ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ (NCERT) ವತಿಯಿಂದ ನಡೆಸಲ್ಪಡುವ 53 ನೇ ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶನಿ 2026 ರ ಅಂಗವಾಗಿ ನಡೆದ ರಾಜ್ಯ ಮಟ್ಟದ ಬಾಲ ವೈಜ್ಞಾನಿಕ ಪ್ರದರ್ಶನಿ 2025–26 ಸ್ಪರ್ಧೆಯಲ್ಲಿ...
ಪುತ್ತೂರು ತಾಲೂಕು ಧರ್ಮ ಶಿಕ್ಷಣ ಸಮಿತಿ – ಧರ್ಮಾಭ್ಯುದಯದ ಸಾಮಾನ್ಯ ಸಭೆಯು ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು. ಪುತ್ತೂರು: ತಾಲೂಕು ಧರ್ಮ ಶಿಕ್ಷಣ ಸಮಿತಿ – ಧರ್ಮಾಭ್ಯುದಯದ ಸಾಮಾನ್ಯ ಸಭೆಯು ತೆಂಕಿಲದ ಸ್ವಾಮಿ...
ಪುತ್ತೂರು ಲಯನ್ ಇಂಟರ್ನ್ಯಾಷನಲ್, ಜಿಲ್ಲೆ 317D ಇದರ ಲಯನ್ಸ್ ಕ್ಲಬ್ ಪುತ್ತೂರು, ಕಾವು ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಲಯನ್ಸ್ ಕ್ವೆಸ್ಟ್ S.F.A (Skills For Adolescence) ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಗಳ ಕ್ಯಾಂಪಸ್ನಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜನರು ಹೇಗೆ ತಮ್ಮನ್ನು ತಾವು ರಕ್ಷಣೆ ಮಾಡಬೇಕು ಎಂಬುದರ ಕುರಿತು ಹಮ್ಮಿಕೊಂಡಿದ್ದ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಟೀಮ್ ಕಮಾಂಡರ್ ಶಾಂತಿಲಾಲ್...
ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 11ರಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ್ತ ನಾಯಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 11ರಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ್ತ ನಾಯಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಸ್ಕಾರವೆಂಬುದು ಕೇವಲ ಶಾಲೆಗೆ ಸೀಮಿತವಲ್ಲ, ಮನೆಯಲ್ಲೂ ಸಂಸ್ಕಾರವನ್ನು ಆಚರಣೆ ಮಾಡಬೇಕು ಎಂದು ಅವರು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್ ರವರು ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯನ್ನು ಮಾತ್ರವಲ್ಲದೆ, ಉತ್ತಮ ನಾಗರಿಕರಾಗಿ ಬೆಳೆಯುವಲ್ಲಿ ಸಫಲರಾಗುತ್ತಿರುವುದು ಶ್ಲಾಘನೀಯ ಎಂದರು. ಇನ್ನೋರ್ವ ಮುಖ್ಯ ಅತಿಥಿ ಕೃಷ್ಣಪ್ರಸಾದ್ ರವರು ಸಭೆಯನ್ನು ಉದ್ದೇಶಿಸಿ ಪ್ಲಾಸ್ಟಿಕ ರಹಿತ ಸ್ವಚ್ಛ ಭಾರತ ನಿರ್ಮಾಣ ಮಾಡುವ ಪ್ರಯತ್ನ ನಮ್ಮಿಂದ ನಮ್ಮ ಮನೆಯಿಂದ ಆಗಬೇಕು ಎಂದರು. ಶಾಲಾ ಹಿರಿಯ ವಿದ್ಯಾರ್ಥಿ ಖ್ಯಾತ ಮನೋವೈದ್ಯರಾದ ಡಾ. ರಾಜೇಶ್ ಎಂ ರವರು ವಿದ್ಯಾರ್ಥಿಗಳು ತಮ್ಮ ಶರೀರ ಹಾಗೂ ಮನಸ್ಸಿಗೆ ಸಮಾನ ಮಹತ್ವ ನೀಡಬೇಕು, ಅಂಕ ಗಳಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಸಫಲತೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು. ಬಳಿಕ ಕಳೆದ ಶೈಕ್ಷಣಿಕ ವರ್ಷ 2024 – 25ರಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 600 ಕ್ಕಿಂತಲೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕೌಟ್ ನಲ್ಲಿರಾಜ್ಯ ಪುರಸ್ಕಾರದ ಪಡೆದ ವಿದ್ಯಾರ್ಥಿಗಳು ಹಾಗೂ ಸ್ಪೋರ್ಟ್ಸ್ ನಲ್ಲಿ ಎಸ್.ಜಿ.ಎಫ್.ಐ. ಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು . ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಸ್ವಾಗತಿಸಿ, ಸದಸ್ಯರಾದ ಚಂದ್ರಶೇಖರ್ ವಂದಿಸಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಸಂಚಾಲಕರಾದ ರವಿ ನಾರಾಯಣ ಎಂ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ, ಮುಖ್ಯೋಪಾಧ್ಯಾಯರುಗಳು, ಪ್ರೌಢ ಹಾಗೂ ಪ್ರಾಥಮಿಕ ಶಾಲಾ ನಾಯಕರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶಾಂತಿ, ಅನುರಾಧ ಹಾಗೂ ಕವಿತಾ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಎಲ್ಲಾ ಅತಿಥಿಗಳಿಗೆ, ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.
ನೀರಿಲ್ಲದೆ ಜೀವನವಿಲ್ಲ, ನೀರಿದ್ದರೆ ಮಾತ್ರ ಭವಿಷ್ಯ! ಈ ಸತ್ಯವನ್ನು ಅರಿತು, ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಜಲ ಸಂರಕ್ಷಣೆಗೆ ಮಾದರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ‘ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ’ ಎಂಬ ಶೀರ್ಷಿಕೆಯಡಿ ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಗಳ...
ಪುತ್ತೂರು ವಿಧಾನಸಭಾ ಕ್ಷೇತ್ರದ ರಾಜಕೀಯ ಅಖಾಡದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿರುವ ಶಾಸಕ ಅಶೋಕ್ ರೈ, ತೆಂಕಿಲದಲ್ಲಿ ನಡೆದ ಅಶೋಕ ಜನಮನ ಪ್ರಚಾರ ಸಭೆ'ಯಲ್ಲಿ ಬಡವರ ಬಗ್ಗೆ ತಮ್ಮ ಅಚಲ ಬದ್ಧತೆಯನ್ನು ಪುನರುಚ್ಚರಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರ ಸಹಭಾಗಿತ್ವದಲ್ಲಿ ಜನವರಿ 8 ಹಾಗೂ 9ರಂದು ನಡೆದ ಜಿಲ್ಲಾ ಮಟ್ಟದ...
ಅ.28 ಸೋಮವಾರದಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಲಾವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ “ಆರ್ಡಿನೋ”ಎನ್ನುವ ಕಾರ್ಯಾಗಾರವು ನಡೆಯಿತು. ಪುತ್ತೂರು: ಅ.28 ಸೋಮವಾರದಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
ವಿದ್ಯಾಭಾರತಿ ಶಿಕ್ಷಣ ಸಂಸ್ಥಾನದೊಂದಿಗೆ ಸಂಯೋಜನೆಗೊಂಡಿರುವ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಟೂರ್ನಿ ತೆಂಕಿಲ ವಿವೇಕಾನಂದ ಅಂಗ್ಲ ಮಾದ್ಯಮ ಶಾಲೆಯ ಕ್ಯಾಂಪಸ್ ನಲ್ಲಿ ಅ.16 ರಿಂದ ಅ.19 ರವರೆಗೆ ನಡೆಯಲಿದೆ. ಪುತ್ತೂರು: ವಿದ್ಯಾಭಾರತಿ ಶಿಕ್ಷಣ...