ರಾಜ್ಯ
Karnataka Police new vehicle check rules ಪೊಲೀಸರು ದಿಢೀರ್ ಅಡ್ಡ ಬಂದು ವಾಹನ ನಿಲ್ಲಿಸುವಂತಿಲ್ಲ – ಕೀಲಿ ಕೈ ಕಸಿದುಕೊಳ್ಳುವಂತಿಲ್ಲ; ಮಂಡ್ಯ ಮಗು ಸಾವಿನ ಘಟನೆಯ ಬೆನ್ನಲೇ ವಾಹನ ತಪಾಸಣೆಗೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ

ಮಂಡ್ಯದಲ್ಲಿ ಮಗುವಿನ ಸಾವಿನ ದುರಂತದ ನಂತರ, ಕರ್ನಾಟಕ ಪೊಲೀಸ್ ಇಲಾಖೆ ವಾಹನ ತಪಾಸಣೆಗೆ ಹೊಸ, ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರ ಮತ್ತು ಪೊಲೀಸರ ಸುರಕ್ಷತೆಗೆ ಒತ್ತು ನೀಡಿರುವ ಈ ಮಾರ್ಗಸೂಚಿಗಳ ಕುರಿತು ಪೂರ್ಣ ವಿವರಗಳನ್ನು ಓದಿ
New SOP for vehicle checking Karnataka ಬೆಂಗಳೂರು: ಮಂಡ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಮೂರು ವರ್ಷದ ಮಗುವಿನ ಸಾವಿನ ದುರ್ಘಟನೆಯಿಂದ ತೀವ್ರ ಮುಖಭಂಗಕ್ಕೊಳಗಾದ ರಾಜ್ಯ ಪೊಲೀಸ್ ಇಲಾಖೆ, ವಾಹನ ತಪಾಸಣಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಮುಂದಾಗಿದೆ. ಸಾರ್ವಜನಿಕರ ಹಾಗೂ ಪೊಲೀಸರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರು ಹೊಸ ನಿಯಮಾವಳಿಗಳನ್ನು ಬಿಡುಗಡೆಗೊಳಿಸಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಠಾಣಾ ವ್ಯಾಪ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮಂಡ್ಯದಲ್ಲಿ ಮಗು ಸಾವು ಹಾಗೂ ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಕ್ಯಾಂಟರ್ ಚಾಲಕ ಡಿಕ್ಕಿ ಹೊಡೆದ ಪ್ರಕರಣಗಳನ್ನು ಉಲ್ಲೇಖಿಸಿ ಆದೇಶ ಹೊರಡಿಸಿರುವ ಸಲೀಂ ಅವರು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸುವಾಗ ರಸ್ತೆ ಸುರಕ್ಷತಾ ಕ್ರಮಗಳನ್ನು ಕಡೆಗಣಿಸುತ್ತಿರುವುದರಿಂದ ಸಾರ್ವಜನಿಕರ ಹಾಗೂ ಪೊಲೀಸರ ಜೀವಕ್ಕೆ ಕುತ್ತು ಬರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ವಾಹನ ತಪಾಸಣೆ ವೇಳೆ ಪಾಲಿಸಬೇಕಾದ ನಿರ್ದಿಷ್ಟ ನಿರ್ದೇಶನಗಳನ್ನು ನೀಡಲಾಗಿದೆ
ಏನಿದು ಮಂಡ್ಯ ದುರಂತ ?
ಮೇ 26 ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ವಾಣಿ-ಅಶೋಕ್ ದಂಪತಿಯ ಮೂರೂವರೆ ವರ್ಷದ ಪುತ್ರಿ ಹೃತೀಕ್ಷಾ, ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್ ಅಡ್ಡಗಟ್ಟಿದಾಗ ಆಯತಪ್ಪಿ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದಳು. ಈ ಘಟನೆಯು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು ಮತ್ತು ಟ್ರಾಫಿಕ್ ಪೊಲೀಸರ ಕಾರ್ಯವೈಖರಿಯ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು, ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಯಲು ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.
ಹೊಸ ಮಾರ್ಗಸೂಚಿಗಳು ಇಂತಿವೆ:
ಅನಗತ್ಯ ತಡೆ ಬೇಡ: ವಾಹನಗಳ ದಾಖಲೆ ಪರೀಕ್ಷಿಸಲು ಸಕಾರಣವಿಲ್ಲದೆ ವಾಹನಗಳನ್ನು ತಡೆದು ತಪಾಸಣೆಗೊಳಪಡಿಸಬಾರದು.
