ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ವಿಜ್ಞಾನ ವಿಭಾಗ ಹಾಗೂ ವಿಜ್ಞಾನ ವೇದಿಕೆ ಇದರ ಸಹಯೋಗದೊಂದಿಗೆ ನ4 ರಂದು ಕಾಲೇಜು ಸಭಾಂಗಣದಲ್ಲಿ ‘ಸೈನ್ಸಿಯಾ’ ಇದರ ಉದ್ಘಾಟನೆ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು,...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಕನ್ನಡ ಸಂಘ ಹಾಗೂ ಕ್ರೈಸ್ತ ವಿದ್ಯಾಪೀಠ, ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಆಯೋಜಿಸಿದ ರಂಗ ಬದುಕು ಟ್ರಸ್ಟ್ (ರಿ) ಬೆಂಗಳೂರು ಪ್ರಸ್ತುತಿಯಲ್ಲಿ ‘ಮಾನವತಾವಾದಿ ಥೆರೇಸಮ್ಮ(ಮದರ್)’ ಎಂಬ ಏಕವ್ಯಕ್ತಿ ಪ್ರಯೋಗ...
ಅ22ರಂದು ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2024 – 25 ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ದ್ವಿತೀಯ ಕಲಾ ವಿಭಾಗದ...
ಸಂಗೀತ ಪರಿಷತ್ತು ಮಂಗಳೂರು ಇದರ ಆಶ್ರಯದಲ್ಲಿ ಭಾರತೀಯ ವಿದ್ಯಾಭವನದ ಸಹಯೋಗದೊಂದಿಗೆ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ವಿಭಾಗದ ಹಾಡುಗಾರಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ...
ಸೈಂಟ್ ಆಗ್ನೆಸ್ ಕಾಲೇಜು ಇದರ ಆಶ್ರಯದಲ್ಲಿ ಅ22 ರಂದು ನಡೆದ ‘ವೈಬ್ರಾನ್ಜ – 2024’ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಪುತ್ತೂರು: ಸೈಂಟ್ ಆಗ್ನೆಸ್...
ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಮಾನವಿಕ ವಿಭಾಗದ ವತಿಯಿಂದ ಕಲಾ ವಿದ್ಯಾರ್ಥಿಗಳಿಗೆ ನ18 ರಂದು ಕಾಲೇಜಿನ ಸಭಾಂಗಣದಲ್ಲಿ ವ್ಯಕ್ತಿತ್ವ ವಿಕಸನದ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿ ಡಾ. ಎ. ಎನ್ ಕುಮಾರ್...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ಪ್ರತಿಭಾ – 2024 ಕಾರ್ಯಕ್ರಮವು ಸೆ13ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು : ಸಂತ ಫಿಲೋಮಿನಾ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಪ್ರಾಯೋಜಕತ್ವದ ಇಂಟರ್ಯಾಕ್ಟ್ ಕ್ಲಬ್ನ ಪದಗ್ರಹಣ ಕಾರ್ಯಕ್ರಮವು ಆಗಸ್ಟ್ 13ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ...
ಪುತ್ತೂರು: ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಹೆತ್ತವರಿಗೆ ಸೇರಿದ್ದು. ನಾವು ಎಷ್ಟೇ ಕಲಿತರೂ, ಕಲಿಸಿದರೂ, ಪ್ರಯತ್ನಿಸಿದರೂ ಪರಿಪೂರ್ಣವಾದ ಭವಿಷ್ಯವನ್ನು ಮಕ್ಕಳಿಗೆ ನಿರ್ಮಾಣ ಮಾಡಲಾರೆವು; ಆದರೆ ಮಕ್ಕಳನ್ನು ಭವಿಷ್ಯಕ್ಕೆ ನಿರ್ಮಾಣ ಮಾಡಬಲ್ಲೆವು. ಹೆತ್ತವರು ಮಕ್ಕಳ...
