ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಧರ್ಮಸ್ಥಳ: ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕೆಸರ್ಡ್ ಒಂಜಿ ದಿನದಂತಹ ಕಾರ್ಯಕ್ರಮಗಳು ಗ್ರಾಮೀಣ ಬದುಕಿನ ಸೊಗಡು, ಕೃಷಿ ಸಂಸ್ಕೃತಿ ಮತ್ತು ನಮ್ಮ ಪರಂಪರಾಗತ ಕ್ರೀಡೆಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಮಣ್ಣಿನೊಂದಿಗೆ ಮನುಷ್ಯನಿಗಿರುವ ಅವಿನಾಭಾವ ಸಂಬಂಧವನ್ನು ಇಂತಹ ಕಾರ್ಯಕ್ರಮಗಳು ಮತ್ತಷ್ಟು ಗಟ್ಟಿಗೊಳಿಸುತ್ತವೆ. ಯುವಜನರು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತು ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಹಾಗೂ ಪುರುಷರು ಸೇರಿದಂತೆ ವಿವಿಧ ವಯೋಮಾನದವರು ಉತ್ಸಾಹದಿಂದ ಭಾಗವಹಿಸಿದರು. ಕೆಸರುಗದ್ದೆಯಲ್ಲಿ ಆಯೋಜಿಸಲಾದ ವಿವಿಧ ಗ್ರಾಮೀಣ ಹಾಗೂ ಸಾಂಪ್ರದಾಯಿಕ ಕ್ರೀಡಾಸ್ಪರ್ಧೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಕೆಸರಿನಲ್ಲಿ ಆಟವಾಡುತ್ತಾ ಸ್ಪರ್ಧಿಗಳು ಪ್ರದರ್ಶಿಸಿದ ಉತ್ಸಾಹ, ಚುರುಕುತನ ಮತ್ತು ಕ್ರೀಡಾಸ್ಫೂರ್ತಿ ನೆರೆದಿದ್ದವರನ್ನು ರಂಜಿಸಿತು. ಗ್ರಾಮೀಣ ಕ್ರೀಡೆಗಳ ಮೂಲಕ ಹಳೆಯ ಕಾಲದ ಕೃಷಿ ಬದುಕು ಮತ್ತು ಜನಪದ ಸಂಸ್ಕೃತಿಯನ್ನು ನೆನಪಿಸುವುದರ ಜೊತೆಗೆ, ಪರಸ್ಪರ ಬಾಂಧವ್ಯ ಹಾಗೂ ಸಾಮರಸ್ಯವನ್ನು ಬೆಳೆಸುವ ವೇದಿಕೆಯಾಗಿಯೂ ಕಾರ್ಯಕ್ರಮ ಮೂಡಿಬಂತು. ಸ್ಥಳೀಯರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು. ಈ ಸಂದರ್ಭದಲ್ಲಿ ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರ್ ಪಿ. ಲಕ್ಷ್ಮೀನಾರಾಯಣ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ವಕೀಲ ಕೇಶವ ಬೆಳಾಲ್, ಪ್ರಭಾಕರ ಪೂಜಾರಿ, ಉದಯ್ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಮುರಳೀಧರ ದಾಸ್, ಹರ್ಷತ್ ಜೈನ್, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಸ್ಯಾಂಡಲ್ವುಡ್ನ ಖ್ಯಾತ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಬಹುನಿರೀಕ್ಷಿತ ಹಾಗೂ ಬಹುಭಾಷಾ ಚಿತ್ರ ‘ಟಾಕ್ಸಿಕ್’ ನಾಳೆ ವಿಶ್ವಾದ್ಯಂತ ತೆರೆಕಾಣುತ್ತಿರುವ ಹಿನ್ನೆಲೆಯಲ್ಲಿ, ನಟ...
ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ)ದ ದಿನವಾದ ಆ. 15 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ...
ಧರ್ಮಸ್ಥಳದಲ್ಲಿ ಸ್ನಾನಘಟ್ಟದ ಬಳಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ಪರಮಭಕ್ತರಾದ ಹಾಸನದ ಎಚ್.ವೈ. ಸೋಮಶೇಖರ್ ಕುಟುಂಬ ಸಮೇತರಾಗಿ ಹಾಗೂ ತಮ್ಮ ಆತ್ಮೀಯ ಬಳಗದವರೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಬಂದು ನೇತ್ರಾವತಿ ಸ್ನಾನಘಟ್ಟದಲ್ಲಿ ಶ್ರದ್ಧಾ-ಭಕ್ತಿಯಿಂದ ಬಾಗಿನ ಅರ್ಪಿಸಿದರು. ಉಜಿರೆ:...
ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದ ಅವರು, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದ ಅವರು, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ–ಮಂದಿರ ಪ್ರಮುಖ್ ಗುರುರಾಜ್ ತಂತ್ರಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ, ಕಡಬ ತಾಲೂಕಿನ ಪ್ರಮುಖರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೆ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ಎಸ್ಐಟಿಗೆ ನಿರ್ದೇಶನ ನೀಡುವಂತೆ ಕೋರಿ ಆರೋಪಿ ಸಿ.ಎನ್. ಚಿನ್ನಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ...
ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಷಡ್ಯಂತ್ರ ರೂಪಿಸಿ ಜಾಗತಿಕ ಮಟ್ಟದಲ್ಲಿ ಅನಧಿಕೃತ ಅಪಪ್ರಚಾರ ಹಾಗೂ ವದಂತಿಗಳನ್ನು ಪಸರಿಸಿ ಕಳಂಕವನ್ನುಂಟು ಮಾಡಿದ ಪ್ರಕರಣವನ್ನು ಖಂಡಿಸಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು...
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು....
ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ. ವಲಯದಲ್ಲಿ ಅಡ್ಡಮತದಾನದ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದಂತೆ ಮಂಗಳವಾರ ಬೇಲೂರು ಶಾಸಕ ಎಚ್.ಕೆ. ಸುರೇಶ್ ಮುನ್ನೂರಕ್ಕೂ ಮಿಕ್ಕಿ ಬೆಂಬಲಿಗರೊಂದಿಗೆ ನೂರಕ್ಕೂ ಮಿಕ್ಕಿ ಕಾರುಗಳಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಉಜಿರೆ: ರಾಜ್ಯ ವಿಧಾನಪರಿಷತ್...