ಕಣ್ಣಿಗೆ ಕಾಣುವ ಉಲ್ಲಂಘನೆಗೆ ಮಾತ್ರ ಕ್ರಮ: ಸ್ಪಷ್ಟವಾಗಿ ಗೋಚರಿಸುವ ಸಂಚಾರ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಮಾತ್ರ ಅಂತಹ ವಾಹನಗಳನ್ನು ನಿಲ್ಲಿಸಿ ಪ್ರಕರಣ ದಾಖಲಿಸಬೇಕು.
ಸುರಕ್ಷಿತ ತಪಾಸಣೆ:
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನ ತಡೆಯಬಾರದು.
ರಸ್ತೆಯಲ್ಲಿ ದಿಢೀರನೇ ಅಡ್ಡಬಂದು ವಾಹನ ನಿಲ್ಲಿಸುವಂತೆ ಸೂಚಿಸಬಾರದು.
ದ್ವಿಚಕ್ರ ವಾಹನ ಹಿಂಬದಿ ಸವಾರನನ್ನು ಹಿಡಿದು ಎಳೆಯುವುದು ಅಥವಾ ವಾಹನಗಳ ಕೀಲಿ ಕೈ ಕಸಿದುಕೊಳ್ಳುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು.
ಬೆನ್ನಟ್ಟುವ ಬದಲು ತಂತ್ರಜ್ಞಾನ ಬಳಕೆ: ವೇಗವಾಗಿ ಚಲಿಸುವ ವಾಹನಗಳನ್ನು ಬೆನ್ನಟ್ಟುವ ಬದಲು, ಅವುಗಳ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ, ತದನಂತರ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಬೇಕು.
ಪೊಲೀಸರ ಸುರಕ್ಷತೆಗೆ ಆದ್ಯತೆ:
ಸಂಚಾರ ನಿಯಮ ಉಲ್ಲಂಘನೆದಾರರ ವಿರುದ್ಧ ಭೌತಿಕವಾಗಿ ಪ್ರಕರಣ ದಾಖಲಿಸುವಾಗ ಹಾಗೂ ವಾಹನ ತಪಾಸಣೆ ಮಾಡುವಾಗ ಪೊಲೀಸರು ತಮ್ಮ ಸುರಕ್ಷತೆಗಾಗಿ Reflective Jacket (ಪ್ರತಿಫಲಕ ಜಾಕೆಟ್) ಧರಿಸಬೇಕು.
ಸಂಜೆ ವೇಳೆ ಕಡ್ಡಾಯವಾಗಿ ಎಲ್ಇಡಿ ಬಟನ್‌ಗಳನ್ನು ಉಪಯೋಗಿಸಬೇಕು.
ವಾಹನ ತಪಾಸಣೆ ಸಂದರ್ಭದಲ್ಲಿ ಕಡ್ಡಾಯವಾಗಿ Body Worn Camera (ದೇಹಕ್ಕೆ ಧರಿಸುವ ಕ್ಯಾಮರಾ) ಬಳಸಬೇಕು.
ಸಂಪರ್ಕ ರಹಿತ ಪ್ರಕರಣಗಳು: ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್ (ಟಿಎಂಸಿ) ಅಥವಾ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ (ಐಟಿಎಂಎಸ್) ಇರುವ ಕಡೆಗಳಲ್ಲಿ ಆದಷ್ಟು ಸಂಪರ್ಕ ರಹಿತ (Contactless) ಪ್ರಕರಣಗಳನ್ನು ದಾಖಲಿಸಲು ಆದ್ಯತೆ ನೀಡಬೇಕು.
ಜಾಗೃತಿ ಕಾರ್ಯಕ್ರಮಗಳು: ಅನಾಹುತಗಳನ್ನು ತಪ್ಪಿಸಲು ಮತ್ತು ಸಂಚಾರ ನಿಯಮಗಳ ಪಾಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲಕಾಲಕ್ಕೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಅತಿ ವೇಗದ ವಾಹನಗಳಿಗೆ ತಂತ್ರಜ್ಞಾನ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡದೆ, ಅಂತಹ ವಾಹನಗಳ ವಿರುದ್ಧ ಎಫ್.ಟಿ.ವಿ.ಆರ್ (FTVR) ದಾಖಲಿಸಲು ತಂತ್ರಜ್ಞಾನವನ್ನು ಬಳಸಬೇಕು.
ಸುರಕ್ಷಿತ ತಪಾಸಣಾ ಸ್ಥಳ: ವಾಹನಗಳ ವೇಗವನ್ನು ನಿಯಂತ್ರಿಸಲು, ತಪಾಸಣಾ ಸ್ಥಳದಿಂದ ಸುಮಾರು 100-150 ಮೀಟರ್ ಮೊದಲೇ ರಿಫ್ಲೆಕ್ಟಿವ್ ರಬ್ಬರ್ ಕೋನ್‌ಗಳು ಮತ್ತು ಇತರೆ ಸುರಕ್ಷತಾ ಸಲಕರಣೆಗಳನ್ನು ಅಳವಡಿಸಬೇಕು. ರಾತ್ರಿ ವೇಳೆ ಸಂಚಾರ ಸಿಗ್ನಲ್ ದೀಪಗಳಿರುವ ಅಥವಾ ಜಂಕ್ಷನ್‌ಗಳ ಬಳಿ ತಪಾಸಣೆ ನಡೆಸಬೇಕು.
ನಾಕಾಬಂಧಿ ನಿಯಮ: ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಡೆಸುವ ನಾಕಾಬಂಧಿ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಹೆದ್ದಾರಿಗಳಲ್ಲಿ ನಡೆಸಬಾರದು. ತಪಾಸಣೆ ವೇಳೆ ಸಂಚಾರ ಪೊಲೀಸರ ನೆರವು ಪಡೆಯಬೇಕು.
ರಾಜ್ಯ
Robotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್‌ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
ಸ್ಪೇನ್‌ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.
ಚಿಕ್ಕಬಳ್ಳಾಪುರ: ಸ್ಪೇನ್‌ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.
ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (SMSIMSR) ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.
ಭಾರತೀಯ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸಾ ಕ್ಷೇತ್ರದ ಪ್ರಮುಖ ತಜ್ಞ ಡಾ. ಸುಧೀರ್ ಶ್ರೀವಾಸ್ತವ ಅವರು ಬಾರ್ಸಿಲೋನಾದಲ್ಲಿ ನಡೆದ ಯುರೋಪಿಯನ್ ಅಸೋಸಿಯೇಷನ್ ಫಾರ್ ಕಾರ್ಡಿಯೋ-ಥೊರಾಸಿಕ್ ಸರ್ಜರಿ (EACTS) ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾಗಲೇ ದೂರದಿಂದ ರೋಬೋಟ್ ನಿಯಂತ್ರಿಸಿ ಶಸ್ತ್ರಚಿಕಿತ್ಸೆ ನಡೆಸಿದರು.
ಜನ್ಮಜಾತ ಹೃದಯ ಸಮಸ್ಯೆಗೆ ಚಿಕಿತ್ಸೆ
ಕೋಲಾರ ಜಿಲ್ಲೆಯ 26 ವರ್ಷದ ಮಹಿಳೆಯೊಬ್ಬರು ಹೃದಯದ ಮೇಲಿನ ಎರಡು ಕೋಣೆಗಳ ನಡುವಿನ ಗೋಡೆಯಲ್ಲಿ ಜನ್ಮಜಾತ ರಂಧ್ರವಿರುವ ಸಮಸ್ಯೆಯಿಂದ ಬಳಲುತ್ತಿದ್ದರು. ವೈದ್ಯಕೀಯ ಭಾಷೆಯಲ್ಲಿ ಇದನ್ನು ಆಟ್ರಿಯಲ್ ಸೆಪ್ಟಲ್ ಡಿಫೆಕ್ಟ್ (ASD) ಎಂದು ಕರೆಯಲಾಗುತ್ತದೆ.
ಬಾರ್ಸಿಲೋನಾದಲ್ಲಿ ಅಳವಡಿಸಲಾಗಿದ್ದ ರೋಬೋಟಿಕ್ ಶಸ್ತ್ರಚಿಕಿತ್ಸಾ ಕನ್ಸೋಲ್ ಮೂಲಕ ಡಾ. ಸುಧೀರ್ ಶ್ರೀವಾಸ್ತವ ಅವರು ಮುದ್ದೇನಹಳ್ಳಿಯ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿದ್ದ ‘ಎಸ್‌ಎಸ್‌ಐ ಮಂತ್ರ’ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿದರು. ಸುಮಾರು ಮೂರರಿಂದ ನಾಲ್ಕು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಯಿತು.
ಮಣಿಪಾಲ್ ಆಸ್ಪತ್ರೆಯ ಜೈಪುರ ಘಟಕದ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಹಾಗೂ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಲಲಿತ್ ಮಲಿಕ್ ಮತ್ತು ಮುದ್ದೇನಹಳ್ಳಿಯ ಸಂಸ್ಥೆಯ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ. ಸಿ.ಎಸ್. ಹಿರೇಮಠ ಅವರು ಸ್ಥಳದಲ್ಲಿದ್ದು, ಶಸ್ತ್ರಚಿಕಿತ್ಸೆಗೆ ಅಗತ್ಯವಾದ ನೆರವು ನೀಡಿದರು. ರೋಗಿಯ ಆರೋಗ್ಯದ ಮೇಲೂ ನಿರಂತರ ನಿಗಾ ವಹಿಸಿದರು.
ಆರು ಗಂಟೆಗಳಲ್ಲಿ ಉಸಿರಾಟದ ಟ್ಯೂಬ್ ತೆರವು
ಶಸ್ತ್ರಚಿಕಿತ್ಸೆಯ ಬಳಿಕ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸುಮಾರು ಆರು ಗಂಟೆಗಳ ನಂತರ ಉಸಿರಾಟಕ್ಕೆ ಅಳವಡಿಸಿದ್ದ ಟ್ಯೂಬ್ ಅನ್ನು ತೆಗೆದುಹಾಕಲಾಯಿತು ಎಂದು ಆಸ್ಪತ್ರೆ ತಿಳಿಸಿದೆ.
ಶಸ್ತ್ರಚಿಕಿತ್ಸೆ ವೇಳೆ ಮೂರು ಸಣ್ಣ ಛೇದನಗಳನ್ನು ಮಾಡಲಾಗಿದ್ದು, ಪ್ರತಿಯೊಂದೂ ಐದು ಮಿಲಿಮೀಟರ್‌ಗಿಂತ ಕಡಿಮೆ ಗಾತ್ರದ್ದಾಗಿತ್ತು. ಇದರಿಂದ ರಕ್ತಸ್ರಾವ ಮತ್ತು ಶಸ್ತ್ರಚಿಕಿತ್ಸೆಯ ನಂತರದ ನೋವು ಕಡಿಮೆಯಾಗಿತ್ತು ಎಂದು ಸಂಸ್ಥೆ ಹೇಳಿದೆ.
ದೂರದ ಅಂತರವನ್ನೂ ಮೀರಿದ ವೈದ್ಯಕೀಯ ತಂತ್ರಜ್ಞಾನ
ಇದೇ ಆಸ್ಪತ್ರೆಯಲ್ಲಿ ಈ ಹಿಂದೆ ಗುರುಗ್ರಾಮ್‌ನಿಂದ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಸ್ಪೇನ್‌ನ ಬಾರ್ಸಿಲೋನಾದಿಂದಲೇ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದೂರಸ್ಥ ರೋಬೋಟಿಕ್ ವೈದ್ಯಕೀಯ ತಂತ್ರಜ್ಞಾನದ ಅಂತರರಾಷ್ಟ್ರೀಯ ಬಳಕೆಯ ಸಾಧ್ಯತೆಗಳನ್ನು ಪ್ರದರ್ಶಿಸಲಾಗಿದೆ.
ಇಂತಹ ತಂತ್ರಜ್ಞಾನವು ಭವಿಷ್ಯದಲ್ಲಿ ಗ್ರಾಮೀಣ ಪ್ರದೇಶಗಳು ಹಾಗೂ ಪರಿಣತ ವೈದ್ಯರ ಕೊರತೆಯಿರುವ ಸ್ಥಳಗಳಿಗೂ ಉನ್ನತ ಮಟ್ಟದ ವೈದ್ಯಕೀಯ ಸೇವೆ ತಲುಪಿಸಲು ನೆರವಾಗಬಹುದು. ವೈದ್ಯಕೀಯ ಶಿಕ್ಷಣ, ಶಸ್ತ್ರಚಿಕಿತ್ಸಾ ತರಬೇತಿ ಮತ್ತು ವಿವಿಧ ದೇಶಗಳ ತಜ್ಞ ವೈದ್ಯರ ಸಹಯೋಗಕ್ಕೂ ಇದು ಹೊಸ ಅವಕಾಶಗಳನ್ನು ಕಲ್ಪಿಸಬಹುದು.
ಆದರೆ ಇಂತಹ ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ ನಡೆಸಲು ವಿಶ್ವಾಸಾರ್ಹ ಸಂವಹನ ವ್ಯವಸ್ಥೆ, ಸ್ಥಳೀಯ ವೈದ್ಯಕೀಯ ತಂಡದ ಸಮನ್ವಯ ಮತ್ತು ಸೂಕ್ತ ಸುರಕ್ಷತಾ ಕ್ರಮಗಳು ಅತ್ಯಗತ್ಯ.
ಬಡ ಕುಟುಂಬದ ಮಹಿಳೆಗೆ ಸಂಪೂರ್ಣ ಉಚಿತ ಚಿಕಿತ್ಸೆ
ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಇಬ್ಬರು ಮಕ್ಕಳ ತಾಯಿಯಾಗಿದ್ದು, ಅವರ ಪತಿ ಆಟೋರಿಕ್ಷಾ ಚಾಲಕರಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಈ ಕುಟುಂಬಕ್ಕೆ ದುಬಾರಿ ಹೃದಯ ಶಸ್ತ್ರಚಿಕಿತ್ಸೆಯ ವೆಚ್ಚ ಭರಿಸುವುದು ಕಷ್ಟವಾಗಿತ್ತು.
ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಶಸ್ತ್ರಚಿಕಿತ್ಸೆ ಸೇರಿದಂತೆ ಸಂಪೂರ್ಣ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸಿದೆ.
ಆಧುನಿಕ ರೋಬೋಟಿಕ್ ತಂತ್ರಜ್ಞಾನದ ನೆರವಿನಿಂದ ನಡೆದ ಈ ಶಸ್ತ್ರಚಿಕಿತ್ಸೆ, ದೂರದ ಅಂತರವನ್ನು ಮೀರಿಯೂ ಪರಿಣತ ವೈದ್ಯಕೀಯ ಸೇವೆಯನ್ನು ರೋಗಿಗಳಿಗೆ ತಲುಪಿಸಬಹುದೆಂಬುದಕ್ಕೆ ಮಹತ್ವದ ಉದಾಹರಣೆಯಾಗಿದೆ.
ರಾಜ್ಯ
Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.
ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.
ರಾಜ್ಯ
Lowest rainfall-ಎಲ್‌ನಿನೋ ಪ್ರಭಾವ: 11 ವರ್ಷಗಳಲ್ಲೇ ಅತಿ ಕಡಿಮೆ ಮಳೆ; ದೇಶಾದ್ಯಂತ ಶೇ.13, ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಹೊಸದಿಲ್ಲಿ: ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾವ ಭಾಗದಲ್ಲಿ ಎಷ್ಟು ಮಳೆ ಕೊರತೆ?
ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ.25ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದ್ದರೆ, ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಶೇ.24ಕ್ಕೂ ಅಧಿಕ ಕೊರತೆ ಉಂಟಾಗಿದೆ.
ದೇಶಾದ್ಯಂತ ಈ ಮುಂಗಾರು ಅವಧಿಯಲ್ಲಿ ಒಟ್ಟು 759.4 ಮಿ.ಮೀ. ಮಳೆಯಾಗಿದೆ. 2001ರ ಬಳಿಕ ಇದು ನಾಲ್ಕನೇ ಅತಿ ಕಡಿಮೆ ಮುಂಗಾರು ಮಳೆಯಾಗಿದ್ದು, 1901ರಿಂದ ಲೆಕ್ಕ ಹಾಕಿದರೆ 13ನೇ ಅತಿ ಕಡಿಮೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್‌ನಿನೋ ಪ್ರಭಾವ
ದೇಶಾದ್ಯಂತ ಮಳೆ ಕೊರತೆಗೆ ಎಲ್‌ನಿನೋ ಪರಿಣಾಮವೂ ಪ್ರಮುಖ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್‌ನಿನೋ ಪರಿಸ್ಥಿತಿಯಿಂದ ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಿದ್ದು, ಹಲವು ರಾಜ್ಯಗಳಲ್ಲಿ ಮಳೆ ಅಭಾವ ಉಂಟಾಗಿದೆ.
ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಕರ್ನಾಟಕದಲ್ಲಿ ಎಲ್‌ನಿನೋ ಪರಿಣಾಮ ತೀವ್ರವಾಗಿ ಕಂಡುಬಂದಿದ್ದು, ರಾಜ್ಯದಲ್ಲಿ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದೆ. ಈಗಾಗಲೇ ರಾಜ್ಯದ 100ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ದಕ್ಷಿಣ ಭಾರತದ ಇತರ ರಾಜ್ಯಗಳ ಪೈಕಿ ಕೇರಳದಲ್ಲಿ ಶೇ.28, ಆಂಧ್ರಪ್ರದೇಶದಲ್ಲಿ ಶೇ.25, ತಮಿಳುನಾಡಿನಲ್ಲಿ ಶೇ.20 ಹಾಗೂ ತೆಲಂಗಾಣದಲ್ಲಿ ಶೇ.18ರಷ್ಟು ಮಳೆ ಕೊರತೆ ದಾಖಲಾಗಿದೆ.
ಇತರ ರಾಜ್ಯಗಳಲ್ಲೂ ಮಳೆ ಅಭಾವ
ಮಣಿಪುರದಲ್ಲಿ ಶೇ.46ರಷ್ಟು ಮಳೆ ಕೊರತೆ ದಾಖಲಾಗಿದ್ದು, ಮಳೆ ಅಭಾವ ಎದುರಿಸುತ್ತಿರುವ ರಾಜ್ಯಗಳ ಪೈಕಿ ಇದು ಅತ್ಯಧಿಕವಾಗಿದೆ. ಅರುಣಾಚಲ ಪ್ರದೇಶದಲ್ಲಿ ಶೇ.44, ಪಂಜಾಬ್‌ನಲ್ಲಿ ಶೇ.41, ಬಿಹಾರದಲ್ಲಿ ಶೇ.32, ಅಸ್ಸಾಂನಲ್ಲಿ ಶೇ.28 ಹಾಗೂ ಹರಿಯಾಣದಲ್ಲಿ ಶೇ.23ರಷ್ಟು ಕೊರತೆ ದಾಖಲಾಗಿದೆ.
ದಶಕದಲ್ಲೇ ಒಣಹವೆಯ ಮುಂಗಾರು
ಎಲ್‌ನಿನೋ ಪರಿಣಾಮದಿಂದಾಗಿ ಈ ಬಾರಿ ದೇಶದಲ್ಲಿ ದಶಕದಲ್ಲೇ ಅತ್ಯಂತ ಒಣಹವೆಯ ಮುಂಗಾರು ದಾಖಲಾಗಿದೆ. 2015ರಲ್ಲಿ ಕೊನೆಯ ಬಾರಿಗೆ ಇದೇ ರೀತಿಯ ಮಳೆ ಕೊರತೆ ಕಂಡುಬಂದಿದ್ದು, ಆ ವರ್ಷವೂ ದೇಶಾದ್ಯಂತ ಸುಮಾರು ಶೇ.13ರಷ್ಟು ಮಳೆ ಕೊರತೆ ದಾಖಲಾಗಿತ್ತು.
ಜೂನ್‌ನಲ್ಲಿ ತೀವ್ರ ಮಳೆ ಕೊರತೆ
ಮುಂಗಾರು ಆರಂಭದ ಜೂನ್ ತಿಂಗಳಲ್ಲೇ ಮಳೆ ಕೊರತೆ ತೀವ್ರವಾಗಿತ್ತು. ಆ ತಿಂಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಸುಮಾರು ಶೇ.65ರಷ್ಟು ಮಾತ್ರ ಮಳೆಯಾಗಿತ್ತು. ಜುಲೈನಲ್ಲಿ ಮಳೆಯ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡುಬಂದರೂ, ಆಗಸ್ಟ್‌ನಲ್ಲಿ ಮತ್ತೆ ಕೊರತೆ ಉಂಟಾಯಿತು. ಸೆಪ್ಟೆಂಬರ್‌ನಲ್ಲಿ ಮಳೆ ಪ್ರಮಾಣದಲ್ಲಿ ತುಸು ಸುಧಾರಣೆ ಕಂಡುಬಂದಿದೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು24 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಶಿಕ್ಷಣ23 hours agoVivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ


