ಪುತ್ತೂರು: ಉತ್ತಮ ನಾಯಕನಿಗೆ ಬಲವಾದ ಆತ್ಮ ವಿಶ್ವಾಸ ಇರಬೇಕು. ಆತ್ಮವಿಶ್ವಾಸದ ಕೊರತೆಯಿರುವ ವ್ಯಕ್ತಿ ಎಂದಿಗೂ ಉತ್ತಮ ನಾಯಕನಾಗಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿಯು ತನ್ನನ್ನು ಇತರರು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಆತ್ಮವಿಶ್ವಾಸವನ್ನು ಹೊಂದಿರಬೇಕು. ನಾಯಕನು ತನ್ನ ನಿರ್ಧಾರಗಳು ಮತ್ತು ಕಾರ್ಯಗಳಲ್ಲಿ ವಿಶ್ವಾಸ ಹೊಂದಿರಬೇಕು ಎಂದು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ಹೇಳಿದರು. ಅವರು ಜೂ .15 ರಂದು ನಡೆದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಒಳ್ಳೆಯ ನಾಯಕ ಖಂಡಿತವಾಗಿಯೂ ಇತರರಿಗೆ ಸ್ಫೂರ್ತಿ ನೀಡಬೇಕು. ಒಬ್ಬ ನಾಯಕ ತನ್ನ ಅನುಯಾಯಿಗಳಿಗೆ ಮಾದರಿಯಾಗಿರಬೇಕು. ಅಲ್ಲದೆ ಸಾಧ್ಯವಾದಾಗಲೆಲ್ಲಾ ಅವನು ಅವರನ್ನು ಪ್ರೇರೇಪಿಸಬೇಕು. ಕಷ್ಟಕರ ಸಂದರ್ಭಗಳಲ್ಲಿ ನಾಯಕನು ಭರವಸೆಯನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ ಮಂಗಳೂರಿನ ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿಗಳಾದ ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ ಇರುವ ಸಂಪತ್ತು, ಬುದ್ಧಿವಂತಿಕೆ, ಸಾಮರ್ಥ್ಯಗಳನ್ನು ಸಮರ್ಥವಾಗಿ ಬಳಸಿಕೊಳ್ಳುವಂತಹ ಕೌಶಲವನ್ನು ರೂಢಿಸಿಕೊಳ್ಳಬೇಕು. ನಮ್ಮ ಯಶಸ್ಸಿನ ಗುಟ್ಟು ಪರಿಶ್ರಮದಲ್ಲಿ ಅಡಗಿದೆ. ನಮ್ಮ ಬದುಕಿನ ಶಿಲ್ಪಿ ನಾವೇ ಆಗಬೇಕು. ಆ ಮೂಲಕ ಸುಂದರವಾಗಿ ಬದುಕನ್ನು ವಿನ್ಯಾಸಗೊಳಿಸಿ ಸ್ವಾವಲಂಬಿಗಳಾಗಬಹುದು. ಗುರಿ ಸಾಧನೆಗೆ ನಮ್ಮದೇ ದಾರಿ ಕಂಡುಕೊಳ್ಳಬೇಕು. ಆದರೂ ಸಾಧಕರ ಯಶೋಗಾಥೆಗಳಿಂದ ಪ್ರೇರಣೆ ದೊರಕುತ್ತದೆ, ಮನೋಬಲ ಹೆಚ್ಚುತ್ತದೆ. ಸಮಸ್ಯೆ, ಸಂಕಷ್ಟಗಳನ್ನು ಎದುರಿಸಿದ ಬಗೆ, ಪ್ರವಾಹದ ವಿರುದ್ಧ ಈಜುವ ಛಾತಿ, ಆತ್ಮಸ್ಥೈರ್ಯದ ಕಥೆಗಳು ನಮಗೆ ಜೀವ ತುಂಬಿ ಜೀವನದ ಯಶಸ್ಸಿಗೆ ಸ್ಫೂರ್ತಿಯಾಗುತ್ತವೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಡಾ. ಪ್ರವೀಣ್ ಲಿಯೋ ಲಸ್ರದೋ ಹೂಗುಚ್ಛ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಂಕಿತಾ ಎಲ್.ಡಿ, ಕಾರ್ಯದರ್ಶಿ ಧ್ರುವ ಜೆ ಭಂಡಾರಿ, ಜೊತೆ ಕಾರ್ಯದರ್ಶಿ ಸೃದ್ಧನ್ ಆಳ್ವ ಕೆ ಸಹಿತ ತರಗತಿವಾರು ಪ್ರತಿನಿಧಿಗಳು, ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಮಾಣವಚನವನ್ನು ಬೋಧಿಸಿದರು. ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ.ಕೋಸ್ಟ, ಹಿರಿಯ ವಿದ್ಯಾರ್ಥಿ ಸಂಘದ ಪ್ರತಿಮಾ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದು,ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಂಕಿತಾ ಎಲ್.ಡಿ ಸ್ವಾಗತಿಸಿ, ಕಾರ್ಯದರ್ಶಿ ಧ್ರುವ ಜೆ ಭಂಡಾರಿ ಅತಿಥಿಗಳನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಸೃದ್ಧನ್ ಆಳ್ವ ಕೆ ವಂದಿಸಿ, ವಿದ್ಯಾರ್ಥಿನಿ ಸಕೀನಾ ಐಮನ್ ಕಾರ್ಯಕ್ರಮವನ್ನು ನಿರೂಪಿಸಿದರು.