ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತ ಪಾವತಿಸಲು ಬಾಕಿ ಇರುವ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಸದ ಕೃಷಿಕರಿಗೆ ವಿಮಾ ಮೊತ್ತವನ್ನು ತಕ್ಷಣ ಪಾವತಿ ಮಾಡುವಂತೆ ರಾಜ್ಯ ತೋಟಗಾರಿಕಾ ಸಚಿವ ಮಲ್ಲಿಕಾರ್ಜುನ ಎಸ್ ಎಸ್ ರವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತ ಪಾವತಿಸಲು ಬಾಕಿ ಇರುವ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಸದ ಕೃಷಿಕರಿಗೆ ವಿಮಾ ಮೊತ್ತವನ್ನು ತಕ್ಷಣ ಪಾವತಿ ಮಾಡುವಂತೆ ರಾಜ್ಯ ತೋಟಗಾರಿಕಾ ಸಚಿವ ಮಲ್ಲಿಕಾರ್ಜುನ ಎಸ್ ಎಸ್ ರವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಗುರುವಾರ ಸಚಿವರನ್ನು ಭೇಟಿ ಮಾಡಿದ ಶಾಸಕರು ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ಹವಾಮಾನ ವೈಪರೀತ್ಯದಿಂದ ರೈತರು ಬೆಳೆ ನಷ್ಟವನ್ನು ಅನುಭವಿಸಿದ್ದಾರೆ.ರೈತರಿಗೆ ಪರಿಹಾರವಾಗಿ ಹವಮಾನ ಆಧರಿತ ಬೆಳೆ ವಿಮೆ ಯೋಜನೆಯಡಿ ನೀಡಬೇಕಾದ ವಿಮಾ ಮೊತ್ತ ಜಿಲ್ಲೆಯ ಕೆಲವು ಗ್ರಾಮಗಳ ರೈತರಿಗೆ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ ಅಧಿಕಾರಿಗಳ ಜೊತೆ ಈಗಾಗಲೇ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬಾಕಿ ಇರುವ ಮೊತ್ತವನ್ನು ತಕ್ಷಣ ನೀಡುವಂತೆ ಸಚಿವರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ. ಬಾಕಿ ಇರುವ ಗ್ರಾಮಗಳು ಪುತ್ತೂರು ತಾಲೂಕಿನ ಬಲ್ನಾಡು, ಬಂಠ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ, ನರಿಕೊಂಬು, ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಕೊಕ್ಕಡ ಹಾಗೂ ಅರಸಿನಮಕ್ಕಿ, ಕಡಬ ತಾಲೂಕಿನ ಗೋಳಿತೊಟ್ಟು, ಕಡಬ, ಕೌಕ್ರಾಡಿ, ನೆಲ್ಯಾಡಿ, ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಸುಳ್ಯ ತಾಲೂಕಿನ ಅಮರಮುಡ್ನೂರು, ಉಬರಡ್ಕ, ಮಿತ್ತೂರು, ಅಲೆಟ್ಟಿ ಹಾಗೂ ಅರಂತೋಡು ಗ್ರಾಮಗಳ ಕೃಷಿಕರ ವಿಮಾ ಮೊತ್ತ ಪಾವತಿಯಾಗಲು ಬಾಕಿ ಇದೆ . ಈ ಪಟ್ಟಿಯನ್ನು ಸಚಿವರಿಗೆ ಹಾಗೂ ಸಂಬಂದಿಸಿದ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ನೀಡಿದ್ದಾರೆ. ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತ ವಿತರಣೆಯಲ್ಲಿ ಪ್ರಾರಂಭದಲ್ಲಿ ಲೋಪವಾಗಿತ್ತು ಈ ಬಗ್ಗೆ ಸದನದಲ್ಲಿ ಸರಕಾರದ ಗಮನಸೆಳೆದು ಆ ಬಳಿಕ ಅಧಿಕಾರಿಗಳ ಸಭೆ ಕರೆದು ಬಹುತೇಕ ಕೃಷಿಕರಿಗೆ ವಿಮಾ ಪರಿಹಾರ ಮೊತ್ತವನ್ನು ಒದಗಿಸಲಾಗಿದೆ. ಆ ಬಳಿಕ ಕೆಲವು ಗ್ರಾಮಗಳು ಬಾಕಿ ಇದೆ. ದಕ ಜಿಲ್ಲೆಯ ಯಾವ ಗ್ರಾಮಗಳ ಕೃಷಿಕರಿಗೆ ವಿಮಾ ಮೊತ್ತ ನೀಡಲು ಬಾಕಿ ಇದೆ ಆ ಗ್ರಾಮಗಳ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಿದ್ದೇನೆ. ಶೀಘ್ರವೇ ಬಾಕಿ ಇರುವ ಎಲ್ಲಾ ಗ್ರಾಮಗಳ ವಿಮಾ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ. ಮನವಿ ಮಾಡಿದ ತಕ್ಷಣ ಸೂಕ್ತ ಕ್ರಮಕ್ಕೆ ಸಚಿವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ರೈತರಿಗೆ ತೊಂದರೆಯಾದಲ್ಲಿ ಸುಮ್ಮನಿರುವ ಪ್ರಶ್ನೆಯೇ ಇಲ್ಲ , ರೈತರ ಪರವಾಗಿ ಸದಸನದ ಒಳಗೆ , ಹೊರಗೆ ನ್ಯಾಯಯುತ ಹೋರಾಟ ಮಾಡಿಯೇ ಮಾಡುತ್ತೇನೆ. -ಅಶೋಕ್ ರೈ ಶಾಸಕರು ಪುತ್ತೂರು
ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ ಮನೆಗಳಿದೆ. ನಮ್ಮ ರಸ್ತೆ ಇನ್ನೂ ಅಭಿವೃದ್ದಿಯಾಗಿಲ್ಲ. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ ಕೊಟ್ಟಿದ್ದಾರೆ ವಿನಾ ನಮ್ಮ ಸಮಸ್ಯೆ ಪರಿಹಾರ ಮಾಡಿಲ್ಲ. ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ನಮ್ಮ ಪ್ರದೇಶಕ್ಕೆ ರಸ್ತೆಯನ್ನು ನಿರ್ಮಾಣ ಮಾಡಿ ಕೊಡುತ್ತೀರಿ ಎಂಬ ಪೂರ್ಣ ನಂಬಿಕೆ ನಮ್ಮಲ್ಲಿದೆ. ನಮ್ಮ ಬೇಡಿಕೆಯನ್ನು ನೀವು ಈಡೇರಿದ್ದಲ್ಲಿ ನಾವು ಬಹಿರಂಗವಾಗಿ ನಿಮ್ಮ ಪರ ಪ್ರಚಾರ ಮಾಡುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಶಾಸಕರ ಮುಂದೆ ಶಪಥ ಮಾಡಿದ್ದಾರೆ. ಈ ವೇಳೆ ವಸಂತಶೆಟ್ಟಿ ಬದಿಯಾರು, ಜಯರಾಮ ಬಿ, ಪದ್ಮಶ್ರೀ, ಜಯರಾಮ ವಿಠಲ, ಮತ್ತು ಗೀತಾ ಉಪಸ್ಥಿತರಿದ್ದರು. ನಮ್ಮ ಜೊತೆ ಇನ್ನೂ ಅನೇಕ ಮಂದಿ ಇದ್ದು ಅವರೆಲ್ಲರನ್ನೂ ನಾವು ಸೇರಿಸಿಕೊಳ್ಳಲಿದ್ದೇವೆ ಎಂದು ಹೇಳಿದರು. ಈ ವೇಳೆ ಮಾತನಾಡಿದ ಶಾಸಕರು ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸುವ ಪ್ರಯತ್ನವನ್ನು ಮಾಡುತ್ತೇನೆ. ಅವರ ಮನವೊಲಿಸಿ ರಸ್ತೆ ನಿರ್ಮಾಣದ ಭರವಸೆಯನ್ನು ನೀಡಿದರು.
ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರಕ್ಕಾಗಿ ಕಾತರದಿಂದ ಕಾಯುತ್ತಿದ್ದ ಪುತ್ತೂರು ತಾಲೂಕಿನ ರೈತರಿಗೆ ಶುಭಸುದ್ದಿ. ಮುಂದಿನ 20 ದಿನಗಳೊಳಗೆ 2024/25ನೇ ಸಾಲಿನ ಬೆಳೆ ವಿಮಾ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ ಎಂದು ಶಾಸಕ...
ಕರ್ನಾಟಕದ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಸಲೀಂ ಅವರನ್ನು ಭೇಟಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಶುಭಾಶಯ ಸಲ್ಲಿಸಿದ್ದಾರೆ. ಪುತ್ತೂರು: ಕರ್ನಾಟಕದ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಸಲೀಂ ಅವರನ್ನು ಭೇಟಿಯಾಗಿ ಪುತ್ತೂರು ಶಾಸಕ...
ರಾಜ್ಯ ಸರ್ಕಾರದಿಂದ ವಿಧಾನ ಸಭಾ ಕ್ಷೇತ್ರಕ್ಕೆ 2024-25ನೇ ಸಾಲಿನಲ್ಲಿ ಸುಮಾರು 131.56ಕೋಟಿ ಅನುದಾನ ಬಿಡುಗಡೆಯಾಗಿದ್ದು, 42ಕ್ಕೂ ಅಧಿಕ ಕಾಮಗಾರಿಗಳು ನಡೆಯಲಿದೆ. ಈಗಾಗಲೇ ಶೇ.80ರಷ್ಟು ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಹಿಂದಿನ ಅವಧಿಯಲ್ಲಿ ಸುಮಾರು 1476ಕೋಟಿ ಅನುದಾನ...