀಂ ಮೊದಲಾದವರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದರು
ಈ ದುರ್ಘಟನೆಯು ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳ ಸಮೀಪ ವಾಸಿಸುವವರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Ad Widget
Click to comment

Leave a Reply

ನಿಧನ ವಾರ್ತೆ

Uppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ

Published

on



Ad Widget

Ad Widget

Ad Widget

Ad Widget

ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಆತೂರಿನಲ್ಲಿ ಇತ್ತೀಚೆಗಷ್ಟೇ ಟಯರ್ ಪಂಕ್ಚರ್ ಅಂಗಡಿ ಆರಂಭಿಸಿದ್ದ ಮಾಧವ ಗೌಡ ಅವರು ಅ.2ರಂದು ಮನೆಯಿಂದ ಅಂಗಡಿಗೆ ತೆರಳಿದ್ದರು. ಆದರೆ ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ, ಅವರ ಬೈಕ್ ಮತ್ತು ಮೊಬೈಲ್ ಉಪ್ಪಿನಂಗಡಿಯ ಕುಮಾರಧಾರ ನದಿಯ ಹಳೆ ಸೇತುವೆ ಮೇಲೆ ಪತ್ತೆಯಾಗಿತ್ತು.

Ad Widget

Ad Widget <> Ad Widget

ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅ.4ರಂದು ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ದೋಣಿಯ ಮೂಲಕ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಮಧ್ಯಾಹ್ನದಿಂದ ಸಂಜೆಯವರೆಗೆ ಶೋಧ ಕಾರ್ಯ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.



Ad Widget

ಇದೀಗ ಎರಡು ದಿನಗಳ ಬಳಿಕ ನೆಕ್ಕಿಲಾಡಿ ಗ್ರಾಮದ ಬೊಳ್ಳಾರ್ ಸಮೀಪ ನೇತ್ರಾವತಿ ನದಿಯಲ್ಲಿ ಮಾಧವ ಗೌಡ ಅವರ ಮೃತದೇಹ ಪತ್ತೆಯಾಗಿದೆ. ಅವರ ನಾಪತ್ತೆ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Continue Reading

ನಿಧನ ವಾರ್ತೆ

Accident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು

Published

on



Ad Widget

Ad Widget

Ad Widget

Ad Widget

ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.

Ad Widget

Ad Widget

Ad Widget

Ad Widget

ಸುಲ್ತಾನ್‌ಪುರ (ಉತ್ತರ ಪ್ರದೇಶ): ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಯೋಧ್ಯೆ-ಸುಲ್ತಾನ್‌ಪುರ ಗಡಿಯಲ್ಲಿರುವ ಹಲಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 79.6ನೇ ಕಿಲೋಮೀಟರ್ ಬಳಿ ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.

Ad Widget

Ad Widget <> Ad Widget

ಡಿಯೋರಿಯಾ ಜಿಲ್ಲೆಯ ರುದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಲಿಯಾ ದುದೈಲಾ ಗ್ರಾಮದ ನಿವಾಸಿ ಸುಬೇದಾರ್ ಮೇಜರ್ ಸತ್ಯವಾನ್ ಅವರು ಚಂಡೀಗಢದಲ್ಲಿ ನಿಯೋಜನೆಗೊಂಡಿದ್ದರು. ಇತ್ತೀಚೆಗೆ ಅವರು ಮೃತಪಟ್ಟಿದ್ದು, ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿತ್ತು.



Ad Widget

ಆಂಬ್ಯುಲೆನ್ಸ್‌ನಲ್ಲಿ ಸತ್ಯವಾನ್ ಅವರ ಮಗ ಗೌರವ್ ಸಿಂಗ್, ಸಹೋದರ ರಾಜನ್ ಚೌಧರಿ, ಸೋದರಳಿಯ ರಾಮ್ ಸಂಜು ಸಿಂಗ್ ಹಾಗೂ ಚಾಲಕ ಜಸ್ಪಾಲ್ ಪ್ರಯಾಣಿಸುತ್ತಿದ್ದರು.

Ad Widget

Ad Widget

ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ತೆರಳುತ್ತಿದ್ದ ಆಂಬ್ಯುಲೆನ್ಸ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗೌರವ್ ಸಿಂಗ್ ಹಾಗೂ ಚಾಲಕ ಜಸ್ಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ರಾಜನ್ ಚೌಧರಿ ಹಾಗೂ ರಾಮ್ ಸಂಜು ಸಿಂಗ್ ಅವರನ್ನು ಅಯೋಧ್ಯೆಯ ಕುಮಾರ್‌ಗಂಜ್‌ನ ಸಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಪೊಲೀಸ್ ಠಾಣೆ ಆವರಣದಲ್ಲಿ ಯೋಧರ ಪೂರ್ಣ ಗೌರವದೊಂದಿಗೆ ಇರಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವುದರ ಜೊತೆಗೆ ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Lalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

Published

on



Ad Widget

Ad Widget

Ad Widget

Ad Widget

ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಲವು ದಶಕಗಳಿಂದ ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಲಲಿತಮ್ಮ ಅವರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದ ಜೊತೆಗೆ ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ‘ಅಮ್ಮನ ಮಡಿಲು ಟ್ರಸ್ಟ್’ ಅವರ ನೆರವಿಗೆ ನಿಂತು ಆಸರೆ ನೀಡಿತ್ತು.

Ad Widget

Ad Widget <> Ad Widget

ನಟ ದರ್ಶನ್ ಅಭಿನಯದ ‘ಸುಂಟರಗಾಳಿ’ ಸಿನಿಮಾದಲ್ಲಿ ಖಳನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಲಲಿತಮ್ಮ ಅವರು ತಮ್ಮ ನೈಜ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಈ ಸಿನಿಮಾದ ಪಾತ್ರ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು.



Ad Widget

ಬಳಿಕ ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ತಮ್ಮ ವಿಭಿನ್ನ ನಟನಾ ಶೈಲಿಯಿಂದ ಗುರುತಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ‘ರಂಗೋಲಿ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳು ಹಾಗೂ ನಾಟಕಗಳಲ್ಲಿಯೂ ಅಭಿನಯಿಸಿ ಮೆಚ್ಚುಗೆ ಗಳಿಸಿದ್ದರು.

Ad Widget

Ad Widget

ಹಿರಿಯ ನಟಿ ಲಲಿತಮ್ಮ ಅವರ ನಿಧನಕ್ಕೆ ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯ ಗಣ್ಯರು ಸಂತಾಪ ಸೂಚಿಸಿದ್ದು, ಅವರ ಅಗಲಿಕೆಗೆ ತೀವ್ರ ಕಂಬನಿ ಮಿಡಿದಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading