ದಕ್ಷಿಣ ಕನ್ನಡ
Communally provocative post ಕೋಮು ಪ್ರಚೋದನಕಾರಿ ಪೋಸ್ಟ್ ಗಳ ವಿರುದ್ದ ಜಿಲ್ಲಾ ಪೊಲೀಸರ ಸಮರ ; ಧರ್ಮಸ್ಥಳ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 2 ಕೇಸ್

Communally provocative post ಮಂಗಳೂರು, ಜೂನ್ 02, 2025: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಕೋಮು ಸೌಹಾರ್ದ ಕದಡುವ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪದ ಮೇಲೆ ಎರಡು ಖಾತೆಗಳ ನಿರ್ವಾಹಕರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. mangalore_beary_warrior_03 ಹಾಗೂ “bantwal_hindu_warriors” ಎಂಬ ಇನ್ಸ್ಟಾಗ್ರಾಂ ಖಾತೆಗಳು ಪ್ರಕರಣ ದಾಖಲಾದಖಾತೆಗಳು
“mangalore_beary_warrior_03” ಎಂಬ ಇನ್ಸ್ಟಾಗ್ರಾಂ ಖಾತೆಯ ನಿರ್ವಾಹಕನು ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಬಳಸಿ, ಅದರೊಂದಿಗೆ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸಂದೇಶವನ್ನು ಪೋಸ್ಟ್ ಮಾಡಿದ್ದನು. ಈ ಪೋಸ್ಟ್ ಗೆ ಸಂಬಂಧಿಸಿದಂತೆ, ಜೂ 1 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಕಲಂ 55 (ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಹೇಳಿಕೆ ನೀಡುವುದು), 103 (ಗಲಭೆಗೆ ಪ್ರಚೋದನೆ ನೀಡುವುದು) ಮತ್ತು 353(2) (ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮತ್ತೊಂದು ಪ್ರಕರಣದಲ್ಲಿ, “bantwal_hindu_warriors” ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಹಾಗೂ ಕೋಮು ಸೌಹಾರ್ದತೆಯನ್ನು ಹಾಳುಗೆಡವಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತಹ ಪೋಸ್ಟ್ ಪ್ರಸಾರ ಮಾಡಲಾಗಿತ್ತು. ಈ ಕುರಿತು ಜೂ 1 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 2023ರ ಕಲಂ 196(1)(ಎ) (ಧರ್ಮ, ಜನಾಂಗ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 353(1)(ಸಿ) (ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಉದ್ದೇಶದಿಂದ ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ
ಪೊಲೀಸ್ ಇಲಾಖೆಯ ಎಚ್ಚರಿಕೆ:
ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಶಾಂತಿ ಕದಡುವ, ಕೋಮು ವೈಷಮ್ಯವನ್ನು ಹರಡುವ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳನ್ನು ಸಹಿಸಲಾಗುವುದಿಲ್ಲ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಇಂತಹ ಪ್ರಚೋದನಕಾರಿ ಪೋಸ್ಟ್ಗಳಿಗೆ ಕಿವಿಗೊಡದೆ, ಯಾವುದೇ ಸಂಶಯಾಸ್ಪದ ವಿಷಯ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ದಕ್ಷಿಣ ಕನ್ನಡ
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ

ಪುತ್ತೂರು: ದೀಪಾವಳಿಯ ಸಂಭ್ರಮವನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳುವ ಮೂಲಕ ಸೇವೆ, ಸಹಕಾರ ಹಾಗೂ ಮಾನವೀಯತೆಯ ಸಂದೇಶ ಸಾರುತ್ತಿರುವ ಪುತ್ತೂರಿನ ಹೆಮ್ಮೆಯ ‘ಅಶೋಕ ಜನಮನ-2026’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ಈ ಬೃಹತ್ ಜನಸೇವಾ ಕಾರ್ಯಕ್ರಮ ನ.22ರಂದು (ರವಿವಾರ) ಬೆಳಿಗ್ಗೆ 9 ಗಂಟೆಯಿಂದ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಸುಮಾರು ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಿಸುವ ಬೃಹತ್ ಸಂಕಲ್ಪದೊಂದಿಗೆ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಸುಮಾರು ₹4 ಕೋಟಿ ವೆಚ್ಚ ಮಾಡಲಾಗುತ್ತಿದೆ. ಉಡುಗೊರೆ ವಿತರಣೆ ಮಾತ್ರವಲ್ಲದೆ, ಬೃಹತ್ ಅನ್ನದಾನ, ದೋಸೆ ಮೇಳ ಸೇರಿದಂತೆ ಹಲವು ವಿಶೇಷ ವ್ಯವಸ್ಥೆಗಳು ಈ ಬಾರಿಯ ಜನಮನದ ಆಕರ್ಷಣೆಯಾಗಲಿವೆ. ಪುತ್ತೂರು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದಲೂ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದ್ದು, ಕೊಂಬೆಟ್ಟು ಕ್ರೀಡಾಂಗಣ ಜನಸಾಗರಕ್ಕೆ ಸಾಕ್ಷಿಯಾಗಲಿದೆ.
14 ವರ್ಷಗಳ ಜನಸೇವೆಯ ಪಯಣ; ಜನಮನದಲ್ಲಿ ವಿಶೇಷ ಸ್ಥಾನ!
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಮಾಜದ ಬಡವರು, ಮಧ್ಯಮ ವರ್ಗದವರು ಸೇರಿದಂತೆ ಎಲ್ಲ ವರ್ಗದ ಜನರೊಂದಿಗೆ ಹಬ್ಬದ ಸಂತೋಷ ಹಂಚಿಕೊಳ್ಳುವ ಆಶಯದೊಂದಿಗೆ ಆರಂಭಗೊಂಡ ‘ಅಶೋಕ ಜನಮನ’ ಇಂದು ಪುತ್ತೂರಿನ ಪ್ರಮುಖ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.
ಕಳೆದ 14 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ತನ್ನ ವ್ಯಾಪ್ತಿ ಹಾಗೂ ಜನಪ್ರಿಯತೆಯನ್ನು ವಿಸ್ತರಿಸಿಕೊಂಡಿದೆ. ರಾಜಕೀಯ, ಜಾತಿ, ಧರ್ಮದ ಭೇದವಿಲ್ಲದೆ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಗೊರೆ ಪಡೆದುಕೊಳ್ಳುವ ಮುಕ್ತ ಅವಕಾಶ ಇದರ ವಿಶೇಷತೆಯಾಗಿದೆ.
ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಉದ್ಯಮದ ಮೂಲಕ ಗಳಿಸಿದ ಸಂಪನ್ಮೂಲದ ಒಂದು ಭಾಗವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುವ ಉದ್ದೇಶದಿಂದ ಈ ಸೇವಾ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಹೀಗಾಗಿ ಅಶೋಕ ಜನಮನ ಕೇವಲ ಉಡುಗೊರೆ ವಿತರಣಾ ಕಾರ್ಯಕ್ರಮವಾಗಿ ಉಳಿಯದೆ, ಜನರೊಂದಿಗೆ ಬೆರೆಯುವ ಮತ್ತು ಹಬ್ಬದ ಸಂತೋಷವನ್ನು ಹಂಚಿಕೊಳ್ಳುವ ಬೃಹತ್ ವೇದಿಕೆಯಾಗಿ ರೂಪುಗೊಂಡಿದೆ.
ಒಂದು ಲಕ್ಷ ಮಂದಿಗೆ ಉಡುಗೊರೆ; ಮನೆಮಂದಿಗೆಲ್ಲ ದೀಪಾವಳಿ ಕೊಡುಗೆ!
ಈ ಬಾರಿಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಬೃಹತ್ ಉಡುಗೊರೆ ವಿತರಣೆಯಾಗಿದೆ. ಸುಮಾರು ಒಂದು ಲಕ್ಷ ಮಂದಿಗೆ ಉಡುಗೊರೆ ತಲುಪಿಸುವ ಗುರಿ ಹೊಂದಲಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ಅಗತ್ಯ ವಸ್ತುಗಳನ್ನು ಸಿದ್ಧಪಡಿಸಲಾಗಿದೆ.
ಸೀರೆ, ಬೆಡ್ಶೀಟ್, ಬಾತ್ ಟವೆಲ್, ತಟ್ಟೆ, ಬಟ್ಟಲು, ಗ್ಲಾಸ್ ಸೇರಿದಂತೆ ವಿವಿಧ ವಸ್ತುಗಳನ್ನು ಉಡುಗೊರೆಯಾಗಿ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಹಬ್ಬದ ಸಂದರ್ಭದಲ್ಲಿ ಮನೆಮಂದಿಗೆ ಉಪಯುಕ್ತವಾಗುವ ವಸ್ತುಗಳನ್ನು ನೀಡುವ ಮೂಲಕ ಪ್ರತಿಯೊಂದು ಕುಟುಂಬದಲ್ಲೂ ದೀಪಾವಳಿಯ ಸಂತೋಷ ಮೂಡಿಸುವ ಪ್ರಯತ್ನ ಇದಾಗಿದೆ.
ಉಡುಗೊರೆ ವಿತರಣೆಗೆ ಪ್ರತ್ಯೇಕ ಕೌಂಟರ್ಗಳು ಹಾಗೂ ವ್ಯವಸ್ಥಿತ ನಿರ್ವಹಣೆಗೆ ವಿಶೇಷ ತಂಡಗಳನ್ನು ನಿಯೋಜಿಸುವ ಮೂಲಕ ಜನದಟ್ಟಣೆಯನ್ನು ನಿಯಂತ್ರಿಸಲು ಸಿದ್ಧತೆ ಮಾಡಲಾಗಿದೆ.
ಒಂದು ಲಕ್ಷ ದೋಸೆ; 60 ಸಾವಿರಕ್ಕೂ ಅಧಿಕ ಮಂದಿಗೆ ಭರ್ಜರಿ ಅನ್ನದಾನ!
ಅಶೋಕ ಜನಮನದ ಮತ್ತೊಂದು ವಿಶೇಷ ಆಕರ್ಷಣೆ ಬೃಹತ್ ದೋಸೆ ಮೇಳ. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಬೆಳಗ್ಗಿನಿಂದಲೇ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು ಒಂದು ಲಕ್ಷ ದೋಸೆಗಳನ್ನು ತಯಾರಿಸಿ ವಿತರಿಸುವ ಗುರಿ ಹೊಂದಲಾಗಿದೆ.
ಇದರೊಂದಿಗೆ ಮಧ್ಯಾಹ್ನ ಸುಮಾರು 60 ಸಾವಿರಕ್ಕೂ ಅಧಿಕ ಮಂದಿಗೆ ಅನ್ನದಾನ ಆಯೋಜಿಸಲಾಗಿದೆ. ಸಾವಿರಾರು ಜನರು ಏಕಕಾಲದಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಆಹಾರ ವಿತರಣೆ ಹಾಗೂ ಜನರ ಸಂಚಾರಕ್ಕೆ ಅಗತ್ಯ ವ್ಯವಸ್ಥೆಗಳನ್ನು ರೂಪಿಸಲಾಗಿದೆ. ಬೆಳಗ್ಗಿನಿಂದ ಸಂಜೆಯವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿರುವುದು ವಿಶೇಷವಾಗಿದೆ.
ರಾಜಕೀಯ ನಾಯಕರ ದಂಡು; ಸಚಿವರು, ಮಾಜಿ ಸಚಿವರ ಉಪಸ್ಥಿತಿ
ಕಾರ್ಯಕ್ರಮಕ್ಕೆ ರಾಜ್ಯಮಟ್ಟದ ರಾಜಕೀಯ ನಾಯಕರು, ಸಚಿವರು, ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಕರ್ನಾಟಕ ಸರಕಾರದ ಆರೋಗ್ಯ ಸಚಿವ ಯು.ಟಿ. ಖಾದರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ’ಸೋಜಾ, ಪಿ.ವಿ. ಮೋಹನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಹರೀಶ್ ಕುಮಾರ್, ಜಿ.ಆರ್. ಲೋಬೊ, ಗಫೂರ್, ಲಾವಣ್ಯ ಬಲ್ಲಾಳ್, ಟಿ.ಎಂ. ಶಹೀದ್, ಶಾಲೆಟ್ ಪಿಂಟೋ, ಮಹಮ್ಮದ್ ಆಲಿ, ಮಹಮ್ಮದ್ ಬಡಗನ್ನೂರು, ಚಂದ್ರಹಾಸ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಎಂ.ಬಿ. ವಿಶ್ವನಾಥ ರೈ, ಪಝಲ್ ರಹೀಂ, ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ರಾಜಾರಾಮ್, ಕೃಷ್ಣಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ ಆಳ್ಕೆ, ಯು.ಟಿ. ತೌಸಿಫ್, ಜೋಕಿಂ ಡಿಸೋಜಾ, ಉಷಾ ಅಂಚನ್, ದಿವಾಕರ ದಾಸ್ ನೇರ್ಲಾಜೆ ಹಾಗೂ ಪ್ರಸನ್ನ ಕುಮಾರ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಇದಲ್ಲದೆ ಸಂತೋಷ್ ಕುಮಾರ್ ಶೆಟ್ಟಿ, ಪದ್ಮರಾಜ್ ಆರ್. ಪೂಜಾರಿ, ಎಂ.ಎಸ್. ಮಹಮ್ಮದ್, ರಕ್ಷಿತ್ ಶಿವರಾಮ್, ಮಿಥುನ್ ರೈ, ಇನಾಯತ್ ಆಲಿ, ಹೇಮನಾಥ ಶೆಟ್ಟಿ ಕಾವು, ದುರ್ಗಾಪ್ರಸಾದ್ ರೈ ಕುಂಬ್ರ, ಉಮಾನಾಥ ಶೆಟ್ಟಿ, ಅಮಲ ರಾಮಚಂದ್ರ, ಮಲ್ಲಿಕಾ ಪಕ್ಕಳ, ಕೃಷ್ಣಪ್ಪ ಸುಳ್ಯ, ರಘು ಬೆಳ್ಳಿಪ್ಪಾಡಿ, ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ರಾಧಾಕೃಷ್ಣ ನಾಯಕ್ ಉಪ್ಪಿನಂಗಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಯತಿವರ್ಯರಿಂದ ಧಾರ್ಮಿಕ ಆಶೀರ್ವಚನ
ಕಾರ್ಯಕ್ರಮಕ್ಕೆ ಧಾರ್ಮಿಕ ಮೆರುಗು ನೀಡಲು ಹಿಂದೂ ಸಮಾಜದ ಯತಿವರ್ಯರು ಆಗಮಿಸಲಿದ್ದಾರೆ. ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಈಶ ವಿಠಲದಾಸ ಸ್ವಾಮೀಜಿ ಹಾಗೂ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಧಾರ್ಮಿಕ ಆಶೀರ್ವಚನ ನೀಡಲಿದ್ದಾರೆ.
ಮಳೆ ಕಾರಣದಿಂದ ಮುಂದೂಡಿಕೆಯಾಗಿದ್ದ ಕಾರ್ಯಕ್ರಮ
ನವೆಂಬರ್ 8ರಂದು ನಡೆಯಬೇಕಿದ್ದ ಅಶೋಕ ಜನಮನ ಕಾರ್ಯಕ್ರಮವನ್ನು ನಿರಂತರ ಮಳೆ ಹಾಗೂ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನವೆಂಬರ್ 22ಕ್ಕೆ ಮುಂದೂಡಲಾಗಿತ್ತು. ಇದೀಗ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಆಯೋಜಿಸಲು ಟ್ರಸ್ಟ್ ಮುಂದಾಗಿದೆ.
ಹಬ್ಬದ ಸಂಭ್ರಮಕ್ಕೆ ಜನಮನದ ಸ್ಪರ್ಶ
ಒಂದು ಕಡೆ ಬೃಹತ್ ಉಡುಗೊರೆ ವಿತರಣೆ, ಮತ್ತೊಂದೆಡೆ ಅನ್ನದಾನ ಹಾಗೂ ದೋಸೆ ಮೇಳ, ಇನ್ನೊಂದೆಡೆ ರಾಜಕೀಯ ಮತ್ತು ಧಾರ್ಮಿಕ ಗಣ್ಯರ ಸಮಾಗಮ. ಹೀಗೆ ಹಲವು ವಿಶೇಷತೆಗಳನ್ನು ಒಳಗೊಂಡಿರುವ ಅಶೋಕ ಜನಮನ-2026 ಪುತ್ತೂರಿನಲ್ಲಿ ಮತ್ತೊಂದು ಬೃಹತ್ ಜನಸಂಗಮಕ್ಕೆ ವೇದಿಕೆಯಾಗಲಿದೆ.
ದೀಪಾವಳಿ ಎಂದರೆ ಕೇವಲ ಬೆಳಕಿನ ಹಬ್ಬವಲ್ಲ, ಸಂತೋಷವನ್ನು ಹಂಚಿಕೊಳ್ಳುವ ಹಬ್ಬವೂ ಹೌದು ಎಂಬ ಆಶಯದೊಂದಿಗೆ ರೂಪುಗೊಂಡಿರುವ ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಜನರು ಪಕ್ಷಾತೀತವಾಗಿ ಭಾಗವಹಿಸಿ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಅಶೋಕ್ ಕುಮಾರ್ ರೈ ಹಾಗೂ ರೈ ಎಸ್ಟೇಟ್ ಟ್ರಸ್ಟ್ನ ಸಂಘಟಕರು ಮನವಿ ಮಾಡಿದ್ದಾರೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
-
ಶಿಕ್ಷಣ10 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ4 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ9 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ9 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ8 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ9 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ9 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ರಾಜಕೀಯ3 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ















